Joshua · chapter 6 · verse 2
Joshua 6:2 in Kannada
ಆಗ ಕರ್ತನು ಯೆಹೋಶುವ ನಿಗೆ--ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಬಲವುಳ್ಳ ಪರಾಕ್ರಮಿಗಳನ್ನೂ ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಿದ್ದೇನೆ.
Aaga kartanu yehoshuva nige--nodu, yerikovannoo adara arasanannoo balavulla paraakramigalannoo ninna kaiyalli oppisi kottiddene.
Joshua 6:2 in English
- King James Version (KJV)
- And the LORD said unto Joshua, See, I have given into thine hand Jericho, and the king thereof, [and] the mighty men of valour.
- World English Bible (WEB)
- The LORD said to Joshua, “Behold, I have given Jericho into your hand, with its king and the mighty men of valor.
- American Standard Version (ASV)
- And Jehovah said unto Joshua, See, I have given into thy hand Jericho, and the king thereof, and the mighty men of valor.
- Bible in Basic English (BBE)
- And the Lord said to Joshua, See, I have given into your hands Jericho with its king and all its men of war.
- Darby Translation (DBY)
- And Jehovah said to Joshua, See, I have given into thy hand Jericho, and the king thereof, [and] the valiant men.
- Webster's Bible (WBS)
- And the LORD said to Joshua, See, I have given into thy hand Jericho, and its king, [and] the mighty men of valor.
- Young's Literal Translation (YLT)
- And Jehovah saith unto Joshua, 'See, I have given into thy hand Jericho and its king — mighty ones of valour,
Read in context
- 1ಆಗ ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಒಬ್ಬರೂ ಹೊರಗೆ ಬಾರದ ಹಾಗೆಯೂ ಒಳಗೆ ಹೋಗದ ಹಾಗೆಯೂ ಯೆರಿಕೋವು ಭದ್ರ ವಾಗಿ ಮುಚ್ಚಲ್ಪಟ್ಟಿತು.
- 2ಆಗ ಕರ್ತನು ಯೆಹೋಶುವ ನಿಗೆ--ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಬಲವುಳ್ಳ ಪರಾಕ್ರಮಿಗಳನ್ನೂ ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಿದ್ದೇನೆ.
- 3ಯುದ್ಧ ಸನ್ನದ್ಧರಾದ ನೀವೆಲ್ಲರೂ ಪಟ್ಟಣ ವನ್ನು ಸುತ್ತಬೇಕು, ಅಂದರೆ ಒಂದು ಸಾರಿ ಪಟ್ಟಣದ ಸುತ್ತಲೂ ಹೋಗಬೇಕು. ಈ ಪ್ರಕಾರ ಆರು ದಿವಸಗಳು ಮಾಡಬೇಕು.
- 4ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು. ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ತುತೂರಿಗಳನ್ನು ಊದಬೇಕು.
Cross references
- Deuteronomy 7:24 ಧರ್ಮೋಪದೇಶಕಾಂಡ 7:24ಅವರ ಅರಸುಗಳನ್ನು ನಿನಗೆ ಒಪ್ಪಿಸುವನು. ನೀನು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ನಾಶಮಾಡುವಿ; ನೀನು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿನ್ನ ಮುಂದೆ ನಿಲ್ಲಲಾರನು.
- Joshua 8:1 ಯೆಹೋಶುವ 8:1ಆಗ ಕರ್ತನು ಯೆಹೋಶುವನಿಗೆ--ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ನೀನು ಸಮಸ್ತ ಯುದ್ಧಸ್ಥರಾದ ಜನರನ್ನು ಕೂಡಿಸಿಕೊಂಡು ಎದ್ದು ಆಯಿಗೆ ಏರಿ ಹೋಗು. ನೋಡು, ನಾನು ಆಯಿಯ ಅರಸನನ್ನೂ ಅವನ ಜನವನ್ನೂ ಪಟ್ಟಣ ವನ್ನೂ ಸೀಮೆಯನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.
