Joshua · chapter 24 · verse 23
Joshua 24:23 in Kannada
ಅದಕ್ಕವರು--ನಾವೇ ಸಾಕ್ಷಿಗಳಾಗಿದ್ದೇವೆ ಅಂದರು. ಅದಕ್ಕವನು--ಈಗ ನಿಮ್ಮ ಮಧ್ಯದಲ್ಲಿರುವ ಅನ್ಯ ದೇವರುಗಳನ್ನು ತೊರೆದು ನಿಮ್ಮ ಹೃದಯವನ್ನು ಇಸ್ರಾಯೇಲಿನ ದೇವರಾದ ಕರ್ತನಿಗೆ ತಿರುಗಿಸಿರಿ ಅಂದನು.
Adakkavaru--naave saakshigalaagiddeve andaru. Adakkavanu--eega nimma madhyadalliruva anya devarugalannu toredu nimma hrudayavannu israayelina devaraada kartanige tirugisiri andanu.
Joshua 24:23 in English
- King James Version (KJV)
- Now therefore put away, [said he], the strange gods which [are] among you, and incline your heart unto the LORD God of Israel.
- World English Bible (WEB)
- “Now therefore put away the foreign gods which are among you, and incline your heart to the LORD, the God of Israel.”
- American Standard Version (ASV)
- Now therefore put away, [said he], the foreign gods which are among you, and incline your heart unto Jehovah, the God of Israel.
- Bible in Basic English (BBE)
- Then, he said, put away the strange gods among you, turning your hearts to the Lord, the God of Israel.
- Darby Translation (DBY)
- Now therefore put away the strange gods that are among you, and incline your heart unto Jehovah the God of Israel.
- Webster's Bible (WBS)
- Now therefore put away ([said he] ) the strange gods which [are] among you, and incline your heart to the LORD God of Israel.
- Young's Literal Translation (YLT)
- and, now, turn aside the gods of the stranger which [are] in your midst, and incline your heart unto Jehovah, God of Israel.'
Read in context
- 21ಅದಕ್ಕೆ ಜನರು ಯೆಹೋಶುವ ನಿಗೆ--ಇಲ್ಲ; ಆದರೆ ನಾವು ಕರ್ತನನ್ನೇ ಸೇವಿಸುವೆವು ಅಂದರು.
- 22ಯೆಹೋಶುವನು ಜನರಿಗೆ--ನೀವು ಕರ್ತನನ್ನು ಸೇವಿಸುವದಕ್ಕೆ ಆತನನ್ನು ಆದು ಕೊಂಡಿರು ವಿರೆಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ ಅಂದನು.
- 23ಅದಕ್ಕವರು--ನಾವೇ ಸಾಕ್ಷಿಗಳಾಗಿದ್ದೇವೆ ಅಂದರು. ಅದಕ್ಕವನು--ಈಗ ನಿಮ್ಮ ಮಧ್ಯದಲ್ಲಿರುವ ಅನ್ಯ ದೇವರುಗಳನ್ನು ತೊರೆದು ನಿಮ್ಮ ಹೃದಯವನ್ನು ಇಸ್ರಾಯೇಲಿನ ದೇವರಾದ ಕರ್ತನಿಗೆ ತಿರುಗಿಸಿರಿ ಅಂದನು.
- 24ಜನರು ಯೆಹೋಶುವನಿಗೆ--ನಾವು ನಮ್ಮ ದೇವರಾದ ಕರ್ತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾಗುವೆವು ಅಂದರು.
- 25ಯೆಹೋಶುವನು ಆ ಹೊತ್ತು ಶೆಕೆಮಿನಲ್ಲಿ ಜನರ ಸಂಗಡ ಒಡಂಬಡಿಕೆ ಯನ್ನು ಮಾಡಿ ಅದನ್ನು ಅವರಿಗೆ ನಿಯಮವಾಗಿಯೂ ಕಟ್ಟಳೆಯಾಗಿಯೂ ಇಟ್ಟನು.
Cross references
- Joshua 24:14 ಯೆಹೋಶುವ 24:14ಆದದರಿಂದ ಈಗ ಕರ್ತನಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಆತನನ್ನು ಸೇವಿಸಿರಿ. ನಿಮ್ಮ ತಂದೆಗಳು ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಸೇವಿ ಸಿದ ದೇವರುಗಳನ್ನು ತೊರೆದುಬಿಟ್ಟು ಕರ್ತನನ್ನೇ ನೀವು ಸೇವಿಸಿರಿ.
