Joshua · chapter 9 · verse 20
Joshua 9:20 in Kannada
ನಾವು ಅವರಿಗೆ ಇಟ್ಟ ಆಣೆಯ ನಿಮಿತ್ತ ಕೋಪವು ನಮ್ಮ ಮೇಲೆ ಬಾರದ ಹಾಗೆ ನಾವು ಅವರನ್ನು ಜೀವದಿಂದ ಇರಿಸಿ ಅವರಿಗೆ ಇದನ್ನು ಮಾಡುವೆವು.
Naavu avarige itta aaneya nimitta kopavu namma mele baarada haage naavu avarannu jeevadinda irisi avarige idannu maaduvevu.
Joshua 9:20 in English
- King James Version (KJV)
- This we will do to them; we will even let them live, lest wrath be upon us, because of the oath which we sware unto them.
- World English Bible (WEB)
- We will do this to them, and let them live; lest wrath be on us, because of the oath which we swore to them.”
- American Standard Version (ASV)
- This we will do to them, and let them live; lest wrath be upon us, because of the oath which we sware unto them.
- Bible in Basic English (BBE)
- This is what we will do to them: we will not put them to death, for fear that wrath may come on us because of our oath to them.
- Darby Translation (DBY)
- This we will do to them, and let them live, lest wrath come upon us, because of the oath which we swore unto them.
- Webster's Bible (WBS)
- This we will do to them; we will even let them live, lest wrath be upon us, because of the oath which we swore to them.
- Young's Literal Translation (YLT)
- this we do to them, and have kept them alive, and wrath is not upon us, because of the oath which we have sworn to them.'
Read in context
- 18ಸಭೆಯ ಪ್ರಧಾನರು ಅವರಿಗೆ ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಆಣೆ ಇಟ್ಟದ್ದರಿಂದ ಇಸ್ರಾಯೇಲ್ ಮಕ್ಕಳು ಅವರನ್ನು ಸಂಹರಿಸಲಿಲ್ಲ. ಆದರೆ ಸಭೆಯವರೆಲ್ಲರೂ ಇಸ್ರಾಯೇ ಲ್ಯರ ಪ್ರಧಾನರಿಗೆ ವಿರೋಧವಾಗಿ ಗುಣುಗುಟ್ಟಿದರು.
- 19ಆಗ ಸಕಲ ಪ್ರಧಾನರು ಎಲ್ಲಾ ಸಭೆಗೆ--ನಾವು ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಅವರಿಗೆ ಆಣೆ ಇಟ್ಟೆವು; ಆದದರಿಂದ ಅವರನ್ನು ನಾವು ಮುಟ್ಟಕೂಡದು.
- 20ನಾವು ಅವರಿಗೆ ಇಟ್ಟ ಆಣೆಯ ನಿಮಿತ್ತ ಕೋಪವು ನಮ್ಮ ಮೇಲೆ ಬಾರದ ಹಾಗೆ ನಾವು ಅವರನ್ನು ಜೀವದಿಂದ ಇರಿಸಿ ಅವರಿಗೆ ಇದನ್ನು ಮಾಡುವೆವು.
- 21ಏನಂದರೆ, ಪ್ರಧಾನರಾದ ನಾವು ಅವರಿಗೆ ಹೇಳಿದ ಹಾಗೆಯೇ ಅವರನ್ನು ಜೀವದಿಂದ ಉಳಿಸಿ ಎಲ್ಲಾ ಸಭೆಗೆ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಇರಲಿ ಎಂದು ಪ್ರಧಾನರು ಸಭೆಯವರ ಸಂಗಡ ಹೇಳಿದರು.
- 22ತರುವಾಯ ಯೆಹೋಶುವನು ಅವರನ್ನು ಕರಿಸಿ ಅವರಿಗೆ--ನಮ್ಮ ಮಧ್ಯದಲ್ಲಿ ವಾಸವಾಗಿರುವ ನೀವು ನಮ್ಮನ್ನು ಮೋಸ ಗೊಳಿಸಿ ನಾವು ನಿಮಗೆ ಬಹಳ ದೂರವಾಗಿರುವ ವರೆಂದು ನಮ್ಮ ಸಂಗಡ ಹೇಳಿದ್ದೇನು?
