Joshua · chapter 23 · verse 14
Joshua 23:14 in Kannada
ಇಗೋ, ನಾನು ಇಂದು ಭೂಲೋಕದವರೆಲ್ಲರ ಮಾರ್ಗವಾಗಿ ಹೋಗುತ್ತೇನೆ. ನಿಮ್ಮ ದೇವರಾದ ಕರ್ತನು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೇ ಮಾತುಗಳಲ್ಲಿ ಒಂದು ಮಾತಾದರೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ; ಅವು ಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು.
Igo, naanu indu bhoolokadavarellara maargavaagi hoguttene. Nimma devaraada kartanu nimagoskara helida ellaa olle maatugalalli ondu maataadaroo tappalillavendu nimma poornahrudayadindaloo nimma poornapraanadindaloo aritiddeeri; avu galalli ondu maataadaroo tappade avellaa nimage sambhavisidavu.
Joshua 23:14 in English
- King James Version (KJV)
- And, behold, this day I [am] going the way of all the earth: and ye know in all your hearts and in all your souls, that not one thing hath failed of all the good things which the LORD your God spake concerning you; all are come to pass unto you, [and] not one thing hath failed thereof.
- World English Bible (WEB)
- “Behold, today I am going the way of all the earth. You know in all your hearts and in all your souls that not one thing has failed of all the good things which the LORD your God spoke concerning you. All have happened to you. Not one thing has failed of it.
- American Standard Version (ASV)
- And, behold, this day I am going the way of all the earth: and ye know in all your hearts and in all your souls, that not one thing hath failed of all the good things which Jehovah your God spake concerning you; all are come to pass unto you, not one thing hath failed thereof.
- Bible in Basic English (BBE)
- Now I am about to go the way of all the earth: and you have seen and are certain, all of you, in your hearts and souls, that in all the good things which the Lord said about you, he has kept faith with you; everything has come true for you.
- Darby Translation (DBY)
- And behold, I am going this day the way of all the earth; and ye know in all your heart, and in all your soul, that not one thing hath failed of all the good words that Jehovah your God hath spoken concerning you: all are come to pass unto you — not one thing hath failed thereof.
- Webster's Bible (WBS)
- And behold, this day I [am] going the way of all the earth; and ye know in all your hearts and in all your souls, that not one thing hath failed of all the good things which the LORD your God spoke concerning you: all are come to pass to you, [and] not one thing hath failed of it.
- Young's Literal Translation (YLT)
- 'And lo, I am going, to-day, in the way of all the earth, and ye have known — with all your heart, and with all your soul — that there hath not fallen one thing of all the good things which Jehovah your God hath spoken concerning you; the whole have come to you; there hath not failed of it one thing.
Read in context
- 12ನೀವು ಹಿಂತಿರಿಗಿ ಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗ ಗಳಲ್ಲಿ ಸೇರಿಕೊಂಡು ಅವರಿಗೆ ಮದುವೆಮಾಡಿ ಕೊಟ್ಟರೆ ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ
- 13ನಿಮ್ಮ ದೇವರಾದ ಕರ್ತನು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿ ಬಿಡುವದಿಲ್ಲ. ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದೊಳಗಿಂದ ನೀವು ನಾಶವಾಗುವ ವರೆಗೂ ಅವರು ನಿಮಗೆ ಉರುಲಾಗಿಯೂ ಬೋನಾ ಗಿಯೂ ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯ ವಾಗಿ ತಿಳಿದುಕೊಳ್ಳುವಿರಿ.
- 14ಇಗೋ, ನಾನು ಇಂದು ಭೂಲೋಕದವರೆಲ್ಲರ ಮಾರ್ಗವಾಗಿ ಹೋಗುತ್ತೇನೆ. ನಿಮ್ಮ ದೇವರಾದ ಕರ್ತನು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೇ ಮಾತುಗಳಲ್ಲಿ ಒಂದು ಮಾತಾದರೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ; ಅವು ಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು.
- 15ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
- 16ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
Cross references
- Luke 21:33 ಲೂಕನು 21:33ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
- 1 Kings 2:2 1 ಅರಸುಗಳು 2:2ಭೂಮಿಯಲ್ಲಿರುವವರೆಲ್ಲರೂ ಹೋಗುವ ಮಾರ್ಗ ವಾಗಿ ನಾನೂ ಹೋಗುತ್ತೇನೆ; ನೀನು ಬಲಗೊಂಡು ಶೂರನಾಗಿರು.
- Leviticus 26:3–13 ಯಾಜಕಕಾಂಡ 26:3–13ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳಂತೆ ಮಾಡಿದರೆ ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು. ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ. ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ. ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ ಅವರು ಕತ್ತಿಯಿಂದ ನಿಮ್ಮ ಮುಂದೆ ಬೀಳುವರು. ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು. ನಾನು ನಿಮ್ಮನ್ನು ಲಕ್ಷಿಸಿ ಅಭಿವೃದ್ಧಿಮಾಡಿ ಹೆಚ್ಚಿಸಿ ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು. ನೀವು ಹಳೇ ಧಾನ್ಯವನ್ನು ತಿಂದು ಹೊಸದು ಬಂದಾಗ ಹಳೇದನ್ನು ಹೊರಗೆ ತರುವಿರಿ. ಇದಲ್ಲದೆ ನಾನು ನನ್ನ ಗುಡಾರವನ್ನು ನಿಮ್ಮ ಮಧ್ಯದಲ್ಲಿ ಮಾಡಿಕೊಳ್ಳು ವೆನು. ನನ್ನ ಪ್ರಾಣವು ನಿಮ್ಮನ್ನು ಅಸಹ್ಯಿಸದೆ ಇರುವದು. ನಾನು ನಿಮ್ಮ ಮಧ್ಯದಲ್ಲಿ ನಡೆದು ನಿಮ್ಮ ದೇವ ರಾಗಿರುವೆನು; ನೀವು ನನ್ನ ಜನರಾಗಿರುವಿರಿ. ಐಗುಪ್ತ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ ನಿಮ್ಮ ನೊಗದ ಕಟ್ಟುಗಳನ್ನು ಮುರಿದು ನಿಮ್ಮನ್ನು ನೆಟ್ಟಗೆ ನಡೆಯಮಾಡಿದ ನಿಮ್ಮ ದೇವರಾದ ಕರ್ತನು ನಾನೇ.
- Joshua 21:43–45 ಯೆಹೋಶುವ 21:43–45ಕರ್ತನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟನು; ಅವರು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿದ್ದರು. ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ಪ್ರಕಾರವೆಲ್ಲಾ ಅವರ ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು; ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ; ಅವರ ಶತ್ರುಗಳನ್ನೆಲ್ಲಾ ಕರ್ತನು ಅವರ ಕೈಗಳಿಗೆ ಒಪ್ಪಿಸಿದನು.ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು. ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
- Numbers 23:19 ಅರಣ್ಯಕಾಂಡ 23:19ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
- 1 Kings 8:56 1 ಅರಸುಗಳು 8:56ಆತನು ತನ್ನ ಸೇವಕನಾದ ಮೋಶೆಯ ಮುಖಾಂತರ ಹೇಳಿದ ಎಲ್ಲಾ ಉತ್ತಮವಾದ ಮಾತು ಗಳಲ್ಲಿ ಒಂದು ಮಾತಾದರೂ ಬಿದ್ದು ಹೋದದ್ದಿಲ್ಲ.
- Deuteronomy 28:1–14 ಧರ್ಮೋಪದೇಶಕಾಂಡ 28:1–14ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಎಚ್ಚರಿಕೆಯಿಂದ ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಂಡರೆ ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಎಲ್ಲಾ ಜನಾಂಗಗಳಿಗಿಂತ ಉನ್ನತದಲ್ಲಿರಿಸುವನು. ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು. ಪಟ್ಟಣದಲ್ಲಿ ನಿನಗೆ ಆಶೀರ್ವಾದ, ಹೊಲದಲ್ಲಿ ನಿನಗೆ ಆಶೀರ್ವಾದ, ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ. ನಿನ್ನ ಪುಟ್ಟಿಗೂ ಕಣಜಕ್ಕೂ ಆಶೀರ್ವಾದ. ಬರುವಾಗ ನಿನಗೆ ಆಶೀರ್ವಾದ; ಹೊರಡುವಾಗ ನಿನಗೆ ಆಶೀರ್ವಾದ. ನಿನಗೆ ವಿರೋಧವಾಗಿ ಏಳುವ ನಿನ್ನ ಶತ್ರುಗಳನ್ನು ಕರ್ತನು ನಿನ್ನ ಮುಂದೆ ಹೊಡೆದು ಬಿಡುವನು; ಅವರು ಒಂದೇ ಮಾರ್ಗದಲ್ಲಿ ನಿನಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ನಿನ್ನ ಮುಂದೆ ಓಡಿಹೋಗುವರು. ನಿನ್ನ ಕಣಜಗಳಲ್ಲಿಯೂ ನೀನು ಕೈಹಾಕುವ ಎಲ್ಲಾದರಲ್ಲಿಯೂ ನಿನಗೆ ಆಶೀರ್ವಾದ ಬರುವ ಹಾಗೆ ಕರ್ತನು ಅಪ್ಪಣೆಕೊಡುವನು; ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ಆಶೀರ್ವಾದ ಕೊಡುವನು. ನೀನು ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕಾಪಾಡಿ ಆತನ ಮಾರ್ಗಗಳಲ್ಲಿ ನಡೆದರೆ ಕರ್ತನು ನಿನಗೆ ಪ್ರಮಾಣಮಾಡಿದ ಹಾಗೆ ನಿನ್ನನ್ನು ತನಗೆ ಪರಿಶುದ್ಧ ಜನವಾಗಿ ಸ್ಥಾಪಿಸುವನು. ಆಗ ನೀನು ಕರ್ತನ ಹೆಸರಿನಿಂದ ಕರೆಯಲ್ಪಡುವದನ್ನು ಭೂಮಿಯ ಜನಗಳೆಲ್ಲಾ ನೋಡಿ ನಿನಗೆ ಭಯಪಡುವರು; ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು. ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ. ನಾನು ಈಹೊತ್ತು ನಿನಗೆ ಆಜ್ಞಾಪಿಸುವ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ನೀನು ಕೇಳಿ ಕಾಪಾಡಿ ಕೈಕೊಂಡರೆ ಕರ್ತನು ನಿನ್ನನ್ನು ಬಾಲವನ್ನಲ್ಲ, ತಲೆಯಾಗಿ ಮಾಡುವನು; ನೀನು ಕೆಳಗಲ್ಲ, ಮೇಲೆಯೇ ಇರುವಿ. ಹೀಗಿರುವದರಿಂದ ಬೇರೆ ದೇವರುಗಳನ್ನು ಹಿಂಬಾ ಲಿಸಿ ಸೇವಿಸದಂತೆ ನಾನು ಈಹೊತ್ತು ನಿನಗೆ ಆಜ್ಞಾಪಿ ಸುವ ಮಾತುಗಳನ್ನೆಲ್ಲಾ ಬಿಟ್ಟು ಎಡಕ್ಕಾದರೂ ಬಲ ಕ್ಕಾದರೂ ತೊಲಗಬಾರದು.
- 1 Samuel 3:19 1 ಸಮುವೇಲನು 3:19ಸಮುವೇಲನು ಬೆಳೆಯುತ್ತಾ ಬಂದನು; ಕರ್ತನು ಅವನ ಸಂಗಡ ಇದ್ದು ಆತನ ವಾಕ್ಯಗಳಲ್ಲಿ ಒಂದಾ ದರೂ ಭೂಮಿಗೆ ಬಿದ್ದು ಹೋಗಗೊಡಿಸಲಿಲ್ಲ.
- Ecclesiastes 12:5 ಪ್ರಸಂಗಿ 12:5ಅಲ್ಲದೆ ಅವರು ದಿನ್ನೆಗೆ ಹೆದರುವರು; ದಾರಿಯಲ್ಲಿ ಹೆದರಿಕೆಗಳಿರುವವು. ಬಾದಾಮಿಯ ಮರ ಹೂವು ಬಿಡುವದು; ಮಿಡತೆಯು ಭಾರವಾಗಿರುವದು. ಆಶೆ ಬಿದ್ದುಹೋಗುವದು. ಮನು ಷ್ಯನು ತನ್ನ ನಿತ್ಯ ಗೃಹಕ್ಕೆ ಹೋಗುವನು. ಗೋಳಾಡು ವವರು ಬೀದಿಯಲ್ಲಿ ತಿರುಗಾಡುವರು.
- Exodus 23:27–30 ವಿಮೋಚನಕಾಂಡ 23:27–30ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು. ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು. ಭೂಮಿಯು ಬರಿದಾಗದಂತೆಯೂ ಅಡವಿಯ ಮೃಗ ಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರುಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿ ಸಿಕೊಳ್ಳುವ ವರೆಗೆ ಸ್ವಲ್ಪಸ್ವಲ್ಪವಾಗಿ ಹೊರಡಿಸುವೆನು.
- Exodus 3:8 ವಿಮೋಚನಕಾಂಡ 3:8ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
Original words (Hebrew)
- day · H3117יוֹם yôwm
- going · H1980הָלַךְ hâlak
- way · H1870דֶּרֶךְ derek
- earth · H776אֶרֶץ ʼerets
- know · H3045יָדַע yâdaʻ
- hearts · H3824לֵבָב lêbâb
- souls · H5315נֶפֶשׁ nephesh
- one · H259אֶחָד ʼechâd
- thing · H1697דָּבָר dâbâr
- failed · H5307נָפַל nâphal
- good · H2896טוֹב ṭôwb
- things · H1697דָּבָר dâbâr
- God · H430אֱלֹהִים ʼĕlôhîym
- spake · H1696דָבַר dâbar
- pass · H935בּוֹא bôwʼ
- one · H259אֶחָד ʼechâd
- thing · H1697דָּבָר dâbâr
- failed · H5307נָפַל nâphal