Joshua · chapter 24 · verse 11
Joshua 24:11 in Kannada
ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಯೆರಿಕೋವಿನ ನಿವಾಸಿ ಗಳೂ ಅಮೋರಿಯರೂ ಪೆರಿಜ್ಜೀಯರೂ ಕಾನಾನ್ಯರೂ ಹಿತ್ತಿಯರೂ ಗಿರ್ಗಾಷಿಯರೂ ಹಿವ್ವಿಯರೂ ಯೆಬೂಸಿ ಯರೂ ನಿಮ್ಮ ಸಂಗಡ ಯುದ್ಧಮಾಡಿದರು. ಆದರೆ ನಾನು ಅವರನ್ನೂ ನಿಮ್ಮ ಕೈಗೆ ಒಪ್ಪಿಸಿದೆನು.
Neevu yordanannu daati yerikovige bandiri. Yerikovina nivaasi galoo amoriyaroo perijjeeyaroo kaanaanyaroo hittiyaroo girgaashiyaroo hivviyaroo yeboosi yaroo nimma sangada yuddhamaadidaru. Aadare naanu avarannoo nimma kaige oppisidenu.
Joshua 24:11 in English
- King James Version (KJV)
- And ye went over Jordan, and came unto Jericho: and the men of Jericho fought against you, the Amorites, and the Perizzites, and the Canaanites, and the Hittites, and the Girgashites, the Hivites, and the Jebusites; and I delivered them into your hand.
- World English Bible (WEB)
- “‘You went over the Jordan, and came to Jericho. The men of Jericho fought against you, the Amorite, the Perizzite, the Canaanite, the Hittite, the Girgashite, the Hivite, and the Jebusite; and I delivered them into your hand.
- American Standard Version (ASV)
- And ye went over the Jordan, and came unto Jericho: and the men of Jericho fought against you, the Amorite, and the Perizzite, and the Canaanite, and the Hittite, and the Girgashite, the Hivite, and the Jebusite; and I delivered them into your hand.
- Bible in Basic English (BBE)
- Then you went over Jordan and came to Jericho: and the men of Jericho made war on you, the Amorites and the Perizzites and the Canaanites and the Hittites and the Girgashites and the Hivites and the Jebusites: and I gave them up into your hands.
- Darby Translation (DBY)
- And ye went over the Jordan, and came unto Jericho, and the men of Jericho fought against you, the Amorites, and the Perizzites, and the Canaanites, and the Hittites, and the Girgashites, the Hivites, and the Jebusites; and I delivered them into your hand.
- Webster's Bible (WBS)
- And ye went over Jordan, and came to Jericho: and the men of Jericho fought against you, the Amorites, and the Perizzites, and the Canaanites, and the Hittites, and the Girgashites, the Hivites, and the Jebusites, and I delivered them into your hand.
- Young's Literal Translation (YLT)
- 'And ye pass over the Jordan, and come in unto Jericho, and fight against you do the possessors of Jericho — the Amorite, and the Perizzite, and the Canaanite, and the Hittite, and the Girgashite, the Hivite, and the Jebusite — and I give them into your hand.
Read in context
- 9ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗ ನಾದ ಬಾಲಾಕನು ಎದ್ದು ಇಸ್ರಾಯೇಲಿಗೆ ವಿರೋಧ ವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೇ ಕಳುಹಿಸಿ ದನು.
- 10ಆದರೆ ನಾನು ಬಿಳಾಮನ ಮಾತನ್ನು ಕೇಳಲು ಮನಸ್ಸಿಲ್ಲದ್ದರಿಂದ ಅವನು ನಿಮ್ಮನ್ನು ಆಶೀರ್ವದಿ ಸುತ್ತಲೇ ಇರಬೇಕಾಯಿತು. ಹೀಗೆ ನಾನು ಅವನ ಕೈಯಿಂದ ನಿಮ್ಮನ್ನು ತಪ್ಪಿಸಿದೆನು.
