Judges · chapter 13 · verse 19
Judges 13:19 in Kannada
ಹೀಗೆ ಮಾನೋಹನು ಮೇಕೆಯ ಮರಿಯನ್ನೂ ಅರ್ಪಣೆಯನ್ನೂ ತಂದು ಅವುಗಳನ್ನು ಬಂಡೆಯ ಮೇಲೆ ಕರ್ತನಿಗೆ ಅರ್ಪಿಸಿದನು. ಮಾನೋ ಹನೂ ಅವನ ಹೆಂಡತಿಯೂ ನೋಡುವಾಗ ಕರ್ತನ ದೂತನು ಆಶ್ಚರ್ಯವಾದದ್ದನ್ನು ಮಾಡಿದನು.
Heege maanohanu mekeya mariyannoo arpaneyannoo tandu avugalannu bandeya mele kartanige arpisidanu. Maano hanoo avana hendatiyoo noduvaaga kartana dootanu aashcharyavaadaddannu maadidanu.
Judges 13:19 in English
- King James Version (KJV)
- So Manoah took a kid with a meat offering, and offered [it] upon a rock unto the LORD: and [the angel] did wondrously; and Manoah and his wife looked on.
- World English Bible (WEB)
- So Manoah took the young goat with the meal offering, and offered it on the rock to the LORD. Then the angel did an amazing thing as Manoah and his wife watched.
- American Standard Version (ASV)
- So Manoah took the kid with the meal-offering, and offered it upon the rock unto Jehovah: and [the angel] did wondrously, and Manoah and his wife looked on.
- Bible in Basic English (BBE)
- So Manoah took the young goat with its meal offering, offering it on the rock to the Lord, who did strange things.
- Darby Translation (DBY)
- Then Manoah took the kid and the oblation, and offered it up to Jehovah upon the rock. And he did wondrously, and Manoah and his wife looked on.
- Webster's Bible (WBS)
- So Manoah took a kid, with a meat-offering, and offered [it] upon a rock to the LORD; and [the angel] did wonderously, and Manoah and his wife looked on.
- Young's Literal Translation (YLT)
- And Manoah taketh the kid of the goats, and the present, and offereth on the rock to Jehovah, and He is doing wonderfully, and Manoah and his wife are looking on,
Read in context
- 17ಅವನು ಕರ್ತನ ದೂತನೆಂದು ಮಾನೋಹನು ಅರಿಯದೆ ಇದ್ದನು. ಮಾನೋಹನು ಕರ್ತನ ದೂತನಿಗೆ--ನೀನು ಹೇಳಿದ ಮಾತುಗಳು ನೆರವೇರುವಾಗ ನಾವು ನಿನ್ನನ್ನು ಘನ ಪಡಿಸುವ ಹಾಗೆ ನಿನ್ನ ಹೆಸರೇನು ಅಂದನು.
- 18ಆದರೆ ಕರ್ತನ ದೂತನು ಅವನಿಗೆ--ನನ್ನ ಹೆಸರು ಏನೆಂದು ನೀನು ಕೇಳುವದೇನು? ಆ ಹೆಸರು ರಹಸ್ಯವಾದದ್ದು ಅಂದನು.
- 19ಹೀಗೆ ಮಾನೋಹನು ಮೇಕೆಯ ಮರಿಯನ್ನೂ ಅರ್ಪಣೆಯನ್ನೂ ತಂದು ಅವುಗಳನ್ನು ಬಂಡೆಯ ಮೇಲೆ ಕರ್ತನಿಗೆ ಅರ್ಪಿಸಿದನು. ಮಾನೋ ಹನೂ ಅವನ ಹೆಂಡತಿಯೂ ನೋಡುವಾಗ ಕರ್ತನ ದೂತನು ಆಶ್ಚರ್ಯವಾದದ್ದನ್ನು ಮಾಡಿದನು.
