Joshua · chapter 9 · verse 15
Joshua 9:15 in Kannada
ಯೆಹೋಶುವನು ಅವರ ಸಂಗಡ ಸಮಾಧಾನ ಮಾಡಿಕೊಂಡು ಅವರನ್ನು ಜೀವದಿಂದ ಇರಿಸುವದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಪ್ರಮಾಣಮಾಡಿದರು.
Yehoshuvanu avara sangada samaadhaana maadikondu avarannu jeevadinda irisuvadakke avara sangada odambadike maadidanu. Idallade sabheya pradhaanaru pramaanamaadidaru.
Joshua 9:15 in English
- King James Version (KJV)
- And Joshua made peace with them, and made a league with them, to let them live: and the princes of the congregation sware unto them.
- World English Bible (WEB)
- Joshua made peace with them, and made a covenant with them, to let them live. The princes of the congregation swore to them.
- American Standard Version (ASV)
- And Joshua made peace with them, and made a covenant with them, to let them live: and the princes of the congregation sware unto them.
- Bible in Basic English (BBE)
- So Joshua made peace with them, and made an agreement with them that they were not to be put to death: and the chiefs of the people took an oath to them.
- Darby Translation (DBY)
- And Joshua made peace with them, and made a covenant with them, to let them live; and the princes of the assembly swore unto them.
- Webster's Bible (WBS)
- And Joshua made peace with them, and made a league with them, to let them live: and the princes of the congregation swore to them.
- Young's Literal Translation (YLT)
- and Joshua maketh with them peace, and maketh with them a covenant, to keep them alive; and swear to them do the princes of the company.
Read in context
- 13ನಾವು ದ್ರಾಕ್ಷಾರಸ ತುಂಬುವಾಗ ಈ ಬುದ್ದಲಿಗಳು ಹೊಸವಾಗಿದ್ದವು. ಇಗೋ, ಅವು ಹರಿದುಹೋದವು. ಇದಲ್ಲದೆ ಪ್ರಯಾಣ ಬಹಳ ದೂರವಾದದರಿಂದ ಈ ನಮ್ಮ ವಸ್ತ್ರಗಳೂ ನಮ್ಮ ಕೆರಗಳೂ ಹಳೇವಾದವು ಅಂದರು.
- 14ಆಗ ಇವರು ಕರ್ತನಿಂದ ಆಲೋಚನೆ ಯನ್ನು ಕೇಳದೆ ಅವರ ಆಹಾರದಲ್ಲಿ ತೆಗೆದುಕೊಂಡರು.
- 15ಯೆಹೋಶುವನು ಅವರ ಸಂಗಡ ಸಮಾಧಾನ ಮಾಡಿಕೊಂಡು ಅವರನ್ನು ಜೀವದಿಂದ ಇರಿಸುವದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಪ್ರಮಾಣಮಾಡಿದರು.
- 16ಆದರೆ ಅವರ ಸಂಗಡ ಒಡಂಬಡಿಕೆ ಮಾಡಿ ಮೂರು ದಿವಸಗಳಾದ ತರುವಾಯ ಅವರು ತಮ್ಮ ನೆರೆಯವರೆಂದೂ ತಮ್ಮಲ್ಲಿ ಇರುವವರೆಂದೂ ಕೇಳಿ ದರು.
- 17ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡು ವಾಗ ಮೂರನೇ ದಿನದಲ್ಲಿ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಅವರ ಪಟ್ಟಣ ಗಳಿಗೆ ಬಂದರು.
Cross references
- 2 Samuel 21:2 2 ಸಮುವೇಲನು 21:2ಆಗ ಅರಸನು ಗಿಬ್ಯೋನ್ಯರನ್ನು ಕಳುಹಿಸಿದನು. (ಆದರೆ ಗಿಬ್ಯೋನ್ಯರು ಇಸ್ರಾಯೇಲ್ ಮಕ್ಕಳಾಗಿರದೆ ಅಮೋರಿಯರಲ್ಲಿ ಉಳಿದವರಾಗಿದ್ದರು. ಅವರಿಗೆ ಇಸ್ರಾಯೇಲ್ ಮಕ್ಕಳು ಆಣೆ ಇಟ್ಟಿದ್ದರು. ಸೌಲನು ಇಸ್ರಾಯೇಲ್ ಮಕ್ಕಳಿಗೋಸ್ಕರವಾಗಿಯೂ ಯೆಹೂದ ಕ್ಕೋಸ್ಕರವಾಗಿಯೂ ತೋರಿಸಿದ ಆಸಕ್ತಿಯಿಂದ ಅವ ರನ್ನು ಹೊಡೆಯಲು ಹುಡುಕಿದ್ದನು)
- Joshua 11:19 ಯೆಹೋಶುವ 11:19ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರ ಹೊರತಾಗಿ ಇಸ್ರಾಯೇಲ್ ಮಕ್ಕಳ ಸಂಗಡ ಸಮಾಧಾನಮಾಡಿಕೊಂಡ ಬೇರೆ ಒಂದು ಪಟ್ಟಣವಾದರೂ ಇರಲಿಲ್ಲ; ಅವರು ಬೇರೆ ಎಲ್ಲವು ಗಳನ್ನು ಯುದ್ಧಮಾಡಿ ತೆಗೆದುಕೊಂಡರು.
