Joshua · chapter 3 · verse 5
Joshua 3:5 in Kannada
ಯೆಹೋಶುವನು ಜನರಿಗೆ--ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ನಾಳೆ ಕರ್ತನು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವನು ಅಂದನು.
Yehoshuvanu janarige--nimmannu shuddhamaadikolliri. Naale kartanu nimma madhyadalli adbhutagalannu maaduvanu andanu.
Joshua 3:5 in English
- King James Version (KJV)
- And Joshua said unto the people, Sanctify yourselves: for to morrow the LORD will do wonders among you.
- World English Bible (WEB)
- Joshua said to the people, “Sanctify yourselves; for tomorrow the LORD will do wonders among you.”
- American Standard Version (ASV)
- And Joshua said unto the people, Sanctify yourselves; for to-morrow Jehovah will do wonders among you.
- Bible in Basic English (BBE)
- And Joshua said to the people, Make yourselves holy, for tomorrow the Lord will do works of wonder among you.
- Darby Translation (DBY)
- And Joshua said to the people, Hallow yourselves; for to-morrow Jehovah will do wonders in your midst.
- Webster's Bible (WBS)
- And Joshua said to the people, Sanctify yourselves: for to-morrow the LORD will do wonders among you.
- Young's Literal Translation (YLT)
- And Joshua saith unto the people, 'Sanctify yourselves, for to-morrow doth Jehovah do in your midst wonders.'
Read in context
- 3ಜನರಿಗೆ ಆಜ್ಞಾಪಿಸಿ--ಯಾಜಕರಾದ ಲೇವಿಯರು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವದನ್ನು ನೋಡುವಾಗ ನೀವು ನಿಮ್ಮ ಸ್ಥಳದಿಂದ ಹೊರಟು ಅದರ ಹಿಂದೆ ಹೋಗಬೇಕು.
- 4ಆದರೆ ನಿಮಗೂ ಅದಕ್ಕೂ ಸುಮಾರು ಎರಡು ಸಾವಿರ ಮೊಳ ದೂರ ಇರಬೇಕು. ನೀವು ಹೋಗುವ ಮಾರ್ಗವನ್ನು ತಿಳಿಯುವ ಹಾಗೆ ಅದರ ಹತ್ತಿರ ಬರಬೇಡಿರಿ. ನೀವು ಎಂದಾದರೂ ಆ ಮಾರ್ಗದಲ್ಲಿ ದಾಟಿ ಹೋಗಿರು ವದಿಲ್ಲ ಅಂದರು.
- 5ಯೆಹೋಶುವನು ಜನರಿಗೆ--ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ನಾಳೆ ಕರ್ತನು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವನು ಅಂದನು.
- 6ಆಗ ಯೆಹೋಶುವನು ಯಾಜಕರಿಗೆ--ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹಾದುಹೋಗಿರಿ ಅಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋದರು.
- 7ಕರ್ತನು ಯೆಹೋಶುವನಿಗೆ--ನಾನು ಮೋಶೆಯ ಸಂಗಡ ಇದ್ದ ಪ್ರಕಾರ ನಿನ್ನ ಸಂಗಡ ಇರುವದನ್ನು ಇಸ್ರಾಯೇಲ್ಯರೆಲ್ಲರು ತಿಳಿಯುವ ಹಾಗೆ ಈ ದಿನ ನಿನ್ನನ್ನು ಅವರ ಮುಂದೆ ಘನಪಡಿಸಲು ಪ್ರಾರಂಭಿಸು ವೆನು.
Cross references
- Leviticus 20:7 ಯಾಜಕಕಾಂಡ 20:7ಆದದರಿಂದ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಪರಿಶುದ್ಧರಾಗಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.
- Joshua 7:13 ಯೆಹೋಶುವ 7:13ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್ ಕರ್ತನಾದ ದೇವರು ಹೇಳುತ್ತಾನೆ.
- 1 Samuel 16:5 1 ಸಮುವೇಲನು 16:5ಅದಕ್ಕವನು--ಸಮಾಧಾನವೇ; ಕರ್ತನಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಶುದ್ಧಮಾಡಿ ಕೊಂಡು ನನ್ನ ಸಂಗಡ ಯಜ್ಞಅರ್ಪಿಸುವದಕ್ಕೆ ಬನ್ನಿರಿ ಅಂದನು. ಇಷಯನನ್ನು ಅವನ ಮಕ್ಕಳನ್ನು ಶುದ್ಧಿಮಾಡಿ ಅವರನ್ನು ಯಜ್ಞ ಅರ್ಪಿಸುವದಕ್ಕೆ ಕರೆದನು.
- Joel 2:16 ಯೋವೇಲ 2:16ಜನರನ್ನು ಕೂಡಿಸಿರಿ, ಸಭೆಯನ್ನು ಪರಿಶುದ್ಧಮಾಡಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಮೊಲೆ ಕೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳ ಗಿಂದಲೂ ಮದುಮಗಳು ತನ್ನ ಅರೆಯೊಳಗಿಂದಲೂ ಹೊರಡಲಿ.
