Jude · chapter 1 · verse 22
Jude 1:22 in Kannada
ತಾರತಮ್ಯ ನೋಡಿ ಕೆಲವರಿಗೆ ಕನಿಕರವನ್ನು ತೋರಿ ಸಿರಿ.
Taaratamya nodi kelavarige kanikaravannu tori siri.
Jude 1:22 in English
- King James Version (KJV)
- And of some have compassion, making a difference:
- World English Bible (WEB)
- On some have compassion, making a distinction,
- American Standard Version (ASV)
- And on some have mercy, who are in doubt;
- Bible in Basic English (BBE)
- And have pity on those who are in doubt;
- Darby Translation (DBY)
- And of some have compassion, making a difference,
- Webster's Bible (WBS)
- And of some have compassion, making a difference:
- Young's Literal Translation (YLT)
- and to some be kind, judging thoroughly,
Read in context
- 20ಪ್ರಿಯರೇ, ನೀವಾ ದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯ ಮೇಲೆ ನಿಮ್ಮನ್ನು ನೀವೇ ಕಟ್ಟಿಕೊಂಡು ಪರಿಶುದ್ಧಾತ್ಮನಲ್ಲಿ ಪ್ರಾರ್ಥಿಸಿರಿ.
- 21ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಗೋಸ್ಕರ ಎದುರು ನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
- 22ತಾರತಮ್ಯ ನೋಡಿ ಕೆಲವರಿಗೆ ಕನಿಕರವನ್ನು ತೋರಿ ಸಿರಿ.
- 23ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.
- 24ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
Cross references
- James 5:19–20 ಯಾಕೋಬನು 5:19–20ಸಹೋದರರೇ, ನಿಮ್ಮಲ್ಲಿ ಯಾವನಾದರೂ ಸತ್ಯ ದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ. ಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.
- Galatians 6:1 ಗಲಾತ್ಯದವರಿಗೆ 6:1ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.
- 1 John 5:16–18 1 ಯೋಹಾನನು 5:16–18ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ ಅನೀತಿಯೆಲ್ಲವೂ ಪಾಪವಾಗಿದೆ; ಆದರೂ ಮರಣಕರವಲ್ಲದ ಪಾಪವುಂಟು. ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.
- Jude 1:4–13 ಯೂದನು 1:4–13ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು. ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ. ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ. ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ. ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು. ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ. ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ! ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.
- Hebrews 6:4–8 ಇಬ್ರಿಯರಿಗೆ 6:4–8ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ ಶ್ರೇಷ್ಠವಾದ ದೇವರ ವಾಕ್ಯವನ್ನೂ ಬರುವ ಲೋಕದ ಮಹತ್ವವನ್ನೂ ರುಚಿನೋಡಿ ದವರು ಬಿದ್ದು ಹೋಗುವದಾದರೆ ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ. ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ; ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.
- Ezekiel 34:17 ಯೆಹೆಜ್ಕೇಲನು 34:17ನಿಮಗೆ ಓ ನನ್ನ ಮಂದೆಯೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ದನಗಳ ಪಶುಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು.
- Galatians 4:20 ಗಲಾತ್ಯದವರಿಗೆ 4:20ನಾನು ನಿಮ್ಮ ವಿಷಯದಲಿ ಸಂಶಯಪಡುವವನಾದದರಿಂದ ಈಗ ನಿಮ್ಮ ಜೊತೆ ಯಲ್ಲಿದ್ದು ನನ್ನ ಸ್ವರವನ್ನು ಬದಲಾಯಿಸಬೇಕೆಂದು ಅಪೇಕ್ಷಿಸುತ್ತೇನೆ.