Judges · chapter 16 · verse 15
Judges 16:15 in Kannada
ಅವಳು ಅವನಿಗೆ--ನಿನ್ನ ಹೃದಯವು ನನ್ನ ಸಂಗಡ ಇಲ್ಲದೆ ಇರುವಾಗ ನಿನ್ನನ್ನು ಪ್ರೀತಿ ಮಾಡುತ್ತೇನೆ ಎಂದು ನೀನು ಹೇಗೆ ಹೇಳುತ್ತೀ? ನೀನು ಈ ಮೂರು ಸಾರಿ ನನಗೆ ವಂಚನೆಮಾಡಿದಿ; ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೋ ನನಗೆ ತಿಳಿಸಲಿಲ್ಲ ಅಂದಳು.
Avalu avanige--ninna hrudayavu nanna sangada illade iruvaaga ninnannu preeti maaduttene endu neenu hege heluttee? Neenu ee mooru saari nanage vanchanemaadidi; ninna dodda shakti yaavadaralli unto nanage tilisalilla andalu.
Judges 16:15 in English
- King James Version (KJV)
- And she said unto him, How canst thou say, I love thee, when thine heart [is] not with me? thou hast mocked me these three times, and hast not told me wherein thy great strength [lieth].
- World English Bible (WEB)
- She said to him, “How can you say, ‘I love you,’ when your heart is not with me? You have mocked me these three times, and have not told me where your great strength lies.”
- American Standard Version (ASV)
- And she said unto him, How canst thou say, I love thee, when thy heart is not with me? thou hast mocked me these three times, and hast not told me wherein thy great strength lieth.
- Bible in Basic English (BBE)
- And she said to him, Why do you say you are my lover when your heart is not mine? Three times you have made sport of me, and have not made clear to me the secret of your great strength.
- Darby Translation (DBY)
- Then she said to him, How canst thou say, I love thee, when thy heart is not with me? these three times hast thou mocked me, and hast not told me in what is thy great strength.
- Webster's Bible (WBS)
- And she said to him, How canst thou say, I love thee, when thy heart [is] not with me? Thou hast mocked me these three times, and hast not told me in what thy great strength [lieth] .
- Young's Literal Translation (YLT)
- And she saith unto him, 'How dost thou say, I have loved thee, and thy heart is not with me? these three times thou hast played upon me, and hast not declared to me wherein thy great power [is].'
Read in context
- 13ದೆಲೀಲಳು ಸಂಸೋನನಿಗೆ--ಈ ವರೆಗೂ ನನ್ನನ್ನು ವಂಚನೆಮಾಡಿ ನನಗೆ ಸುಳ್ಳುಗಳನ್ನು ಹೇಳಿದಿ. ನೀನು ಯಾವದರಿಂದ ಕಟ್ಟಲ್ಪಡಬಹುದೋ ತಿಳಿಸು ಅಂದಳು. ಅವನು ಅವಳಿಗೆ--ನೀನು ನನ್ನ ತಲೆಯ ಏಳು ಜಡೆ ಗಳನ್ನು ಮಗ್ಗದಲ್ಲಿ ನೆಯ್ದರೆ ಆಗುವದು ಅಂದನು.
- 14ಆಗ ಅವುಗಳನ್ನು ಗೂಟದಿಂದ ಭದ್ರಮಾಡಿ ಅವನಿಗೆ--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಎದ್ದು ಮಗ್ಗವನ್ನೂ ಮಗ್ಗದ ಗೂಟವನ್ನೂ ಕಿತ್ತುಕೊಂಡು ಹೋದನು.
- 15ಅವಳು ಅವನಿಗೆ--ನಿನ್ನ ಹೃದಯವು ನನ್ನ ಸಂಗಡ ಇಲ್ಲದೆ ಇರುವಾಗ ನಿನ್ನನ್ನು ಪ್ರೀತಿ ಮಾಡುತ್ತೇನೆ ಎಂದು ನೀನು ಹೇಗೆ ಹೇಳುತ್ತೀ? ನೀನು ಈ ಮೂರು ಸಾರಿ ನನಗೆ ವಂಚನೆಮಾಡಿದಿ; ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೋ ನನಗೆ ತಿಳಿಸಲಿಲ್ಲ ಅಂದಳು.
- 16ಅವಳು ಅವನನ್ನು ದಿನದಿನವೂ ತನ್ನ ಮಾತುಗಳಿಂದ ಪೀಡಿಸಿ ತೊಂದರೆಪಡಿಸಿದ್ದರಿಂದ ಅವನ ಪ್ರಾಣವು ಸಾಯು ವಷ್ಟು ವ್ಯಸನಪಟ್ಟಿತು.
- 17ಅವನು ತನ್ನ ಹೃದಯವನ್ನೆಲ್ಲಾ ಅವಳಿಗೆ ತಿಳಿಸಿ ಅವಳಿಗೆ--ಕ್ಷೌರದ ಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ನನ್ನ ತಾಯಿಯ ಗರ್ಭ ದಲ್ಲಿಂದ ದೇವರಿಗೆ ನಾಜೀರನಾಗಿದ್ದೇನೆ. ನನ್ನ ತಲೆ ಯನ್ನು ಬೋಳಿಸಿದರೆ ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗುವದು; ನಾನು ಬಲಹೀನನಾಗಿ ಎಲ್ಲಾ ಮನುಷ್ಯರ ಹಾಗೆ ಇರುವೆನು ಅಂದನು.
Cross references
- Judges 14:16 ನ್ಯಾಯಸ್ಥಾಪಕರು 14:16ಆಗ ಸಂಸೋನನ ಹೆಂಡತಿ ಅವನ ಮುಂದೆ ಅತ್ತು--ನೀನು ನನ್ನನ್ನು ಪ್ರೀತಿಮಾಡದೆ ನನ್ನನ್ನು ಹಗೆ ಮಾಡುತ್ತೀ. ನೀನು ನನ್ನ ಜನರ ಮಕ್ಕಳಿಗೆ ಒಂದು ಒಗಟನ್ನು ಹೇಳಿ ಅದನ್ನು ನನಗೆ ತಿಳಿಸದೆ ಹೋದಿ ಅಂದಳು. ಅವನು ಅವಳಿಗೆ--ಇಗೋ, ನಾನು ನನ್ನ ತಂದೆ ತಾಯಿಗಳಿಗೆ ಅದನ್ನು ತಿಳಿಸಲಿಲ್ಲ; ನಿನಗೆ ತಿಳಿಸುವೆನೋ? ಅಂದನು.
- Proverbs 23:26 ಜ್ಞಾನೋಕ್ತಿಗಳು 23:26ನನ್ನ ಮಗನೇ, ನಿನ್ನ ಹೃದಯ ವನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ನಿನ್ನ ಕಣ್ಣುಗಳು ದೃಷ್ಟಿಯಿಟ್ಟು ನೋಡಲಿ.
- 1 John 2:15–16 1 ಯೋಹಾನನು 2:15–16ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ. ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
- John 15:10 ಯೋಹಾನನು 15:10ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
- John 14:15 ಯೋಹಾನನು 14:15ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ.
- 2 Corinthians 5:14–15 2 ಕೊರಿಂಥದವರಿಗೆ 5:14–15ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ. ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.
- Song of Solomon 8:6–7 ಪರಮಗೀತೆ 8:6–7ನಿನ್ನ ಹೃದಯದ ಮೇಲೆ ಒಂದು ಮುದ್ರೆಯ ಹಾಗೆಯೂ ನಿನ್ನ ಕೈಮೇಲೆ ಒಂದು ಮುದ್ರೆಯ ಹಾಗೆಯೂ ನನ್ನನ್ನು ಹಾಕು; ಪ್ರೀತಿಯು ಮರಣದ ಹಾಗೆ ಬಲವಾಗಿರುವದು; ರೋಷವು ಸಮಾಧಿಯ ಹಾಗೆ ಕ್ರೂರವಾಗಿರುವದು; ಅದರ ಕಲ್ಲಿದ್ದಲುಗಳ ಬೆಂಕಿಯು ಪ್ರಜ್ವಲಿಸುವ ಜ್ವಾಲೆಯ ಕಿಡಿಗಳಾಗಿ ಇರುವವು. ಅನೇಕ ಜಲಗಳು ಪ್ರೀತಿಯನ್ನು ಆರಿ ಸಲಾರವು; ಪ್ರವಾಹಗಳು ಅದನ್ನು ಮುಣುಗಿಸ ಲಾರವು; ಮನುಷ್ಯನು ತನ್ನ ಮನೆಯ ಆಸ್ತಿಯನ್ನೆಲ್ಲಾ ಪ್ರೀತಿಗೋಸ್ಕರ ಕೊಟ್ಟರೆ ಅದು ಸಂಪೂರ್ಣವಾಗಿ ತಿರಸ್ಕರಿಸಲ್ಪಡುವದು.
