Joshua · chapter 22 · verse 2
Joshua 22:2 in Kannada
ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ನೀವು ಕೈಕೊಂಡು ನಾನು ನಿಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನನ್ನ ಮಾತಿಗೆ ವಿಧೇಯರಾದಿರಿ.
Kartana sevakanaada mosheyu nimage aajnyaapisida ellavannu neevu kaikondu naanu nimage aajnyaapisiddellaadaralli nanna maatige vidheyaraadiri.
Joshua 22:2 in English
- King James Version (KJV)
- And said unto them, Ye have kept all that Moses the servant of the LORD commanded you, and have obeyed my voice in all that I commanded you:
- World English Bible (WEB)
- and said to them, “You have kept all that Moses the servant of the LORD commanded you, and have listened to my voice in all that I commanded you.
- American Standard Version (ASV)
- and said unto them, Ye have kept all that Moses the servant of Jehovah commanded you, and have hearkened unto my voice in all that I commanded you:
- Bible in Basic English (BBE)
- And said to them, You have kept all the orders of Moses, the Lord's servant, and have done everything I gave you orders to do:
- Darby Translation (DBY)
- and said unto them, Ye have kept all that Moses the servant of Jehovah commanded you, and have hearkened to my voice in all that I commanded you.
- Webster's Bible (WBS)
- And said to them, Ye have kept all that Moses the servant of the LORD commanded you, and have obeyed my voice in all that I commanded you:
- Young's Literal Translation (YLT)
- and saith unto them, 'Ye — ye have kept the whole of that which Moses, servant of Jehovah, commanded you, and ye hearken to my voice, to all that I have commanded you;
Read in context
- 1ಆಗ ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರ ದವರನ್ನೂ ಕರಿಸಿ ಅವರಿಗೆ--
- 2ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ನೀವು ಕೈಕೊಂಡು ನಾನು ನಿಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನನ್ನ ಮಾತಿಗೆ ವಿಧೇಯರಾದಿರಿ.
- 3ನೀವು ಬಹಳ ದಿವಸ ಗಳಿಂದ ಇಂದಿನ ವರೆಗೂ ನಿಮ್ಮ ಸಹೋದರರನ್ನು ಕೈ ಬಿಡದೆ ನಿಮ್ಮ ದೇವರಾದ ಕರ್ತನು ಆಜ್ಞಾಪಿಸಿದ ಅಪ್ಪಣೆಯನ್ನು ಕೈಕೊಂಡಿರಿ.
- 4ಈಗ ನಿಮ್ಮ ದೇವರಾದ ಕರ್ತನು ಅವರಿಗೆ ವಾಗ್ದಾನಮಾಡಿದ ಪ್ರಕಾರ ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟನು. ಮತ್ತು ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ನಿಮಗೆ ಕೊಟ್ಟ ಸ್ವಾಸ್ತ್ಯವಾದ ನಿಮ್ಮ ದೇಶದಲ್ಲಿರುವ ನಿಮ್ಮ ಡೇರೆಗಳಿಗೆ ತಿರಿಗಿ ಹೋಗಿರಿ.
Cross references
- Joshua 1:12–18 ಯೆಹೋಶುವ 1:12–18ಇದಲ್ಲದೆ ಯೆಹೋಶುವನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧಗೋತ್ರದವರಿಗೂ ಹೇಳಿದ್ದೇನಂದರೆ -- ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ವಾಕ್ಯವನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಕರ್ತನು ನಿಮ್ಮನ್ನು ವಿಶ್ರಾಂತಿಪಡಿಸಿ ನಿಮಗೆ ಈ ದೇಶವನ್ನು ಕೊಟ್ಟನು. ಹೇಗಂದರೆ ನಿಮ್ಮ ಹೆಂಡತಿಯರೂ ಚಿಕ್ಕವರೂ ಪಶುಗಳೂ ಮೋಶೆ ನಿಮಗೆ ಕೊಟ್ಟ ಯೊರ್ದನಿಗೆ ಈಚೆ ಇರುವ ದೇಶದಲ್ಲೇ ಇರಲಿ; ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ನಿಮ್ಮ ಸಹೋದರರ ಮುಂದೆ ಯುದ್ಧಸನ್ನದ್ಧರಾಗಿ ನಡೆದುಹೋಗಿ ಕರ್ತನು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿ ಪಡಿಸಿ ಅವರು ನಿಮ್ಮ ದೇವರಾದ ಕರ್ತನು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವ ವರೆಗೆ ಅವರಿಗೆ ಸಹಾಯ ಮಾಡಿರಿ; ತರುವಾಯ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸ್ವಾಸ್ತ್ಯವಾದ ದೇಶಕ್ಕೆ ತಿರಿಗಿ ಬಂದು ಅದನ್ನು ಅನುಭವಿಸಿರಿ ಅಂದನು. ಆಗ ಅವರು ಯೆಹೋಶು ವನಿಗೆ ಪ್ರತ್ಯುತ್ತರವಾಗಿ--ನೀನು ನಮಗೆ ಆಜ್ಞಾಪಿಸು ವದನ್ನೆಲ್ಲಾ ಮಾಡುವೆವು; ಎಲ್ಲಿಗೆ ಕಳುಹಿಸುತ್ತೀಯೋ ಅಲ್ಲಿಗೆ ಹೋಗುವೆವು. ನಾವು ಎಲ್ಲಾದರಲ್ಲಿ ಮೋಶೆಯ ಮಾತು ಕೇಳಿದ ಹಾಗೆ ನಿನ್ನ ಮಾತನ್ನೂ ಕೇಳುವೆವು. ಆದರೆ ನಿನ್ನ ದೇವರಾದ ಕರ್ತನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು. ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು.
