Judges · chapter 21 · verse 1
Judges 21:1 in Kannada
ಆದರೆ ಇಸ್ರಾಯೇಲ್ಯರು ತಮ್ಮಲ್ಲಿ ಯಾವನೂ ತನ್ನ ಮಗಳನ್ನು ಬೆನ್ಯಾವಿಾನ್ಯ ರಿಗೆ ಮದುವೆಮಾಡಿಕೊಡುವದಿಲ್ಲ ಎಂದು ಮಿಚ್ಪೆಯಲ್ಲಿ ಆಣೆಇಟ್ಟರು.
Aadare israayelyaru tammalli yaavanoo tanna magalannu benyaaviాnya rige maduvemaadikoduvadilla endu michpeyalli aaneittaru.
Judges 21:1 in English
- King James Version (KJV)
- Now the men of Israel had sworn in Mizpeh, saying, There shall not any of us give his daughter unto Benjamin to wife.
- World English Bible (WEB)
- Now the men of Israel had sworn in Mizpah, saying, “None of us will give his daughter to Benjamin as a wife.”
- American Standard Version (ASV)
- Now the men of Israel had sworn in Mizpah, saying, There shall not any of us give his daughter unto Benjamin to wife.
- Bible in Basic English (BBE)
- Now the men of Israel had taken an oath in Mizpah, saying, Not one of us will give his daughter as a wife to Benjamin.
- Darby Translation (DBY)
- Now the men of Israel had sworn in Mizpah, saying, There shall not any of us give his daughter to the Benjaminites as wife.
- Webster's Bible (WBS)
- Now the men of Israel had sworn in Mizpeh, saying, There shall not any of us give his daughter to Benjamin for a wife.
- Young's Literal Translation (YLT)
- And the men of Israel have sworn in Mizpeh, saying, 'None of us doth give his daughter to Benjamin for a wife.'
Read in context
- 1ಆದರೆ ಇಸ್ರಾಯೇಲ್ಯರು ತಮ್ಮಲ್ಲಿ ಯಾವನೂ ತನ್ನ ಮಗಳನ್ನು ಬೆನ್ಯಾವಿಾನ್ಯ ರಿಗೆ ಮದುವೆಮಾಡಿಕೊಡುವದಿಲ್ಲ ಎಂದು ಮಿಚ್ಪೆಯಲ್ಲಿ ಆಣೆಇಟ್ಟರು.
- 2ಆದದರಿಂದ ಜನರು ದೇವರ ಮನೆಗೆ ಬಂದು ಅಲ್ಲಿ ದೇವರ ಮುಂದೆ ಸಾಯಂಕಾಲದ ವರೆಗೆ ಇದ್ದು ತಮ್ಮ ಸ್ವರವೆತ್ತಿ ಬಹಳವಾಗಿ ಅತ್ತು--
- 3ಇಸ್ರಾಯೇಲಿನ ದೇವರಾದ ಕರ್ತನೇ ಈಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರ ಕೊರತೆಯಾದ ದ್ದೇನು ಅಂದರು.
Cross references
- Judges 20:1 ನ್ಯಾಯಸ್ಥಾಪಕರು 20:1ಆಗ ಇಸ್ರಾಯೇಲ್ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.
- Acts 23:12 ಅಪೊಸ್ತಲರ ಕೃತ್ಯಗಳು 23:12ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.
- Judges 20:8 ನ್ಯಾಯಸ್ಥಾಪಕರು 20:8ಆಗ ಸಮಸ್ತ ಜನವೂ ಒಬ್ಬ ಮನುಷ್ಯನ ಹಾಗೆ ಎದ್ದು ನಮ್ಮಲ್ಲಿ ಯಾವನೂ ತನ್ನ ಡೇರೆಗೆ ಹೋಗದಿರಲಿ. ಮತ್ತು ತನ್ನ ಮನೆಗೆ ತಿರುಗಕೂಡದು.
- Mark 6:23 ಮಾರ್ಕನು 6:23ಅವನು--ನೀನು ನನ್ನಿಂದ ಯಾವದನ್ನು ಕೇಳಿಕೊಂಡರೂ ಅಂದರೆ ಅದು ನನ್ನ ರಾಜ್ಯದಲ್ಲಿ ಅರ್ಧವಾಗಿದ್ದರೂ ನಾನು ನಿನಗೆ ಕೊಡುತ್ತೇನೆ ಎಂದು ಅವಳಿಗೆ ಆಣೆಯಿಟ್ಟು ಹೇಳಿದನು.
