Judges · chapter 11 · verse 31
Judges 11:31 in Kannada
ನಾನು ಅಮ್ಮೋನನ ಮಕ್ಕಳ ಬಳಿಯಿಂದ ಸಮಾಧಾನದಲ್ಲಿ ತಿರಿಗಿ ಬರುವಾಗ ನನ್ನ ಮನೆಯ ಬಾಗಲಿಂದ ನನ್ನನ್ನು ಎದುರುಗೊಳ್ಳಲು ಬರುವಂಥದ್ದು ನಿಜವಾಗಿ ಕರ್ತನದಾಗಿರುವದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು ಅಂದನು.
Naanu ammonana makkala baliyinda samaadhaanadalli tirigi baruvaaga nanna maneya baagalinda nannannu edurugollalu baruvanthaddu nijavaagi kartanadaagiruvadu. Adannu dahanabaliyaagi arpisuvenu andanu.
Judges 11:31 in English
- King James Version (KJV)
- Then it shall be, that whatsoever cometh forth of the doors of my house to meet me, when I return in peace from the children of Ammon, shall surely be the LORD’s, and I will offer it up for a burnt offering.
- World English Bible (WEB)
- then it shall be, that whatever comes out of the doors of my house to meet me when I return in peace from the children of Ammon, it shall be the LORD’s, and I will offer it up for a burnt offering.”
- American Standard Version (ASV)
- then it shall be, that whatsoever cometh forth from the doors of my house to meet me, when I return in peace from the children of Ammon, it shall be Jehovah’s, and I will offer it up for a burnt-offering.
- Bible in Basic English (BBE)
- Then whoever comes out from the door of my house, meeting me when I come back in peace from the children of Ammon, will be the Lord's and I will give him as a burned offering.
- Darby Translation (DBY)
- then shall that which cometh forth from the door of my house to meet me, when I return in peace from the children of Ammon, be Jehovah's, and I will offer it up for a burnt-offering.
- Webster's Bible (WBS)
- Then it shall be, that whatever cometh out of the doors of my house to meet me, when I return in peace from the children of Ammon, shall surely be the LORD'S, and I will offer it for a burnt-offering.
- Young's Literal Translation (YLT)
- then it hath been, that which at all cometh out from the doors of my house to meet me in my turning back in peace from the Bene-Ammon — it hath been to Jehovah, or I have offered up for it — a burnt-offering.'
Read in context
- 29ಆಗ ಕರ್ತನ ಆತ್ಮವು ಯೆಪ್ತಾಹನ ಮೇಲೆ ಬಂತು. ಅವನು ಗಿಲ್ಯಾದ್ ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು ಅಲ್ಲಿಂದ ಅಮ್ಮೋನನ ಮಕ್ಕಳೆದುರಿಗೆ ಹಾದುಹೋದನು.
- 30ಯೆಪ್ತಾಹನು ಕರ್ತನಿಗೆ ಒಂದು ಪ್ರಮಾಣವನ್ನು ಮಾಡಿ--ನೀನು ಅಮ್ಮೋನನ ಮಕ್ಕಳನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ
- 31ನಾನು ಅಮ್ಮೋನನ ಮಕ್ಕಳ ಬಳಿಯಿಂದ ಸಮಾಧಾನದಲ್ಲಿ ತಿರಿಗಿ ಬರುವಾಗ ನನ್ನ ಮನೆಯ ಬಾಗಲಿಂದ ನನ್ನನ್ನು ಎದುರುಗೊಳ್ಳಲು ಬರುವಂಥದ್ದು ನಿಜವಾಗಿ ಕರ್ತನದಾಗಿರುವದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು ಅಂದನು.
- 32ಹೀಗೆ ಯೆಪ್ತಾಹನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಅವರೆದುರಿಗೆ ಹೊರಟು ಹೋದನು. ಕರ್ತನು ಅವರನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು.
- 33ಅವನು ಅವರನ್ನು ಅರೋಯೇರಿ ನಿಂದ ನೀನು ಮಿನ್ನೀತಿಗೆ ಹೋಗುವ ವರೆಗೆ ಇರುವ ಇಪ್ಪತ್ತು ಪಟ್ಟಣಗಳನ್ನು ದ್ರಾಕ್ಷೇ ತೋಟದ ಬೈಲಿನ ವರೆಗೂ ಮಹಾದೊಡ್ಡ ಸಂಹಾರದಿಂದ ಹೊಡೆದನು. ಹೀಗೆ ಅಮ್ಮೋನನ ಮಕ್ಕಳು ಇಸ್ರಾಯೇಲ್ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು.
Cross references
- Psalm 66:13–14 ಕೀರ್ತನೆಗಳು 66:13–14ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು. ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು.
- Deuteronomy 23:18 ಧರ್ಮೋಪದೇಶಕಾಂಡ 23:18ಸೂಳೆಯ ಕೂಲಿಯನ್ನು ಇಲ್ಲವೆ ನಾಯಿಯ ಕ್ರಯವನ್ನು ಯಾವದೊಂದು ಪ್ರಮಾಣವಾಗಿ ನಿನ್ನ ದೇವರಾದ ಕರ್ತನ ಮನೆಗೆ ತರಬಾರದು. ಅವೆರಡು ನಿನ್ನ ದೇವರಾದ ಕರ್ತನಿಗೆ ಅಸಹ್ಯ.
- 1 Samuel 14:44 1 ಸಮುವೇಲನು 14:44ಅದಕ್ಕೆ ಸೌಲನು--ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ ಅಂದನು.
