Joshua · chapter 7 · verse 9
Joshua 7:9 in Kannada
ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು.
Yaakandare kaanaanyaroo desha vaasigalellaroo idannu keli namma suttaloo sutti kondu namma hesarannu bhoomiyinda tegedu biduvaru; aaga ninna mahattaada hesarige enu maaduvi andanu.
Joshua 7:9 in English
- King James Version (KJV)
- For the Canaanites and all the inhabitants of the land shall hear [of it], and shall environ us round, and cut off our name from the earth: and what wilt thou do unto thy great name?
- World English Bible (WEB)
- For the Canaanites and all the inhabitants of the land will hear of it, and will surround us, and cut off our name from the earth. What will you do for your great name?”
- American Standard Version (ASV)
- For the Canaanites and all the inhabitants of the land will hear of it, and will compass us round, and cut off our name from the earth: and what wilt thou do for thy great name?
- Bible in Basic English (BBE)
- For when the news comes to the Canaanites and all the people of the land, they will come up, shutting us in and cutting off our name from the earth: and what will you do for the honour of your great name?
- Darby Translation (DBY)
- When the Canaanites and all the inhabitants of the land shall hear [of it], they will surround us, and cut off our name from the earth. And what wilt thou do unto thy great name?
- Webster's Bible (WBS)
- For the Canaanites, and all the inhabitants of the land will hear [of it] , and will environ us, and cut off our name from the earth: and what wilt thou do to thy great name?
- Young's Literal Translation (YLT)
- and the Canaanite and all the inhabitants of the land do hear, and have come round against us, and cut off our name out of the earth; and what dost Thou do for Thy great name?'
Read in context
- 7ಇದಲ್ಲದೆ ಯೆಹೋಶುವನು--ಅಯ್ಯೋ, ಓ ಕರ್ತನಾದ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ಅಮೋರಿ ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕಾಗಿ ನೀನು ಈ ಜನರು ಯೊರ್ದನನ್ನು ದಾಟಮಾಡಿದ್ದೇನು? ನಮಗೆ ಇಷ್ಟೇ ಸಾಕೆಂದು ನಾವು ಯೊರ್ದನಿನ ಆಚೆಯಲ್ಲಿ ಇದ್ದರೆ ಒಳ್ಳೇದಾಗಿತ್ತು.
- 8ಓ ಕರ್ತನೇ, ಈಗ ನಾನೇನು ಹೇಳಲಿ? ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದ್ದಾರಲ್ಲಾ.
- 9ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು.
- 10ಆಗ ಕರ್ತನು ಯೆಹೋಶುವನಿಗೆ--ನೀನು ಎದ್ದೇಳು; ನೀನು ಈ ಪ್ರಕಾರ ಬೋರಲು ಬಿದ್ದಿರುವ ದೇನು?
- 11ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.
Cross references
- Exodus 32:12 ವಿಮೋಚನಕಾಂಡ 32:12ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು.
- Ezekiel 36:22–23 ಯೆಹೆಜ್ಕೇಲನು 36:22–23ಆದದರಿಂದ ನೀನು ಇಸ್ರಾ ಯೇಲನ ಮನೆತನದವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು--ಓ ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡು ತ್ತಿಲ್ಲ, ಆದರೆ ನೀವು ಹೋಗುವಾಗ ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಪರಿಶುದ್ಧನಾಮಕ್ಕಾಗಿ ಮಾಡುತ್ತೇನೆ. ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Psalm 83:4 ಕೀರ್ತನೆಗಳು 83:4ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ.
- John 12:28 ಯೋಹಾನನು 12:28ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು.
- Numbers 14:13 ಅರಣ್ಯಕಾಂಡ 14:13ಆಗ ಮೋಶೆ ಕರ್ತನಿಗೆ--ಹಾಗಾದರೆ ಐಗುಪ್ತ್ಯರು ಅದನ್ನು ಕೇಳುವರು; ನೀನು ಈ ಜನರನ್ನು ನಿನ್ನ ಬಲದೊಂದಿಗೆ ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಿಯಲ್ಲಾ!
- Deuteronomy 9:28 ಧರ್ಮೋಪದೇಶಕಾಂಡ 9:28ನಮ್ಮನ್ನು ಎಲ್ಲಿಂದ ಹೊರಗೆ ಬರಮಾಡಿದಿಯೋ ಆ ದೇಶವು--ಕರ್ತನು ಅವರಿಗೆ ಹೇಳಿದ ದೇಶದಲ್ಲಿ ಅವರನ್ನು ಬರಮಾಡ ಲಾರದೆ ಇದ್ದದ್ದರಿಂದಲೂ ಅವರನ್ನು ಹಗೆಮಾಡಿದ್ದ ರಿಂದಲೂ ಅರಣ್ಯದಲ್ಲಿ ಅವರನ್ನು ಕೊಂದುಹಾಕುವ ಹಾಗೆ ಅವರನ್ನು ಹೊರಗೆ ಬರಮಾಡಿದನೆಂದು ಹೇಳಬಾರದು.ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
- Psalm 124:2–3 ಕೀರ್ತನೆಗಳು 124:2–3ಮನುಷ್ಯರು ನಮಗೆ ವಿರೋಧವಾಗಿ ಏಳುವಾಗ, ಕರ್ತನು ನಮಗಿಲ್ಲದಿದ್ದರೆ ನಮ್ಮ ಮೇಲೆ ಅವರ ಕೋಪವು ಉರಿದು, ಅವರು ನಮ್ಮನ್ನು ಜೀವಿತರಾಗಿ ನುಂಗಿಬಿಡುತ್ತಿದ್ದರು.
- Joel 2:17 ಯೋವೇಲ 2:17ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು?
- Ezekiel 20:9 ಯೆಹೆಜ್ಕೇಲನು 20:9ಆದರೆ ಅವರು ಯಾರ ಮಧ್ಯದಲ್ಲಿದ್ದರೋ ನಾನು ಯಾರ ಮುಂದೆ ಅವರನ್ನು ಐಗುಪ್ತದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯ ಪಡಿಸಿದೆನೋ? ಆ ಅನ್ಯ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸ ಮಾಡಿದೆನು;
- Psalm 106:6–8 ಕೀರ್ತನೆಗಳು 106:6–8ನಮ್ಮ ತಂದೆಗಳ ಸಂಗಡ ನಾವು ಪಾಪಮಾಡಿದ್ದೇವೆ, ಅಕ್ರಮಮಾಡಿದ್ದೇವೆ, ದುಷ್ಟತ್ವವನ್ನು ನಡಿಸಿದ್ದೇವೆ. ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು. ಆದಾಗ್ಯೂ ಆತನು ತನ್ನ ಮಹಾಶಕ್ತಿಯನ್ನು ಅವರಿಗೆ ತಿಳಿಯ ಮಾಡುವ ಹಾಗೆ ತನ್ನ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದನು.
- Deuteronomy 32:26–27 ಧರ್ಮೋಪದೇಶಕಾಂಡ 32:26–27ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು. ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು.