Judges · chapter 11 · verse 30
Judges 11:30 in Kannada
ಯೆಪ್ತಾಹನು ಕರ್ತನಿಗೆ ಒಂದು ಪ್ರಮಾಣವನ್ನು ಮಾಡಿ--ನೀನು ಅಮ್ಮೋನನ ಮಕ್ಕಳನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ
Yeptaahanu kartanige ondu pramaanavannu maadi--neenu ammonana makkalannu nanna kaiyalli tappade oppisikottare
Judges 11:30 in English
- King James Version (KJV)
- And Jephthah vowed a vow unto the LORD, and said, If thou shalt without fail deliver the children of Ammon into mine hands,
- World English Bible (WEB)
- Jephthah vowed a vow to the LORD, and said, “If you will indeed deliver the children of Ammon into my hand,
- American Standard Version (ASV)
- And Jephthah vowed a vow unto Jehovah, and said, If thou wilt indeed deliver the children of Ammon into my hand,
- Bible in Basic English (BBE)
- And Jephthah took an oath to the Lord, and said, If you will give the children of Ammon into my hands,
- Darby Translation (DBY)
- And Jephthah vowed a vow to Jehovah, and said, If thou wilt without fail give the children of Ammon into my hand,
- Webster's Bible (WBS)
- And Jephthah vowed a vow to the LORD, and said, If thou shalt without fail deliver the children of Ammon into my hands,
- Young's Literal Translation (YLT)
- And Jephthah voweth a vow to Jehovah, and saith, 'If Thou dost at all give the Bene-Ammon into my hand —
Read in context
- 28ಹೀಗಿದ್ದರೂ ಯೆಪ್ತಾಹನು ಹೇಳಿ ಕಳುಹಿಸಿದ ಮಾತನ್ನು ಅಮ್ಮೋನನ ಅರಸನು ಕೇಳದೆ ಹೋದನು.
- 29ಆಗ ಕರ್ತನ ಆತ್ಮವು ಯೆಪ್ತಾಹನ ಮೇಲೆ ಬಂತು. ಅವನು ಗಿಲ್ಯಾದ್ ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು ಅಲ್ಲಿಂದ ಅಮ್ಮೋನನ ಮಕ್ಕಳೆದುರಿಗೆ ಹಾದುಹೋದನು.
- 30ಯೆಪ್ತಾಹನು ಕರ್ತನಿಗೆ ಒಂದು ಪ್ರಮಾಣವನ್ನು ಮಾಡಿ--ನೀನು ಅಮ್ಮೋನನ ಮಕ್ಕಳನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ
- 31ನಾನು ಅಮ್ಮೋನನ ಮಕ್ಕಳ ಬಳಿಯಿಂದ ಸಮಾಧಾನದಲ್ಲಿ ತಿರಿಗಿ ಬರುವಾಗ ನನ್ನ ಮನೆಯ ಬಾಗಲಿಂದ ನನ್ನನ್ನು ಎದುರುಗೊಳ್ಳಲು ಬರುವಂಥದ್ದು ನಿಜವಾಗಿ ಕರ್ತನದಾಗಿರುವದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು ಅಂದನು.
- 32ಹೀಗೆ ಯೆಪ್ತಾಹನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಅವರೆದುರಿಗೆ ಹೊರಟು ಹೋದನು. ಕರ್ತನು ಅವರನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು.
Cross references
- Genesis 28:20 ಆದಿಕಾಂಡ 28:20ಆಗ ಯಾಕೋಬನು ಪ್ರಮಾಣಮಾಡಿ ಹೇಳಿದ್ದೇ ನಂದರೆ--ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ರೊಟ್ಟಿಯನ್ನೂ ಹೊದಿಯುವದಕ್ಕೆ ವಸ್ತ್ರ ವನ್ನೂ ನನಗೆ ಕೊಟ್ಟು
- 1 Samuel 1:11 1 ಸಮುವೇಲನು 1:11ಆಕೆಯು ಒಂದು ಪ್ರಮಾಣವನ್ನು ಮಾಡಿ ಹೇಳಿದ್ದೇನಂದರೆಸೈನ್ಯಗಳ ಕರ್ತನೇ, ನೀನು ನಿಶ್ಚಯವಾಗಿ ನಿನ್ನ ದಾಸಿಯ ದೀನತೆಯನ್ನು ನೋಡಿ, ನಿನ್ನ ದಾಸಿಯನ್ನು ಮರೆ ಯದೆ, ನನ್ನನ್ನು ನೆನಸಿ, ನಿನ್ನ ದಾಸಿಗೆ ಗಂಡು ಮಗು ವನ್ನು ಕೊಟ್ಟರೆ ಅವನು ಬದುಕುವ ಎಲ್ಲಾ ದಿವಸಗಳಲ್ಲಿ ಅವನನ್ನು ಕರ್ತನಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರ ಕತ್ತಿ ಬೀಳುವದಿಲ್ಲ ಅಂದಳು.
- Numbers 30:2–16 ಅರಣ್ಯಕಾಂಡ 30:2–16ಒಬ್ಬನು ಕರ್ತನಿಗೆ ಪ್ರಮಾಣವನ್ನು ಮಾಡಿದರೆ ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ ಅವನು ತನ್ನ ಮಾತನ್ನು ತಪ್ಪಿಸಬಾರದು, ಬಾಯಿಂದ ಹೊರಟ ಎಲ್ಲಾದರ ಪ್ರಕಾರ ಮಾಡಬೇಕು. ಸ್ತ್ರೀಯು ಕರ್ತನಿಗೆ ಪ್ರಮಾಣಮಾಡಿ ತನ್ನ ಕನ್ಯಾ ವಸ್ಥೆಯಲ್ಲಿ ತಂದೆಯ ಮನೆಯಲ್ಲಿ ಬಂಧಿಸಿಕೊಂಡರೆ ಅವಳ ತಂದೆ ಅವಳ ಪ್ರಮಾಣವನ್ನೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದನ್ನೂ ಕೇಳಿ ಅದಕ್ಕೆ ಮೌನವಾಗಿರುವ ಪಕ್ಷದಲ್ಲಿ ಅವಳ ಪ್ರಮಾಣ ಗಳೆಲ್ಲವೂ ಅವಳು ತನ್ನ ಪ್ರಾಣದ ಮೇಲೆ ಮಾಡಿದ ಬಂಧನವೆಲ್ಲವೂ ನಿಲ್ಲುವವು. ಆದರೆ ಅವಳ ತಂದೆ ಕೇಳಿದ ದಿವಸದಲ್ಲಿ ಅವಳನ್ನು ತಡೆದರೆ ಅವಳ ಎಲ್ಲಾ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಇಟ್ಟುಕೊಂಡ ಎಲ್ಲಾ ಬಂಧನಗಳೂ ನಿಲ್ಲವು; ಅವಳ ತಂದೆ ಅವಳಿಗೆ ತಡೆದ ಕಾರಣ ಕರ್ತನು ಅವಳನ್ನು ಕ್ಷಮಿಸುವನು. ಆದರೆ ಅವಳಿಗೆ ಗಂಡನಿರುವ ವೇಳೆಯಲ್ಲಿ ಅವಳ ಮೇಲೆ ಪ್ರಮಾಣಗಳು ಇಲ್ಲವೆ ಪ್ರಾಣವನ್ನು ಬಂಧಿ ಸುವ ಬಾಯಿಂದ ಬಂದ ಮಾತು ಇದ್ದರೆ ಅವಳ ಗಂಡನು ಅದನ್ನು ಕೇಳಿ, ಕೇಳಿದ ದಿವಸದಲ್ಲಿ ಅವಳಿಗೆ ಸುಮ್ಮನಿದ್ದ ಪಕ್ಷದಲ್ಲಿ ಅವಳ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದೂ ನಿಲ್ಲುವವು. ಆದರೆ ಅವಳ ಗಂಡನು ಅದನ್ನು ಕೇಳಿದ ದಿವಸದಲ್ಲಿ ಅವಳನ್ನು ತಡೆದು ಅವಳ ಮೇಲೆ ಇರುವ ಅವಳ ಪ್ರಮಾಣವನ್ನೂ ಪ್ರಾಣದ ಮೇಲೆ ಅವಳು ಬಂಧಿಸಿ ಕೊಂಡ ಬಾಯಿಂದ ಬಂದ ಮಾತನ್ನೂ ನಿರರ್ಥಕ ಮಾಡಿದ ಪಕ್ಷದಲ್ಲಿ ಕರ್ತನು ಅವಳಿಗೆ ಕ್ಷಮಿಸುವನು. ಇದಲ್ಲದೆ ವಿಧವೆಯಾದರೂ ಪರಿತ್ಯಾಗ ಮಾಡ ಲ್ಪಟ್ಟವಳಾದರೂ ತಮ್ಮ ಪ್ರಾಣಗಳನ್ನು ಬಂಧಿಸಿದ ಒಂದೊಂದು ಪ್ರಮಾಣವು ಅವರ ಮೇಲೆ ನಿಲ್ಲುವದು. ಅವಳು ತನ್ನ ಗಂಡನ ಮನೆಯಲ್ಲಿ ಪ್ರಮಾಣ ಮಾಡಿದರೆ ಇಲ್ಲವೆ ಆಣೆಯಿಂದ ತನ್ನ ಪ್ರಾಣವನ್ನು ಬಂಧಿಸಿದರೆ ಅವಳ ಗಂಡನು ಅದನ್ನು ಕೇಳಿ ಅದಕ್ಕೆ ಮೌನವಾಗಿದ್ದು ಅವಳನ್ನು ತಡೆಯದ ಪಕ್ಷದಲ್ಲಿ ಅವಳ ಸಮಸ್ತ ಪ್ರಮಾಣಗಳೂ ಅವಳು ತನ್ನ ಪ್ರಾಣವನ್ನು ಬಂಧಿಸಿದ ಸಮಸ್ತ ಬಂಧನಗಳೂ ನಿಲ್ಲುವವು. ಆದರೆ ಅವಳ ಗಂಡನು ಅವುಗಳನ್ನು ಕೇಳಿದ ದಿವಸದಲ್ಲೇ ಅವುಗಳನ್ನು ಪೂರ್ಣವಾಗಿ ನಿರರ್ಥಕಮಾಡಿದ ಪಕ್ಷ ದಲ್ಲಿ ಅವಳ ಪ್ರಮಾಣಗಳಿಗೋಸ್ಕರವೂ ಅವಳ ಪ್ರಾಣದ ಕಟ್ಟಳೆಗೋಸ್ಕರವೂ ಅವಳ ತುಟಿಗಳಿಂದ ಹೊರಟದ್ದು ಯಾವದಾಗಲಿ ನಿಲ್ಲದು, ಅವಳ ಗಂಡನು ಅವುಗಳನ್ನು ನಿರರ್ಥಕಮಾಡಿದ್ದಾನೆ; ಕರ್ತನು ಅವಳನ್ನು ಕ್ಷಮಿಸುವನು. ಎಲ್ಲಾ ಪ್ರಮಾಣವನ್ನೂ ಪ್ರಾಣವನ್ನು ಕುಂದಿಸುವ ಕಟ್ಟಳೆಯ ಎಲ್ಲಾ ಆಣೆಗಳನ್ನೂ ಅವಳ ಗಂಡನು ಸಾರ್ಥಕಮಾಡಬಹುದು, ಇಲ್ಲವೆ ನಿರರ್ಥಕ ಮಾಡಬಹುದು. ಆದರೆ ಅವಳ ಗಂಡನು ಅದಕ್ಕೆ ದಿನದಿನಕ್ಕೆ ಪೂರ್ಣವಾಗಿ ಸುಮ್ಮನಿದ್ದರೆ ಅವನು ಅವಳ ಸಮಸ್ತ ಪ್ರಮಾಣಗಳನ್ನೂ ಅವಳ ಮೇಲಿರುವ ಸಮಸ್ತ ಕಟ್ಟಳೆಗಳನ್ನೂ ಸ್ಥಾಪಿಸುತ್ತಾನೆ; ಅವನು ಕೇಳಿದ ದಿವಸ ದಲ್ಲಿ ಅವಳಿಗೆ ಸುಮ್ಮನಿರುವದರಿಂದ ಅವುಗಳನ್ನು ಸ್ಥಾಪಿಸಿದ್ದಾನೆ. ಆದರೆ ಅವನು ಕೇಳಿದ ತರುವಾಯ ಅವುಗಳನ್ನು ಹೇಗಾದರೂ ನಿರರ್ಥಕ ಮಾಡಿದರೆ ಅವಳ ಅಕ್ರಮವನ್ನು ಹೊರಬೇಕು.ಪತಿಪತ್ನಿಯರ ವಿಷಯದಲ್ಲಿಯೂ ತಂದೆಯೂ ತಂದೆ ಮನೆಯಲ್ಲಿ ಕನ್ಯಾವಸ್ತೆಯಾಗಿರುವ ಮಗಳೂ ಇವರ ವಿಷಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ. ಪತಿಪತ್ನಿಯರ ವಿಷಯದಲ್ಲಿಯೂ ತಂದೆಯೂ ತಂದೆ ಮನೆಯಲ್ಲಿ ಕನ್ಯಾವಸ್ತೆಯಾಗಿರುವ ಮಗಳೂ ಇವರ ವಿಷಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ.
- Ecclesiastes 5:1–2 ಪ್ರಸಂಗಿ 5:1–2ದೇವರ ಆಲಯಕ್ಕೆ ನೀನು ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಬುದ್ಧಿಹೀನರು ಅರ್ಪಿಸುವ ಯಜ್ಞಕ್ಕಿಂತ, ಹೆಚ್ಚಾಗಿ ಕಿವಿಗೊಡುವದಕ್ಕೆ ಸಿದ್ಧನಾಗಿರು. ಅವರು ತಿಳಿಯದೆ ಕೆಟ್ಟದ್ದನ್ನೇ ಮಾಡು ತ್ತಾರೆ. ನಿನ್ನ ಬಾಯಿಂದ ಆತುರಪಡದಿರು ಮತ್ತು ದೇವರ ಮುಂದೆ ಯಾವದನ್ನು ಉಚ್ಚರಿಸುವದಕ್ಕೆ ನಿನ್ನ ಹೃದಯವು ದುಡುಕದೇ ಇರಲಿ; ದೇವರು ಪರಲೋಕ ದಲ್ಲಿದ್ದಾನೆ; ನೀನು ಭೂಮಿಯ ಮೇಲೆ ಇದ್ದೀ; ಆದ ಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.
- Ecclesiastes 5:4–5 ಪ್ರಸಂಗಿ 5:4–5ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು. ಪ್ರಮಾಣಮಾಡಿ ತೀರಿಸದೆ ಇರುವದಕ್ಕಿಂತ ಪ್ರಮಾಣಮಾಡದೆ ಇರುವದು ಒಳ್ಳೇದು.