Judges · chapter 1 · verse 4
Judges 1:4 in Kannada
ಯೂದನು ಹೋದಾಗ ಕರ್ತನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟನು. ಬೆಜೆಕಿನಲ್ಲಿ ಇವರು ಅವರಲ್ಲಿ ಹತ್ತು ಸಾವಿರ ಜನರನ್ನು ಕೊಂದರು.
Yoodanu hodaaga kartanu kaanaanyarannoo perijjeeyarannoo avara kaiyalli oppisikottanu. Bejekinalli ivaru avaralli hattu saavira janarannu kondaru.
Judges 1:4 in English
- King James Version (KJV)
- And Judah went up; and the LORD delivered the Canaanites and the Perizzites into their hand: and they slew of them in Bezek ten thousand men.
- World English Bible (WEB)
- Judah went up, and the LORD delivered the Canaanites and the Perizzites into their hand. They struck ten thousand men in Bezek.
- American Standard Version (ASV)
- And Judah went up; and Jehovah delivered the Canaanites and the Perizzites into their hand: and they smote of them in Bezek ten thousand men.
- Bible in Basic English (BBE)
- And Judah went up; and the Lord gave the Canaanites and the Perizzites into their hands; and they overcame ten thousand of them in Bezek.
- Darby Translation (DBY)
- And Judah went up; and Jehovah delivered the Canaanites and the Perizzites into their hand, and they smote them in Bezek, ten thousand men.
- Webster's Bible (WBS)
- And Judah went up, and the LORD delivered the Canaanites and the Perizzites into their hand: and they slew of them in Bezek ten thousand men.
- Young's Literal Translation (YLT)
- And Judah goeth up, and Jehovah giveth the Canaanite and the Perizzite into their hand, and they smite them in Bezek — ten thousand men;
Read in context
- 2ಅದಕ್ಕೆ ಕರ್ತನು--ಯೂದನು ಹೋಗಲಿ; ಇಗೋ, ನಾನು ಆ ದೇಶವನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟಿ ದ್ದೇನೆ ಅಂದನು.
- 3ಯೂದನು ತನ್ನ ಸಹೋದರನಾದ ಸಿಮೆಯೋನನಿಗೆ--ನೀನು ನನ್ನ ಸಂಗಡ ನನ್ನ ಭಾಗಕ್ಕೆ ಬಾ, ಕಾನಾನ್ಯರ ಮೇಲೆ ಯುದ್ಧಮಾಡೋಣ; ನಾನು ಹಾಗೆಯೇ ನಿನ್ನ ಸಂಗಡ ನಿನ್ನ ಭಾಗಕ್ಕೆ ಬರುವೆನು ಅಂದನು. ಹೀಗೆ ಸಿಮೆಯೋನನು ಅವನ ಸಂಗಡ ಹೋದನು.
- 4ಯೂದನು ಹೋದಾಗ ಕರ್ತನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟನು. ಬೆಜೆಕಿನಲ್ಲಿ ಇವರು ಅವರಲ್ಲಿ ಹತ್ತು ಸಾವಿರ ಜನರನ್ನು ಕೊಂದರು.
- 5ಅವರು ಬೆಜೆಕಿನಲ್ಲಿ ಅದೋನೀಬೆಜೆಕನನ್ನು ಕಂಡು ಅವನಿಗೆ ವಿರೋಧವಾಗಿ ಯುದ್ಧಮಾಡಿ ಅಲ್ಲಿ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಕೊಂದುಹಾಕಿದರು.
- 6ಆದರೆ ಅದೋನೀಬೆಜೆಕನು ಓಡಿಹೋದದರಿಂದ ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿ ಹಾಕಿ ದರು.
Cross references
- 1 Samuel 11:8 1 ಸಮುವೇಲನು 11:8ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ ಇಸ್ರಾ ಯೇಲ್ ಮಕ್ಕಳು ಮೂರು ಲಕ್ಷಜನರೂ ಯೆಹೂದ ಮನುಷ್ಯರು ಮೂವತ್ತು ಸಾವಿರ ಜನರೂ ಆಗಿದ್ದರು.
- Joshua 11:6–8 ಯೆಹೋಶುವ 11:6–8ಆಗ ಕರ್ತನು ಯೆಹೋಶುವನಿಗೆಅವರಿಗೆ ಭಯಪಡಬೇಡ; ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರನ್ನು ಇಸ್ರಾಯೇಲಿನ ಮುಂದೆ ಕೊಲ್ಲಲ್ಪ ಡುವಂತೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು ಅಂದನು. ಆಗ ಯೆಹೋಶುವನೂ ಅವನ ಸಂಗಡ ಇದ್ದ ಯುದ್ಧಸ್ಥ ರೆಲ್ಲರೂ ಬಂದು ಫಕ್ಕನೆ ಮೇರೋಮು ನೀರುಗಳ ಬಳಿಯಲ್ಲಿ ಅವರ ಮೇಲೆ ಬಿದ್ದರು. ಕರ್ತನು ಅವರನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಅವರನ್ನು ಹೊಡೆದು ದೊಡ್ಡ ಚೀದೋನಿನವರೆಗೂ ಮಿಸ್ರೆಫೋತ್ಮಯೀಮಿನ ವರೆಗೂ ಮೂಡಲಲ್ಲಿರುವ ಮಿಚ್ಪೆಯ ತಗ್ಗಿನ ವರೆಗೂ ಹಿಂದಟ್ಟಿ ಅವರಲ್ಲಿ ಒಬ್ಬನ ನ್ನಾದರೂ ಉಳಿಸದೆ ಅವರನ್ನು ಹೊಡೆದುಬಿಟ್ಟರು.
