Judges · chapter 8 · verse 23
Judges 8:23 in Kannada
ಆಗ ಇಸ್ರಾಯೇಲ್ ಜನರು ಗಿದ್ಯೋನನಿಗೆನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿಸಿದ್ದರಿಂದ ನೀನೂ ನಿನ್ನ ಕುಮಾರನೂ ಕುಮಾರನ ಕುಮಾರನೂ ನಮ್ಮನ್ನು ಆಳಬೇಕು ಅಂದರು. ಗಿದ್ಯೋ ನನು ಅವರಿಗೆ ನಾನು ನಿಮ್ಮನ್ನು ಆಳುವದಿಲ್ಲ, ನನ್ನ ಮಗನೂ ನಿಮ್ಮನ್ನು ಆಳುವದಿಲ್ಲ, ಕರ್ತನೇ ನಿಮ್ಮನ್ನು ಆಳುವನು ಅಂದನು.
Aaga israayel janaru gidyonanigeneenu nammannu midyaanyara kaiyinda tappisi rakshisiddarinda neenoo ninna kumaaranoo kumaarana kumaaranoo nammannu aalabeku andaru. Gidyo nanu avarige naanu nimmannu aaluvadilla, nanna maganoo nimmannu aaluvadilla, kartane nimmannu aaluvanu andanu.
Judges 8:23 in English
- King James Version (KJV)
- And Gideon said unto them, I will not rule over you, neither shall my son rule over you: the LORD shall rule over you.
- World English Bible (WEB)
- Gideon said to them, “I will not rule over you, neither shall my son rule over you. The LORD shall rule over you.”
- American Standard Version (ASV)
- And Gideon said unto them, I will not rule over you, neither shall my son rule over you: Jehovah shall rule over you.
- Bible in Basic English (BBE)
- But Gideon said to them, I will not be a ruler over you, and my son will not be a ruler over you: it is the Lord who will be ruler over you.
- Darby Translation (DBY)
- And Gideon said to them, I will not rule over you, neither shall my son rule over you: Jehovah will rule over you.
- Webster's Bible (WBS)
- And Gideon said to them, I will not rule over you, neither shall my son rule over you: the LORD shall rule over you.
- Young's Literal Translation (YLT)
- And Gideon saith unto them, 'I do not rule over you, nor doth my son rule over you; Jehovah doth rule over you.'
Read in context
- 21ಆಗ ಜೆಬ ಹನೂ ಚಲ್ಮುನ್ನನೂ--ನೀನು ಎದ್ದು ನಮ್ಮ ಮೇಲೆ ಬೀಳು; ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವದು ಅಂದರು.
- 22ಗಿದ್ಯೋನನು ಎದ್ದು ಜೆಬಹನನ್ನೂ ಚಲ್ಮುನ್ನನನ್ನೂ ಕೊಂದುಹಾಕಿ ಅವರ ಒಂಟೆಗಳ ಕುತ್ತಿಗೆಗಳಲ್ಲಿ ಇದ್ದ ಆಭರಣಗಳನ್ನು ತೆಗೆದು ಕೊಂಡನು.
- 23ಆಗ ಇಸ್ರಾಯೇಲ್ ಜನರು ಗಿದ್ಯೋನನಿಗೆನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿಸಿದ್ದರಿಂದ ನೀನೂ ನಿನ್ನ ಕುಮಾರನೂ ಕುಮಾರನ ಕುಮಾರನೂ ನಮ್ಮನ್ನು ಆಳಬೇಕು ಅಂದರು. ಗಿದ್ಯೋ ನನು ಅವರಿಗೆ ನಾನು ನಿಮ್ಮನ್ನು ಆಳುವದಿಲ್ಲ, ನನ್ನ ಮಗನೂ ನಿಮ್ಮನ್ನು ಆಳುವದಿಲ್ಲ, ಕರ್ತನೇ ನಿಮ್ಮನ್ನು ಆಳುವನು ಅಂದನು.
- 24ಗಿದ್ಯೋನನು--ಒಂದು ಬಿನ್ನಹವನ್ನು ನಾನು ನಿಮಗೆ ಮಾಡುತ್ತೇನೆ. ಪ್ರತಿ ಯೊಬ್ಬನು ಕೊಳ್ಳೆ ಹೊಡೆದ ವಾಲೆಗಳನ್ನು ನನಗೆ ಕೊಡಿರಿ ಅಂದನು. (ಯಾಕಂದರೆ ಅವರು ಇಷ್ಮಾಯೇ ಲ್ಯರಾಗಿದ್ದದರಿಂದ ಅವರಿಗೆ ಬಂಗಾರದ ಮುರುವು ಗಳಿದ್ದವು).
- 25ಅವರು--ನಾವು ಇಷ್ಟಪೂರ್ವಕವಾಗಿ ಕೊಡುವೆವು ಎಂದು ಹೇಳಿ ಒಂದು ವಸ್ತ್ರವನ್ನು ಹಾಸಿ ಅಲ್ಲಿ ಅವರವರು ಕೊಳ್ಳೆ ಹೊಡೆದ ವಾಲೆಗಳನ್ನು ಹಾಕಿದರು.
