Judges · chapter 10 · verse 11
Judges 10:11 in Kannada
ಕರ್ತನು ಇಸ್ರಾಯೇಲ್ ಮಕ್ಕಳಿಗೆ--ನಾನು ನಿಮ್ಮನ್ನು ಐಗುಪ್ತ್ಯರ ಕೈಯೊಳಗಿಂದಲೂ ಅಮೋರಿಯರ ಕೈಯೊ ಳಗಿಂದಲೂ ಅಮ್ಮೋನನ ಮಕ್ಕಳ ಕೈಯೊಳಗಿಂದಲೂ ಫಿಲಿಷ್ಟಿಯರ ಕೈಯೊಳಗಿಂದಲೂ ತಪ್ಪಿಸಿಬಿಡಲಿಲ್ಲವೋ?
Kartanu israayel makkalige--naanu nimmannu aiguptyara kaiyolagindaloo amoriyara kaiyo lagindaloo ammonana makkala kaiyolagindaloo philishtiyara kaiyolagindaloo tappisibidalillavo?
Judges 10:11 in English
- King James Version (KJV)
- And the LORD said unto the children of Israel, [Did] not [I deliver you] from the Egyptians, and from the Amorites, from the children of Ammon, and from the Philistines?
- World English Bible (WEB)
- The LORD said to the children of Israel, “Didn’t I save you from the Egyptians, and from the Amorites, from the children of Ammon, and from the Philistines?
- American Standard Version (ASV)
- And Jehovah said unto the children of Israel, [Did] not [I save you] from the Egyptians, and from the Amorites, from the children of Ammon, and from the Philistines?
- Bible in Basic English (BBE)
- And the Lord said to the children of Israel, Were not the Egyptians and the Amorites and the children of Ammon and the Philistines
- Darby Translation (DBY)
- And Jehovah said to the children of Israel, Did I not [save you] from the Egyptians, and from the Amorites, from the children of Ammon, and from the Philistines?
- Webster's Bible (WBS)
- And the LORD said to the children of Israel, [Did] not [I deliver you] from the Egyptians, and from the Amorites, from the children of Ammon, and from the Philistines?
- Young's Literal Translation (YLT)
- And Jehovah saith unto the sons of Israel, '[Have I] not [saved you] from the Egyptians, and from the Amorite, from the Bene-Ammon, and from the Philistines?
Read in context
- 9ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದನಿಗೆ ಬೆನ್ಯಾವಿಾನರಿಗೆ ವಿರೋಧವಾ ಗಿಯೂ ಎಫ್ರಾಯಾಮ್ ಮನೆಗೆ ವಿರೋಧವಾಗಿಯೂ ಯುದ್ಧಮಾಡುವದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹುಸಂಕಟವಾಯಿತು.
- 10ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿ--ನಮ್ಮ ದೇವರನ್ನು ಬಿಟ್ಟು ಬಾಳನನ್ನು ಸೇವಿಸಿದ್ದರಿಂದ ನಾವು ನಿನಗೆ ವಿರೋಧವಾಗಿ ಪಾಪ ಮಾಡಿದೆವು ಅಂದರು.
- 11ಕರ್ತನು ಇಸ್ರಾಯೇಲ್ ಮಕ್ಕಳಿಗೆ--ನಾನು ನಿಮ್ಮನ್ನು ಐಗುಪ್ತ್ಯರ ಕೈಯೊಳಗಿಂದಲೂ ಅಮೋರಿಯರ ಕೈಯೊ ಳಗಿಂದಲೂ ಅಮ್ಮೋನನ ಮಕ್ಕಳ ಕೈಯೊಳಗಿಂದಲೂ ಫಿಲಿಷ್ಟಿಯರ ಕೈಯೊಳಗಿಂದಲೂ ತಪ್ಪಿಸಿಬಿಡಲಿಲ್ಲವೋ?
- 12ಇದಲ್ಲದೆ ಚೀದೋನ್ಯರೂ ಅಮಾಲೇಕ್ಯರೂ ಮಾವೋನ್ಯರೂ ನಿಮ್ಮನ್ನು ಬಾಧೆಪಡಿಸುವಾಗ ನೀವು ನನಗೆ ಕೂಗಿದ್ದರಿಂದ ನಾನು ನಿಮ್ಮನ್ನು ಅವರ ಕೈಗೆ ತಪ್ಪಿಸಿ ರಕ್ಷಿಸಿದೆನು.
- 13ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿದಿರಿ; ಆದಕಾರಣ ನಾನು ನಿಮ್ಮನ್ನು ಇನ್ನು ಮುಂದೆ ಬಿಡಿಸುವದಿಲ್ಲ.
Cross references
- Exodus 14:30 ವಿಮೋಚನಕಾಂಡ 14:30ಆ ದಿನದಲ್ಲಿ ಕರ್ತನು ಈ ಪ್ರಕಾರ ಇಸ್ರಾಯೇಲ್ಯ ರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಇಸ್ರಾಯೇ ಲ್ಯರು ಸಮುದ್ರತೀರದಲ್ಲಿ ಸತ್ತ ಐಗುಪ್ತ್ಯರನ್ನು ನೋಡಿ ದರು.ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
- Judges 3:31 ನ್ಯಾಯಸ್ಥಾಪಕರು 3:31ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.
- Numbers 21:21–25 ಅರಣ್ಯಕಾಂಡ 21:21–25ಆಗ ಇಸ್ರಾಯೇಲ್ಯರು ಅಮೋರಿಯರ ಅರಸ ನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ-- ನಾವು ನಿನ್ನ ದೇಶದಲ್ಲಿ ದಾಟಿ ಹೋಗಬೇಕು; ನಾವು ಹೊಲದಲ್ಲಾದರೂ ದ್ರಾಕ್ಷೇ ತೋಟದಲ್ಲಾದರೂ ತಿರುಗಿ ಕೊಳ್ಳದೆ ಬಾವಿಯ ನೀರನ್ನು ಕುಡಿಯದೆ ನಿನ್ನ ಮೇರೆಯನ್ನು ದಾಟುವ ವರೆಗೆ ರಾಜಮಾರ್ಗದಲ್ಲಿ ಹೋಗುತ್ತೇವೆ. ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು. ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು. ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು.
- 1 Samuel 12:8 1 ಸಮುವೇಲನು 12:8ಯಾಕೋಬನು ಐಗುಪ್ತಕ್ಕೆ ಬಂದ ತರುವಾಯ ನಿಮ್ಮ ತಂದೆಗಳು ಕರ್ತ ನಿಗೆ ಮೊರೆಯಿಟ್ಟರು. ಆಗ ಕರ್ತನು ಮೋಶೆಯನ್ನೂ ಆರೋನನನ್ನೂ ಕಳುಹಿಸಿದನು. ಇವರು ನಿಮ್ಮ ತಂದೆ ಗಳನ್ನು ಐಗುಪ್ತದಿಂದ ಕರತಂದು ಅವರನ್ನು ಈ ದೇಶ ದಲ್ಲಿ ವಾಸಿಸುವಂತೆ ಮಾಡಿದನು.
- Hebrews 11:29 ಇಬ್ರಿಯರಿಗೆ 11:29ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.
- Numbers 21:35 ಅರಣ್ಯಕಾಂಡ 21:35ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
- Psalm 78:51–53 ಕೀರ್ತನೆಗಳು 78:51–53ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು. ಕುರಿಗಳ ಹಾಗೆ ತನ್ನ ಜನರನ್ನು ಹೊರತಂದು, ಮಂದೆಯ ಹಾಗೆ ಅರಣ್ಯದಲ್ಲಿ ಅವರನ್ನು ನಡಿಸಿದನು. ಅವರನ್ನು ಸುರಕ್ಷಿತವಾಗಿ ನಡಿಸಿದಕಾರಣ ಅವರು ಹೆದರಲಿಲ್ಲ; ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು.
- Judges 3:11–15 ನ್ಯಾಯಸ್ಥಾಪಕರು 3:11–15ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು. ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ತಿರಿಗಿ ಕೆಟ್ಟತನ ಮಾಡಿದರು. ಅವರು ಕರ್ತನ ಮುಂದೆ ಕೆಟ್ಟತನ ಮಾಡಿದ್ದರಿಂದ ಕರ್ತನು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲ ಪಡಿಸಿದನು. ಅವನು ಅಮ್ಮೋನನ ಮತ್ತು ಅಮಾಲೇ ಕ್ಯನ ಮಕ್ಕಳನ್ನು ಕೂಡಿಸಿಕೊಂಡು ಬಂದು ಇಸ್ರಾಯೇಲ್ಯ ರನ್ನು ಹೊಡೆದು ಖರ್ಜೂರ ಗಿಡದ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು. ಇಸ್ರಾಯೇಲ್ ಮಕ್ಕಳು ಮೊವಾಬ್ಯರ ಅರಸನಾದ ಎಗ್ಲೋನನನ್ನು ಹದಿನೆಂಟು ವರುಷ ಸೇವಿಸಿದರು. ಆದರೆ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು.