- 1 Samuel 1:28 1 ಸಮುವೇಲನು 1:28ಆದದರಿಂದ ನಾನು ಅವನನ್ನು ಕರ್ತನಿಗೆ ಒಪ್ಪಿಸಿದ್ದೇನೆ; ಅವನು ಜೀವಿಸಿರುವ ವರೆಗೆ ಕರ್ತನಿಗೆ ಒಪ್ಪಿಸಲ್ಪಟ್ಟಿರುವನು ಅಂದಳು. ಅವನು ಅಲ್ಲಿ ಕರ್ತನನ್ನು ಆರಾಧಿಸಿದನು.
- 1 Samuel 2:18 1 ಸಮುವೇಲನು 2:18ಬಾಲಕನಾದ ಸಮುವೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಕರ್ತನ ಸನ್ನಿಧಿಯಲ್ಲಿ ಸೇವಿಸುತ್ತಿದ್ದನು.
- 1 Samuel 14:24 1 ಸಮುವೇಲನು 14:24ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.
- Leviticus 27:28–29 ಯಾಜಕಕಾಂಡ 27:28–29ಆದಾಗ್ಯೂ ಪ್ರತ್ಯೇಕಿಸಲ್ಪಟ್ಟ ಯಾವದಾದರೂ ಅಂದರೆ ಮನುಷ್ಯನನ್ನಾಗಲಿ ಪಶುವನ್ನಾಗಲಿ ತನ್ನ ಸ್ವಾಸ್ತ್ಯದ ಹೊಲವನ್ನಾಗಲಿ ತನಗಿದ್ದದ್ದನ್ನೆಲ್ಲಾ ಒಬ್ಬ ಮನುಷ್ಯನು ಕರ್ತನಿಗಾಗಿ ಪ್ರತ್ಯೇಕಿಸಿದರೆ ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು; ಪ್ರತ್ಯೇಕಿ ಸಲ್ಪಟ್ಟ ಪ್ರತಿಯೊಂದು ಕರ್ತನಿಗೆ ಅತೀ ಪರಿಶುದ್ಧ ವಾದದ್ದೇ. ಮನುಷ್ಯರಲ್ಲಿ ಪ್ರತ್ಯೇಕಿಸಲ್ಪಟ್ಟವನು ಯಾವನಾದರು ಪ್ರತ್ಯೇಕಿಸಲ್ಪಡದೆ ಹೋದರೆ ಅವನನ್ನು (ಕ್ರಯಕೊಟ್ಟು) ವಿಮೋಚಿಸಬಾರದು. ಖಂಡಿತವಾಗಿ ಅವನನ್ನು ಕೊಲ್ಲಬೇಕು.
- Isaiah 66:3 ಯೆಶಾಯ 66:3ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
- 1 Samuel 1:11 1 ಸಮುವೇಲನು 1:11ಆಕೆಯು ಒಂದು ಪ್ರಮಾಣವನ್ನು ಮಾಡಿ ಹೇಳಿದ್ದೇನಂದರೆಸೈನ್ಯಗಳ ಕರ್ತನೇ, ನೀನು ನಿಶ್ಚಯವಾಗಿ ನಿನ್ನ ದಾಸಿಯ ದೀನತೆಯನ್ನು ನೋಡಿ, ನಿನ್ನ ದಾಸಿಯನ್ನು ಮರೆ ಯದೆ, ನನ್ನನ್ನು ನೆನಸಿ, ನಿನ್ನ ದಾಸಿಗೆ ಗಂಡು ಮಗು ವನ್ನು ಕೊಟ್ಟರೆ ಅವನು ಬದುಕುವ ಎಲ್ಲಾ ದಿವಸಗಳಲ್ಲಿ ಅವನನ್ನು ಕರ್ತನಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರ ಕತ್ತಿ ಬೀಳುವದಿಲ್ಲ ಅಂದಳು.
- Leviticus 27:11–12 ಯಾಜಕಕಾಂಡ 27:11–12ಅದು ಕರ್ತನಿಗೆ ಅರ್ಪಣೆಯಾಗಿ ತಾರದ ಯಾವದಾದರೂ ಅಶುದ್ಧ ಪಶುವಾಗಿದ್ದರೆ ಆ ಪಶುವನ್ನು ಅವನು ಯಾಜಕನ ಮುಂದೆ ನಿಲ್ಲಿಸಬೇಕು. ಆಗ ಯಾಜಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಅದಕ್ಕೆ ಕ್ರಯಕಟ್ಟಬೇಕು. ಯಾಜಕನಾದ ನೀನು ಮಾಡಿದ ಕ್ರಯವೇ ಕ್ರಯವಾ ಗಿರಬೇಕು.
- Leviticus 27:2–3 ಯಾಜಕಕಾಂಡ 27:2–3ಇಸ್ರಾಯೇಲ್ ಮಕ್ಕಳ ಸಂಗಡ ನೀನು ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಒಬ್ಬನು ಪ್ರತ್ಯೇಕವಾದ ಪ್ರಮಾ ಣವನ್ನು ಮಾಡಿಕೊಂಡರೆ ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕರ್ತನಿಗೆ ಮಾಡಬೇಕು. ನೀನು ನೇಮಿಸಬೇಕಾದ ಕ್ರಯವು ಯಾವದಂದರೆ--ಇಪ್ಪತ್ತು ವರುಷದವನು ಮೊದಲುಗೊಂಡು ಅರವತ್ತು ವರುಷ ದವನ ವರೆಗೆ ನೀನು ನೇಮಿಸುವ ಕ್ರಯವು ಪರಿಶುದ್ಧ ಶೇಕೆಲಿನ ಮೇರೆಗೆ ಐವತ್ತು ಬೆಳ್ಳಿಯ ಶೇಕೆಲುಗಳಾಗಿರ ಬೇಕು.