Cross references
- Isaiah 33:22 ಯೆಶಾಯ 33:22ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
- 1 Samuel 12:12 1 ಸಮುವೇಲನು 12:12ಆದರೆ ಅಮ್ಮೋನನ ಮಕ್ಕಳ ಅರಸನಾದ ನಾಹಾಷನು ನಿಮಗೆ ವಿರೋಧವಾಗಿ ಯುದ್ಧ ಮಾಡಲು ಬರುವದನ್ನು ನೋಡಿದಾಗ ನಿಮ್ಮ ದೇವರಾದ ಕರ್ತನೇ ನಿಮಗೆ ಅರಸನಾಗಿದ್ದರೂ ನೀವು ನನಗೆ--ಹಾಗೆ ಬೇಡ; ಒಬ್ಬ ಅರಸನು ನಮ್ಮನ್ನು ಆಳಬೇಕು ಅಂದಿರಿ.
- 1 Samuel 10:19 1 ಸಮುವೇಲನು 10:19ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು.
- 2 Corinthians 1:24 2 ಕೊರಿಂಥದವರಿಗೆ 1:24ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
- Judges 10:18 ನ್ಯಾಯಸ್ಥಾಪಕರು 10:18ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು.
- 1 Samuel 8:6–7 1 ಸಮುವೇಲನು 8:6–7ಆದರೆ--ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು ಎಂದು ಅವರು ಹೇಳಿದ ವಾರ್ತೆಯು ಸಮುವೇಲನಿಗೆ ಮನ ನೋಯಿಸುವಂತದ್ದಾಗಿತ್ತು. ಅವನು ಕರ್ತನಿಗೆ ಪ್ರಾರ್ಥನೆ ಮಾಡಿದನು. ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ.
- Judges 2:18 ನ್ಯಾಯಸ್ಥಾಪಕರು 2:18ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.
- 1 Peter 5:3 1 ಪೇತ್ರನು 5:3ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.
- Judges 11:9–11 ನ್ಯಾಯಸ್ಥಾಪಕರು 11:9–11ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ ಅಮ್ಮೋನನ ಮಕ್ಕಳಿಗೆ ವಿರೋ ಧವಾಗಿ ಯುದ್ಧಮಾಡುವದಕ್ಕೆ ನೀವು ತಿರಿಗಿ ನನ್ನನ್ನು ಮನೆಗೆ ಕರತಂದರೆ ಮತ್ತು ಕರ್ತನು ಅವರನ್ನು ನನ್ನ ಮುಂದೆ ಒಪ್ಪಿಸಿಕೊಟ್ಟರೆ ನಾನು ನಿಮಗೆ ನಾಯಕ ನಾಗಿರುವೆನೋ ಅನ್ನಲು ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನಾವು ಈ ನಿನ್ನ ಮಾತಿನ ಹಾಗೆಯೇ ಮಾಡದೆ ಹೋದರೆ ಕರ್ತನು ನಮ್ಮ ಮತ್ತು ನಿನ್ನ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದರು. ಆಗ ಯೆಫ್ತಾ ಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನ ನ್ನಾಗಿಯೂ ಅಧಿಪತಿಯನ್ನಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಕರ್ತನ ಮುಂದೆ ಹೇಳಿದನು.
- Isaiah 63:19 ಯೆಶಾಯ 63:19ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.
- Luke 22:24–27 ಲೂಕನು 22:24–27ಇದಲ್ಲದೆ ತಮ್ಮೊಳಗೆ ಯಾವನು ಅತಿ ದೊಡ್ಡವ ನೆಂದು ಎಣಿಸಲ್ಪಡುವನು ಎಂದು ಅವರಲ್ಲಿ ವಿವಾದವು ಸಹ ಇತ್ತು. ಆಗ ಆತನು ಅವರಿಗೆ--ಅನ್ಯಜನಗಳ ಅರಸರು ಅವರ ಮೇಲೆ ದೊರೆತನ ಮಾಡುತ್ತಾರೆ; ಅವರ ಮೇಲೆ ಅಧಿಕಾರವನ್ನು ನಡಿಸುವವರು ಉಪ ಕಾರಿಗಳೆಂದು ಕರೆಯಲ್ಪಡುತ್ತಾರೆ. ಆದರೆ ನೀವು ಹಾಗಿರಬಾರದು. ನಿಮ್ಮೊಳಗೆ ಅತಿದೊಡ್ಡವನಾಗಿರು ವವನು ಚಿಕ್ಕವನಂತೆ ಇರಲಿ; ಮುಖ್ಯಸ್ಥನಾಗಿರುವವನು ಸೇವೆ ಮಾಡುವವನಂತೆ ಇರಲಿ. ಹಾಗಾದರೆ ಯಾರು ದೊಡ್ಡವರು? ಊಟಕ್ಕೆ ಕೂತುಕೊಂಡಿರುವ ವನೋ ಇಲ್ಲವೆ ಸೇವೆ ಮಾಡುವವನೋ? ಊಟಕ್ಕೆ ಕೂತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.