Joshua · chapter 3 · verse 8
Joshua 3:8 in Kannada
ನೀನು ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ--ಯೊರ್ದನಿನ ನೀರಿನ ಅಂಚಿಗೆ ಬಂದಾಗ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು ಅಂದನು.
Neenu odambadikeya manjooshavannu horuva yaajakarige--yordanina neerina anchige bandaaga alle nillabekendu aajnyaapisu andanu.
Joshua 3:8 in English
- King James Version (KJV)
- And thou shalt command the priests that bear the ark of the covenant, saying, When ye are come to the brink of the water of Jordan, ye shall stand still in Jordan.
- World English Bible (WEB)
- You shall command the priests who bear the ark of the covenant, saying, ‘When you come to the brink of the waters of the Jordan, you shall stand still in the Jordan.’”
- American Standard Version (ASV)
- And thou shalt command the priests that bear the ark of the covenant, saying, When ye are come to the brink of the waters of the Jordan, ye shall stand still in the Jordan.
- Bible in Basic English (BBE)
- And you are to give orders to the priests who take up the ark of the agreement, and say, When you come to the edge of the waters of Jordan, go no further.
- Darby Translation (DBY)
- And thou shalt command the priests who bear the ark of the covenant, saying, When ye come to the edge of the waters of the Jordan, stand still in the Jordan.
- Webster's Bible (WBS)
- And thou shalt command the priests that bear the ark of the covenant, saying, When ye have come to the brink of the water of Jordan, ye shall stand still in Jordan.
- Young's Literal Translation (YLT)
- and thou, thou dost command the priests bearing the ark of the covenant, saying, When ye come unto the extremity of the waters of the Jordan — in the Jordan ye stand.'
Read in context
- 6ಆಗ ಯೆಹೋಶುವನು ಯಾಜಕರಿಗೆ--ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹಾದುಹೋಗಿರಿ ಅಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋದರು.
- 7ಕರ್ತನು ಯೆಹೋಶುವನಿಗೆ--ನಾನು ಮೋಶೆಯ ಸಂಗಡ ಇದ್ದ ಪ್ರಕಾರ ನಿನ್ನ ಸಂಗಡ ಇರುವದನ್ನು ಇಸ್ರಾಯೇಲ್ಯರೆಲ್ಲರು ತಿಳಿಯುವ ಹಾಗೆ ಈ ದಿನ ನಿನ್ನನ್ನು ಅವರ ಮುಂದೆ ಘನಪಡಿಸಲು ಪ್ರಾರಂಭಿಸು ವೆನು.
- 8ನೀನು ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ--ಯೊರ್ದನಿನ ನೀರಿನ ಅಂಚಿಗೆ ಬಂದಾಗ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು ಅಂದನು.
- 9ಆಗ ಯೆಹೋಶುವನು ಇಸ್ರಾಯೇಲ್ ಮಕ್ಕಳಿಗೆ--ನೀವು ಇಲ್ಲಿಗೆ ಬಂದು ನಿಮ್ಮ ದೇವರಾದ ಕರ್ತನ ವಾಕ್ಯಗಳನ್ನು ಕೇಳಿರಿ ಅಂದನು.
- 10ಯೆಹೋಶು ವನು--ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರು ವದನ್ನೂ ಆತನು ಕಾನಾನ್ಯರು ಹಿತ್ತಿಯರು ಹಿವ್ವಿಯರು ಪೆರಿಜೀಯರು ಗಿರ್ಗಾಷಿಯರು ಅಮೋರಿಯರು ಯೊಬೂಸಿಯರು ಇವರನ್ನು ನಿಮ್ಮ ಮುಂದೆ ನಿಶ್ಚಯ ವಾಗಿ ಓಡಿಸಿ ಬಿಡುವದನ್ನೂ ನೀವು ತಿಳಿಯುವ ಹಾಗೆ
Cross references
- Joshua 3:3 ಯೆಹೋಶುವ 3:3ಜನರಿಗೆ ಆಜ್ಞಾಪಿಸಿ--ಯಾಜಕರಾದ ಲೇವಿಯರು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವದನ್ನು ನೋಡುವಾಗ ನೀವು ನಿಮ್ಮ ಸ್ಥಳದಿಂದ ಹೊರಟು ಅದರ ಹಿಂದೆ ಹೋಗಬೇಕು.
