Judges · chapter 13 · verse 3
Judges 13:3 in Kannada
ಅವನ ಹೆಂಡತಿಯು ಹೆರದೆ ಬಂಜೆಯಾಗಿದ್ದಳು. ಕರ್ತನ ದೂತನು ಆ ಸ್ತ್ರೀಗೆ ಪ್ರತ್ಯಕ್ಷ ವಾಗಿ ಅವಳಿಗೆ--ಇಗೋ, ನೀನು ಹೆರದೆ ಬಂಜೆಯಾ ಗಿದ್ದೀ. ಆದರೆ ನೀನು ಗರ್ಭ ಧರಿಸಿ ಒಬ್ಬ ಮಗನನ್ನು ಹೆರುವಿ.
Avana hendatiyu herade banjeyaagiddalu. Kartana dootanu aa streege pratyaksha vaagi avalige--igo, neenu herade banjeyaa giddee. Aadare neenu garbha dharisi obba maganannu heruvi.
Judges 13:3 in English
- King James Version (KJV)
- And the angel of the LORD appeared unto the woman, and said unto her, Behold now, thou [art] barren, and bearest not: but thou shalt conceive, and bear a son.
- World English Bible (WEB)
- The LORD’s angel appeared to the woman, and said to her, “See now, you are barren and childless; but you shall conceive and bear a son.
- American Standard Version (ASV)
- And the angel of Jehovah appeared unto the woman, and said unto her, Behold now, thou art barren, and bearest not; but thou shalt conceive, and bear a son.
- Bible in Basic English (BBE)
- And the angel of the Lord came to the woman, and said to her, See now! though you have never given birth to children, you will be with child and give birth to a son.
- Darby Translation (DBY)
- And the Angel of Jehovah appeared to the woman, and said to her, Behold now, thou art barren and bearest not; but thou shalt conceive and bear a son.
- Webster's Bible (WBS)
- And the angel of the LORD appeared to the woman, and said to her, Behold, now, thou [art] barren, and bearest not: but thou shalt conceive, and bear a son.
- Young's Literal Translation (YLT)
- and a messenger of Jehovah appeareth unto the woman, and saith unto her, 'Lo, I pray thee, thou [art] barren, and hast not borne; when thou hast conceived, then thou hast borne a son.
Read in context
- 1ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ ಕರ್ತನು ಅವರನ್ನು ನಾಲ್ವತ್ತು ವರುಷದ ವರೆಗೆ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಟ್ಟನು.
- 2ಚೊರ್ಗಾದ ವನಾದ ದಾನ್ ಗೋತ್ರದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು.
- 3ಅವನ ಹೆಂಡತಿಯು ಹೆರದೆ ಬಂಜೆಯಾಗಿದ್ದಳು. ಕರ್ತನ ದೂತನು ಆ ಸ್ತ್ರೀಗೆ ಪ್ರತ್ಯಕ್ಷ ವಾಗಿ ಅವಳಿಗೆ--ಇಗೋ, ನೀನು ಹೆರದೆ ಬಂಜೆಯಾ ಗಿದ್ದೀ. ಆದರೆ ನೀನು ಗರ್ಭ ಧರಿಸಿ ಒಬ್ಬ ಮಗನನ್ನು ಹೆರುವಿ.
- 4ಆದದರಿಂದ ನೀನು ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಎಚ್ಚರಿಕೆಯಾಗಿರಬೇಕು.
- 5ಇಗೋ, ನೀನು ಗರ್ಭವನ್ನು ಧರಿಸಿ, ಒಬ್ಬ ಮಗನನ್ನು ಹೆರುವಿ; ಅವನ ತಲೆಯ ಮೇಲೆ ಕ್ಷೌರದ ಕತ್ತಿ ಬರುವದಿಲ್ಲ. ಗರ್ಭದಿಂದಲೇ ಆ ಹುಡುಗನು ದೇವರ ನಾಜೀರನಾಗಿ ರುವನು. ಅವನು ಇಸ್ರಾಯೇಲ್ಯರನ್ನು ಫಿಲಿಷ್ಟಿ ಯರ ಕೈಯಿಂದ ಬಿಡಿಸಿ ರಕ್ಷಿಸಲು ಪ್ರಾರಂಭಿಸುವನು ಅಂದನು.
Cross references
- Luke 1:13 ಲೂಕನು 1:13ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
- Luke 1:11 ಲೂಕನು 1:11ಆಗ ಧೂಪ ವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
- Judges 6:11–12 ನ್ಯಾಯಸ್ಥಾಪಕರು 6:11–12ಕರ್ತನ ದೂತನು ಬಂದು ಅಬೀಯೆಜೆರನಾದ ಯೋವಾಷನು ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗ ನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷೇ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು. ಆಗ ಕರ್ತನ ದೂತನು ಅವ ನಿಗೆ ಪ್ರತ್ಯಕ್ಷನಾಗಿ ಅವನಿಗೆ--ಬಲಿಷ್ಠನಾದ ಪರಾಕ್ರಮ ಶಾಲಿಯೇ, ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
- Genesis 18:10 ಆದಿಕಾಂಡ 18:10ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.