- 11ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಯೆರಿಕೋವಿನ ನಿವಾಸಿ ಗಳೂ ಅಮೋರಿಯರೂ ಪೆರಿಜ್ಜೀಯರೂ ಕಾನಾನ್ಯರೂ ಹಿತ್ತಿಯರೂ ಗಿರ್ಗಾಷಿಯರೂ ಹಿವ್ವಿಯರೂ ಯೆಬೂಸಿ ಯರೂ ನಿಮ್ಮ ಸಂಗಡ ಯುದ್ಧಮಾಡಿದರು. ಆದರೆ ನಾನು ಅವರನ್ನೂ ನಿಮ್ಮ ಕೈಗೆ ಒಪ್ಪಿಸಿದೆನು.
- 12ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳು ಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸುಗಳನ್ನೂ ಓಡಿಸಿಬಿಟ್ಟವು; ನಿಮ್ಮ ಕತ್ತಿ, ಬಿಲ್ಲುಗ ಳಿಂದಲ್ಲ.
- 13ನೀವು ದುಡಿಯದ ಭೂಮಿಯನ್ನೂ ನೀವು ಕಟ್ಟದ ಪಟ್ಟಣಗಳನ್ನೂ ನಾನು ನಿಮಗೆ ಕೊಟ್ಟೆನು; ನೀವು ಅವುಗಳಲ್ಲಿ ವಾಸವಾಗಿದ್ದೀರಿ; ನೀವು ನೆಡದ ದ್ರಾಕ್ಷೇ ತೋಟಗಳ ಫಲವನ್ನೂ ಇಪ್ಪೇತೋಪುಗಳ ಫಲವನ್ನೂ ತಿನ್ನುತ್ತೀರಿ ಎಂಬದೇ.
Cross references
- Joshua 3:14–17 ಯೆಹೋಶುವ 3:14–17ಜನರು ಯೊರ್ದನನ್ನು ದಾಟಲು ತಮ್ಮ ಗುಡಾರ ಗಳಿಂದ ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಯೊರ್ದನಿನ ಬಳಿಗೆ ಬಂದರು. ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡವಿಾರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು. ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು. ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
- Joshua 4:10–12 ಯೆಹೋಶುವ 4:10–12ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದ ಪ್ರಕಾರ ಜನರಿಗೆ ಹೇಳಲು ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ್ದೆಲ್ಲಾ ತೀರುವ ವರೆಗೂ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ನಡುವೆ ನಿಂತರು; ಜನರು ತ್ವರೆಯಾಗಿ ದಾಟಿಹೋದರು. ಜನರೆಲ್ಲರೂ ದಾಟಿದ ಮೇಲೆ ಕರ್ತನ ಮಂಜೂಷವೂ ಯಾಜಕರೂ ಜನರ ಎದುರಿನಲ್ಲಿ ದಾಟಿದರು. ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರವೂ ಮೋಶೆಯು ತಮಗೆ ಹೇಳಿದ ಹಾಗೆಯೇ ಯುದ್ಧಸನ್ನದ್ಧರಾಗಿ ಇಸ್ರಾಯೇಲ್ ಮಕ್ಕಳ ಮುಂದೆ ಹಾದುಹೋದರು.
- Psalm 78:54–55 ಕೀರ್ತನೆಗಳು 78:54–55ತನ್ನ ಪರಿಶುದ್ದಾಲಯದ ಮೇರೆಗೂ ಆತನ ಬಲಗೈ ಕೊಂಡುಕೊಂಡ ಈ ಪರ್ವತಕ್ಕೂ ಅವರನ್ನು ಬರ ಮಾಡಿದನು. ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು.
- Psalm 114:3 ಕೀರ್ತನೆಗಳು 114:3ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ಹಿಂತಿರುಗಿತು.
