Judges · chapter 17 · verse 3
Judges 17:3 in Kannada
ಅವನು ಆ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯನ್ನು ತನ್ನ ತಾಯಿಗೆ ತಿರಿಗಿ ಕೊಟ್ಟಾಗ ಅವನ ತಾಯಿ--ನನ್ನ ಮಗನ ನಿಮಿತ್ತ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹವನ್ನೂ ಮಾಡುವದಕ್ಕೆ ನಾನು ನನ್ನ ಕೈಯಲ್ಲಿದ್ದ ಈ ಬೆಳ್ಳಿಯನ್ನು ಕರ್ತನಿಗೆ ಸಂಪೂರ್ಣವಾಗಿ ಪ್ರತಿಷ್ಠಿಸಿದೆನು; ಆದದರಿಂದ ನಾನು ಅದನ್ನು ನಿನಗೆ ತಿರಿಗಿ ಕೊಡುವೆನು ಅಂದಳು.
Avanu aa saavirada nooru roopaayigalashtu belliyannu tanna taayige tirigi kottaaga avana taayi--nanna magana nimitta kettida vigrahavannoo erakada vigrahavannoo maaduvadakke naanu nanna kaiyallidda ee belliyannu kartanige sampoornavaagi pratishthisidenu; aadadarinda naanu adannu ninage tirigi koduvenu andalu.
Judges 17:3 in English
- King James Version (KJV)
- And when he had restored the eleven hundred [shekels] of silver to his mother, his mother said, I had wholly dedicated the silver unto the LORD from my hand for my son, to make a graven image and a molten image: now therefore I will restore it unto thee.
- World English Bible (WEB)
- He restored the eleven hundred pieces of silver to his mother, then his mother said, “I most certainly dedicate the silver to the LORD from my hand for my son, to make a carved image and a molten image. Now therefore I will restore it to you.”
- American Standard Version (ASV)
- And he restored the eleven hundred [pieces] of silver to his mother; and his mother said, I verily dedicate the silver unto Jehovah from my hand for my son, to make a graven image and a molten image: now therefore I will restore it unto thee.
- Bible in Basic English (BBE)
- And he gave back the eleven hundred shekels of silver to his mother, and his mother said, I have made the silver holy to the Lord from me for my son, to make a pictured image and a metal image.
- Darby Translation (DBY)
- And he restored the eleven hundred silver-pieces to his mother; and his mother said, I had dedicated the silver to Jehovah from my hand for my son, to make a graven image and a molten image; and now I will restore it to thee.
- Webster's Bible (WBS)
- And when he had restored the eleven hundred [shekels] of silver to his mother, his mother said, I had wholly dedicated the silver to the LORD from my hand for my son, to make a graven image and a molten image: now therefore I will restore it to thee.
- Young's Literal Translation (YLT)
- And he giveth back the eleven hundred silverlings to his mother, and his mother saith, 'I had certainly sanctified the silver to Jehovah, from my hand, for my son, to make a graven image, and a molten image; and now, I give it back to thee.'
Read in context
- 1ಆದರೆ ಎಫ್ರಾಯಾಮ್ ಬೆಟ್ಟದಲ್ಲಿ ವಿಾಕಎಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು.
- 2ಅವನು ತನ್ನ ತಾಯಿಗೆ--ನಿನ್ನ ಬಳಿಯಿಂದ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯು ತೆಗೆಯಲ್ಪಟ್ಟಾಗ ನೀನು ಆ ಬೆಳ್ಳಿಯನ್ನು ಕುರಿತು ಶಪಿಸಿ ನನ್ನ ಕಿವಿಗಳಲ್ಲಿ ಮಾತನಾಡಿದಿಯಲ್ಲಾ? ಇಗೋ, ಆ ಬೆಳ್ಳಿಯು ನನ್ನ ಬಳಿಯಲ್ಲಿ ಅದೆ; ನಾನು ಅದನ್ನು ತಕ್ಕೊಂಡೆನು ಅಂದನು. ಅದಕ್ಕೆ ಅವನ ತಾಯಿ--ನನ್ನ ಮಗನೇ, ನೀನು ಕರ್ತನಿಂದ ಆಶೀರ್ವದಿಸಲ್ಪಡುವಿ ಅಂದಳು.
- 3ಅವನು ಆ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯನ್ನು ತನ್ನ ತಾಯಿಗೆ ತಿರಿಗಿ ಕೊಟ್ಟಾಗ ಅವನ ತಾಯಿ--ನನ್ನ ಮಗನ ನಿಮಿತ್ತ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹವನ್ನೂ ಮಾಡುವದಕ್ಕೆ ನಾನು ನನ್ನ ಕೈಯಲ್ಲಿದ್ದ ಈ ಬೆಳ್ಳಿಯನ್ನು ಕರ್ತನಿಗೆ ಸಂಪೂರ್ಣವಾಗಿ ಪ್ರತಿಷ್ಠಿಸಿದೆನು; ಆದದರಿಂದ ನಾನು ಅದನ್ನು ನಿನಗೆ ತಿರಿಗಿ ಕೊಡುವೆನು ಅಂದಳು.