Cross references
- Ezekiel 17:12–21 ಯೆಹೆಜ್ಕೇಲನು 17:12–21ಇದರ ಅಭಿಪ್ರಾಯ ನಿಮಗೆ ತಿಳಿಯುವದಿಲ್ಲವೋ? ಅವರಿಗೆ ಎದುರು ಬೀಳುವ ಮನೆಯವರಿಗೆ ಹೀಗೆ ಹೇಳು--ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸ ನನ್ನೂ ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಬಾಬೆಲಿಗೆ ಒಯ್ದಿದ್ದಾನೆ. ಅರಸನ ಸಂತಾನ ದವರನ್ನು ಕರೆದುಕೊಂಡು ಅವನ ಸಂಗಡ ಒಡಂಬಡಿಕೆ ಮಾಡಿ ಅವನಿಂದ ಪ್ರಮಾಣಮಾಡಿಸಿ ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ. ಆ ರಾಜ್ಯವು ತಗ್ಗಾಗಿ ಮೇಲೇಳದ ಹಾಗಿದ್ದರೂ ಅವನು ಒಡಂಬಡಿಕೆಯನ್ನು ಕೈಕೊಳ್ಳುವದರಿಂದ ಅದು ನಿಲ್ಲುವದು. ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ? ನಿಶ್ಚ ಯವಾಗಿ ಅವನಿಗೆ ಅರಸುತನವನ್ನು ಕೊಟ್ಟ ಅರಸನೂ ಅಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ ಯಾವನ ಒಡಂಬಡಿಕೆಯನ್ನು ವಿಾರಿದನೋ ಅವನು ಇರುವಲ್ಲಿಯೇ ಬಾಬೆಲಿನ ಮಧ್ಯದಲ್ಲಿ ನನ್ನ ಜೀವದಾಣೆ, ಇವನು ಸಾಯುವನು ಎಂದು ದೇವರಾದ ಕರ್ತನು ಹೇಳುತ್ತಾನೆ. ಇಲ್ಲವೆ ಫರೋಹನೂ ಅವನ ಮಹಾ ಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹಳ ಜನ ರನ್ನು ಕೊಲ್ಲುವದಕ್ಕೆ ದಿಬ್ಬಗಳನ್ನು ಕೋಟೆಗಳನ್ನೂ ಕಟ್ಟುವಾಗಲೂ ಅವನಿಗೆ ಯುದ್ಧದಲ್ಲಿ ಸಹಾಯ ಮಾಡುವದಿಲ್ಲ. ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು. ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ; ಆಗ ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು; ನಾನು ಅವನನ್ನು ಬಾಬೆಲಿಗೆ ಒಯ್ದು ಅವನು ನನಗೆ ವಿರೋಧವಾಗಿ ಮಾಡಿರುವ ಅಪರಾಧದ ವಿಷಯದಲ್ಲಿ ನಾನು ಅವರೊಂದಿಗೆ ವಾದಿಸುವೆನು. ಅವನ ಸೈನ್ಯಗಳೆಲ್ಲಾ ಚದರಿಸಲ್ಪಟ್ಟು ಓಡಿಹೋಗಿ ಅವನ ಸಂಗಡ ಕತ್ತಿಯಿಂದ ಬೀಳುವರು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಸ ಲ್ಪಡುವರು; ಆಗ ಕರ್ತನಾದ ನಾನೇ ಅದನ್ನು ಹೇಳಿ ದೆನೆಂದು ನಿಮಗೆ ತಿಳಿಯುವದು.
- Proverbs 20:25 ಜ್ಞಾನೋಕ್ತಿಗಳು 20:25ಪರಿಶುದ್ಧವಾದದ್ದನ್ನು ನುಂಗಿದವನಾಗಿ ತರುವಾಯ ವಿಚಾರಿಸುವದಕ್ಕಾಗಿ ಆಣೆಯಿಟ್ಟು ಕೊಳ್ಳುವದು ಒಬ್ಬ ಮನುಷ್ಯನಿಗೆ ಉರ್ಲಾ ಗಿದೆ.