- Exodus 23:23 ವಿಮೋಚನಕಾಂಡ 23:23ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರೂ ಹಿತ್ತಿಯರೂ ಪೆರಿಜೀಯರೂ ಕಾನಾನ್ಯರೂ ಹಿವ್ವಿಯರೂ ಯೆಬೂಸಿ ಯರೂ ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.
- Psalm 105:44 ಕೀರ್ತನೆಗಳು 105:44ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರು.ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
- Joshua 4:23 ಯೆಹೋಶುವ 4:23ಭೂಮಿಯ ಜನರೆಲ್ಲಾ ಕರ್ತನ ಹಸ್ತವು ಬಲವುಳ್ಳದ್ದೆಂದು ತಿಳಿಯುವ ಹಾಗೆಯೂ ನೀವು ನಿರಂತರವೂ ನಿಮ್ಮ ಕರ್ತನಾದ ದೇವರಿಗೆ ಭಯಪಡುವ ಹಾಗೆಯೂನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು.
- Nehemiah 9:24–25 ನೆಹೆಮೀಯ 9:24–25ಹೀಗೆ ಮಕ್ಕಳು ಪ್ರವೇಶಿಸಿ ದೇಶವನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶದ ನಿವಾಸಿಗಳಾದ ಕಾನಾನ್ಯರನ್ನು ಕುಗ್ಗಿಸಿ ಅವರಿಗೆ ತಮ್ಮ ಇಚ್ಛೆಯ ಪ್ರಕಾರ ಮಾಡುವದಕ್ಕೆ ಅವರನ್ನೂ ಅವರ ಅರಸುಗಳನ್ನೂ ದೇಶದ ಜನರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟಿ. ಅವರು ಬಲವಾದ ಪಟ್ಟಣ ಗಳನ್ನೂ ರಸವತ್ತಾದ ಭೂಮಿಯನ್ನೂ ತೆಗೆದುಕೊಂಡು ಸಮಸ್ತ ಉತ್ತಮವಾದವುಗಳಿಂದ ತುಂಬಿದ ಮನೆ ಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇ ತೋಟ ಗಳನ್ನೂ ಇಪ್ಪೇತೋಪುಗಳನ್ನೂ ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಬಹಳವಾಗಿ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು ಪುಷ್ಟಿಯಾಗಿ ನಿನ್ನ ದೊಡ್ಡ ಉಪಕಾರದಲ್ಲಿ ಆನಂದಪಟ್ಟರು.
- Joshua 6:1–27 ಯೆಹೋಶುವ 6:1–27ಆಗ ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಒಬ್ಬರೂ ಹೊರಗೆ ಬಾರದ ಹಾಗೆಯೂ ಒಳಗೆ ಹೋಗದ ಹಾಗೆಯೂ ಯೆರಿಕೋವು ಭದ್ರ ವಾಗಿ ಮುಚ್ಚಲ್ಪಟ್ಟಿತು. ಆಗ ಕರ್ತನು ಯೆಹೋಶುವ ನಿಗೆ--ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಬಲವುಳ್ಳ ಪರಾಕ್ರಮಿಗಳನ್ನೂ ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಿದ್ದೇನೆ. ಯುದ್ಧ ಸನ್ನದ್ಧರಾದ ನೀವೆಲ್ಲರೂ ಪಟ್ಟಣ ವನ್ನು ಸುತ್ತಬೇಕು, ಅಂದರೆ ಒಂದು ಸಾರಿ ಪಟ್ಟಣದ ಸುತ್ತಲೂ ಹೋಗಬೇಕು. ಈ ಪ್ರಕಾರ ಆರು ದಿವಸಗಳು ಮಾಡಬೇಕು. ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು. ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ತುತೂರಿಗಳನ್ನು ಊದಬೇಕು. ಅವರು ಟಗರಿನ ಕೊಂಬುಗಳ ತುತೂರಿಗಳಿಂದ ದೀರ್ಘ ಧ್ವನಿ ಗೈಯುವಾಗ ನೀವು ಆ ತುತೂರಿಯ ಧ್ವನಿಯನ್ನು ಕೇಳಿದವರಾಗಿ ಜನರೆಲ್ಲರು ಮಹಾ ಆರ್ಭಟವಾಗಿ ಆರ್ಭಟಿಸಬೇಕು; ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದು ಹೋಗುವದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಹೋಗುವನು ಎಂದು ಹೇಳಿದನು. ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ--ನೀವು ಒಡಂಬಡಿ ಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ; ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿ ಗಳನ್ನು ಕರ್ತನ ಮಂಜೂಷದ ಮುಂದೆ ಹಿಡುಕೊಂಡು ಹೋಗಲಿ ಅಂದನು. ಜನರಿಗೆ--ನೀವು ಹಾದು ಹೋಗಿ ಪಟ್ಟಣವನ್ನು ಸುತ್ತಿರಿ; ಯುದ್ಧಸನ್ನದ್ಧರು ಕರ್ತನ ಮಂಜೂಷದ ಮುಂದೆ ಹೋಗಲಿ ಅಂದನು. ಯೆಹೋಶುವನು ಜನರ ಸಂಗಡ ಮಾತನಾಡಿದ ತರುವಾಯ ಆದದ್ದೇನಂದರೆ, ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡ ಏಳು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಮುಂದೆ ನಡೆದರು. ಕರ್ತನ ಒಡಂಬಡಿಕೆಯ ಮಂಜೂ ಷವು ಅವರನ್ನು ಹಿಂಬಾಲಿಸಿತು. ಹೀಗೆ ಯುದ್ಧಸನ್ನದ್ಧ ರಾದ ಜನರು ತುತೂರಿಗಳನ್ನು ಊದುವ ಯಾಜಕರ ಮುಂದೆ ಹೋದರು. ಯಾಜಕರು ತುತೂರಿಯನ್ನು ಊದುತ್ತಿರುವಾಗ ಹಿಂದಿನ ಸೈನ್ಯವು ಮಂಜೂಷದ ಹಿಂದೆ ನಡೆದು ಬಂತು. ಯೆಹೋಶುವನು ಜನರಿಗೆನೀವು ಆರ್ಭಟಿಸಬಾರದು, ನಿಮ್ಮ ಶಬ್ದವು ಕೇಳಿಸ ಬಾರದು; ನಿಮ್ಮ ಬಾಯಿಂದ ಯಾವ ಮಾತು ಹೊರಡ ಬಾರದು; ನಾನು ಆರ್ಭಟಿಸಿರೆಂದು ಹೇಳುವ ದಿನದಲ್ಲಿ ಆರ್ಭಟಿಸಬೇಕು ಎಂದು ಆಜ್ಞಾಪಿಸಿದನು. ಹೀಗೆ ಯೇ ಕರ್ತನ ಮಂಜೂಷವು ಪಟ್ಟಣವನ್ನು ಒಂದು ಸಾರಿ ಸುತ್ತಿದ ಮೇಲೆ ಅವರು ಪಾಳೆಯಕ್ಕೆ ಬಂದು ಅಲ್ಲಿ ವಾಸಿಸಿದರು. ಯೆಹೋಶುವನು ಬೆಳಿಗ್ಗೆ ಎದ್ದನು; ಯಾಜಕರು ಕರ್ತನ ಮಂಜೂಷವನ್ನು ತೆಗೆದುಕೊಂಡರು. ಟಗ ರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡಿಯುವ ಏಳುಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಡೆಯುತ್ತಾ ಹೋದರು. ಯುದ್ಧಕ್ಕೆ ಸಿದ್ಧರಾದ ಜನರು ಅವರ ಮುಂದೆ ಹೋದರು. ಆದರೆ ಯಾಜಕರು ತುತೂರಿಗಳನ್ನು ಊದುತ್ತಾ ಹೋಗುವಾಗ ಕರ್ತನ ಮಂಜೂಷದ ಹಿಂದೆ ಸೈನ್ಯದವರು ನಡೆದರು. ಹೀಗೆ ಎರಡನೆ ದಿನದಲ್ಲಿ ಅವರು ಪಟ್ಟಣವನ್ನು ಒಂದು ಸಾರಿ ಸುತ್ತಿ ಬಂದು ಪಾಳೆಯಕ್ಕೆ ಹಿಂತಿರುಗಿದರು. ಹೀಗೆಯೇ ಆರು ದಿವಸ ಮಾಡಿದರು. ಆದರೆ ಏಳನೇ ದಿವಸ ಸೂರ್ಯೋದಯವಾಗುವಾಗ ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು; ಆ ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿ ಬಂದರು. ಏಳನೇ ಸಾರಿ ಯಾಜಕರು ತುತೂರಿಗಳನ್ನು ಊದುವಾಗ ಆದದ್ದೇನಂದರೆ, ಯೆಹೋಶುವನು ಜನರಿಗೆ--ಆರ್ಭಟಿಸಿರಿ; ಕರ್ತನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ ಅಂದನು. ಇದಲ್ಲದೆ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಕರ್ತನ ಶಾಪಕ್ಕೊಳಗಾಗುವದು; ರಾಹಾಬಳೆಂಬ ಸೂಳೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಯಾಕಂದರೆ ನಾವು ಕಳುಹಿಸಿದ ದೂತರನ್ನು ಆಕೆಯು ಬಚ್ಚಿಟ್ಟಳು. ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ. ಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು. ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು. ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀ ಪುರುಷ ರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆ ಗಳನ್ನೂ ಕತ್ತಿಯ ಬಾಯಿಂದ ಸಂಪೂರ್ಣವಾಗಿ ನಾಶ ಮಾಡಿದರು. ಆದರೆ ಯೆಹೋಶುವನು ದೇಶವನ್ನು ಪಾಳತಿ ನೋಡುವದಕ್ಕೆ ಹೋಗಿದ್ದ ಇಬ್ಬರು ಮನುಷ್ಯರಿಗೆ-- ನೀವು ಸೂಳೆಯಾದ ಹೆಂಗಸಿನ ಮನೆಗೆ ಹೋಗಿ ಅವಳನ್ನೂ ಅವಳಿಗೆ ಉಂಟಾದ ಸಮಸ್ತವನ್ನೂ ಅವಳಿಗೆ ಆಣೆ ಇಟ್ಟ ಹಾಗೆ ಅಲ್ಲಿಂದ ಹೊರಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು. ಪಾಳತಿಗಾರರಾದ ಯೌವನಸ್ಥರು ಒಳಗೆ ಹೋಗಿ ರಾಹಾಬಳನ್ನೂ ಅವಳ ತಂದೆ ತಾಯಿಯನ್ನೂ ಸಹೋದರರನ್ನೂ ಅವಳಿಗಿದ್ದ ಸಮಸ್ತವನ್ನೂ ಅವಳ ಸಂಬಂಧಿಕರಾದವರೆಲ್ಲರನ್ನೂ ಹೊರಗೆ ಕರತಂದು ಇಸ್ರಾಯೇಲ್ ಪಾಳೆಯದ ಹೊರಗೆ ಅವರನ್ನು ಇರಿಸಿದರು. ಆದರೆ ಪಟ್ಟಣ ವನ್ನೂ ಅದರಲ್ಲಿರುವ ಸಮಸ್ತವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಬೆಳ್ಳಿ ಬಂಗಾರವನ್ನೂ ಹಿತ್ತಾಳೆ ಕಬ್ಬಿಣದ ಪಾತ್ರೆಗಳನ್ನೂ ಮಾತ್ರ ಕರ್ತನ ಮನೆಯ ಭಂಡಾರದಲ್ಲಿ ಇಟ್ಟರು. ಆದರೆ ಯೆಹೋಶುವನು ಸೂಳೆಯಾದ ರಾಹಾಬಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದ ಸಮಸ್ತವನ್ನೂ ತಪ್ಪಿಸಿ ಉಳಿಸಿದನು. ಅವಳು ಈ ದಿನದ ವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿ ದ್ದಾಳೆ; ಯಾಕಂದರೆ ಯೆರಿಕೋವನ್ನು ಪಾಳತಿ ನೋಡಲು ಯೆಹೋಶುವನು ಕಳುಹಿಸಿದ ದೂತರನ್ನು ಬಚ್ಚಿಟ್ಟಿದ್ದಳು. ಆ ಕಾಲದಲ್ಲಿ ಯೆಹೋಶುವನು ಅವರಿಗೆ--ಈ ಯೆರಿಕೋ ಪಟ್ಟಣವನ್ನು ತಿರಿಗಿ ಕಟ್ಟಿಸುವ ಮನುಷ್ಯನು ಕರ್ತನ ಮುಂದೆ ಶಪಿಸಲ್ಪಡಲಿ; ತನ್ನ ಚೊಚ್ಚಲ ಮಗನಲ್ಲಿ ಅದರ ಅಸ್ತಿವಾರವನ್ನು ಹಾಕುವನು, ತನ್ನ ಕೊನೆಯ ಮಗನಲ್ಲಿ ಅದರ ಬಾಗಲುಗಳನ್ನು ಇಡುವನು ಎಂದು ಆಣೆ ಇಟ್ಟು ಹೇಳಿದನು.ಹೀಗೆಯೇ ಕರ್ತನು ಯೆಹೋಶುವನ ಸಂಗಡ ಇದ್ದನು; ಅವನ ಕೀರ್ತಿ ದೇಶದಲ್ಲೆಲ್ಲಾ ಇತ್ತು. ಹೀಗೆಯೇ ಕರ್ತನು ಯೆಹೋಶುವನ ಸಂಗಡ ಇದ್ದನು; ಅವನ ಕೀರ್ತಿ ದೇಶದಲ್ಲೆಲ್ಲಾ ಇತ್ತು.
- Acts 13:19 ಅಪೊಸ್ತಲರ ಕೃತ್ಯಗಳು 13:19ಕಾನಾನ್ ದೇಶದಲ್ಲಿದ್ದ ಏಳು ಜನಾಂಗ ಗಳನ್ನು ನಿರ್ಮೂಲ ಮಾಡಿದ ಮೇಲೆ ಚೀಟು ಹಾಕಿ ಆ ದೇಶವನ್ನು ಅವರಿಗೆ ಹಂಚಿಕೊಟ್ಟನು.
- Psalm 114:5 ಕೀರ್ತನೆಗಳು 114:5ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ?
- Deuteronomy 7:1 ಧರ್ಮೋಪದೇಶಕಾಂಡ 7:1ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ
Original words (Hebrew)
- over · H5674עָבַר ʻâbar
- Jordan · H3383יַרְדֵּן Yardên
- came · H935בּוֹא bôwʼ
- Jericho · H3405יְרִיחוֹ Yᵉrîychôw
- men · H1167בַּעַל baʻal
- Jericho · H3405יְרִיחוֹ Yᵉrîychôw
- fought · H3898לָחַם lâcham
- Amorites · H567אֱמֹרִי ʼĔmôrîy
- Perizzites · H6522פְּרִזִּי Pᵉrizzîy
- Canaanites · H3669כְּנַעַנִי Kᵉnaʻanîy
- Hittites · H2850חִתִּי Chittîy
- Girgashites · H1622גִּרְגָּשִׁי Girgâshîy
- Hivites · H2340חִוִּי Chivvîy
- Jebusites · H2983יְבוּסִי Yᵉbûwçîy
- delivered · H5414נָתַן nâthan
- hand · H3027יָד yâd