- 4ಆದರೆ ಅವನು ಆ ಹಣವನ್ನು ತನ್ನ ತಾಯಿಗೆ ತಿರಿಗಿ ಕೊಟ್ಟನು. ಆಗ ಅವನ ತಾಯಿ ಇನ್ನೂರು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು ಅಕ್ಕಸಾಲಿಗನ ಕೈಯಲ್ಲಿ ಕೊಟ್ಟಳು. ಅವನು ಅವುಗಳಿಂದ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹ ವನ್ನೂ ಮಾಡಿದನು. ಅವು ವಿಾಕನ ಮನೆಯಲ್ಲಿದ್ದವು.
- 5ಈ ವಿಾಕ ಎಂಬ ಮನುಷ್ಯನಿಗೆ ದೇವರುಗಳ ಮನೆ ಇದ್ದದರಿಂದ ಅವನು ಒಂದು ಏಫೋದನ್ನೂ ಪ್ರತಿಮೆಗಳನ್ನೂ ಮಾಡಿ ತನ್ನ ಕುಮಾರರಲ್ಲಿ ಒಬ್ಬನನ್ನು ಪ್ರತಿಷ್ಠೆಮಾಡಿದನು. ಅವನು ಇವನಿಗೆ ಯಾಜಕ ನಾದನು.
Cross references
- Leviticus 19:4 ಯಾಜಕಕಾಂಡ 19:4ನೀವು ವಿಗ್ರಹ ಗಳ ಕಡೆಗೆ ತಿರುಗಿಕೊಳ್ಳಬೇಡಿರಿ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.
- Exodus 20:4 ವಿಮೋಚನಕಾಂಡ 20:4ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು.
- Exodus 20:23 ವಿಮೋಚನಕಾಂಡ 20:23ನನ್ನ ಹೊರತಾಗಿ ಬೆಳ್ಳಿ ಬಂಗಾರದ ದೇವರುಗಳನ್ನೂ ನೀವು ಮಾಡಿಕೊಳ್ಳಬಾರದು.
- Jeremiah 10:8 ಯೆರೆಮೀಯ 10:8ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ.
- Deuteronomy 12:3 ಧರ್ಮೋಪದೇಶಕಾಂಡ 12:3ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು.
- Exodus 34:17 ವಿಮೋಚನಕಾಂಡ 34:17ನೀನು ಎರಕಹೊಯ್ದ ವಿಗ್ರಹಗಳನ್ನು ಮಾಡಿ ಕೊಳ್ಳಬಾರದು.
- Isaiah 40:18–25 ಯೆಶಾಯ 40:18–25ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ? ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ; ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ; ಬೆಳ್ಳಿಯ ಸರಪಣಿಗಳನ್ನು ಹಾಕುವನು. ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳ ಲಾರದ ಬಡವನು ಹುಳುತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ತಯಾರಿಸುವದಕ್ಕೆ ಕುಯುಕ್ತಿಯ ಕೆಲಸಗಾರರನ್ನು ವಿಚಾರಿಸಿಕೊಳ್ಳುವನು. ನಿಮಗೆ ತಿಳಿದಿಲ್ಲವೋ? ನೀವು ಕೇಳಿಲ್ಲವೋ? ಆದಿಯಿಂದಲೇ ನಿಮಗೆ ತಿಳಿಸಲ್ಪಟ್ಟಿಲ್ಲವೋ? ಭೂಮಿ ಯು ಸ್ಥಾಪಿತವಾದಂದಿನಿಂದ ನಿಮಗೆ ಅರ್ಥವಾಗ ಲಿಲ್ಲವೋ? ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ. ಅದು ಪ್ರಭುಗಳನ್ನು ನಿರ್ನಾಮ ಮಾಡುತ್ತದೆ ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡು ತ್ತದೆ. 2 ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು. ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿ ಸಮಾನ ಮಾಡುತ್ತೀರಿ ಎಂದು ಪರಿಶುದ್ಧನಾದವನು ಹೇಳುತ್ತಾನೆ.