- 20ಅಗ್ನಿ ಜ್ವಾಲೆಯು ಬಲಿಪೀಠದಿಂದ ಆಕಾಶಕ್ಕೆ ಸರಿಯಾಗಿ ಏಳು ವಾಗ ಏನಾಯಿತಂದರೆ, ಕರ್ತನ ದೂತನು ಬಲಿಪೀಠದ ಜ್ವಾಲೆಯಲ್ಲಿ ಮೇಲಕ್ಕೆ ಹೋದನು. ಅದನ್ನು ಮಾನೋ ಹನೂ ಅವನ ಹೆಂಡತಿಯೂ ನೋಡಿ ನೆಲದ ಮೇಲೆ ಬೋರಲು ಬಿದ್ದರು.
- 21ಆದರೆ ಕರ್ತನ ದೂತನು ಮಾನೋಹನಿಗೂ ಅವನ ಹೆಂಡತಿಗೂ ತಿರಿಗಿ ಕಾಣಿಸ ಲಿಲ್ಲ. ಆಗ ಇವನು ಕರ್ತನ ದೂತನೆಂದು ಮಾನೋಹನು ತಿಳುಕೊಂಡನು. ಮಾನೋಹನು ತನ್ನ ಹೆಂಡತಿಗೆ--ನಾವು ದೇವರನ್ನು ಕಂಡದ್ದರಿಂದ ನಿಶ್ಚಯ ವಾಗಿ ಸಾಯುವೆವು ಅಂದನು.
Cross references
- Judges 6:19–21 ನ್ಯಾಯಸ್ಥಾಪಕರು 6:19–21ಆಗ ಗಿದ್ಯೋನನು ಒಳಗೆ ಹೋಗಿ ಒಂದು ಮೇಕೆಯ ಮರಿಯನ್ನೂ ಒಂದು ಏಫಾದ ಹಿಟ್ಟಿನಲ್ಲಿ ಹುಳಿ ಇಲ್ಲದ ರೊಟ್ಟಿಯನ್ನೂ ಸಿದ್ಧಮಾಡಿ ಮಾಂಸವನ್ನು ಪುಟ್ಟಿಯಲ್ಲಿ ಇಟ್ಟು ರಸವನ್ನು ಪಾತ್ರೆಯಲ್ಲಿ ಹೊಯಿದು ಅದನ್ನು ಹೊರಗೆ ಮರದ ಕೆಳಗೆ ಇದ್ದ ಆತನ ಬಳಿ ಯಲ್ಲಿ ತಂದಿಟ್ಟನು. ದೇವದೂತನು ಅವನಿಗೆನೀನು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ತೆಗೆದುಕೊಂಡು ಈ ಬಂಡೆಯ ಮೇಲಿಟ್ಟು ರಸವನ್ನು ಹೊಯ್ಯಿ ಅಂದನು. ಅವನು ಹಾಗೆಯೇ ಮಾಡಿದನು. ಆಗ ಕರ್ತನ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆ ಯಿಂದ ಎದ್ದು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿ ಗಳನ್ನೂ ದಹಿಸಿಬಿಟ್ಟಿತು. ಆಗ ಕರ್ತನ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು.