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 2 Chronicles 36:13 2 ಪೂರ್ವಕಾಲವೃತ್ತಾಂತ 36:13ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
- 2 Samuel 21:1–6 2 ಸಮುವೇಲನು 21:1–6ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು. ಆಗ ಅರಸನು ಗಿಬ್ಯೋನ್ಯರನ್ನು ಕಳುಹಿಸಿದನು. (ಆದರೆ ಗಿಬ್ಯೋನ್ಯರು ಇಸ್ರಾಯೇಲ್ ಮಕ್ಕಳಾಗಿರದೆ ಅಮೋರಿಯರಲ್ಲಿ ಉಳಿದವರಾಗಿದ್ದರು. ಅವರಿಗೆ ಇಸ್ರಾಯೇಲ್ ಮಕ್ಕಳು ಆಣೆ ಇಟ್ಟಿದ್ದರು. ಸೌಲನು ಇಸ್ರಾಯೇಲ್ ಮಕ್ಕಳಿಗೋಸ್ಕರವಾಗಿಯೂ ಯೆಹೂದ ಕ್ಕೋಸ್ಕರವಾಗಿಯೂ ತೋರಿಸಿದ ಆಸಕ್ತಿಯಿಂದ ಅವ ರನ್ನು ಹೊಡೆಯಲು ಹುಡುಕಿದ್ದನು) ಆದದರಿಂದ ದಾವೀದನು ಗಿಬ್ಯೋನ್ಯರಿಗೆ--ನಾನು ನಿಮಗೆ ಮಾಡ ಬೇಕಾದದ್ದೇನು? ನೀವು ಕರ್ತನ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ ನಾನು ಯಾವದರಿಂದ ಪ್ರಾಯಶ್ಚಿತ್ತ ಮಾಡಲಿ ಎಂದು ಕೇಳಿದನು. ಆಗ ಗಿಬ್ಯೋನ್ಯರು ಅವನಿಗೆ--ಸೌಲನ ಕೈಯಿಂದಲಾದರೂ ಅವನ ಮನೆ ಯವರ ಕೈಯಿಂದಲಾದರೂ ನಮಗೆ ಬೆಳ್ಳಿಯಾದರೂ ಬಂಗಾರವಾದರೂ ಬೇಡ; ನೀನು ಈ ಕಾರ್ಯಕ್ಕೋಸ್ಕರ ಇಸ್ರಾಯೇಲಿನಲ್ಲಿ ಒಬ್ಬನನ್ನಾದರೂ ಕೊಂದುಹಾಕ ಬೇಕೆಂಬುವದು ನಮಗೆ ಅಗತ್ಯವಿಲ್ಲ ಅಂದರು. ಆಗ ಅವನು--ನೀವು ನನಗೆ ಏನು ಹೇಳುತ್ತೀರೋ ನಾನು ನಿಮಗೆ ಮಾಡುವೆನು ಅಂದನು. ಅವರು ಅರಸನಿಗೆಯಾವನು ನಮ್ಮನ್ನು ಸಂಹರಿಸಿಬಿಟ್ಟು ನಾವು ಇಸ್ರಾ ಯೇಲಿನ ಎಲ್ಲಾ ಮೇರೆಗಳೊಳಗೆ ನಿಲ್ಲದೆ ನಾಶವಾಗುವ ಹಾಗೆ ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು.
- Romans 1:31 ರೋಮಾಪುರದವರಿಗೆ 1:31ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
- Zechariah 5:3–4 ಜೆಕರ್ಯ 5:3–4ಆಗ ಅವನು ನನಗೆ ಹೇಳಿದ್ದೇನಂದರೆ--ದೇಶದ ಮೇಲೆಲ್ಲಾ ಹೊರಡುವ ಶಾಪವು ಇದೇ; ಕಳ್ಳತನ ಮಾಡುವವರೆಲ್ಲರು ಈ ದಿಕ್ಕಿನ ಪ್ರಕಾರ ತೆಗೆದುಹಾಕಲ್ಪಡುವರು; ಆಣೆ ಇಡುವವರೆಲ್ಲರು ಆ ಕಡೆ ಅದರ ಪ್ರಕಾರ ತೆಗೆದುಹಾಕಲ್ಪಡುವರು. ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.
- 1 Timothy 1:10 1 ತಿಮೊಥೆಯನಿಗೆ 1:10ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.