- Numbers 32:20–29 ಅರಣ್ಯಕಾಂಡ 32:20–29ಆಗ ಮೋಶೆಯು ಇವರಿಗೆ--ನೀವು ಈ ಕಾರ್ಯ ವನ್ನು ಮಾಡಿದರೆ ನೀವು ಕರ್ತನ ಮುಂದೆ ಯುದ್ದಕ್ಕೆ ಸಿದ್ಧವಾಗಿದ್ದರೆ ನಿಮ್ಮಲ್ಲಿ ಯುದ್ಧಕ್ಕೆ ಸಿದ್ಧವಾದವರೆಲ್ಲರು ಕರ್ತನು ತನ್ನ ಶತ್ರುಗಳನ್ನು ತನ್ನ ಸನ್ನಿಧಿಯಿಂದ ಹೊರಡಿಸುವ ವರೆಗೆ ಕರ್ತನ ಮುಂದೆ ಯೊರ್ದನ್ ನದಿಯನ್ನು ದಾಟಿದರೆ ದೇಶವು ಕರ್ತನ ಮುಂದೆ ವಶವಾದ ತರುವಾಯ ನೀವು ಕರ್ತನಿಂದಲೂ ಇಸ್ರಾ ಯೇಲ್ಯರಿಂದಲೂ ನಿರಪರಾಧಿಗಳಾಗಿದ್ದು ತಿರುಗಿಕೊಳ್ಳ ಬಹುದು; ಈ ದೇಶವು ಕರ್ತನ ಮುಂದೆ ನಿಮ್ಮ ಸ್ವಾಸ್ತ್ಯಕ್ಕಾಗುವದು. ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ. ನಿಮ್ಮ ಮಕ್ಕಳಿ ಗೋಸ್ಕರ ಪಟ್ಟಣಗಳನ್ನೂ ನಿಮ್ಮ ಕುರಿಗಳಿಗೋಸ್ಕರ ಹಟ್ಟಿಗಳನ್ನೂ ಕಟ್ಟಿ ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ ಎಂದು ಹೇಳಿದನು. ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆಯ ಸಂಗಡ ಮಾತನಾಡಿ ನಮ್ಮ ಒಡೆಯನು ಆಜ್ಞಾಪಿಸಿದ ಪ್ರಕಾರ ನಿನ್ನ ಸೇವಕರು ಮಾಡುವರು. ನಮ್ಮ ಮಕ್ಕಳೂ ಹೆಂಡತಿಯರೂ ಸಂಪತ್ತೂ ಪಶು ಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ. ಆದರೆ ನಿನ್ನ ಸೇವಕರು ಯುದ್ಧಕ್ಕೆ ಸಿದ್ಧವಾದವರೆಲ್ಲರು ನಮ್ಮ ಒಡೆಯನು ಹೇಳಿದ ಪ್ರಕಾರ ಕರ್ತನ ಮುಂದೆ ಯುದ್ಧಕ್ಕೆ ದಾಟಿ ಹೋಗುವರು ಅಂದರು. ಆಗ ಮೋಶೆಯು ಅವರ ವಿಷಯವಾಗಿ ಯಾಜಕ ನಾದ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋ ಶುವನಿಗೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ಮುಖ್ಯ ಯಜಮಾನರಿಗೂ ಆಜ್ಞೆಮಾಡಿದನು. ಮೋಶೆಯು ಅವರಿಗೆ--ಗಾದನ ಮಕ್ಕಳೂ ರೂಬೇನನ ಮಕ್ಕಳೂ ಎಲ್ಲರು ಯುದ್ಧಕ್ಕೆ ಸಿದ್ಧವಾಗಿದ್ದು ನಿಮ್ಮ ಸಂಗಡ ಯೊರ್ದನ್ ನದಿಯನ್ನು ಕರ್ತನ ಮುಂದೆ ದಾಟಿದರೆ ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್ ದೇಶವನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು.
- Deuteronomy 3:16–20 ಧರ್ಮೋಪದೇಶಕಾಂಡ 3:16–20ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್ ಮೊದಲುಗೊಂಡು ಅರ್ನೋನ್ ನದಿಯ ವರೆಗೆ ಕೊಟ್ಟೆನು. ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು. ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ನಿಮಗೆ ಈ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ; ಯುದ್ಧಸ್ಥ ರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲ್ ಮಕ್ಕಳ ಮುಂದೆ ಆಯುಧ ಧರಿಸಿ ಕೊಂಡು ಹಾದುಹೋಗಬೇಕು. ನಿಮ್ಮ ಹೆಂಡತಿ ಯರೂ ಮಕ್ಕಳೂ ಪಶುಗಳೂ (ನಿಮಗೆ ಬಹಳ ಪಶುಗಳಿವೆ ಎಂದು ನನಗೆ ತಿಳಿದಿದೆ) ಕರ್ತನು ನಿಮಗಾದ ಹಾಗೆ ನಿಮ್ಮ ಸಹೋದರರಿಗೂ ವಿಶ್ರಾಂತಿ ಕೊಡುವ ವರೆಗೂ ನಿಮ್ಮ ದೇವರಾದ ಕರ್ತನು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವ ವರೆಗೆ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಬೇಕು; ಆ ಮೇಲೆ ನಾನು ನಿಮಗೆ ಕೊಟ್ಟ ನಿಮ್ಮ ನಿಮ್ಮ ಸ್ವಾಸ್ತ್ಯಗಳ ಬಳಿಗೆ ತಿರುಗಬಹುದು ಎಂಬದು.