- Deuteronomy 20:10–11 ಧರ್ಮೋಪದೇಶಕಾಂಡ 20:10–11ನೀನು ಯುದ್ಧಮಾಡುವ ನಿಮಿತ್ತ ಒಂದು ಪಟ್ಟ ಣದ ಹತ್ತಿರ ಬಂದರೆ ಸಮಾಧಾನಕ್ಕಾಗಿ ಅದನ್ನು ಕರೆಯಬೇಕು. ಆ ಪಟ್ಟಣವು ನಿನಗೆ ಸಮಾಧಾನದ ಉತ್ತರ ಕೊಟ್ಟು ಬಾಗಲನ್ನು ತೆರೆದರೆ ಅದರಲ್ಲಿರುವ ಜನರೆಲ್ಲರು ನಿನಗೆ ಕಪ್ಪಕೊಟ್ಟು ನಿನ್ನನ್ನು ಸೇವಿಸಬೇಕು.
- Joshua 6:22–25 ಯೆಹೋಶುವ 6:22–25ಆದರೆ ಯೆಹೋಶುವನು ದೇಶವನ್ನು ಪಾಳತಿ ನೋಡುವದಕ್ಕೆ ಹೋಗಿದ್ದ ಇಬ್ಬರು ಮನುಷ್ಯರಿಗೆ-- ನೀವು ಸೂಳೆಯಾದ ಹೆಂಗಸಿನ ಮನೆಗೆ ಹೋಗಿ ಅವಳನ್ನೂ ಅವಳಿಗೆ ಉಂಟಾದ ಸಮಸ್ತವನ್ನೂ ಅವಳಿಗೆ ಆಣೆ ಇಟ್ಟ ಹಾಗೆ ಅಲ್ಲಿಂದ ಹೊರಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು. ಪಾಳತಿಗಾರರಾದ ಯೌವನಸ್ಥರು ಒಳಗೆ ಹೋಗಿ ರಾಹಾಬಳನ್ನೂ ಅವಳ ತಂದೆ ತಾಯಿಯನ್ನೂ ಸಹೋದರರನ್ನೂ ಅವಳಿಗಿದ್ದ ಸಮಸ್ತವನ್ನೂ ಅವಳ ಸಂಬಂಧಿಕರಾದವರೆಲ್ಲರನ್ನೂ ಹೊರಗೆ ಕರತಂದು ಇಸ್ರಾಯೇಲ್ ಪಾಳೆಯದ ಹೊರಗೆ ಅವರನ್ನು ಇರಿಸಿದರು. ಆದರೆ ಪಟ್ಟಣ ವನ್ನೂ ಅದರಲ್ಲಿರುವ ಸಮಸ್ತವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಬೆಳ್ಳಿ ಬಂಗಾರವನ್ನೂ ಹಿತ್ತಾಳೆ ಕಬ್ಬಿಣದ ಪಾತ್ರೆಗಳನ್ನೂ ಮಾತ್ರ ಕರ್ತನ ಮನೆಯ ಭಂಡಾರದಲ್ಲಿ ಇಟ್ಟರು. ಆದರೆ ಯೆಹೋಶುವನು ಸೂಳೆಯಾದ ರಾಹಾಬಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದ ಸಮಸ್ತವನ್ನೂ ತಪ್ಪಿಸಿ ಉಳಿಸಿದನು. ಅವಳು ಈ ದಿನದ ವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿ ದ್ದಾಳೆ; ಯಾಕಂದರೆ ಯೆರಿಕೋವನ್ನು ಪಾಳತಿ ನೋಡಲು ಯೆಹೋಶುವನು ಕಳುಹಿಸಿದ ದೂತರನ್ನು ಬಚ್ಚಿಟ್ಟಿದ್ದಳು.
- Jeremiah 18:7–8 ಯೆರೆಮೀಯ 18:7–8ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು.