- Ecclesiastes 5:2 ಪ್ರಸಂಗಿ 5:2ನಿನ್ನ ಬಾಯಿಂದ ಆತುರಪಡದಿರು ಮತ್ತು ದೇವರ ಮುಂದೆ ಯಾವದನ್ನು ಉಚ್ಚರಿಸುವದಕ್ಕೆ ನಿನ್ನ ಹೃದಯವು ದುಡುಕದೇ ಇರಲಿ; ದೇವರು ಪರಲೋಕ ದಲ್ಲಿದ್ದಾನೆ; ನೀನು ಭೂಮಿಯ ಮೇಲೆ ಇದ್ದೀ; ಆದ ಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.
- Judges 21:18 ನ್ಯಾಯಸ್ಥಾಪಕರು 21:18ನಾವಾದರೋ ನಮ್ಮ ಕುಮಾರ್ತೆಯರಲ್ಲಿ ಅವರಿಗೆ ಹೆಣ್ಣು ಕೊಡಕೂಡದು. ಯಾಕಂದರೆ, ಬೆನ್ಯಾವಿಾನ್ಯರಿಗೆ ಹೆಣ್ಣು ಕೊಡುವವನು ಶಪಿಸಲ್ಪಡಲೆಂದು ಇಸ್ರಾಯೇ ಲಿನ ಮಕ್ಕಳು ಆಣೆ ಇಟ್ಟುಕೊಂಡಿದ್ದಾರೆ ಅಂದರು.
- 1 Samuel 14:28–29 1 ಸಮುವೇಲನು 14:28–29ಆಗ ಜನರಲ್ಲಿ ಒಬ್ಬನು ಅವನಿಗೆ--ಈ ಹೊತ್ತು ಆಹಾರ ತಿನ್ನುವವನು ಶಪಿಸಲ್ಪಡಲಿ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ ಅಂದನು. ಅದಕ್ಕೆ ಯೋನಾ ತಾನನು--ನನ್ನ ತಂದೆಯು ದೇಶವನ್ನು ಶ್ರಮೆಪಡಿಸಿ ದ್ದಾನೆ. ಇಗೋ, ನಾನು ಜೇನುತುಪ್ಪದಲ್ಲಿ ಸ್ವಲ್ಪ ರುಚಿ ನೋಡಿದ್ದರಿಂದ ನನ್ನ ಕಣ್ಣಗಳು ಹೇಗೆ ಕಳೆಯನ್ನು ಹೊಂದಿದವೆಂದು ನೋಡು.
- Judges 21:7 ನ್ಯಾಯಸ್ಥಾಪಕರು 21:7ನಾವು ನಮ್ಮ ಕುಮಾರ್ತೆಯರಲ್ಲಿ ಒಬ್ಬಳನ್ನಾದರೂ ಅವರಿಗೆ ಕೊಡುವದಿಲ್ಲವೆಂದು ನಾವು ಕರ್ತನ ಮೇಲೆ ಆಣೆ ಇಟ್ಟುಕೊಂಡದ್ದರಿಂದ ಉಳಿದವರಿಗೆ ಹೆಂಡತಿ ಯರು ದೊರಕುವಂತೆ ನಾವು ಅವರಿಗೋಸ್ಕರ ಏನು ಮಾಡೋಣ ಅಂದರು.
- Judges 21:5 ನ್ಯಾಯಸ್ಥಾಪಕರು 21:5ಆದರೆ ಇಸ್ರಾಯೇಲ್ ಮಕ್ಕಳು--ಕರ್ತನ ಬಳಿಗೆ ಸಭೆಯೊಂದಿಗೆ ಇಸ್ರಾಯೇಲಿನ ಸಮಸ್ತ ಗೋತ್ರದಲ್ಲಿ ಬಾರದವರು ಯಾರು ಅಂದರು. ಯಾಕಂದರೆ ಕರ್ತನ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆಇಟ್ಟುಕೊಂಡಿದ್ದರು.
- 1 Samuel 14:24 1 ಸಮುವೇಲನು 14:24ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.
- Judges 20:10 ನ್ಯಾಯಸ್ಥಾಪಕರು 20:10ಆದರೆ ಬೆನ್ಯಾವಿಾನನ ಗೋತ್ರದವರಾದ ಗಿಬೆಯವರು ಇಸ್ರಾ ಯೇಲಿನಲ್ಲಿ ಮಾಡಿದ ಸಮಸ್ತ ಬುದ್ಧಿಹೀನವಾದ ಕೆಲಸಕ್ಕೆ ತಕ್ಕ ಪ್ರಕಾರ ಮಾಡುವ ಹಾಗೆ ನಾವು ಆಹಾರವನ್ನು ತಕ್ಕೊಂಡು ಬರುವದಕ್ಕೆ ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಜನರನ್ನು ತೆಗೆದುಕೊಂಡು ಕಳುಹಿಸುತ್ತೇವೆ.
- Deuteronomy 7:2–3 ಧರ್ಮೋಪದೇಶಕಾಂಡ 7:2–3ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು. ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು.