Judges · chapter 6 · verse 8
Judges 6:8 in Kannada
ಕರ್ತನು ಒಬ್ಬ ಪ್ರವಾದಿಯನ್ನು ಇಸ್ರಾ ಯೇಲ್ ಮಕ್ಕಳ ಬಳಿಗೆ ಕಳುಹಿಸಿದನು.
Kartanu obba pravaadiyannu israa yel makkala balige kaluhisidanu.
Judges 6:8 in English
- King James Version (KJV)
- That the LORD sent a prophet unto the children of Israel, which said unto them, Thus saith the LORD God of Israel, I brought you up from Egypt, and brought you forth out of the house of bondage;
- World English Bible (WEB)
- The LORD sent a prophet to the children of Israel; and he said to them, “The LORD, the God of Israel, says, ‘I brought you up from Egypt, and brought you out of the house of bondage.
- American Standard Version (ASV)
- that Jehovah sent a prophet unto the children of Israel: and he said unto them, Thus saith Jehovah, the God of Israel, I brought you up from Egypt, and brought you forth out of the house of bondage;
- Bible in Basic English (BBE)
- The Lord sent a prophet to the children of Israel, who said to them, The Lord the God of Israel, has said, I took you up from Egypt, out of the prison-house;
- Darby Translation (DBY)
- that Jehovah sent a prophet to the children of Israel, who said to them, Thus saith Jehovah the God of Israel: I brought you up from Egypt, and brought you forth out of the house of bondage;
- Webster's Bible (WBS)
- That the LORD sent a prophet to the children of Israel, who said to them, Thus saith the LORD God of Israel, I brought you up from Egypt, and brought you forth from the house of bondage;
- Young's Literal Translation (YLT)
- that Jehovah sendeth a man, a prophet, unto the sons of Israel, and he saith to them, 'Thus said Jehovah, God of Israel, I — I have brought you up out of Egypt, and I bring you out from a house of servants,
Read in context
- 6ಆದಕಾರಣ ಇಸ್ರಾಯೇಲ್ಯರು ಮಿದ್ಯಾನ್ಯರಿಂದ ಬಹಳ ಕುಗ್ಗಿಹೋದರು. ಆಗ ಇಸ್ರಾ ಯೇಲ್ ಮಕ್ಕಳು ಕರ್ತನಿಗೆ ಕೂಗಿಕೊಂಡರು.
- 7ಇಸ್ರಾಯೇಲ್ಯರು ಮಿದ್ಯಾನ್ಯರ ನಿಮಿತ್ತ ಕರ್ತನಿಗೆ ಕೂಗಿದಾಗ
- 8ಕರ್ತನು ಒಬ್ಬ ಪ್ರವಾದಿಯನ್ನು ಇಸ್ರಾ ಯೇಲ್ ಮಕ್ಕಳ ಬಳಿಗೆ ಕಳುಹಿಸಿದನು.
- 9ಅವನು ಅವರಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿದೆನು; ದಾಸತ್ವದ ಮನೆ ಯಿಂದ ಹೊರಡ ಮಾಡಿದೆನು; ಐಗುಪ್ತ್ಯರ ಕೈಯಿಂದ ಲೂ ನಿಮ್ಮನ್ನು ಬಾಧೆಪಡಿಸುವವರೆಲ್ಲರ ಕೈಯಿಂದಲೂ ತಪ್ಪಿಸಿ ಅವರನ್ನು ನಿಮ್ಮ ಮುಂದೆ ಹೊರಗೆಹಾಕಿ ಅವರ ದೇಶವನ್ನು ನಿಮಗೆ ಕೊಟ್ಟೆನು.
- 10ನಿಮಗೆ ನಾನೇ ನಿಮ್ಮ ದೇವರಾದ ಕರ್ತನು; ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡ ಬೇಡಿರಿ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳದೆ ಹೋದಿರಿ ಎಂಬದೇ.