- 1 Kings 22:15 1 ಅರಸುಗಳು 22:15ಅರಸನು ಅವನಿಗೆ--ವಿಾಕಾಯೆ ಹುವೇ, ನಾವು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆಹೋಗಬಹುದೋ ಹೋಗಬಾ ರದೋ ಅಂದನು. ಇವನು ಪ್ರತ್ಯುತ್ತರವಾಗಿ--ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
- 1 Samuel 17:46–47 1 ಸಮುವೇಲನು 17:46–47ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು. ಈ ದಿನ ಇಸ್ರಾಯೇಲ್ಯರೊಳಗೆ ದೇವರು ಇದ್ದಾನೆಂದು ಭೂಲೋಕದವರೆಲ್ಲರೂ ತಿಳಿ ಯುವರು. ಕರ್ತನು ಕತ್ತಿಯಿಂದಲೂ ಈಟಿಯಿಂದಲೂ ರಕ್ಷಿಸುವದಿಲ್ಲ ಎಂದು ಈ ಸಭೆಯೆಲ್ಲಾ ತಿಳಿದುಕೊಳ್ಳು ವದು; ಯಾಕಂದರೆ ಯುದ್ಧವು ಕರ್ತನದು; ಆತನು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
- Deuteronomy 9:3 ಧರ್ಮೋಪದೇಶಕಾಂಡ 9:3ಹೀಗಿರುವದರಿಂದ ನೀನು ಈಹೊತ್ತು ತಿಳಿದುಕೊಳ್ಳತಕ್ಕದ್ದೇನಂದರೆ--ನಿನ್ನ ದೇವ ರಾದ ಕರ್ತನೇ ನಿನ್ನ ಮುಂದೆ ದಾಟಿಹೋಗುತ್ತಾನೆ; ಆತನು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡು ವನು; ಆತನು ಅವರನ್ನು ನಿನ್ನ ಮುಂದೆ ತಗ್ಗಿಸುವನು; ಈ ಪ್ರಕಾರ ಅವರನ್ನು ಸ್ವಾಧೀನಪಡಿಸಿಕೊಂಡು ಕರ್ತನು ನಿನಗೆ ಹೇಳಿದ ಹಾಗೆ ಅವರನ್ನು ಬೇಗ ನಾಶಮಾಡುವಿ.
- 1 Kings 22:6 1 ಅರಸುಗಳು 22:6ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
- Joshua 10:8–10 ಯೆಹೋಶುವ 10:8–10ಆದರೆ ಕರ್ತನು ಯೆಹೋಶುವನಿಗೆ--ನೀನು ಅವರಿಗೆ ಭಯಪಡಬೇಡ; ಯಾಕಂದರೆ ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ, ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವದಿಲ್ಲ ಅಂದನು. ಆದದರಿಂದ ಯೆಹೋಶುವನು ಗಿಲ್ಗಾಲಿನಿಂದ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಅವರ ಮೇಲೆ ತಕ್ಷಣವೇ ಬಂದನು. ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು.
- Deuteronomy 7:2 ಧರ್ಮೋಪದೇಶಕಾಂಡ 7:2ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು.
- Exodus 23:28–29 ವಿಮೋಚನಕಾಂಡ 23:28–29ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು. ಭೂಮಿಯು ಬರಿದಾಗದಂತೆಯೂ ಅಡವಿಯ ಮೃಗ ಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರುಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ
- 1 Samuel 14:6 1 ಸಮುವೇಲನು 14:6ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.
- 1 Samuel 14:10 1 ಸಮುವೇಲನು 14:10ಒಂದು ವೇಳೆ ಅವರುನಮ್ಮ ಬಳಿಗೆ ಬನ್ನಿರಿ ಎಂದು ಹೇಳಿದರೆ ಹೋಗುವೆವು. ಕರ್ತನು ಅವರನ್ನು ನಮ್ಮ ಕೈಗೆ ಒಪ್ಪಿಸಿ ಕೊಟ್ಟನೆಂಬದಕ್ಕೆ ಇದೇ ನಮಗೆ ಗುರುತಾಗಿರುವದು ಅಂದನು.