- Proverbs 5:3–14 ಜ್ಞಾನೋಕ್ತಿಗಳು 5:3–14ಪರಸ್ತ್ರೀಯ ತುಟಿಗಳು ಜೇನು ತುಪ್ಪದಂತೆ ತೊಟ್ಟಿ ರುವವು, ಅವಳ ಬಾಯಿಯು ಎಣ್ಣೆಗಿಂತಲೂ ಮೃದು ವಾಗಿದೆ. ಆದರೆ ಅವಳ ಅಂತ್ಯವು ಮಾಚಿ ಪತ್ರೆಯಂತೆ ಕಹಿಯೂ ಇಬ್ಬಾಯಿ ಕತ್ತಿಯಂತೆ ಹರಿತವೂ ಇರುತ್ತದೆ. ಅವಳ ಪಾದಗಳು ಮರಣದ ಕಡೆಗೆ ಇಳಿದು ಹೋಗು ತ್ತವೆ. ಅವಳ ಹೆಜ್ಜೆಗಳು ಪಾತಾಳವನ್ನು ಹಿಡಿಯುತ್ತವೆ. ಅವುಗಳನ್ನು ನೀನು ತಿಳಿದುಕೊಳ್ಳಲಾರದಂತೆ ಜೀವದ ಮಾರ್ಗವನ್ನು ನೀನು ವಿವೇಚಿಸಲಾರದಷ್ಟು ಅವಳ ಮಾರ್ಗಗಳು ಚಂಚಲವಾಗಿವೆ. ಆದದರಿಂದ ಓ ಮಕ್ಕಳಿರಾ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಬಾಯಿಯ ಮಾತುಗಳಿಂದ ಹೊರಟುಹೋಗಬೇಡಿರಿ. ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು. ಅವಳ ಮನೆಯ ಬಾಗಲ ಹತ್ತಿರಕ್ಕೆ ಬಾರದೆ ಇರು. ನೀನು ನಿನ್ನ ಗೌರವವನ್ನು ಬೇರೆಯವರಿಗೂ ನಿನ್ನ ವರುಷ ಗಳನ್ನು ಕ್ರೂರರಿಗೂ ಕೊಡಬೇಡ. ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆಯೂ ನಿನ್ನ ಪ್ರಯಾಸಗಳು ಪರನ ಮನೆಯಲ್ಲಿ ಇರದಂತೆಯೂ ಮಾಡು. ನಿನ್ನ ಮಾಂಸವೂ ದೇಹವೂ ಕ್ಷೀಣಿಸಿದಾಗ ನೀನು ಕೊನೆಯಲ್ಲಿ ಶೋಕಿಸುತ್ತಾ-- ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು. ನನ್ನ ಬೋಧ ಕರ ಸ್ವರಕ್ಕೆ ನಾನು ವಿಧೇಯನಾಗದೆ ಇಲ್ಲವೆ ಶಿಕ್ಷಕರಿಗೆ ನಾನು ಕಿವಿಗೊಡದೆ ಹೋದೆನು. ನಾನು ಕೂಟ ಮತ್ತು ಸಭೆಯ ಮಧ್ಯದಲ್ಲಿ ಹೆಚ್ಚು ಕಡಿಮೆ ಎಲ್ಲಾ ಕೇಡಿನಲ್ಲಿ ಇದ್ದೆನು ಎಂದು ಹೇಳುವಿ.
- Proverbs 2:16 ಜ್ಞಾನೋಕ್ತಿಗಳು 2:16ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು
- John 14:21–24 ಯೋಹಾನನು 14:21–24ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು. ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು. ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.
- 2 Samuel 16:17 2 ಸಮುವೇಲನು 16:17ಅಬ್ಷಾಲೋಮನು ಅವನಿಗೆ--ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ ಅಂದನು.
- 1 Samuel 15:13–14 1 ಸಮುವೇಲನು 15:13–14ಸಮುವೇಲನು ಸೌಲನ ಬಳಿಗೆ ಬಂದಾಗ ಸೌಲನು ಅವನಿಗೆ--ನಿನಗೆ ಕರ್ತನ ಆಶೀರ್ವಾದವಾಗಲಿ; ನಾನು ಕರ್ತನ ಆಜ್ಞೆಯನ್ನು ಈಡೇರಿಸಿದೆನು ಅಂದನು. ಆಗ ಸಮುವೇಲನು ಅವನಿಗೆ--ನನ್ನ ಕಿವಿಗಳಲ್ಲಿ ಬೀಳುವ ಆ ಕುರಿಗಳ ಶಬ್ದವೇನು? ನಾನು ಕೇಳುವ ಪಶುಗಳ ಶಬ್ದವೇನು ಅಂದನು.