Cross references
- Ezekiel 20:5–32 ಯೆಹೆಜ್ಕೇಲನು 20:5–32ಅವರಿಗೆ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲನ್ನು ಆದುಕೊಂಡು ಯಾಕೋಬನ ಮನೆಯ ವಂಶದವರಿಗೆ ನನ್ನ ಕೈಯೆತ್ತಿ ಮತ್ತು ಐಗುಪ್ತ ದೇಶದಲ್ಲಿ ಅವರಿಗೆ ನನ್ನನ್ನು ತಿಳಿಯಪಡಿಸಿದ ದಿನದಲ್ಲಿ ನಾನು ಅವರಿಗೆ ನನ್ನ ಕೈಯೆತ್ತಿ ನಿಮ್ಮ ದೇವರಾದ ಕರ್ತನು ನಾನೇ ಎಂದು ಅವರಿಗೆ ಹೇಳಿದಾಗ, ನಾನು ಅವರಿಗೆ ನನ್ನ ಕೈಯೆತ್ತಿ--ಐಗುಪ್ತ ದೇಶದಿಂದ ಹೊರಗೆ ತಂದು ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ಎಲ್ಲಾ ದೇಶಗಳಿಗೂ ಅವರನ್ನು ಆ ದಿವಸದಲ್ಲಿ ಕರೆತಂದೆನು. ಆಮೇಲೆ ನಾನು ಅವರಿಗೆ ನಿಮ್ಮಲ್ಲಿ ಒಬ್ಬೊಬ್ಬನು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಿ. ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಅಶುದ್ಧಪಡಿಸಿ ಕೊಳ್ಳಬೇಡಿರಿ. ನಿಮ್ಮ ದೇವರಾದ ಕರ್ತನು ನಾನಾಗಿರು ವೆನು ಅಂದೆನು. ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು; ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ; ಅವರು ಐಗುಪ್ತದ ವಿಗ್ರಹಗಳನ್ನು ಬಿಡಲಿಲ್ಲ; ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಐಗುಪ್ತದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು. ಆದರೆ ಅವರು ಯಾರ ಮಧ್ಯದಲ್ಲಿದ್ದರೋ ನಾನು ಯಾರ ಮುಂದೆ ಅವರನ್ನು ಐಗುಪ್ತದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯ ಪಡಿಸಿದೆನೋ? ಆ ಅನ್ಯ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸ ಮಾಡಿದೆನು; ಆದದರಿಂದ ನಾನು ಅವರನ್ನು ಐಗುಪ್ತ ದೇಶದಿಂದ ಹೊರಗೆ ಕರತಂದು ಅರಣ್ಯದೊಳಗೆ ಅವರನ್ನು ಬರಮಾಡಿದೆನು. ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು. ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು. ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು. ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ ಆ ಅನ್ಯಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು. ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು. ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರ ಮಾಡಿದರು. ಆದರೂ ಅವರನ್ನು ನಾನು ನಾಶಮಾಡದ ಹಾಗೆ ನನ್ನ ಕಣ್ಣು ಕನಿಕರಿಸಿತು; ನಾನು ಅವರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ಮುಗಿಸಿಬಿಡ ಲಿಲ್ಲ. ಆದರೆ ನಾನು ಅರಣ್ಯದಲ್ಲಿ ಅವರ ಮಕ್ಕಳಿಗೆ ಹೇಳಿದ್ದೇನಂದರೆ--ನಿಮ್ಮ ತಂದೆಗಳ ನಿಯಮಗಳಲ್ಲಿ ನಡೆಯಬೇಡಿರಿ, ಅವರ ನ್ಯಾಯಗಳನ್ನು ಅನುಸರಿಸ ಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿರಿ; ನಾನೇ ಕರ್ತನೂ ನಿಮ್ಮ ದೇವರೂ ಆಗಿದ್ದೇನೆ ನನ್ನ ನಿಯಮಗಳಲ್ಲಿಯೇ ನಡೆ ಯಿರಿ ನ್ಯಾಯಗಳನ್ನು ಕೈಕೊಂಡು ಅವುಗಳನ್ನೇ ಮಾಡಿರಿ; ನನ್ನ ಸಬ್ಬತ್ತುಗಳನ್ನು ಪರಿಶುದ್ಧಮಾಡಿರಿ ನಾನೇ ನಿಮ್ಮ ದೇವರಾದ ಕರ್ತನು ಎಂದು ಅವು ನಿಮಗೂ ನನಗೂ ನೀವು ತಿಳಿಯುವ ಹಾಗೆ ಗುರುತುಗಳಾಗಿರುವವು. ಆದಾಗ್ಯೂ ಮಕ್ಕಳು ನನಗೆ ವಿರೋಧವಾಗಿ ತಿರುಗಿ ಬಿದ್ದರು; ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ನನ್ನ ನ್ಯಾಯಗಳನ್ನು ಕೈಕೊಂಡುಮಾಡಲಿಲ್ಲ; ನನ್ನ ಸಬ್ಬತ್ತುಗಳನ್ನು ಅಪವಿತ್ರ ಪಡಿಸಿದಾಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ ನನ್ನ ಕೋಪ ವನ್ನು ಅರಣ್ಯದಲ್ಲಿ ಅವರ ಮೇಲೆ ತೀರಿಸಿಬಿಡುವೆ ನೆಂದೂ ಹೇಳಿದೆನು. ಆದಾಗ್ಯೂ ನಾನು ನನ್ನ ಕೈಯನ್ನು ಹಿಂತೆಗೆದು ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಹೊರಗೆ ಬರಮಾಡಿದೆನೋ ಆ ಅನ್ಯಜನಾಂಗ ಗಳ ದೃಷ್ಟಿಯಲ್ಲಿ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಕೆಲಸ ಮಾಡಿದೆನು. ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸುತ್ತೇನೆಂದೂ ದೇಶಗಳಲ್ಲಿ ಹರಡಿಸುತ್ತೇನೆಂದೂ ಅರಣ್ಯದಲ್ಲಿ ಅವರ ಮೇಲೆ ಕೈ ಎತ್ತಿದೆನು; ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದರು; ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು. ಆದಕಾರಣ ನಾನು ಅವರಿಗೆ ಅಹಿತವಾದ ನಿಯಮಗಳನ್ನೂ ಅವರು ಬದುಕಬಾರದ ನ್ಯಾಯಗಳನ್ನೂ ಕೊಟ್ಟೆನು. ನಾನೇ ಕರ್ತನೆಂದು ಅವರು ತಿಳಿಯುವ ಹಾಗೆ ಅವರು ತಮ್ಮ ಚೊಚ್ಚಲು ಮಕ್ಕಳನ್ನು ಬೆಂಕಿಗೆ ಆಹುತಿಮಾಡಿದ್ದರಿಂದ ಅವರು ಹಾಳಾಗಿ ಬಿದ್ದಿರುವಂತೆ ನಾನು ಅವರ ಅರ್ಪಣೆಗಳನ್ನು ಅಪವಿತ್ರಪಡಿಸಿದೆನು. ಆದದರಿಂದ ಮನುಷ್ಯಪುತ್ರನೇ, ನೀನು ಇಸ್ರಾ ಯೇಲಿನ ಮನೆತನದವರ ಸಂಗಡ ಮಾತಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದೇನಂದರೆ, ನನಗೆ ವಿರುದ್ಧವಾಗಿ ಬಹಳ ಅಪರಾಧ ಮಾಡಿದ್ದರಲ್ಲಿ ನಿಮ್ಮ ಪಿತೃಗಳು ನನ್ನನ್ನು ದೂಷಿಸಿದರು. ನಾನು ಕೈ ಎತ್ತಿ ಅವರಿಗೆ ಕೊಟ್ಟ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಗಾತ್ರವಾದ ಮರಗಳನ್ನೂ ನೋಡಿ ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಅಲ್ಲಿ ರೇಗಿಸುವ ತಮ್ಮ ಕಾಣಿಕೆಗಳನ್ನರ್ಪಿಸಿ ಸುವಾಸನೆ ಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು. ಆಗ ನಾನು ಅವರಿಗೆ ಹೇಳಿದ್ದೇನಂದರೆ--ನೀವು ಹೋಗುವ ಈ ಎತ್ತರವಾದ ಸ್ಥಳವು ಏನು? ಅದಕ್ಕೆ ಈ ದಿನದ ವರೆಗೂ ಬಾ--ಮಾ ಎಂದು ಕರೆಯುವರು. ಆದದರಿಂದ ನೀನು ಇಸ್ರಾಯೇಲಿನ ಮನೆತನದವರಿಗೆ ಹೇಳಬೇಕಾ ದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಅಪವಿತ್ರ ಪಡಿಸಿಕೊಳ್ಳುತ್ತೀರೋ? ಅವರ ಅಸಹ್ಯವಾದವುಗಳ ಪ್ರಕಾರ ವ್ಯಭಿಚಾರಮಾಡುತ್ತೀರೋ? ನಿಮ್ಮ ದಾನ ಗಳನ್ನು ತರುವಾಗಲೂ ನಿಮ್ಮ ಕುಮಾರರನ್ನು ಬೆಂಕಿ ಯಿಂದ ದಾಟಿಸುವಾಗಲೂ ನೀವು ಇಂದಿನ ವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿ ಕೊಳ್ಳುತ್ತೀರಿ; ಹೀಗಾದರೆ ನಾನು ನಿಮ್ಮಿಂದ ವಿಚಾರಿಸ ಲ್ಪಟ್ಟೆನೊ? ನನ್ನ ಜೀವದಾಣೆ ನಾನು ನಿಮ್ಮಿಂದ ವಿಚಾರಿಸ ಲ್ಪಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ; ನಾವು ಅನ್ಯಜನಾಂಗಗಳ ಹಾಗೆಯೂ ದೇಶದಲ್ಲಿ ರುವ ಕುಟುಂಬಗಳ ಹಾಗೆಯೂ ಇದ್ದು ಮರಕ್ಕೂ ಕಲ್ಲಿಗೂ ಸೇವೆ ಮಾಡುತ್ತೇವೆಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟು ಮಾತ್ರಕ್ಕೂ ಆಗದು.
- Psalm 136:10–16 ಕೀರ್ತನೆಗಳು 136:10–16ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ. ಕೆಂಪು ಸಮುದ್ರವನ್ನು ವಿಭಾಗಿಸಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಇಸ್ರಾಯೇಲನ್ನು ಅದರ ನಡುವೆ ನಡಿಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ತನ್ನ ಜನರನ್ನು ಅರಣ್ಯದಲ್ಲಿ ನಡೆಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Isaiah 63:9–14 ಯೆಶಾಯ 63:9–14ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು. ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು. ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ? ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ? ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು. ಪಶುವು ತಗ್ಗಿಗೆ ಇಳಿ ಯುವ ಪ್ರಕಾರ, ಕರ್ತನ ಆತ್ಮನು ಅವರಿಗೆ ವಿಶ್ರಾಂತಿ ಕೊಟ್ಟನು; ಈ ಪ್ರಕಾರ ನೀನು ನಿನಗೆ ಮಹಿಮೆ ಯುಳ್ಳ ಹೆಸರನ್ನು ಉಂಟು ಮಾಡುವ ಹಾಗೆ, ನಿನ್ನ ಜನರನ್ನು ನಡಿಸಿದಿ.
- Judges 2:1–3 ನ್ಯಾಯಸ್ಥಾಪಕರು 2:1–3ಕರ್ತನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು--ನಾನು ನಿಮ್ಮನ್ನು ಐಗುಪ್ತ ದಿಂದ ಬರಮಾಡಿ ನಿಮ್ಮ ತಂದೆಗಳಿಗೆ ಆಣೆಯಿಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು. ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ ಅವರ ಬಲಿಪೀಠಗಳನ್ನು ಕೆಡವಿ ಬಿಡಿರಿ ಎಂದು ಹೇಳಿದೆನು. ಆದರೆ ನೀವು ನನ್ನ ಮಾತಿಗೆ ವಿಧೇಯರಾಗಲಿಲ್ಲ; ಹೀಗೆ ಯಾಕೆ ಮಾಡಿ ದಿರಿ? ಆದದರಿಂದ--ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು; ಅವರ ದೇವರುಗಳು ನಿಮಗೆ ಉರುಲಾಗುವವೆಂದು ನಾನು ಹೇಳಿದ್ದೆನು.
- Nehemiah 9:9–12 ನೆಹೆಮೀಯ 9:9–12ಇದಲ್ಲದೆ ಐಗುಪ್ತದಲ್ಲಿ ನಮ್ಮ ಪಿತೃಗಳ ದೀನ ಸ್ಥಿತಿಯನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿ. ಫರೋಹನ ಮೇಲೆಯೂ ಅವನ ಸಮಸ್ತ ಸೇವಕರ ಮೇಲೆಯೂ ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚ ಕಕಾರ್ಯಗಳನ್ನೂ ಅದ್ಭುತಗಳನ್ನೂ ತೋರಿಸಿದಿ. ಯಾಕಂದರೆ ಇವರು ಅವರಿಗೆ ಅಹಂಕಾರಿಗಳಾಗಿ ನಡೆದರೆಂದು ತಿಳಿದಿದ್ದಿ. ಈ ಪ್ರಕಾರವೇ ನೀನು ಇಂದಿನ ಹಾಗೆ ನಿನಗೆ ಹೆಸರನ್ನು ಮಾಡಿಕೊಂಡಿದ್ದೀ. ನೀನು ಅವರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ ಅವರು ಸಮುದ್ರದ ಮಧ್ಯದಲ್ಲಿ ಒಣ ಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನ ಹಾಗೆ ಮಹಾ ಜಲರಾಶಿಗಳಲ್ಲಿ ದೊಬ್ಬಿ ಬಿಟ್ಟಿ. ಇದಲ್ಲದೆ ಹಗಲಿನಲ್ಲಿ ಮೇಘ ಸ್ತಂಭ ದಿಂದಲೂ ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭ ದಿಂದಲೂ ಅವರನ್ನು ನಡಿಸಿದಿ.
Original words (Hebrew)
- sent · H7971שָׁלַח shâlach
- prophet · H376אִישׁ ʼîysh
- children · H1121בֵּן bên
- Israel · H3478יִשְׂרָאֵל Yisrâʼêl
- said · H559אָמַר ʼâmar
- saith · H559אָמַר ʼâmar
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- up · H5927עָלָה ʻâlâh
- Egypt · H4714מִצְרַיִם Mitsrayim
- forth · H3318יָצָא yâtsâʼ
- house · H1004בַּיִת bayith
- bondage · H5650עֶבֶד ʻebed