- Psalm 115:4–8 ಕೀರ್ತನೆಗಳು 115:4–8ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ. ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ. ಕಿವಿಗಳುಂಟು; ಕೇಳುವದಿಲ್ಲ. ಮೂಗು ಉಂಟು; ಮೂಸುವದಿಲ್ಲ. ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ, ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- John 16:2 ಯೋಹಾನನು 16:2ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
- Isaiah 66:3 ಯೆಶಾಯ 66:3ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
- Isaiah 44:9–20 ಯೆಶಾಯ 44:9–20ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು. ದೇವರನ್ನು ರೂಪಿ ಸುವವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಯಾರು? ಇಗೋ, ಅವನ ಸಂಗಡಿಗರೆಲ್ಲಾ ನಾಚಿಕೆಗೊಳಗಾಗುವರು; ಆ ಕೆಲಸ ದವರು ಮನುಷ್ಯ ಮಾತ್ರದವರೇ; ಅವರೆಲ್ಲರೂ ಒಟ್ಟುಗೂಡಿಕೊಂಡು ನಿಂತುಕೊಳ್ಳಲಿ, ಆದರೂ ಅವರು ಭಯಪಟ್ಟು ಒಟ್ಟಿಗೆ ಲಜ್ಜೆಪಡುವರು. ಕಮ್ಮಾ ರನು ಚಿಮಟದೊಂದಿಗೆ ಬೆಂಕಿಯಲ್ಲಿ ಕೆಲಸ ಮಾಡುತ್ತಾ ಚಮಟಿಗೆಯಿಂದ ಅದನ್ನು ಬಡಿದು ರೂಪಿಸಿ ತನ್ನ ತೋಳಿನ ಬಲದಿಂದ ಕೆಲಸ ಮಾಡುತ್ತಾನೆ; ಹೌದು, ಅವನು ಹಸಿದು ಬಲಹೀನನಾಗಿದ್ದರೂ ನೀರು ಕುಡಿ ಯದೆ ದಣಿಯುತ್ತಾನೆ. ಬಡಗಿಯು ನೂಲನ್ನು ಹಿಡಿದು ಗೆರೆ ಎಳೆದು ಬಾಚಿಯಿಂದ ಸಮಮಾಡಿ, ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾ ರಕ್ಕೆ ತಂದು ಮನೆಯಲ್ಲಿ ವಾಸಿಸ ತಕ್ಕದ್ದಾಗಲೆಂದು ಮನುಷ್ಯನ ಅಂದದಂತೆ ರೂಪಿಸುವನು. ಅರಣ್ಯದ ಮಧ್ಯದಲ್ಲಿರುವ ಮರಗಳಲ್ಲಿ ದೇವದಾರುಗಳನ್ನು ಕಡಿದು; ತುರಾಯಿ, ಅಲ್ಲೊನ್, ಮತ್ತು ಓಕ್ಮರ ಗಳನ್ನು ತನ್ನ ಬಲಕ್ಕೋಸ್ಕರ ತೆಗೆದು ಕೊಳ್ಳುವನು. ಪೀತದಾರವನ್ನು ಅವನು ನೆಡಲು ಮಳೆಯು ಅದನ್ನು ಬೆಳೆಯಿಸುವದು. ಆಗ ಅದು ಮನುಷ್ಯರು ಉರಿಸು ವದಕ್ಕಾಗುವದು; ಅದರಿಂದ ಚಳಿಕಾಯಿಸಿಕೊಳ್ಳು ವನು, ಹೌದು, ಅದನ್ನು ಬೆಂಕಿ ಹಚ್ಚಿ ರೊಟ್ಟಿ ಸುಡು ವನು; ಹೌದು, ಅವನು ಒಂದು ದೇವರನ್ನು ಮಾಡಿ ಅದಕ್ಕೆ ನಮಸ್ಕರಿಸುವನು; ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡಬಿಳುವನು. ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು; ಅದರ ಇನ್ನೊಂದು ಭಾಗದಲ್ಲಿ ಮಾಂಸವನ್ನು ಉಣ್ಣುವನು; ಮಾಂಸವನ್ನು ಸುಟ್ಟು ತೃಪ್ತಿಹೊಂದುವನು; ಹೌದು, ಅವನು ಚಳಿಕಾಯಿಸಿ ಕೊಳ್ಳುತ್ತಾ--ಆಹಾ! ಬೆಂಕಿ ಯನ್ನು ಕಂಡೆ, ಬೆಚ್ಚಗಾಯಿತು ಅಂದುಕೊಳ್ಳುವನು; ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು. ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ. ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು. ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
- Jeremiah 10:3–5 ಯೆರೆಮೀಯ 10:3–5ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ. ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.
Original words (Hebrew)
- restored · H7725שׁוּב shûwb
- hundred · H505אֶלֶף ʼeleph
- silver · H3701כֶּסֶף keçeph
- mother · H517אֵם ʼêm
- mother · H517אֵם ʼêm
- said · H559אָמַר ʼâmar
- wholly · H6942קָדַשׁ qâdash
- dedicated · H6942קָדַשׁ qâdash
- silver · H3701כֶּסֶף keçeph
- hand · H3027יָד yâd
- son · H1121בֵּן bên
- make · H6213עָשָׂה ʻâsâh
- image · H6459פֶּסֶל peçel
- image · H4541מַסֵּכָה maççêkâh
- restore · H7725שׁוּב shûwb