- John 17:19 ಯೋಹಾನನು 17:19ಅವರು ಸತ್ಯದಲ್ಲಿ ಪ್ರತಿಷ್ಠಿಸಲ್ಪಡುವಂತೆ ನಾನು ನನ್ನನ್ನು ಅವರಿ ಗೋಸ್ಕರ ಪ್ರತಿಷ್ಠಿಸಿಕೊಳ್ಳುತ್ತೇನೆ.
- Exodus 19:10–15 ವಿಮೋಚನಕಾಂಡ 19:10–15ಆಗ ಕರ್ತನು ಮೋಶೆಗೆ--ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು, ಅವರು ತಮ್ಮ ವಸ್ತ್ರಗಳನ್ನು ತೊಳಕೊಳ್ಳಲಿ. ಮೂರ ನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ; ಯಾಕಂದರೆ ಮೂರನೆಯ ದಿನದಲ್ಲಿ ಕರ್ತನು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವನು. ಜನರಿಗೋಸ್ಕರ ಸುತ್ತಲೂ ಮೇರೆಗಳನ್ನು ಮಾಡಿಸಿ ಅವರಿಗೆ--ನೀವು ಬೆಟ್ಟವನ್ನು ಏರದಂತೆಯೂ ಅದರ ಮೇರೆಯನ್ನು ಮುಟ್ಟದಂತೆಯೂ ಜಾಗ್ರತೆಯಾಗಿರ್ರಿ; ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸಾಯ ಬೇಕು. ಯಾವನಾದರೂ ಅದನ್ನು ಮುಟ್ಟಬಾರದು; ಮುಟ್ಟಿದ ಪಶುವನ್ನಾಗಲಿ ಮನುಷ್ಯನನ್ನಾಗಲಿ ನಿಶ್ಚಯ ವಾಗಿ ಕಲ್ಲೆಸೆದು ಕೊಲ್ಲಬೇಕು. ಇಲ್ಲವೆ ಈಟಿಯಿಂದ ತಿವಿಯಬೇಕು. ದೀರ್ಘವಾಗಿ ತುತೂರಿಯು ಊದುವ ಸಮಯದಲ್ಲಿ ಅವರು ಬೆಟ್ಟದ ಮೇಲೆ ಬರಬೇಕು ಅಂದನು. ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದು ಕೊಂಡರು. ಅವನು ಜನರಿಗೆ--ಮೂರನೆಯ ದಿನ ಕ್ಕಾಗಿ ಸಿದ್ಧರಾಗಿರ್ರಿ, ನೀವು ನಿಮ್ಮ ಹೆಂಡತಿಯರ ಬಳಿಗೆ ಸೇರದೆ ಇರ್ರಿ ಅಂದನು.
- Leviticus 10:3 ಯಾಜಕಕಾಂಡ 10:3ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
- Psalm 86:10 ಕೀರ್ತನೆಗಳು 86:10ನೀನು ದೊಡ್ಡವನೂ ಅದ್ಭುತಗಳನ್ನು ಮಾಡುವಾತನೂ ಆಗಿದ್ದೀ; ನೀನೊಬ್ಬನೇ ದೇವರು.
- Job 1:5 ಯೋಬನು 1:5ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.
- Joshua 3:13 ಯೆಹೋಶುವ 3:13ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಆ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು.
- Joshua 3:15 ಯೆಹೋಶುವ 3:15ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡವಿಾರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು.
- Psalm 114:1–7 ಕೀರ್ತನೆಗಳು 114:1–7ಇಸ್ರಾಯೇಲನು ಐಗುಪ್ತದೊಳಗಿಂದಲೂ ಯಾಕೋಬನ ಮನೆ ತನವು ಅನ್ಯಭಾಷೆಯುಳ್ಳ ಜನರೊಳಗಿಂದಲೂ ಹೊರಟಾಗ ಯೆಹೂದನು ಆತನ ಪರಿಶುದ್ಧ ಸ್ಥಳವೂ ಇಸ್ರಾಯೇಲನು ಆತನ ದೊರೆತನವೂ ಆಗಿದ್ದರು. ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ಹಿಂತಿರುಗಿತು. ಬೆಟ್ಟಗಳು ಟಗರುಗಳ ಹಾಗೆಯೂ ಗುಡ್ಡಗಳು ಕುರಿಮರಿಗಳ ಹಾಗೆಯೂ ಹಾರಾಡಿದವು. ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ? ಬೆಟ್ಟಗಳೇ, ಟಗರುಗಳ ಹಾಗೆಯೂ ಚಿಕ್ಕ ಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವದು ಯಾಕೆ? ಬಂಡೆಯನ್ನು ನೀರಿನ ಕೆರೆಗೂ ಬೆಣಚು ಕಲ್ಲನ್ನು ನೀರಿನ ಬುಗ್ಗೆಗೂ ಮಾರ್ಪಡಿಸುವಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.