- Judges 2:1–3 ನ್ಯಾಯಸ್ಥಾಪಕರು 2:1–3ಕರ್ತನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು--ನಾನು ನಿಮ್ಮನ್ನು ಐಗುಪ್ತ ದಿಂದ ಬರಮಾಡಿ ನಿಮ್ಮ ತಂದೆಗಳಿಗೆ ಆಣೆಯಿಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು. ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ ಅವರ ಬಲಿಪೀಠಗಳನ್ನು ಕೆಡವಿ ಬಿಡಿರಿ ಎಂದು ಹೇಳಿದೆನು. ಆದರೆ ನೀವು ನನ್ನ ಮಾತಿಗೆ ವಿಧೇಯರಾಗಲಿಲ್ಲ; ಹೀಗೆ ಯಾಕೆ ಮಾಡಿ ದಿರಿ? ಆದದರಿಂದ--ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು; ಅವರ ದೇವರುಗಳು ನಿಮಗೆ ಉರುಲಾಗುವವೆಂದು ನಾನು ಹೇಳಿದ್ದೆನು.
- Psalm 135:10–11 ಕೀರ್ತನೆಗಳು 135:10–11ಆತನು ದೊಡ್ಡ ಜನಾಂಗಗಳನ್ನೂ ಬಲವಾದ ಅರಸುಗಳನ್ನೂ ಕೊಂದುಹಾಕಿದನು. ಅಮೋರಿ ಯರ ಅರಸನಾದ ಸೀಹೋನನನ್ನೂ ಬಾಷಾನಿನ ಅರಸನಾದ ಓಗನನ್ನೂ ಕಾನಾನಿನ ಎಲ್ಲಾ ರಾಜ್ಯ ಗಳನ್ನೂ ಹೊಡೆದನು.
- Nehemiah 9:9–11 ನೆಹೆಮೀಯ 9:9–11ಇದಲ್ಲದೆ ಐಗುಪ್ತದಲ್ಲಿ ನಮ್ಮ ಪಿತೃಗಳ ದೀನ ಸ್ಥಿತಿಯನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿ. ಫರೋಹನ ಮೇಲೆಯೂ ಅವನ ಸಮಸ್ತ ಸೇವಕರ ಮೇಲೆಯೂ ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚ ಕಕಾರ್ಯಗಳನ್ನೂ ಅದ್ಭುತಗಳನ್ನೂ ತೋರಿಸಿದಿ. ಯಾಕಂದರೆ ಇವರು ಅವರಿಗೆ ಅಹಂಕಾರಿಗಳಾಗಿ ನಡೆದರೆಂದು ತಿಳಿದಿದ್ದಿ. ಈ ಪ್ರಕಾರವೇ ನೀನು ಇಂದಿನ ಹಾಗೆ ನಿನಗೆ ಹೆಸರನ್ನು ಮಾಡಿಕೊಂಡಿದ್ದೀ. ನೀನು ಅವರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ ಅವರು ಸಮುದ್ರದ ಮಧ್ಯದಲ್ಲಿ ಒಣ ಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನ ಹಾಗೆ ಮಹಾ ಜಲರಾಶಿಗಳಲ್ಲಿ ದೊಬ್ಬಿ ಬಿಟ್ಟಿ.
- Psalm 106:8–11 ಕೀರ್ತನೆಗಳು 106:8–11ಆದಾಗ್ಯೂ ಆತನು ತನ್ನ ಮಹಾಶಕ್ತಿಯನ್ನು ಅವರಿಗೆ ತಿಳಿಯ ಮಾಡುವ ಹಾಗೆ ತನ್ನ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದನು. ಆತನು ಕೆಂಪು ಸಮುದ್ರವನ್ನು ಗದರಿಸಲು ಅದು ಒಣಗಿ ಹೋಯಿತು. ಹೀಗೆ ಜಲಾಗಾಧದಲ್ಲಿ, ಅರಣ್ಯ ದಲ್ಲಿದ್ದ ಹಾಗೆಯೇ ಆತನು ಅವರನ್ನು ನಡಿಸಿದನು. ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿ, ಶತ್ರು ವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದನು. ನೀರುಗಳು ಅವರ ವೈರಿಗಳನ್ನು ಮುಚ್ಚಿಬಿಟ್ಟವು; ಅವರಲ್ಲಿ ಒಬ್ಬನಾದರೂ ಉಳಿಯಲಿಲ್ಲ.