Joshua · chapter 21 · verse 43
Joshua 21:43 in Kannada
ಕರ್ತನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟನು; ಅವರು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿದ್ದರು.
Kartanu avara tandegalige koduvenendu aane itta deshavannellaa israayelige kottanu; avaru adannu svaadheenamaadikondu adaralli vaasavaagiddaru.
Joshua 21:43 in English
- King James Version (KJV)
- And the LORD gave unto Israel all the land which he sware to give unto their fathers; and they possessed it, and dwelt therein.
- World English Bible (WEB)
- So the LORD gave to Israel all the land which he swore to give to their fathers. They possessed it, and lived in it.
- American Standard Version (ASV)
- So Jehovah gave unto Israel all the land which he sware to give unto their fathers; and they possessed it, and dwelt therein.
- Bible in Basic English (BBE)
- So the Lord gave to Israel all the land which he gave by oath to their fathers; so it became their heritage and their living-place.
- Darby Translation (DBY)
- And Jehovah gave to Israel all the land which he swore to give unto their fathers; and they took possession of it, and dwelt in it.
- Webster's Bible (WBS)
- And the LORD gave to Israel all the land which he swore to give to their fathers: and they possessed it, and dwelt in it.
- Young's Literal Translation (YLT)
- And Jehovah giveth to Israel the whole of the land which He hath sworn to give to their fathers, and they possess it, and dwell in it;
Read in context
- 41ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದ ಮಧ್ಯದಲ್ಲಿ ಇರುವ ಲೇವಿಯರ ಎಲ್ಲಾ ಪಟ್ಟಣಗಳೂ ಅವುಗಳ ಉಪನಗರಗಳೂ ನಾಲ್ವತ್ತೆಂಟು ಪಟ್ಟಣಗಳು.
- 42ಈ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಅದರದರ ಸುತ್ತಲೂ ಉಪನಗರಗಳು ಇದ್ದವು; ಪಟ್ಟಣಗಳಿಗೆಲ್ಲಾ ಹೀಗೆಯೇ ಇದ್ದವು.
- 43ಕರ್ತನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟನು; ಅವರು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿದ್ದರು.
- 44ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ಪ್ರಕಾರವೆಲ್ಲಾ ಅವರ ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು; ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ; ಅವರ ಶತ್ರುಗಳನ್ನೆಲ್ಲಾ ಕರ್ತನು ಅವರ ಕೈಗಳಿಗೆ ಒಪ್ಪಿಸಿದನು.ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.
- 45ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.
Cross references
- Genesis 13:15 ಆದಿಕಾಂಡ 13:15ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
- Psalm 106:42–45 ಕೀರ್ತನೆಗಳು 106:42–45ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; ಅವರ ಕೈಕೆಳಗೆ ಅಧೀನರಾದರು. ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು. ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
- Genesis 28:4 ಆದಿಕಾಂಡ 28:4ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ ಅಂದನು.
- Exodus 23:27–31 ವಿಮೋಚನಕಾಂಡ 23:27–31ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು. ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು. ಭೂಮಿಯು ಬರಿದಾಗದಂತೆಯೂ ಅಡವಿಯ ಮೃಗ ಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರುಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿ ಸಿಕೊಳ್ಳುವ ವರೆಗೆ ಸ್ವಲ್ಪಸ್ವಲ್ಪವಾಗಿ ಹೊರಡಿಸುವೆನು. ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.
- Psalm 44:3 ಕೀರ್ತನೆಗಳು 44:3ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.
- Genesis 15:13–21 ಆದಿಕಾಂಡ 15:13–21ಆಗ ಆತನು ಅಬ್ರಾಮನಿಗೆ--ನಿನ್ನ ಸಂತತಿ ಯವರು ತಮ್ಮದಲ್ಲದ ದೇಶದಲ್ಲಿ ಪರದೇಶಿಗಳಾಗಿದ್ದು ಅವರನ್ನು ಸೇವಿಸುವರು. ಅವರು ನಾನೂರು ವರುಷ ಗಳು ನಿನ್ನ ಸಂತತಿಯವರನ್ನು ಶ್ರಮೆಪಡಿಸುವರು ಎಂದು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು. ಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು. ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ. ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು. ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು. ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ ಹಿತ್ತಿಯರೂ ಪೆರಿಜೀಯರೂ ರೆಫಾಯರೂಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು. ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
- Deuteronomy 11:31 ಧರ್ಮೋಪದೇಶಕಾಂಡ 11:31ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಯೊರ್ದನನ್ನು ದಾಟಿಹೋಗಬೇಕು; ಆಗ ಅದನ್ನು ನೀವು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡು ವಿರಿ.ನಾನು ಈಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ನಿಯಮ ನ್ಯಾಯಗಳನ್ನು ಕಾಪಾಡಿ ನಡೆದು ಕೊಳ್ಳಬೇಕು.
- Genesis 26:3–4 ಆದಿಕಾಂಡ 26:3–4ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು. ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.
- Exodus 3:8 ವಿಮೋಚನಕಾಂಡ 3:8ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
- Genesis 28:13–14 ಆದಿಕಾಂಡ 28:13–14ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು. ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.
- Genesis 12:7 ಆದಿಕಾಂಡ 12:7ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
- Deuteronomy 17:14 ಧರ್ಮೋಪದೇಶಕಾಂಡ 17:14ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಪಡಿಸಿ ಕೊಂಡು ಅದರಲ್ಲಿ ವಾಸವಾಗಿರುವಾಗ--ನನ್ನ ಸುತ್ತ ಲಿರುವ ಎಲ್ಲಾ ಜನಾಂಗಗಳ ಹಾಗೆ ನನಗೆ ಅರಸ ನನ್ನು ಇಟ್ಟುಕೊಳ್ಳುತ್ತೇನೆಂದು ಹೇಳಿದರೆ