- 2 Corinthians 6:16–18 2 ಕೊರಿಂಥದವರಿಗೆ 6:16–18ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ. ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ. ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Proverbs 2:2 ಜ್ಞಾನೋಕ್ತಿಗಳು 2:2ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ
- Genesis 35:2–4 ಆದಿಕಾಂಡ 35:2–4ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ--ನಿಮ್ಮ ಮಧ್ಯದಲ್ಲಿರುವ ಅನ್ಯದೇವ ರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ; ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ; ನಾವು ಎದ್ದು ಬೇತೇಲಿಗೆ ಹೋಗೋಣ; ಶ್ರಮೆಯ ದಿನದಲ್ಲಿ ನನ್ನನ್ನು ಆಲೈಸಿ ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಯಜ್ಞವೇದಿಯನ್ನು ಕಟ್ಟುವೆನು ಅಂದನು. ಆಗ ಅವರು ತಮ್ಮ ಕೈಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವು ಗಳನ್ನೂ ತೆಗೆದು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮಿಗೆ ಸವಿಾಪವಾಗಿದ್ದ ಏಲಾಮರದ ಕೆಳಗೆ ಹೂಣಿಟ್ಟನು.
- 1 Samuel 7:3–4 1 ಸಮುವೇಲನು 7:3–4ಆಗ ಸಮುವೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು. ಆಗ ಇಸ್ರಾಯೇಲ್ ಮಕ್ಕಳು ಬಾಳನ್ನೂ ಅಷ್ಟೋರೆತ್ನ್ನೂ ತೆಗೆದುಹಾಕಿ ಕರ್ತ ನೊಬ್ಬನನ್ನೇ ಸೇವಿಸಿದರು.
- Judges 10:15–16 ನ್ಯಾಯಸ್ಥಾಪಕರು 10:15–16ಇಸ್ರಾಯೇಲ್ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು. ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.
- Hebrews 12:28–29 ಇಬ್ರಿಯರಿಗೆ 12:28–29ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ. ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- 1 Kings 8:58 1 ಅರಸುಗಳು 8:58ನಮ್ಮ ದೇವರಾದ ಕರ್ತನು ನಮ್ಮನ್ನು ಕೈ ಬಿಡದೆ, ನಮ್ಮನ್ನು ವಿಸರ್ಜಿಸದೆ, ನಮ್ಮ ಪಿತೃಗಳ ಸಂಗಡ ಹೇಗೆ ಇದ್ದನೋ ಹಾಗೆಯೇ ನಮ್ಮ ಸಂಗಡ ಇರಲಿ.
- Psalm 119:36 ಕೀರ್ತನೆಗಳು 119:36ಲೋಭದ ಕಡೆಗಲ್ಲ, ನಿನ್ನ ಸಾಕ್ಷಿಗಳ ಕಡೆಗೆ ನನ್ನ ಹೃದಯವನ್ನು ತಿರುಗಿಸು.
- Exodus 20:23 ವಿಮೋಚನಕಾಂಡ 20:23ನನ್ನ ಹೊರತಾಗಿ ಬೆಳ್ಳಿ ಬಂಗಾರದ ದೇವರುಗಳನ್ನೂ ನೀವು ಮಾಡಿಕೊಳ್ಳಬಾರದು.
- 1 Corinthians 10:19–21 1 ಕೊರಿಂಥದವರಿಗೆ 10:19–21ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ? ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ. ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ.
- Hosea 14:2–3 ಹೋಶೇಯ 14:2–3ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು. ಅಶ್ಯೂರ್ಯವು ನಮ್ಮನ್ನು ರಕ್ಷಿಸುವದಿಲ್ಲ; ನಾವು ಕುದುರೆಗಳ ಮೇಲೆ ಸವಾರಿ ಮಾಡುವದಿಲ್ಲ; ಇಲ್ಲವೆ ನಮ್ಮ ಕೈಗಳಿಂದ ಆದ ಕೆಲಸಕ್ಕೆ--ನೀವು ನಮ್ಮ ದೇವರು ಗಳೇ ಎಂದು ನಾವು ಇನ್ನು ಮುಂದೆ ಹೇಳುವದೇ ಇಲ್ಲ; ನಿನ್ನಲ್ಲಿ ತಂದೆಗಳಿಲ್ಲದವರಿಗೆ ಕರುಣೆಯುಂಟು ಎಂದು ಆತನಿಗೆ ಹೇಳಿರಿ.