Judges · chapter 3 · verse 2
Judges 3:2 in Kannada
ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲ್ ಮಕ್ಕಳ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವದಕ್ಕೂ ಕರ್ತನು ಉಳಿಸಿದ ಅನ್ಯಜನಾಂಗಗಳು ಯಾವವಂದರೆ:
Modalu yuddhavannu ariyade idda israayel makkala santatigalavaru adannu kooda kalitukolluvadakkoo kartanu ulisida anyajanaangagalu yaavavandare:
Judges 3:2 in English
- King James Version (KJV)
- Only that the generations of the children of Israel might know, to teach them war, at the least such as before knew nothing thereof;
- World English Bible (WEB)
- only that the generations of the children of Israel might know, to teach them war, at least those who knew nothing of it before:
- American Standard Version (ASV)
- only that the generations of the children of Israel might know, to teach them war, at the least such as beforetime knew nothing thereof:
- Bible in Basic English (BBE)
- Only because of the generations of the children of Israel, for the purpose of teaching them war — only those who up till then had no experience of it;
- Darby Translation (DBY)
- only that the generations of the children of Israel might know war by learning it, at the least those who before had known nothing thereof:
- Webster's Bible (WBS)
- Only that the generations of the children of Israel might know to teach them war, at the least such as before knew nothing of it;)
- Young's Literal Translation (YLT)
- (only for the sake of the generations of the sons of Israel's knowing, to teach them war, only those who formerly have not known them) —
Read in context
- 1ಕಾನಾನ್ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿ ಸುವದಕ್ಕೂ
- 2ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲ್ ಮಕ್ಕಳ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವದಕ್ಕೂ ಕರ್ತನು ಉಳಿಸಿದ ಅನ್ಯಜನಾಂಗಗಳು ಯಾವವಂದರೆ:
- 3ಐದುಮಂದಿ ಪಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಚೀದೋನ್ಯರೂ ಬಾಳ್ಹೆರ್ಮೊನಿನಿಂದ ಹಮಾತಿನ ಪ್ರವೇಶದ ವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾ ಗಿರುವ ಹಿವ್ವಿಯರೂ.
- 4ಇವರನ್ನು ಕರ್ತನು ಮೋಶೆಯ ಮುಖಾಂತರವಾಗಿ ಇಸ್ರಾಯೇಲ್ಯರ ತಂದೆಗಳಿಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಅವರು ಕೇಳುವರೋ ಇಲ್ಲವೋ ಎಂದು ಇವರಿಂದ ಇಸ್ರಾಯೇಲ್ಯರನ್ನು ಪರೀಕ್ಷಿಸುವ ದಕ್ಕೆ ಉಳಿಸಿಬಿಟ್ಟನು.
Cross references
- 2 Timothy 2:3 2 ತಿಮೊಥೆಯನಿಗೆ 2:3ಆದದರಿಂದ ನೀನು ಯೇಸು ಕ್ರಿಸ್ತನ ಒಳ್ಳೇ ಸೈನಿಕನಂತೆ ಶ್ರಮೆಯನ್ನ ನುಭವಿಸು.
- Genesis 3:5 ಆದಿಕಾಂಡ 3:5ನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು.
- Matthew 10:34–39 ಮತ್ತಾಯನು 10:34–39ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ; ಹೇಗಂದರೆ ಮಗನಿಗೂ ಅವನ ತಂದೆಗೂ ಮಗಳಿಗೂ ಆಕೆಯ ತಾಯಿಗೂ ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವದಕ್ಕೆ ನಾನು ಬಂದಿದ್ದೇನೆ. ಒಬ್ಬ ಮನುಷ್ಯನಿಗೆ ಅವನ ಮನೆ ಯವರೇ ವಿರೋಧಿಗಳಾಗಿರುವರು. ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ. ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ. ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು; ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
- Genesis 3:7 ಆದಿಕಾಂಡ 3:7ಆಗ ಅವರಿಬ್ಬರ ಕಣ್ಣುಗಳು ತೆರೆಯಲ್ಪಟ್ಟು ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಕೊಂಡರು; ಅವರು ಅಂಜೂರದ ಎಲೆಗಳನ್ನು ಹೊಲಿದುಕೊಂಡು ತಮಗೆ ತಾವೇ ಉಡುಗೆಗಳನ್ನು ಮಾಡಿಕೊಂಡರು.
- 2 Timothy 4:7 2 ತಿಮೊಥೆಯನಿಗೆ 4:7ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
- John 16:33 ಯೋಹಾನನು 16:33ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- 1 Corinthians 9:26–27 1 ಕೊರಿಂಥದವರಿಗೆ 9:26–27ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದು ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದು ಹೋರಾಡುತ್ತೇನೆ.ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ. ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
- Genesis 2:17 ಆದಿಕಾಂಡ 2:17ಆದರೆ ಒಳ್ಳೇದು ಕೆಟ್ಟದರ ತಿಳುವಳಿಕೆಯನ್ನುಂಟು ಮಾಡುವ ಮರದ ಫಲವನ್ನು ನೀನು ತಿನ್ನಬಾರದು; ಅದನ್ನು ತಿಂದ ದಿನದಲ್ಲಿ ಖಂಡಿತವಾಗಿ ಸಾಯುವಿ ಅಂದನು.
- 2 Chronicles 12:8 2 ಪೂರ್ವಕಾಲವೃತ್ತಾಂತ 12:8ಆದಾಗ್ಯೂ ಅವರು ನನ್ನ ಸೇವೆಯನ್ನೂ ದೇಶಗಳ ಅರಸುಗಳ ಸೇವೆಯನ್ನೂ ತಿಳಿಯುವ ಹಾಗೆ ಅವನಿಗೆ ಸೇವಕರಾಗುವರು.
- 1 Timothy 6:12 1 ತಿಮೊಥೆಯನಿಗೆ 6:12ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.
- Ephesians 6:11–18 ಎಫೆಸದವರಿಗೆ 6:11–18ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ. ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ. ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ. ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ. ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ. ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.