- Joshua 3:17 ಯೆಹೋಶುವ 3:17ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
- 2 Chronicles 17:8–9 2 ಪೂರ್ವಕಾಲವೃತ್ತಾಂತ 17:8–9ಅವರ ಸಂಗಡ ಲೇವಿಯರಾದ ಶೆಮಾಯನನ್ನೂ ನೆತನ್ಯನನ್ನೂ ಜೆಬದ್ಯನನ್ನೂ ಅಸಾ ಹೇಲನನ್ನೂ ಶೆವಿಾರಾಮೋತನನ್ನೂ ಯೆಹೋನಾತಾ ನನ್ನೂ ಅದೋನೀಯನನ್ನೂ ಟೋಬೀಯನನ್ನೂ ಟೋಬದೋನಿಯನನ್ನೂ ಇವರ ಸಂಗಡ ಯಾಜಕ ರಾದ ಎಲೀಷಾಮನನ್ನೂ ಯೆಹೋರಾಮನನ್ನೂ ಕಳು ಹಿಸಿದನು. ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಕರ್ತನ ನ್ಯಾಯಪ್ರಮಾಣದ ಪುಸ್ತಕ ಇತ್ತು; ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ ಜನರಿಗೆ ಬೋಧಿಸಿದರು.
- Nehemiah 12:24–28 ನೆಹೆಮೀಯ 12:24–28ಲೇವಿಯರ ಮುಖ್ಯಸ್ಥರಾದ ಹಷ ಬ್ಯನೂ ಶೇರೇಬ್ಯನೂ ಕದ್ಮೀಯೇಲನ ಮಗನಾದ ಯೇಷೂವನೂ ಅವರಿಗೆದುರಾಗಿ ನಿಂತ ಅವರ ಸಹೋದರರೂ ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಹೊಗಳುವದಕ್ಕೂ ಸ್ತೋತ್ರಮಾಡು ವದಕ್ಕೂ ವರ್ಗ ವರ್ಗಗಳಾಗಿದ್ದರು. ಮತ್ತನ್ಯನೂ ಬಕ್ಬುಕ್ಯನೂ ಒಬದ್ಯನೂ ಮೆಷುಲ್ಲಾಮನೂ ಟಲ್ಮೋ ನನೂ ಅಕ್ಕೂಬನೂ ಬೊಕ್ಕಸಗಳ ಬಾಗಲುಗಳನ್ನು ಕಾಯುವವರಾಗಿದ್ದರು. ಯೋಚಾದಾಕನ ಮಗ ನಾದ ಯೇಷೂವನ ಮಗನಾದ ಯೋಯಾಕೀಮನ ದಿವಸಗಳಲ್ಲಿಯೂ ಅಧಿಪತಿಯಾದ ನೆಹೆವಿಾಯನ ದಿವಸಗಳಲ್ಲಿಯೂ ಶಾಸ್ತ್ರಿಯೂ ಯಾಜಕನೂ ಆದ ಎಜ್ರನ ದಿವಸಗಳಲ್ಲಿಯೂ ಇವರು ಇದ್ದರು. ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ ಹಾಡುವದರಿಂದಲೂ ತಾಳಗಳಿಂದಲೂ ವೀಣೆಗಳಿಂದಲೂ ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವದಕ್ಕೆ ಲೇವಿ ಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು. ಹಾಡುಗಾರರ ಮಕ್ಕಳು ಯೆರೂಸಲೇಮಿನ ಸುತ್ತಲಿ ರುವ ಬೈಲಿನಿಂದಲೂ ನೆಟೋಫಾತ್ಯರ ಗ್ರಾಮಗ ಳಿಂದಲೂ
- Exodus 14:13 ವಿಮೋಚನಕಾಂಡ 14:13ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
- 2 Chronicles 29:27 2 ಪೂರ್ವಕಾಲವೃತ್ತಾಂತ 29:27ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿ ಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗ ಳಿಂದಲೂ ಕರ್ತನ ಹಾಡು ಆರಂಭವಾಯಿತು.
- Nehemiah 13:22 ನೆಹೆಮೀಯ 13:22ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಳ್ಳಬೇಕೆಂದೂ ಸಬ್ಬತ್ ದಿವಸವನ್ನು ಪರಿಶುದ್ಧ ಮಾಡುವ ಹಾಗೆ ಅವರು ಬಂದು ಬಾಗಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕೋಸ್ಕರ ನೀನು ನನ್ನನ್ನು ನೆನಸಿ ನಿನ್ನ ಮಹಾ ಕೃಪೆಯ ಪ್ರಕಾರ ನನ್ನನ್ನು ಕರುಣಿಸು ಅಂದೆನು.
- 2 Chronicles 29:30 2 ಪೂರ್ವಕಾಲವೃತ್ತಾಂತ 29:30ಇದಲ್ಲದೆ ಅರಸನಾದ ಹಿಜ್ಕೀಯನೂ ಪ್ರಧಾ ನರೂ ದಾವೀದನ ಮತ್ತು ಪ್ರವಾದಿಯಾದ ಆಸಾಫನ ಮಾತುಗಳಿಂದ ಕರ್ತನನ್ನು ಸ್ತುತಿಸಬೇಕೆಂದು ಲೇವಿ ಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಬೊಗ್ಗಿಕೊಂಡು ಆರಾಧಿಸಿದರು.
- 1 Chronicles 15:11–12 1 ಪೂರ್ವಕಾಲವೃತ್ತಾಂತ 15:11–12ಆಗ ದಾವೀದನು ಚಾದೋಕ್, ಎಬ್ಯಾತ್ಯಾರ್ ಎಂಬ ಯಾಜಕರನ್ನೂ ಉರೀಯೇಲ್, ಅಸಾಯನು, ಯೋವೇಲನು, ಶೆಮಾಯನು, ಎಲೀಯೇಲನು, ಅವ್ಮೆಾನಾದಾಬ ಎಂಬ ಲೇವಿಯರನ್ನೂ ಕರೇಕಳುಹಿಸಿ ಅವರಿಗೆ ಹೇಳಿದ್ದೇನಂದರೆ-- ನೀವು ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದದರಿಂದ ಇಸ್ರಾಯೇಲಿನ ದೇವರಾದ ಕರ್ತನ ಮಂಜೂಷವನ್ನು ನಾನು ಅದ ಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.
- 2 Chronicles 31:9–10 2 ಪೂರ್ವಕಾಲವೃತ್ತಾಂತ 31:9–10ಆಗ ಹಿಜ್ಕೀಯನು ರಾಶಿಗಳನ್ನು ಕುರಿತು ಯಾಜಕರನ್ನೂ ಲೇವಿಯರನ್ನೂ ವಿಚಾರಿಸಿದನು. ಚಾದೋಕನ ಮನೆಯವನಾಗಿರುವ ಪ್ರಧಾನ ಯಾಜಕನಾದ ಅಜರ್ಯನು ಅವನಿಗೆ -- ಕರ್ತನ ಮನೆಗೆ ಕಾಣಿಕೆಗಳನ್ನು ತರಲು ಆರಂಭಿಸಿದಂದಿನಿಂದ ನಿಮಗೆ ತಿನ್ನುವದಕ್ಕೆ ಸಂಪೂರ್ಣವಿತ್ತು; ಉಳಿದದ್ದು ಬಹಳವಾಯಿತು; ಯಾಕಂದರೆ ಕರ್ತನು ತನ್ನ ಜನ ರನ್ನು ಆಶೀರ್ವದಿಸಿದ್ದಾನೆ. ಆದದರಿಂದ ಉಳಿದದ್ದು ಈ ರಾಶಿಯಾಯಿತು ಎಂದು ಹೇಳಿದನು.
- 2 Chronicles 35:2–6 2 ಪೂರ್ವಕಾಲವೃತ್ತಾಂತ 35:2–6ಆಗ ಅವನು ಯಾಜಕರನ್ನು ಅವರವರ ಕೆಲಸಗಳಲ್ಲಿ ನಿಲ್ಲಿಸಿ ಕರ್ತನ ಆಲಯದ ಸೇವೆ ಮಾಡುವದಕ್ಕೆ ಅವರನ್ನು ದೃಢ ಪಡಿಸಿ, ಸಮಸ್ತ ಇಸ್ರಾಯೇಲ್ಯರಿಗೆ ಬೋಧಿಸತಕ್ಕ ವರೂ ಕರ್ತನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವಿಲ್ಲದ ಹಾಗೆ ನೀವು ಅದನ್ನು ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನು ಕಟ್ಟಿಸಿದ ಮನೆಯಲ್ಲಿ ಇರಿಸಿ ನಿಮ್ಮ ದೇವರಾದ ಕರ್ತನನ್ನೂ ಆತನ ಜನವಾದ ಇಸ್ರಾಯೇಲ್ಯರನ್ನೂ ಸೇವಿಸಿರಿ. ಇದಲ್ಲದೆ ಇಸ್ರಾ ಯೇಲಿನ ಅರಸನಾದ ದಾವೀದನ ಬರಹದ ಪ್ರಕಾರ ವಾಗಿಯೂ ಅವನ ಮಗನಾದ ಸೊಲೊಮೋನನ ಬರಹದ ಪ್ರಕಾರವಾಗಿಯೂ ನಿಮ್ಮ ಸರತಿಗಳಲ್ಲಿ ನಿಮ್ಮ ಪಿತೃಗಳ ಮನೆಗಳ ಪ್ರಕಾರ ಸಿದ್ಧಮಾಡಿಕೊಂಡು ಜನರಾದ ನಿಮ್ಮ ಸಹೋದರರ ಪಿತೃಗಳ ಕುಟುಂಬ ಗಳ ವಿಭಾಗದ ಪ್ರಕಾರವಾಗಿ ಪರಿಶುದ್ಧ ಸ್ಥಾನದಲ್ಲಿ ನಿಲ್ಲಿರಿ. ಪಸ್ಕವನ್ನು ವಧಿಸಿ ನಿಮ್ಮನ್ನು ಪರಿಶುದ್ಧ ಮಾಡಿ ಕೊಂಡು ಕರ್ತನು ಮೋಶೆಯ ಮುಖಾಂತರವಾಗಿ ಹೇಳಿದ ವಾಕ್ಯದ ಪ್ರಕಾರ ನಿಮ್ಮ ಸಹೋದರರು ಮಾಡುವ ಹಾಗೆ ಅವರನ್ನು ಸಿದ್ಧಮಾಡಿರಿ ಅಂದನು.
- 2 Chronicles 29:4–11 2 ಪೂರ್ವಕಾಲವೃತ್ತಾಂತ 29:4–11ಇದಲ್ಲದೆ ಅವನು ಯಾಜಕರನ್ನೂ ಲೇವಿಯರನ್ನೂ ಕರೆಕಳುಹಿಸಿ ಅವರನ್ನು ಮೂಡಣ ಬೀದಿಯಲ್ಲಿ ಕೂಡಿಸಿ ಕೊಂಡು ಅವರಿಗೆ ಹೇಳಿದ್ದೇನಂದರೆ-- ಲೇವಿಯರೇ, ನನ್ನ ಮಾತನ್ನು ಕೇಳಿರಿ; ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನಿಮ್ಮ ಪಿತೃಗಳ ಕರ್ತನಾದ ದೇವರ ಮನೆಯನ್ನು ಪರಿಶುದ್ಧಮಾಡಿ ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ. ನಮ್ಮ ಪಿತೃಗಳು ಅಪರಾಧಮಾಡಿ ನಮ್ಮ ದೇವರಾದ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ ಆತನನ್ನು ಬಿಟ್ಟು ಕರ್ತನ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ. ಇದಲ್ಲದೆ ಅವರು ದ್ವಾರಾಂಗಳದ ಬಾಗಲುಗಳನ್ನು ಮುಚ್ಚಿ ದೀಪಗಳನ್ನು ಆರಿಸಿ ಇಸ್ರಾಯೇಲಿನ ದೇವರಿಗೆ ಪರಿಶುದ್ಧ ಸ್ಥಾನದಲ್ಲಿ ಧೂಪವನ್ನು ಸುಡದೆ, ದಹನಬಲಿಗಳನ್ನು ಅರ್ಪಿ ಸದೆ ಹೋದರು. ಆದದರಿಂದ ಯೆಹೂದದ ಮೇಲೆ ಯೂ ಮತ್ತು ಯೆರೂಸಲೇಮಿನವರ ಮೇಲೆಯೂ ಕರ್ತನ ರೌದ್ರವಾಯಿತು; ನೀವು ನಿಮ್ಮ ಕಣ್ಣುಗಳಿಂದ ನೋಡುವ ಹಾಗೆ ಆತನು ಅವರನ್ನು ಕಳವಳಕ್ಕೂ ವಿಸ್ಮಯಕ್ಕೂ ಅಪಹಾಸ್ಯಕ್ಕೂ ಒಪ್ಪಿಸಿಕೊಟ್ಟನು. ಅದ ಕ್ಕೋಸ್ಕರ ಇಗೋ, ನಮ್ಮ ಪಿತೃಗಳು ಕತ್ತಿಯಿಂದ ಬಿದ್ದಿ ದ್ದಾರೆ; ನಮ್ಮ ಕುಮಾರರೂ ಕುಮಾರ್ತೆಯರೂ ಹೆಂಡ ತಿಯರೂ ಸೆರೆಯಲ್ಲಿದ್ದಾರೆ. ಈಗ ಇಸ್ರಾಯೇಲಿನ ದೇವರಾದ ಕರ್ತನ ಉಗ್ರಕೋಪವು ನಮ್ಮನ್ನು ಬಿಟ್ಟು ಹೋಗುವ ಹಾಗೆ ನಾನು ಆತನ ಸಂಗಡ ಒಡಂಬಡಿ ಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ. ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯಾಕಂದರೆ ತನ್ನ ಸಮ್ಮುಖದಲ್ಲಿ ನಿಲ್ಲುವದಕ್ಕೂ ತನ್ನನ್ನು ಸೇವಿಸುವದಕ್ಕೂ ಸೇವಕರಾಗಿರುವದಕ್ಕೂ ಧೂಪಸುಡುವದಕ್ಕೂ ಕರ್ತನು ನಿಮ್ಮನ್ನು ಆದುಕೊಂಡಿದ್ದಾನೆ ಅಂದನು.
Original words (Hebrew)
- command · H6680צָוָה tsâvâh
- priests · H3548כֹּהֵן kôhên
- bear · H5375נָשָׂא nâsâʼ
- ark · H727אָרוֹן ʼârôwn
- covenant · H1285בְּרִית bᵉrîyth
- saying · H559אָמַר ʼâmar
- come · H935בּוֹא bôwʼ
- brink · H7097קָצֶה qâtseh
- water · H4325מַיִם mayim
- Jordan · H3383יַרְדֵּן Yardên
- still · H5975עָמַד ʻâmad
- Jordan · H3383יַרְדֵּן Yardên