Joshua · chapter 9 · verse 2
Joshua 9:2 in Kannada
ಅವರು ಯೆಹೋಶುವನ ಸಂಗಡವೂ ಇಸ್ರಾಯೇಲ್ಯರ ಸಂಗಡವೂ ಯುದ್ಧ ಮಾಡುವದಕ್ಕೆ ಒಟ್ಟಾಗಿ ಕೂಡಿಕೊಂಡರು.
Avaru yehoshuvana sangadavoo israayelyara sangadavoo yuddha maaduvadakke ottaagi koodikondaru.
Joshua 9:2 in English
- King James Version (KJV)
- That they gathered themselves together, to fight with Joshua and with Israel, with one accord.
- World English Bible (WEB)
- they gathered themselves together to fight with Joshua and with Israel, with one accord.
- American Standard Version (ASV)
- that they gathered themselves together, to fight with Joshua and with Israel, with one accord.
- Bible in Basic English (BBE)
- Came together with one purpose, to make war against Joshua and Israel.
- Darby Translation (DBY)
- that they assembled together, to fight with Joshua and with Israel, with one accord.
- Webster's Bible (WBS)
- That they assembled themselves, to fight with Joshua and with Israel, with one accord.
- Young's Literal Translation (YLT)
- that they gather themselves together to fight with Joshua, and with Israel — one mouth.
Read in context
- 1ಯೊರ್ದನಿಗೆ ಈಚೆಯಲ್ಲಿ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಲೆಬನೋನಿಗೆ ಎದು ರಾದ ಮಹಾಸಮುದ್ರದ ಸಮಸ್ತ ಪ್ರಾಂತ್ಯಗಳಲ್ಲಿಯೂ ಇರುವ ಹಿತ್ತಿಯರ ಅಮೋರಿಯರ ಕಾನಾನ್ಯರ ಪೆರಿಜ್ಜೀ ಯರ ಹಿವ್ವಿಯರ ಯೆಬೂಸಿಯರ ಅರಸುಗಳು ಇದನ್ನು ಕೇಳಿದಾಗ ಆದದ್ದೇನಂದರೆ,
- 2ಅವರು ಯೆಹೋಶುವನ ಸಂಗಡವೂ ಇಸ್ರಾಯೇಲ್ಯರ ಸಂಗಡವೂ ಯುದ್ಧ ಮಾಡುವದಕ್ಕೆ ಒಟ್ಟಾಗಿ ಕೂಡಿಕೊಂಡರು.
- 3ಆದರೆ ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಗಿಬ್ಯೋನಿನ ನಿವಾಸಿಗಳು ಕೇಳಿದಾಗ
- 4ಒಂದು ತಂತ್ರವಾದ ಉಪಾಯವನ್ನು ಮಾಡಿ ರಾಯಭಾರಿಗಳ ಹಾಗೆ ತೋರಿಸುವಂತೆ ಹಳೇ ಗೋಣೀಚೀಲಗಳನ್ನೂ ತೇಪೆಹಾಕಿದ ಹಳೇದಾದ ದ್ರಾಕ್ಷಾರಸದ ಬುದ್ದಲಿಗಳನ್ನೂ ಕಟ್ಟಿಕೊಂಡು ತಮ್ಮ ಕತ್ತೆಗಳ ಮೇಲೆ ಹಾಕಿಕೊಂಡು
Cross references
- Revelation 20:8–9 ಪ್ರಕಟನೆ 20:8–9ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು. ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ದೇವರ ಬಳಿಯಿಂದ ಬೆಂಕಿಯು ಪರಲೋಕ ದೊಳಗಿಂದ ಇಳಿದು ಬಂದು ಅವರನ್ನು ನುಂಗಿಬಿಟ್ಟಿತು.
- Psalm 83:2–8 ಕೀರ್ತನೆಗಳು 83:2–8ಇಗೋ, ನಿನ್ನ ಶತ್ರುಗಳು ಗದ್ದಲ ಮಾಡು ತ್ತಾರೆ; ನಿನ್ನ ಹಗೆಯವರು ತಲೆ ಎತ್ತುತ್ತಾರೆ. ನಿನ್ನ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿಯನ್ನು ಕಲ್ಪಿಸುತ್ತಾರೆ. ನೀನು ಅಡಗಿಸಿಟ್ಟವರಿಗೆ ವಿರೋಧಿಗಳು ಆಲೋಚಿಸಿಕೊಳ್ಳುತ್ತಾರೆ. ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ. ಅವರು ಕೂಡ ಏಕಮನಸ್ಸಾಗಿ ಆಲೋಚನೆ ಮಾಡಿಕೊಂಡಿ ದ್ದಾರೆ; ನಿನಗೆ ವಿರೋಧವಾಗಿ ಒಡಂಬಟ್ಟಿದ್ದಾರೆ. ಎದೋಮ್ಯರ ಮತ್ತು ಇಷ್ಮಾಯೇಲ್ಯರ ಗುಡಾರಗಳೂ ಮೋವಾಬೂ ಹಗ್ರೀಯರೂ ಗೆಬಾಲ್ಯರೂ ಅಮ್ಮೋನಿ ಯರೂ ಮಾಲೇಕ್ಯರೂ ತೂರಿನ ನಿವಾಸಿಗಳು ಸಹಿತವಾಗಿ ಫಿಲಿಷ್ಟಿಯರದೇ; ಅಶ್ಶೂರ್ಯರೂ ಸಹ ಅವ ರಲ್ಲಿ ಕೂಡಿಕೊಂಡು; ಅವರು ಲೋಟನ ಮಕ್ಕಳಿಗೆ ಸಹಾಯ ಮಾಡಿದ್ದಾರೆ ಸೆಲಾ.
- Isaiah 8:12 ಯೆಶಾಯ 8:12ಇವರು ಯಾವದನ್ನು ಒಪ್ಪಂದ ಎಂದು ಹೇಳುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ.
- Revelation 16:14 ಪ್ರಕಟನೆ 16:14ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು.
- 2 Chronicles 20:1–30 2 ಪೂರ್ವಕಾಲವೃತ್ತಾಂತ 20:1–30ಇದರ ತರುವಾಯ ಏನಾಯಿತಂದರೆ, ಮೋವಾಬಿನ ಮಕ್ಕಳೂ ಅಮ್ಮೋನಿನ ಮಕ್ಕಳೂ ಅಮ್ಮೋನ್ಯರ ಕೊಡ ಇತರರೂ ಯೆಹೋ ಷಾಫಾಟನ ಮೇಲೆ ಯುದ್ಧಮಾಡಲು ಬಂದರು. ಆಗ ಕೆಲವರು ಬಂದು ಯೆಹೋಷಾಫಾಟನಿಗೆ--ಸಮು ದ್ರದ ಆಚೆಯಿಂದ ನಿನಗೆ ವಿರೋಧವಾಗಿ ಅರಾಮಿನ ಬಹುಗುಂಪು ಈ ಕಡೆ ಬರುತ್ತದೆ; ಇಗೋ, ಅವರು ಏಂಗೆದಿ ಎಂಬ ಹಚೆಚೋನ್ ತಾಮಾರಿನಲ್ಲಿ ಇದ್ದಾ ರೆಂದು ತಿಳಿಸಿದರು. ಆಗ ಯೆಹೋಷಾಫಾಟನು ಭಯಪಟ್ಟು ಕರ್ತನನ್ನು ಹುಡುಕಲು ನಿರ್ಣಯಿಸಿ ಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸಮಾಡ ಬೇಕೆಂದು ಸಾರಿಸಿದನು. ಆದದರಿಂದ ಯೆಹೂದ ದವರು ಕರ್ತನನ್ನು ಹುಡುಕಲು ಕೂಡಿಕೊಂಡರು. ನಿಶ್ಚಯವಾಗಿ ಸಮಸ್ತ ಯೆಹೂದದ ಪಟ್ಟಣಗಳಿಂದ ಕರ್ತನನ್ನು ಹುಡುಕಲು ಬಂದರು. ಆಗ ಯೆಹೋಷಾ ಫಾಟನು ಹೊಸ ಅಂಗಳದ ಮುಂದೆ ಕರ್ತನ ಮಂದಿರ ದಲ್ಲಿರುವ ಯೆಹೂದದ ಯೆರೂಸಲೇಮಿನ ಸಭೆಯ ಮಧ್ಯದಲ್ಲಿ ನಿಂತು--ನಮ್ಮ ಪಿತೃಗಳ ದೇವರಾದ ಓ ಕರ್ತನೇ, ಪರಲೋಕದಲ್ಲಿರುವ ದೇವರು ನೀನಲ್ಲವೋ? ನೀನು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀಯಲ್ಲವೋ? ಯಾವನೂ ನಿನ್ನನ್ನು ಎದುರಿಸಕೂಡದ ಹಾಗೆ ನಿನ್ನ ಕೈಯಲ್ಲಿ ಶಕ್ತಿಯೂ ಪರಾಕ್ರಮವೂ ಇಲ್ಲವೋ? ನೀನು ನಿನ್ನ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗ ಳನ್ನು ಓಡಿಸಿಬಿಟ್ಟು ಅದನ್ನು ನಿನ್ನ ಸ್ನೇಹಿತನಾದ ಅಬ್ರ ಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀನು ನಮ್ಮ ದೇವರಲ್ಲವೋ? ಅವರು ಅದರಲ್ಲಿ ನಿವಾಸ ಮಾಡಿ ನಿನ್ನ ಹೆಸರಿಗೆ ಪರಿಶುದ್ಧವಾದ ಸ್ಥಾನವನ್ನು ಕಟ್ಟಿಸಿ ನಿನ್ನ ಹೆಸರು ಈ ಆಲಯದಲ್ಲಿರುವದರಿಂದ ಕತ್ತಿಯೂ ನ್ಯಾಯತೀರಿಸುವ ಶಿಕ್ಷೆಯೂ ಜಾಡ್ಯವೂ ಬರವೂ ಏನಾದರೂ ನಮ್ಮ ಮೇಲೆ ಬಂದರೆ ನಾವು ಈ ಆಲಯದ ಮುಂದೆಯೂ ನಿನ್ನ ಸಮ್ಮುಖದಲ್ಲಿಯೂ ನಿಂತು ನಮ್ಮ ಇಕ್ಕಟ್ಟಿನಲ್ಲಿ ನಿನ್ನನ್ನು ಕೂಗುವಾಗ ನೀನು ಕೇಳಿ ರಕ್ಷಿಸುವವನಾಗಿದ್ದೀ ಎಂದು ಹೇಳಿದರು. ಈಗ ಇಗೋ, ಅಮ್ಮೋನ್ ಮೋವಾಬ್, ಸೇಯಾರ್ ಬೆಟ್ಟದ ಮಕ್ಕಳನ್ನು ನೋಡು; ಇಸ್ರಾಯೇಲ್ಯರು ಐಗುಪ್ತದೇಶ ದೊಳಗಿಂದ ಹೊರಟು ಬರುವಾಗ ಅವರ ಕಡೆಗೆ ಹೋಗಲು ನೀನು ಇವರಿಗೆ ಅಪ್ಪಣೆಕೊಡದೆ ಇದ್ದದ ರಿಂದ ಇವರು ತೊಲಗಿ ಅವರನ್ನು ನಾಶಮಾಡದೆ ಹೋದರು. ಇಗೋ, ನಮಗೆ ನೀನು ಸ್ವಾಧೀನ ಮಾಡಿಕೊಳ್ಳಲು ಕೊಟ್ಟ ನಿನ್ನ ಸ್ವಾಸ್ಥ್ಯದೊಳಗಿಂದ ಅವರು ಬಂದು ನಮ್ಮನ್ನು ಹೊರಡಿಸಬೇಕೆಂದು ನಮಗೆ ಪ್ರತೀಕಾರ ಮಾಡುತ್ತಾರೆ. ಓ ನಮ್ಮ ದೇವರೇ, ನೀನು ಅವರಿಗೆ ನ್ಯಾಯತೀರಿಸುವದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾಗುಂಪನ್ನು ಎದು ರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯಲಿಲ್ಲ. ಆದರೆ ನಮ್ಮ ಕಣ್ಣುಗಳು ನಿನ್ನ ಮೇಲೆ ಅವೆ ಅಂದರು. ಹೀಗೆಯೇ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಕರ್ತನ ಮುಂದೆ ನಿಂತರು. ಆಗ ಸಭೆಯ ಮಧ್ಯದಲ್ಲಿ ಆಸಾಫನ ಮಕ್ಕಳಲ್ಲಿ ಒಬ್ಬನಾದಂಥ, ಲೇವಿಯನಾದಂಥ, ಮತ್ತನ್ಯನ ಮಗ ನಾದ ಯೆಗೀಯೇಲನ ಮಗನಾದ ಬೆನಾಯನ ಮಗ ನಾದ ಜೆಕರೀಯನ ಮಗನಾದ ಯಹಜೀಯೇಲನ ಮೇಲೆ ಕರ್ತನ ಆತ್ಮನು ಬಂದನು. ಆಗ ಅವನುಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿ ಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಕರ್ತನು ನಿಮಗೆ ಹೀಗೆ ಹೇಳುತ್ತಾನೆ--ಈ ಮಹಾಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರ ಬೇಡಿರಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ದೇವ ರದೇ. ಮಾರನೇ ದಿವಸ ನೀವು ಅವರಿಗೆ ಎದು ರಾಗಿ ಹೋಗಿರಿ. ಇಗೋ, ಅವರು ಹಚ್ಚೀಚು ಎಂಬ ಕಣಿವೆಯಿಂದ ಬರುತ್ತಾರೆ; ಯೆರೂವೇಲಿನ ಅರಣ್ಯದ ಮುಂಭಾಗದಲ್ಲಿರುವ ಹಳ್ಳದ ಅಂತ್ಯದಲ್ಲಿ ಅವರನ್ನು ಕಂಡುಕೊಳ್ಳುವಿರಿ. ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು. ಆಗ ಯೆಹೋ ಷಾಫಾಟನು ತನ್ನ ಮುಖವನ್ನು ನೆಲಕ್ಕೆ ಬಾಗಿಸಿದನು; ಯೆಹೂದದವರೆಲ್ಲರೂ ಯೆರೂಸಲೇಮಿನ ನಿವಾಸಿಗಳೆ ಲ್ಲರೂ ಕರ್ತನ ಮುಂದೆ ಅಡ್ಡಬಿದ್ದು ಕರ್ತನನ್ನು ಆರಾ ಧಿಸಿದರು. ಇದಲ್ಲದೆ ಕೆಹಾತ್ಯರ ಮಕ್ಕಳಲ್ಲಿಯೂ ಕೋರಹಿಯರ ಮಕ್ಕಳಲ್ಲಿಯೂ ಇರುವ ಲೇವಿಯರು ಗಟ್ಟಿಯಾಗಿ ದೊಡ್ಡ ಶಬ್ದದಿಂದ ಇಸ್ರಾಯೇಲಿನ ದೇವ ರಾದ ಕರ್ತನನ್ನು ಸ್ತುತಿಸಲು ಎದ್ದು ನಿಂತರು. ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು. ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು. ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯಾರ್ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು. ಅಮ್ಮೋನ್, ಮೋವಾಬ್ಯರ ಮಕ್ಕಳು ಸೇಯಾರ್ ಪರ್ವತದ ನಿವಾಸಿ ಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯಾರಿನ ನಿವಾಸಿಗಳನ್ನು ಮುಗಿಸಿಬಿಟ್ಟ ತರುವಾಯ ತಾವೇ ಒಬ್ಬರನ್ನೊಬ್ಬರು ನಾಶಮಾಡಲು ಸಹಾಯ ಕೊಟ್ಟರು. ಯೆಹೂದದವರು ಅರಣ್ಯದಲ್ಲಿ ರುವ ಬುರುಜಿನ ಸ್ಥಳಕ್ಕೆ ಬಂದಾಗ ಅವರು ಗುಂಪನ್ನು ದೃಷ್ಟಿಸಿದರು; ಇಗೋ, ಅವರಲ್ಲಿ ಒಬ್ಬನೂ ತಪ್ಪದ ಹಾಗೆ ಎಲ್ಲರೂ ನೆಲಕ್ಕೆ ಬಿದ್ದು ಹೆಣಗಳಾಗಿದ್ದರು. ಯೆಹೋಷಾಫಾಟನೂ ಅವನ ಜನರೂ ಅವರ ವಸ್ತುಗಳನ್ನು ಕೊಳ್ಳೆಮಾಡಲು ಬಂದಾಗ ಅವರು ಹೆಣ ಗಳ ಬಳಿಯಲ್ಲಿ ದ್ರವ್ಯವನ್ನೂ ಪ್ರಿಯವಾದ ಆಭರಣ ಗಳನ್ನೂ ಬಹಳವಾಗಿ ಕಂಡುಕೊಂಡು ತಾವು ಹೊರ ಲಾರದಷ್ಟು ಸುಲುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದದರಿಂದ ಅದನ್ನು ಮೂರು ದಿವಸಗಳ ವರೆಗೂ ಸುಲುಕೊಳ್ಳುತ್ತಾ ಇದ್ದರು. ನಾಲ್ಕನೇ ದಿವಸ ದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡು ಅಲ್ಲಿ ಕರ್ತನನ್ನು ಸ್ತುತಿಸಿದರು. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ. ಕರ್ತನು ಅವರ ಶತ್ರುಗಳ ಮೇಲೆ ಅವರನ್ನು ಸಂತೋ ಷಪಡುವಂತೆ ಮಾಡಿದ್ದರಿಂದ ಅವರು ಸಂತೋಷವಾಗಿ ಯೆರೂಸಲೇಮಿಗೆ ತಿರಿಗಿ ಹೋಗುವದಕ್ಕೆ ಯೆಹೂದ ಯೆರೂಸಲೇಮಿನವರೆಲ್ಲರೂ ಅವರ ಮುಂಭಾಗ ದಲ್ಲಿ ಯೆಹೋಷಾಫಾಟನೂ ಹೊರಟು ವೀಣೆಗ ಳಿಂದಲೂ ಕಿನ್ನರಿಗಳಿಂದಲೂ ತುತೂರಿಗಳಿಂದಲೂ ಯೆರೂಸಲೇಮಿನಲ್ಲಿ ಪ್ರವೇಶಿಸಿ ಕರ್ತನ ಆಲಯಕ್ಕೆ ಬಂದರು. ಕರ್ತನು ಇಸ್ರಾಯೇಲಿನ ಶತ್ರುಗಳ ಮೇಲೆ ಯುದ್ಧಮಾಡಿದನೆಂದು ಅವರು ಕೇಳಿದಾಗ ದೇವರ ಭಯವು ಆ ದೇಶಗಳ ಸಕಲ ರಾಜ್ಯಗಳ ಮೇಲೆ ಬಿತ್ತು. ಆದದರಿಂದ ಯೆಹೋಷಾಫಾಟನ ರಾಜ್ಯವು ಶಾಂತವಾಗಿತ್ತು; ಅವನ ದೇವರು ಸುತ್ತಲೂ ಅವನಿಗೆ ವಿಶ್ರಾಂತಿ ಕೊಟ್ಟನು.
- Proverbs 11:21 ಜ್ಞಾನೋಕ್ತಿಗಳು 11:21ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ; ನೀತಿವಂತರ ವಂಶವು ತಪ್ಪಿಸಿಕೊಳ್ಳುವದು.
- Joel 3:9–13 ಯೋವೇಲ 3:9–13ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ. ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ. ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು. ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು. ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ.
- Isaiah 8:9–10 ಯೆಶಾಯ 8:9–10ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ. ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
- Acts 4:26–28 ಅಪೊಸ್ತಲರ ಕೃತ್ಯಗಳು 4:26–28ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ. ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
- Isaiah 54:15 ಯೆಶಾಯ 54:15ಇಗೋ, ನಿಶ್ಚಯವಾಗಿ ಅವರು ಒಟ್ಟಾಗಿ ಕೂಡಿ ಕೊಳ್ಳುವರು, ಆದರೆ ನನ್ನಿಂದಲ್ಲ; ನಿನಗೆ ವಿರೋಧವಾಗಿ ಯಾರ್ಯಾರು ಒಟ್ಟಾಗಿ ಕೂಡಿಕೊಳ್ಳುವರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು.
- Psalm 2:1–2 ಕೀರ್ತನೆಗಳು 2:1–2ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ? ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.