- Joshua 2:12–19 ಯೆಹೋಶುವ 2:12–19ಈಗ ನಾನು ನಿಮಗೆ ದಯ ತೋರಿಸಿದ್ದರಿಂದ ನೀವು ನನಗೆ ಮತ್ತು ನನ್ನ ತಂದೆಯ ಮನೆಗೆ ದಯತೋರಿಸಬೇಕು. ನನಗೆ ಸತ್ಯವಾದ ಗುರುತನ್ನು ಕೊಡಬೇಕು. ನನ್ನ ತಂದೆತಾಯಿಯನ್ನೂ ಸಹೋದರ ಸಹೋದರಿಯರನ್ನೂ ಅವರಿಗೆ ಇರುವದೆ ಲ್ಲವನ್ನೂ ಜೀವದಿಂದಿರಿಸಿ ನಮ್ಮ ಪ್ರಾಣಗಳನ್ನು ಸಾವಿ ನಿಂದ ಉಳಿಸುವದಾಗಿ ಕರ್ತನ ಮೇಲೆ ಪ್ರಮಾಣ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ ಅಂದಳು. ಆ ಮನುಷ್ಯರು ಆಕೆಗೆ--ನೀನು ಈ ನಮ್ಮ ಕಾರ್ಯವನ್ನು ಬಹಿರಂಗಮಾಡದೆ ಇದ್ದರೆ ನಮ್ಮ ಪ್ರಾಣವು ನಿಮಗೋಸ್ಕರ ಇರುವದು. ಕರ್ತನು ನಮಗೆ ಈ ದೇಶವನ್ನು ಕೊಟ್ಟಾಗ ಸತ್ಯದಿಂದಲೂ ದಯ ದಿಂದಲೂ ನಡೆದುಕೊಳ್ಳುವೆವು ಅಂದರು. ಆಗ ಅವರನ್ನು ಹಗ್ಗದಿಂದ ಕಿಟಿಕಿಯ ಮೂಲಕ ಇಳಿಸಿ ಬಿಟ್ಟಳು. ಯಾಕಂದರೆ ಆಕೆಯ ಮನೆಯು ಪಟ್ಟಣದ ಗೋಡೆಯ ಮೇಲೆ ಇತ್ತು. ಗೋಡೆಯ ಮೇಲೆ ಆಕೆಯು ವಾಸವಾಗಿದ್ದಳು. ನಿಮ್ಮನ್ನು ಹಿಂದಟ್ಟುವವರು ನಿಮಗೆ ಅಡ್ಡಬಾರದ ಹಾಗೆ ನೀವು ಬೆಟ್ಟಕ್ಕೆ ಹೋಗಿ ಅವರು ತಿರಿಗಿ ಬರುವ ವರೆಗೂ ಅಲ್ಲಿ ಮೂರು ದಿವಸ ಅಡಗಿ ಕೊಂಡಿದ್ದು ತರುವಾಯ ನಿಮ್ಮ ಮಾರ್ಗವಾಗಿ ಹೋಗಿರಿ ಅಂದಳು. ಆಗ ಆ ಮನುಷ್ಯರು ಆಕೆಗೆನೀನು ನಮಗೆ ಇಟ್ಟ ನಿನ್ನ ಆಣೆಯ ನಿಮಿತ್ತ ನಾವು ನಿರಪರಾಧಿಗಳಾಗಿರಬೇಕು. ಇಗೋ, ನಾವು ದೇಶ ದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಕಿಟಿಕಿಯಿಂದ ಇಳಿಯಬಿಟ್ಟ ಈ ಕೆಂಪು ನೂಲಿನ ದಾರವನ್ನು ಕಟ್ಟಿ ನಿನ್ನ ತಂದೆತಾಯಿಯನ್ನೂ ಸಹೋದರರನ್ನೂ ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು. ಯಾವನಾದರೂ ನಿನ್ನ ಮನೆಯ ಬಾಗಲಿಂದ ಹೊರಟು ಬೀದಿಗೆ ಬಂದರೆ ಅವನ ರಕ್ತವು ಅವನ ತಲೆಯಮೇಲೆ ಇರುವದು. ನಾವು ನಿರಪರಾಧಿಗಳಾಗಿರುವೆವು. ಆದರೆ ನಿನ್ನ ಸಂಗಡ ಮನೆಯಲ್ಲಿ ಇರುವ ಯಾವನ ಮೇಲಾದರೂ ಕೈ ಹಾಕಲ್ಪಟ್ಟರೆ ಅವನ ರಕ್ತದ ಅಪರಾಧವು ನಮ್ಮ ತಲೆಯ ಮೇಲೆ ಇರುವದು.
- Exodus 23:32 ವಿಮೋಚನಕಾಂಡ 23:32ಅವರ ಸಂಗಡಲೂ ಅವರ ದೇವರುಗಳ ಸಂಗಡಲೂ ಯಾವ ಒಡಂಬಡಿಕೆಯನ್ನೂ ಮಾಡಬಾರದು.ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.