Judges · chapter 11 · verse 5
Judges 11:5 in Kannada
ಹೀಗೆ ಅವರು ಇಸ್ರಾಯೇಲಿನ ಮೇಲೆ ಯುದ್ಧಮಾಡುವಾಗ ಗಿಲ್ಯಾದಿನ ಹಿರಿಯರು ಯೆಫ್ತಾಹ ನನ್ನು ಟೋಬ್ ದೇಶದಿಂದ ಕರಕೊಂಡು ಬರಲು ಹೋಗಿ
Heege avaru israayelina mele yuddhamaaduvaaga gilyaadina hiriyaru yephtaaha nannu tob deshadinda karakondu baralu hogi
Judges 11:5 in English
- King James Version (KJV)
- And it was so, that when the children of Ammon made war against Israel, the elders of Gilead went to fetch Jephthah out of the land of Tob:
- World English Bible (WEB)
- When the children of Ammon made war against Israel, the elders of Gilead went to get Jephthah out of the land of Tob.
- American Standard Version (ASV)
- And it was so, that, when the children of Ammon made war against Israel, the elders of Gilead went to fetch Jephthah out of the land of Tob;
- Bible in Basic English (BBE)
- And when the children of Ammon made war against Israel, the responsible men of Gilead went to get Jephthah back from the land of Tob;
- Darby Translation (DBY)
- And when the children of Ammon made war against Israel, the elders of Gilead went to fetch Jephthah out of the land of Tob.
- Webster's Bible (WBS)
- And it was so, that when the children of Ammon made war against Israel, the elders of Gilead went to bring Jephthah out of the land of Tob:
- Young's Literal Translation (YLT)
- and it cometh to pass, when the Bene-Ammon have fought with Israel, that the elders of Gilead go to take Jephthah from the land of Tob;
Read in context
- 3ಆಗ ಯೆಫ್ತಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ ಟೋಬ್ ದೇಶದಲ್ಲಿ ವಾಸವಾಗಿದ್ದನು; ಆ ಸ್ಥಳದ ನಿಷ್ಪ್ರಯೋಜಕ ಮನುಷ್ಯರು ಯೆಫ್ತಾಹನ ಬಳಿಗೆ ಕೂಡಿಕೊಂಡು ಅವನ ಸಂಗಡ ಹೊರಗೆ ಹೊರಡುತ್ತಿದ್ದರು.
- 4ಕೆಲವು ದಿವಸಗಳಾದ ಮೇಲೆ ಆದದ್ದೇನಂದರೆ, ಅಮ್ಮೋನನ ಮಕ್ಕಳು ಇಸ್ರಾಯೇಲಿನ ಮೇಲೆ ಯುದ್ಧ ಮಾಡಿದರು.
- 5ಹೀಗೆ ಅವರು ಇಸ್ರಾಯೇಲಿನ ಮೇಲೆ ಯುದ್ಧಮಾಡುವಾಗ ಗಿಲ್ಯಾದಿನ ಹಿರಿಯರು ಯೆಫ್ತಾಹ ನನ್ನು ಟೋಬ್ ದೇಶದಿಂದ ಕರಕೊಂಡು ಬರಲು ಹೋಗಿ
- 6ಯೆಫ್ತಾಹನಿಗೆ--ನಾವು ಅಮ್ಮೋನನ ಮಕ್ಕಳ ಸಂಗಡ ಯುದ್ಧಮಾಡುವಂತೆ ನೀನು ಬಂದು ನಮ್ಮ ಸೈನ್ಯಾಧಿಪತಿಯಾಗಿರು ಅಂದರು.
- 7ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ--ನನ್ನನ್ನು ಹಗೆಮಾಡಿ ನನ್ನ ತಂದೆಯ ಮನೆಯಿಂದ ಹೊರಡಿಸಿದವರು ನೀವ ಲ್ಲವೋ? ಈಗ ನಿಮಗೆ ಇಕ್ಕಟ್ಟು ಬಂದಿರುವಾಗ ನನ್ನ ಬಳಿಗೆ ಯಾಕೆ ಬಂದಿರಿ ಅಂದನು.