- Joshua 2:24 ಯೆಹೋಶುವ 2:24ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ಆ ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು.
- Joshua 2:9 ಯೆಹೋಶುವ 2:9ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.
- Joshua 5:13–15 ಯೆಹೋಶುವ 5:13–15ಇದಾದ ಮೇಲೆ ಯೆಹೋಶುವನು ಯೆರಿ ಕೋವಿನ ಬಳಿಯಲ್ಲಿ ಇದ್ದಾಗ ಆದದ್ದೇನಂದರೆ, ತನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಒಬ್ಬ ಮನು ಷ್ಯನು ಅವನಿಗೆದುರಾಗಿ ನಿಂತಿದ್ದನು; ಆತನ ಕೈಯಲ್ಲಿ ಬಿಚ್ಚುಕತ್ತಿ ಇತ್ತು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ--ನೀನು ನಮಗೋಸ್ಕರವೋ? ನಮ್ಮ ವೈರಿಗಳಿಗೋಸ್ಕರವೋ? ಅಂದನು. ಅದಕ್ಕೆ ಅವನು--ಅಲ್ಲ; ನಾನು ಈಗ ಕರ್ತನ ಸೈನ್ಯದ ಅಧಿಪತಿ ಯಾಗಿ ಬಂದಿದ್ದೇನೆ ಅಂದನು; ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ ಆತನಿಗೆನನ್ನ ಒಡೆಯನು ತನ್ನ ಸೇವಕನಿಗೆ ಏನು ಹೇಳುತ್ತಾನೆ ಅಂದನು.ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು. ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.
- Joshua 6:9–24 ಯೆಹೋಶುವ 6:9–24ಹೀಗೆ ಯುದ್ಧಸನ್ನದ್ಧ ರಾದ ಜನರು ತುತೂರಿಗಳನ್ನು ಊದುವ ಯಾಜಕರ ಮುಂದೆ ಹೋದರು. ಯಾಜಕರು ತುತೂರಿಯನ್ನು ಊದುತ್ತಿರುವಾಗ ಹಿಂದಿನ ಸೈನ್ಯವು ಮಂಜೂಷದ ಹಿಂದೆ ನಡೆದು ಬಂತು. ಯೆಹೋಶುವನು ಜನರಿಗೆನೀವು ಆರ್ಭಟಿಸಬಾರದು, ನಿಮ್ಮ ಶಬ್ದವು ಕೇಳಿಸ ಬಾರದು; ನಿಮ್ಮ ಬಾಯಿಂದ ಯಾವ ಮಾತು ಹೊರಡ ಬಾರದು; ನಾನು ಆರ್ಭಟಿಸಿರೆಂದು ಹೇಳುವ ದಿನದಲ್ಲಿ ಆರ್ಭಟಿಸಬೇಕು ಎಂದು ಆಜ್ಞಾಪಿಸಿದನು. ಹೀಗೆ ಯೇ ಕರ್ತನ ಮಂಜೂಷವು ಪಟ್ಟಣವನ್ನು ಒಂದು ಸಾರಿ ಸುತ್ತಿದ ಮೇಲೆ ಅವರು ಪಾಳೆಯಕ್ಕೆ ಬಂದು ಅಲ್ಲಿ ವಾಸಿಸಿದರು. ಯೆಹೋಶುವನು ಬೆಳಿಗ್ಗೆ ಎದ್ದನು; ಯಾಜಕರು ಕರ್ತನ ಮಂಜೂಷವನ್ನು ತೆಗೆದುಕೊಂಡರು. ಟಗ ರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡಿಯುವ ಏಳುಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಡೆಯುತ್ತಾ ಹೋದರು. ಯುದ್ಧಕ್ಕೆ ಸಿದ್ಧರಾದ ಜನರು ಅವರ ಮುಂದೆ ಹೋದರು. ಆದರೆ ಯಾಜಕರು ತುತೂರಿಗಳನ್ನು ಊದುತ್ತಾ ಹೋಗುವಾಗ ಕರ್ತನ ಮಂಜೂಷದ ಹಿಂದೆ ಸೈನ್ಯದವರು ನಡೆದರು. ಹೀಗೆ ಎರಡನೆ ದಿನದಲ್ಲಿ ಅವರು ಪಟ್ಟಣವನ್ನು ಒಂದು ಸಾರಿ ಸುತ್ತಿ ಬಂದು ಪಾಳೆಯಕ್ಕೆ ಹಿಂತಿರುಗಿದರು. ಹೀಗೆಯೇ ಆರು ದಿವಸ ಮಾಡಿದರು. ಆದರೆ ಏಳನೇ ದಿವಸ ಸೂರ್ಯೋದಯವಾಗುವಾಗ ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು; ಆ ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿ ಬಂದರು. ಏಳನೇ ಸಾರಿ ಯಾಜಕರು ತುತೂರಿಗಳನ್ನು ಊದುವಾಗ ಆದದ್ದೇನಂದರೆ, ಯೆಹೋಶುವನು ಜನರಿಗೆ--ಆರ್ಭಟಿಸಿರಿ; ಕರ್ತನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ ಅಂದನು. ಇದಲ್ಲದೆ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಕರ್ತನ ಶಾಪಕ್ಕೊಳಗಾಗುವದು; ರಾಹಾಬಳೆಂಬ ಸೂಳೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಯಾಕಂದರೆ ನಾವು ಕಳುಹಿಸಿದ ದೂತರನ್ನು ಆಕೆಯು ಬಚ್ಚಿಟ್ಟಳು. ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ. ಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು. ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು. ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀ ಪುರುಷ ರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆ ಗಳನ್ನೂ ಕತ್ತಿಯ ಬಾಯಿಂದ ಸಂಪೂರ್ಣವಾಗಿ ನಾಶ ಮಾಡಿದರು. ಆದರೆ ಯೆಹೋಶುವನು ದೇಶವನ್ನು ಪಾಳತಿ ನೋಡುವದಕ್ಕೆ ಹೋಗಿದ್ದ ಇಬ್ಬರು ಮನುಷ್ಯರಿಗೆ-- ನೀವು ಸೂಳೆಯಾದ ಹೆಂಗಸಿನ ಮನೆಗೆ ಹೋಗಿ ಅವಳನ್ನೂ ಅವಳಿಗೆ ಉಂಟಾದ ಸಮಸ್ತವನ್ನೂ ಅವಳಿಗೆ ಆಣೆ ಇಟ್ಟ ಹಾಗೆ ಅಲ್ಲಿಂದ ಹೊರಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು. ಪಾಳತಿಗಾರರಾದ ಯೌವನಸ್ಥರು ಒಳಗೆ ಹೋಗಿ ರಾಹಾಬಳನ್ನೂ ಅವಳ ತಂದೆ ತಾಯಿಯನ್ನೂ ಸಹೋದರರನ್ನೂ ಅವಳಿಗಿದ್ದ ಸಮಸ್ತವನ್ನೂ ಅವಳ ಸಂಬಂಧಿಕರಾದವರೆಲ್ಲರನ್ನೂ ಹೊರಗೆ ಕರತಂದು ಇಸ್ರಾಯೇಲ್ ಪಾಳೆಯದ ಹೊರಗೆ ಅವರನ್ನು ಇರಿಸಿದರು. ಆದರೆ ಪಟ್ಟಣ ವನ್ನೂ ಅದರಲ್ಲಿರುವ ಸಮಸ್ತವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಬೆಳ್ಳಿ ಬಂಗಾರವನ್ನೂ ಹಿತ್ತಾಳೆ ಕಬ್ಬಿಣದ ಪಾತ್ರೆಗಳನ್ನೂ ಮಾತ್ರ ಕರ್ತನ ಮನೆಯ ಭಂಡಾರದಲ್ಲಿ ಇಟ್ಟರು.
- Nehemiah 9:24 ನೆಹೆಮೀಯ 9:24ಹೀಗೆ ಮಕ್ಕಳು ಪ್ರವೇಶಿಸಿ ದೇಶವನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶದ ನಿವಾಸಿಗಳಾದ ಕಾನಾನ್ಯರನ್ನು ಕುಗ್ಗಿಸಿ ಅವರಿಗೆ ತಮ್ಮ ಇಚ್ಛೆಯ ಪ್ರಕಾರ ಮಾಡುವದಕ್ಕೆ ಅವರನ್ನೂ ಅವರ ಅರಸುಗಳನ್ನೂ ದೇಶದ ಜನರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟಿ.
- 2 Samuel 5:19 2 ಸಮುವೇಲನು 5:19ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು.
- Joshua 11:6–8 ಯೆಹೋಶುವ 11:6–8ಆಗ ಕರ್ತನು ಯೆಹೋಶುವನಿಗೆಅವರಿಗೆ ಭಯಪಡಬೇಡ; ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರನ್ನು ಇಸ್ರಾಯೇಲಿನ ಮುಂದೆ ಕೊಲ್ಲಲ್ಪ ಡುವಂತೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು ಅಂದನು. ಆಗ ಯೆಹೋಶುವನೂ ಅವನ ಸಂಗಡ ಇದ್ದ ಯುದ್ಧಸ್ಥ ರೆಲ್ಲರೂ ಬಂದು ಫಕ್ಕನೆ ಮೇರೋಮು ನೀರುಗಳ ಬಳಿಯಲ್ಲಿ ಅವರ ಮೇಲೆ ಬಿದ್ದರು. ಕರ್ತನು ಅವರನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಅವರನ್ನು ಹೊಡೆದು ದೊಡ್ಡ ಚೀದೋನಿನವರೆಗೂ ಮಿಸ್ರೆಫೋತ್ಮಯೀಮಿನ ವರೆಗೂ ಮೂಡಲಲ್ಲಿರುವ ಮಿಚ್ಪೆಯ ತಗ್ಗಿನ ವರೆಗೂ ಹಿಂದಟ್ಟಿ ಅವರಲ್ಲಿ ಒಬ್ಬನ ನ್ನಾದರೂ ಉಳಿಸದೆ ಅವರನ್ನು ಹೊಡೆದುಬಿಟ್ಟರು.
- Daniel 2:21 ದಾನಿಯೇಲನು 2:21ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.
- Judges 11:21 ನ್ಯಾಯಸ್ಥಾಪಕರು 11:21ಆಗ ಇಸ್ರಾಯೇಲಿನ ದೇವರಾದ ಕರ್ತನು ಸೀಹೋನನನ್ನೂ ಅವನ ಸಕಲ ಜನರನ್ನೂ ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇ ಲ್ಯರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶ ವನ್ನೆಲ್ಲಾ ಸ್ವಾಧೀನಮಾಡಿಕೊಂಡರು.
- Judges 11:24 ನ್ಯಾಯಸ್ಥಾಪಕರು 11:24ನಿನ್ನ ದೇವರಾದ ಕೆಮೋಷನು ಸ್ವತಂತ್ರಿ ಸಿಕೊಳ್ಳಲು ನಿನಗೆ ಕೊಡುವ ದೇಶವನ್ನು ನೀನು ಸ್ವತಂತ್ರಿಸಿಕೊಳ್ಳುವದಿಲ್ಲವೋ? ಹಾಗೆಯೇ ನಮ್ಮ ದೇವರಾದ ಕರ್ತನು ಯಾರನ್ನು ನಮ್ಮ ಮುಂದೆ ಹೊರಡಿಸುವನೋ ಅವರನ್ನು ನಾವು ಸ್ವಾಧೀನಮಾಡಿ ಕೊಳ್ಳುವೆವು.