- Judges 13:8 ನ್ಯಾಯಸ್ಥಾಪಕರು 13:8ಆಗ ಮಾನೋಹನು ಕರ್ತನಿಗೆ ಬೇಡಿಕೊಂಡು--ಓ ನನ್ನ ಕರ್ತನೇ, ನೀನು ಕಳುಹಿಸಿದ ದೇವರ ಮನು ಷ್ಯನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟುವ ಮಗುವಿಗೋಸ್ಕರ ನಾವು ಮಾಡಬೇಕಾದದ್ದನ್ನು ನಮಗೆ ಕಲಿಸಲಿ ಎಂದು ಹೇಳಿದನು.
- Judges 2:1 ನ್ಯಾಯಸ್ಥಾಪಕರು 2:1ಕರ್ತನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು--ನಾನು ನಿಮ್ಮನ್ನು ಐಗುಪ್ತ ದಿಂದ ಬರಮಾಡಿ ನಿಮ್ಮ ತಂದೆಗಳಿಗೆ ಆಣೆಯಿಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು.
- 2 Kings 4:16 2 ಅರಸುಗಳು 4:16ಆಗ ಅವನು--ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಳ್ಳುವಿ ಅಂದನು. ಅದಕ್ಕವಳುಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಳಿಗೆ ನೀನು ಸುಳ್ಳು ಹೇಳಬೇಡ ಅಂದಳು.
- 1 Samuel 1:20 1 ಸಮುವೇಲನು 1:20ಹನ್ನಳು ಗರ್ಭವತಿ ಯಾಗಿ ಕಾಲವು ಪೂರ್ತಿಯಾದ ತರುವಾಯ ಆದದ್ದೇ ನಂದರೆ, ಅವಳು ಮಗನನ್ನು ಹೆತ್ತು--ನಾನು ಅವನನ್ನು ಕರ್ತನ ಬಳಿಯಲ್ಲಿ ಕೇಳಿಕೊಂಡೆನು ಎಂದು ಹೇಳಿ ಅವನಿಗೆ ಸಮುವೇಲನೆಂದು ಹೆಸರಿಟ್ಟಳು.
- Genesis 17:16 ಆದಿಕಾಂಡ 17:16ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು.
- Judges 13:10 ನ್ಯಾಯಸ್ಥಾಪಕರು 13:10ಆದದರಿಂದ ಅವಳು ಬೇಗ ಓಡಿಹೋಗಿ ತನ್ನ ಗಂಡನಿಗೆ--ಇಗೋ, ಆ ಹೊತ್ತು ನನ್ನ ಬಳಿಗೆ ಬಂದವನು ನನಗೆ ಪ್ರತ್ಯಕ್ಷನಾ ದನು ಎಂದು ತಿಳಿಸಿದಳು.
- Luke 1:28–38 ಲೂಕನು 1:28–38ಆ ದೂತನು ಆಕೆಗೆ--ಅಪಾರ ದಯೆ ಹೊಂದಿದವಳೇ, ನಿನಗೆ ವಂದನೆ; ಕರ್ತನು ನಿನ್ನೊಂದಿಗಿದ್ದಾನೆ; ಸ್ತ್ರೀಯರಲ್ಲಿ ನೀನು ಧನ್ಯಳೇ ಎಂದು ಹೇಳಿದನು. ಆಕೆಯು ಅವನನ್ನು ನೋಡಿ ಅವನ ಮಾತಿಗೆ ಕಳವಳಗೊಂಡು ಇದು ಎಂಥಾತರವಾದ ವಂದನೆ ಎಂದು ತನ್ನ ಮನದಲ್ಲಿ ಯೋಚಿಸುತ್ತಿರುವಾಗ ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ; ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು. ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು. ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು. ಆಗ ಮರಿಯಳು ಆ ದೂತ ನಿಗೆ--ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಅಂದಳು. ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು. ಇಗೋ, ಬಂಜೆಯೆಂದು ಕರೆಯಲ್ಪಟ್ಟ ನಿನ್ನ ಬಂಧುವಾದ ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಮಗನನ್ನು ಗರ್ಭಧರಿಸಿದ್ದಾಳೆ. ಆಕೆಗೆ ಇದು ಆರನೆಯ ತಿಂಗಳು. ಯಾಕಂದರೆ ದೇವರಿಗೆ ಅಸಾಧ್ಯವಾದದ್ದು ಯಾವದೂ ಇಲ್ಲ ಎಂದು ಹೇಳಿ ದನು. ಆಗ ಮರಿಯಳು--ನೋಡು, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗೆ ಆಗಲಿ ಅಂದಳು; ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
- Judges 13:6 ನ್ಯಾಯಸ್ಥಾಪಕರು 13:6ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆದೇವರ ಒಬ್ಬ ಮನುಷ್ಯನು ನನ್ನ ಬಳಿಗೆ ಬಂದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾಭಯಂಕರವಾಗಿತ್ತು. ನಾನು ಅವನನ್ನು--ಎಲ್ಲಿಂದ ಬಂದಿ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.