Cross references
- 1 Corinthians 1:27–29 1 ಕೊರಿಂಥದವರಿಗೆ 1:27–29ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ; ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ. ಹೀಗಿರಲು ಆತನ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.
- Acts 7:35–39 ಅಪೊಸ್ತಲರ ಕೃತ್ಯಗಳು 7:35–39ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು. ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು. ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್ ಜನರಿಗೆ ಹೇಳಿದ ಆ ಮೋಶೆಯು ಇವನೇ. ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು. ಆದರೆ ನಮ ಪಿತೃಗಳು ಅವನ ಮಾತುಗಳಿಗೆ ವಿಧೇಯರಾಗದೆ ಅವನನ್ನು ತಳ್ಳಿಬಿಟ್ಟು ತಮ್ಮ ಹೃದಯಗಳಲ್ಲಿ ಹಿಂದಕ್ಕೆ ಐಗುಪ್ತದ ಕಡೆಗೆ ತಿರುಗಿಕೊಂಡು
- 1 Samuel 11:12 1 ಸಮುವೇಲನು 11:12ಆಗ ಜನರು ಸಮುವೇಲನಿಗೆ--ಸೌಲನು ನಮ್ಮ ಮೇಲೆ ಆಳುವನೋ ಎಂದು ಹೇಳಿದವರಾರು? ಆ ಮನುಷ್ಯರನ್ನು ನಮಗೆ ಒಪ್ಪಿಸಿರಿ; ಅವರನ್ನು ಕೊಂದು ಹಾಕುತ್ತೇವೆ ಅಂದರು.
- Psalm 118:22–23 ಕೀರ್ತನೆಗಳು 118:22–23ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದುಂಟಾಗಿ ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆ.
- Judges 10:17–18 ನ್ಯಾಯಸ್ಥಾಪಕರು 10:17–18ಅಮ್ಮೋನನ ಮಕ್ಕಳು ಏಕವಾಗಿ ಕೂಡಿಕೊಂಡು ಗಿಲ್ಯಾದಿನಲ್ಲಿ ದಂಡಿಳಿದರು. ಆದರೆ ಇಸ್ರಾಯೇಲ್ ಮಕ್ಕಳು ಏಕವಾಗಿ ಕೂಡಿ ಮಿಚ್ಪೆಯಲ್ಲಿ ದಂಡಿಳಿದರು.ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು. ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು.
- Judges 10:9 ನ್ಯಾಯಸ್ಥಾಪಕರು 10:9ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದನಿಗೆ ಬೆನ್ಯಾವಿಾನರಿಗೆ ವಿರೋಧವಾ ಗಿಯೂ ಎಫ್ರಾಯಾಮ್ ಮನೆಗೆ ವಿರೋಧವಾಗಿಯೂ ಯುದ್ಧಮಾಡುವದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹುಸಂಕಟವಾಯಿತು.
- 1 Samuel 11:6–7 1 ಸಮುವೇಲನು 11:6–7ಸೌಲನು ಈ ಮಾತು ಗಳನ್ನು ಕೇಳಿದಾಗ ದೇವರ ಆತ್ಮನು ಅವನ ಮೇಲೆ ಬಂದನು; ಅವನು ಬಹು ಕೋಪೋದ್ರೇಕಗೊಂಡವ ನಾಗಿ ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡು ತುಂಡಾಗಿ ಕತ್ತರಿಸಿ ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿಸೌಲನ ಹಿಂದೆಯೂ ಸಮುವೇಲನ ಹಿಂದೆಯೂ ಹೊರಡದವನ ಪಶುಗಳಿಗೆ ಈ ಪ್ರಕಾರ ಮಾಡಲ್ಪಡು ವದೆಂದು ಹೇಳಿಸಿದನು. ಆಗ ಕರ್ತನಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ ಅವರು ಒಂದೇ ಮನಸ್ಸಿನಿಂದ ಹಾಗೆಯೇ ಹೊರಟು ಬಂದರು.
- 1 Samuel 10:27 1 ಸಮುವೇಲನು 10:27ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.