- 1 Kings 18:30–38 1 ಅರಸುಗಳು 18:30–38ಆಗ ಎಲೀಯನು ಸಮಸ್ತ ಜನರಿಗೆ--ನನ್ನ ಬಳಿಗೆ ಬನ್ನಿರಿ ಅಂದನು; ಜನರೆಲ್ಲರು ಅವನ ಬಳಿಗೆ ಬಂದರು. ಕಿತ್ತುಹಾಕಲ್ಪಟ್ಟ ಕರ್ತನ ಬಲಿಪೀಠವನ್ನು ಅವನು ದುರಸ್ತು ಮಾಡಿದನು. ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವದೆಂದು ಕರ್ತನ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಆ ಕಲ್ಲುಗಳಿಂದ ಕರ್ತನ ಹೆಸರಿಗೆ ಬಲಿಪೀಠವನ್ನು ಕಟ್ಟಿ ಆ ಬಲಿಪೀಠದ ಸುತ್ತಲೂ ಎರಡು ಕೊಳಗ ಬೀಜ ಹಿಡಿಯುವ ಒಂದು ಕಾಲಿವೆಯನ್ನು ಮಾಡಿದನು. ತರುವಾಯ ಅವನು ಕಟ್ಟಿಗೆಗಳನ್ನು ಇಟ್ಟು ಹೋರಿ ಯನ್ನು ತುಂಡುತುಂಡಾಗಿ ಕಡಿದು ಕಟ್ಟಿಗೆಗಳ ಮೇಲೆ ಇಟ್ಟು--ನೀವು ನಾಲ್ಕು ಮಡಕೆ ನೀರನ್ನು ತುಂಬಿಕೊಂಡು ದಹನಬಲಿಯ ಮೇಲೆಯೂ ಕಟ್ಟಿಗೆಗಳ ಮೇಲೆಯೂ ಹೊಯ್ಯಿರಿ ಅಂದನು. ಎರಡನೇ ಸಾರಿ ಹೊಯ್ಯಿರಿ ಅಂದನು. ಮೂರನೇ ಸಾರಿ ಹೊಯ್ಯಿರಿ ಅಂದನು; ಮೂರನೇ ಸಾರಿಯೂ ಹೊಯ್ದರು. ಆದದರಿಂದ ನೀರು ಬಲಿಪೀಠದ ಸುತ್ತಲೂ ಹರಿಯಿತು. ಇದಲ್ಲದೆ ಅವನು ಕಾಲಿವೆಯನ್ನು ನೀರಿನಿಂದ ತುಂಬಿಸಿದನು. ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆ ಯಲ್ಲಿ ಪ್ರವಾದಿಯಾದ ಎಲೀಯನು ಸವಿಾಪಕ್ಕೆ ಬಂದು--ಅಬ್ರಹಾಮನಿಗೂ ಇಸಾಕನಿಗೂ ಇಸ್ರಾ ಯೇಲಿಗೂ ದೇವರಾದ ಕರ್ತನೇ, ಇಸ್ರಾಯೇಲಿನಲ್ಲಿ ನೀನು ದೇವರೆಂದೂ ನಾನು ನಿನ್ನ ಸೇವಕನೆಂದೂ ನಾನು ಈ ಕಾರ್ಯಗಳನ್ನೆಲ್ಲಾ ನಿನ್ನ ಮಾತಿನ ಹಾಗೆಯೇ ಮಾಡಿದೆನೆಂದೂ ಇಂದು ತಿಳಿಯಲ್ಪಡಲಿ. ನೀನು ದೇವರಾದ ಕರ್ತನೆಂದೂ ನೀನು ಅವರ ಹೃದಯವನ್ನು ಮರಳಿ ತಿರಿಗಿಸುತ್ತಿ ಎಂದೂ ಈ ಜನವು ತಿಳಿಯುವ ಹಾಗೆ ನನಗೆ ಉತ್ತರಕೊಡು, ಓ ಕರ್ತನೇ, ನನಗೆ ಉತ್ತರಕೊಡು ಎಂದು ಬೇಡಿದನು. ಆಗ ಕರ್ತನ ಬೆಂಕಿಯು ಇಳಿದು ಬಂದು ದಹನಬಲಿಯನ್ನೂ ಕಟ್ಟಿಗೆ ಗಳನ್ನೂ ಕಲ್ಲುಗಳನ್ನೂ ಮಣ್ಣನ್ನೂ ಸುಟ್ಟುಬಿಟ್ಟು ಕಾಲುವೆ ಯಲ್ಲಿದ್ದ ನೀರನ್ನು ಹೀರಿಬಿಟ್ಟಿತು.