Joshua · chapter 22 · verse 1
Joshua 22:1 in Kannada
ಆಗ ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರ ದವರನ್ನೂ ಕರಿಸಿ ಅವರಿಗೆ--
Aaga yehoshuvanu roobenyarannoo gaadyarannoo manasseya ardhagotra davarannoo karisi avarige--
Joshua 22:1 in English
- King James Version (KJV)
- Then Joshua called the Reubenites, and the Gadites, and the half tribe of Manasseh,
- World English Bible (WEB)
- Then Joshua called the Reubenites, the Gadites, and the half-tribe of Manasseh,
- American Standard Version (ASV)
- Then Joshua called the Reubenites, and the Gadites, and the half-tribe of Manasseh,
- Bible in Basic English (BBE)
- Then Joshua sent for the Reubenites and the Gadites and the half-tribe of Manasseh,
- Darby Translation (DBY)
- Then Joshua called the Reubenites, and the Gadites, and the half tribe of Manasseh,
- Webster's Bible (WBS)
- Then Joshua called the Reubenites, and the Gadites, and the half-tribe of Manasseh,
- Young's Literal Translation (YLT)
- Then Joshua calleth for the Reubenite, and for the Gadite, and for the half of the tribe of Manasseh,
Read in context
- 1ಆಗ ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರ ದವರನ್ನೂ ಕರಿಸಿ ಅವರಿಗೆ--
- 2ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ನೀವು ಕೈಕೊಂಡು ನಾನು ನಿಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನನ್ನ ಮಾತಿಗೆ ವಿಧೇಯರಾದಿರಿ.
- 3ನೀವು ಬಹಳ ದಿವಸ ಗಳಿಂದ ಇಂದಿನ ವರೆಗೂ ನಿಮ್ಮ ಸಹೋದರರನ್ನು ಕೈ ಬಿಡದೆ ನಿಮ್ಮ ದೇವರಾದ ಕರ್ತನು ಆಜ್ಞಾಪಿಸಿದ ಅಪ್ಪಣೆಯನ್ನು ಕೈಕೊಂಡಿರಿ.
Cross references
- Numbers 32:18–33 ಅರಣ್ಯಕಾಂಡ 32:18–33ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯವನ್ನು ಹೊಂದಿಕೊಳ್ಳುವ ವರೆಗೆ ನಾವು ನಮ್ಮ ಮನೆಗಳಿಗೆ ತಿರುಗುವದಿಲ್ಲ. ನಾವು ಯೊರ್ದನ್ ನದಿಯ ಆಚೆಯಲ್ಲಿ ಅವರ ಸಂಗಡ ಸ್ವಾಸ್ತ್ಯವನ್ನು ತಕ್ಕೊಳ್ಳುವದಿಲ್ಲ. ಯಾಕಂದರೆ ನಮ್ಮ ಸ್ವಾಸ್ತ್ಯವು ನಮಗೆ ಯೊರ್ದನ್ ನದಿಯ ಈಚೆಯಲ್ಲಿ ಮೂಡಣ ಕಡೆಯಲ್ಲಿ ಬಂತು ಎಂದು ಹೇಳಿದರು. ಆಗ ಮೋಶೆಯು ಇವರಿಗೆ--ನೀವು ಈ ಕಾರ್ಯ ವನ್ನು ಮಾಡಿದರೆ ನೀವು ಕರ್ತನ ಮುಂದೆ ಯುದ್ದಕ್ಕೆ ಸಿದ್ಧವಾಗಿದ್ದರೆ ನಿಮ್ಮಲ್ಲಿ ಯುದ್ಧಕ್ಕೆ ಸಿದ್ಧವಾದವರೆಲ್ಲರು ಕರ್ತನು ತನ್ನ ಶತ್ರುಗಳನ್ನು ತನ್ನ ಸನ್ನಿಧಿಯಿಂದ ಹೊರಡಿಸುವ ವರೆಗೆ ಕರ್ತನ ಮುಂದೆ ಯೊರ್ದನ್ ನದಿಯನ್ನು ದಾಟಿದರೆ ದೇಶವು ಕರ್ತನ ಮುಂದೆ ವಶವಾದ ತರುವಾಯ ನೀವು ಕರ್ತನಿಂದಲೂ ಇಸ್ರಾ ಯೇಲ್ಯರಿಂದಲೂ ನಿರಪರಾಧಿಗಳಾಗಿದ್ದು ತಿರುಗಿಕೊಳ್ಳ ಬಹುದು; ಈ ದೇಶವು ಕರ್ತನ ಮುಂದೆ ನಿಮ್ಮ ಸ್ವಾಸ್ತ್ಯಕ್ಕಾಗುವದು. ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ. ನಿಮ್ಮ ಮಕ್ಕಳಿ ಗೋಸ್ಕರ ಪಟ್ಟಣಗಳನ್ನೂ ನಿಮ್ಮ ಕುರಿಗಳಿಗೋಸ್ಕರ ಹಟ್ಟಿಗಳನ್ನೂ ಕಟ್ಟಿ ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ ಎಂದು ಹೇಳಿದನು. ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆಯ ಸಂಗಡ ಮಾತನಾಡಿ ನಮ್ಮ ಒಡೆಯನು ಆಜ್ಞಾಪಿಸಿದ ಪ್ರಕಾರ ನಿನ್ನ ಸೇವಕರು ಮಾಡುವರು. ನಮ್ಮ ಮಕ್ಕಳೂ ಹೆಂಡತಿಯರೂ ಸಂಪತ್ತೂ ಪಶು ಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ. ಆದರೆ ನಿನ್ನ ಸೇವಕರು ಯುದ್ಧಕ್ಕೆ ಸಿದ್ಧವಾದವರೆಲ್ಲರು ನಮ್ಮ ಒಡೆಯನು ಹೇಳಿದ ಪ್ರಕಾರ ಕರ್ತನ ಮುಂದೆ ಯುದ್ಧಕ್ಕೆ ದಾಟಿ ಹೋಗುವರು ಅಂದರು. ಆಗ ಮೋಶೆಯು ಅವರ ವಿಷಯವಾಗಿ ಯಾಜಕ ನಾದ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋ ಶುವನಿಗೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ಮುಖ್ಯ ಯಜಮಾನರಿಗೂ ಆಜ್ಞೆಮಾಡಿದನು. ಮೋಶೆಯು ಅವರಿಗೆ--ಗಾದನ ಮಕ್ಕಳೂ ರೂಬೇನನ ಮಕ್ಕಳೂ ಎಲ್ಲರು ಯುದ್ಧಕ್ಕೆ ಸಿದ್ಧವಾಗಿದ್ದು ನಿಮ್ಮ ಸಂಗಡ ಯೊರ್ದನ್ ನದಿಯನ್ನು ಕರ್ತನ ಮುಂದೆ ದಾಟಿದರೆ ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್ ದೇಶವನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು. ಆದರೆ ಅವರು ಯುದ್ಧಕ್ಕೆ ಸಿದ್ಧವಾಗಿ ನಿಮ್ಮ ಸಂಗಡ ದಾಟದಿದ್ದರೆ ಅವರು ನಿಮ್ಮೊಳಗೆ ಕಾನಾನ್ ದೇಶದಲ್ಲಿ ಸ್ವಾಸ್ತ್ಯವನ್ನು ಹೊಂದಬೇಕು ಅಂದನು. ಆಗ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಪ್ರತ್ಯುತ್ತರವಾಗಿ--ಕರ್ತನು ನಿನ್ನ ಸೇವಕರಿಗೆ ಹೇಳಿ ದ್ದಂತೆಯೇ ನಾವು ಮಾಡುವೆವು. ನಾವು ಯುದ್ಧಕ್ಕೆ ಸಿದ್ಧವಾಗಿ ಕರ್ತನ ಮುಂದೆ ಕಾನಾನ್ ದೇಶಕ್ಕೆ ದಾಟಿ ಹೋಗುವೆವು; ಆದರೆ ಯೊರ್ದನ್ ನದಿಯ ಈಚೆ ಯಲ್ಲಿರುವ ನಮ್ಮ ಸ್ವಾಸ್ತ್ಯದ ಭಾಗವೇ ನಮಗಿರಲಿ ಎಂದು ಹೇಳಿದರು. ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು.
- Deuteronomy 29:7–8 ಧರ್ಮೋಪದೇಶಕಾಂಡ 29:7–8ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಬರಲಾಗಿ ನಾವು ಅವರನ್ನು ಹೊಡೆದು ಅವರ ದೇಶವನ್ನು ತಕ್ಕೊಂಡು ರೂಬೇನ್ಯರಿಗೂ ಗಾದನವರಿಗೂ ಮನಸ್ಸೆಯ ಅರ್ಧ ಗೋತ್ರಕ್ಕೂ ಸ್ವಾಸ್ತ್ಯವಾಗಿ ಕೊಟ್ಟೆವು.