Joshua · chapter 2 · verse 9
Joshua 2:9 in Kannada
ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.
Kartanu nimage deshavannu kottiddaanendoo nimma nimitta namage mahaabheeti yaagide endoo nimagoskara deshada nivaasi galellaru kangettu hogiddaarendoo naanu ballenu.
Joshua 2:9 in English
- King James Version (KJV)
- And she said unto the men, I know that the LORD hath given you the land, and that your terror is fallen upon us, and that all the inhabitants of the land faint because of you.
- World English Bible (WEB)
- She said to the men, “I know that the LORD has given you the land, and that the fear of you has fallen upon us, and that all the inhabitants of the land melt away before you.
- American Standard Version (ASV)
- and she said unto the men, I know that Jehovah hath given you the land, and that the fear of you is fallen upon us, and that all the inhabitants of the land melt away before you.
- Bible in Basic English (BBE)
- And said to them, It is clear to me that the Lord has given you the land, and that the fear of you has come on us;
- Darby Translation (DBY)
- and said to the men, I know that Jehovah has given you the land, and that the dread of you has fallen on us, and that all the inhabitants of the land faint because of you.
- Webster's Bible (WBS)
- And she said to the men, I know that the LORD hath given you the land, and that your terror hath fallen upon us, and that all the inhabitants of the land faint because of you.
- Young's Literal Translation (YLT)
- and she saith unto the men, 'I have known that Jehovah hath given to you the land, and that your terror hath fallen upon us, and that all the inhabitants of the land have melted at your presence.
Read in context
- 7ಆ ಮನುಷ್ಯರು ಯೊರ್ದನಿಗೆ ಹೋಗುವ ಹಾದಿಯಲ್ಲಿ ನದಿಯ ರೇವುಗಳ ವರೆಗೂ ಅವರನ್ನು ಹಿಂದಟ್ಟಿದರು. ಅವರನ್ನು ಹಿಂದಟ್ಟುವವರು ಹೊರಟುಹೋದ ಕೂಡಲೆ ಹೆಬ್ಬಾಗಲನ್ನು ಮುಚ್ಚಿದರು.
- 8ಆದರೆ ಈ ಮನುಷ್ಯರು ಮಲಗುವದಕ್ಕಿಂತ ಮುಂಚೆ ಆಕೆಯು ಮಾಳಿಗೆಯ ಮೇಲಕ್ಕೇರಿ ಅವರ ಬಳಿಗೆ ಬಂದು ಅವರಿಗೆ--
- 9ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.
- 10ನೀವು ಐಗುಪ್ತದಿಂದ ಹೊರಡುವಾಗ ಕರ್ತನು ನಿಮಗೋಸ್ಕರ ಕೆಂಪು ಸಮುದ್ರದ ನೀರನ್ನು ಬತ್ತಿಹೋಗ ಮಾಡಿದ್ದನ್ನೂ ಯೊರ್ದನಿಗೆ ಆಚೆಯಲ್ಲಿದ್ದ ಅಮೋರಿ ಯರ ಇಬ್ಬರು ಅರಸುಗಳಾದ ಸೀಹೋನನನ್ನು ಓಗನನ್ನು ನೀವು ಸಂಪೂರ್ಣ ನಿರ್ಮೂಲ ಮಾಡಿದ್ದನ್ನೂ ನಾವು ಕೇಳಿದ್ದೇವೆ.
- 11ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ.
Cross references
- Exodus 23:27 ವಿಮೋಚನಕಾಂಡ 23:27ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು.
- Deuteronomy 2:25 ಧರ್ಮೋಪದೇಶಕಾಂಡ 2:25ಇದೇ ದಿವಸ ಆಕಾಶವೆಲ್ಲಾದರ ಕೆಳಗಿರುವ ಜನಾಂಗಗಳ ಮೇಲೆ ನಿನ್ನ ಹೆದರಿಕೆಯನ್ನೂ ನಿನ್ನ ಭಯವನ್ನೂ ಉಂಟು ಮಾಡಲಾರಂಭಿಸುತ್ತೇನೆ. ಅವರು ನಿನ್ನ ಸುದ್ದಿಯನ್ನು ಕೇಳಿ ನಿನಗೋಸ್ಕರ ನಡುಗಿ ಅಂಜುವರು.
- Joshua 2:11 ಯೆಹೋಶುವ 2:11ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ.
- Genesis 35:5 ಆದಿಕಾಂಡ 35:5ತರುವಾಯ ಅವರು ಪ್ರಯಾಣ ವಾಗಿ ಹೊರಟರು. ಆಗ ದೇವರ ಭಯವು ಸುತ್ತಲಿರುವ ಪಟ್ಟಣಗಳವರ ಮೇಲೆ ಇದ್ದದರಿಂದ ಅವರು ಯಾಕೋ ಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.
- Exodus 15:15–16 ವಿಮೋಚನಕಾಂಡ 15:15–16ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು. ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.
- Ecclesiastes 8:12 ಪ್ರಸಂಗಿ 8:12ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.
- Jeremiah 27:5 ಯೆರೆಮೀಯ 27:5ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ.
- Hebrews 11:1–2 ಇಬ್ರಿಯರಿಗೆ 11:1–2ನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ. ಹಿರಿಯರು ನಂಬಿಕೆಯಿಂದಲೇ ಒಳ್ಳೇ ಸಾಕ್ಷಿ ಹೊಂದಿದರು.
- Psalm 112:10 ಕೀರ್ತನೆಗಳು 112:10ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
- Job 19:25 ಯೋಬನು 19:25ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ;
- Psalm 115:16 ಕೀರ್ತನೆಗಳು 115:16ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.
- 2 Samuel 17:10 2 ಸಮುವೇಲನು 17:10ಆಗ ಸಿಂಹದ ಹೃದಯವುಳ್ಳ ಪರಾಕ್ರಮಶಾಲಿಯ ಹೃದಯವೂ ಸಹ ಸಂಪೂರ್ಣ ಕರಗುವದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ ಅವನ ಸಂಗಡ ಇರುವವರು ಪರಾ ಕ್ರಮಶಾಲಿಗಳೆಂದೂ ಇಸ್ರಾಯೇಲ್ಯರೆಲ್ಲರು ಬಲ್ಲರು.