Judges · chapter 9 · verse 53
Judges 9:53 in Kannada
ಆದರೆ ಒಬ್ಬ ಸ್ತ್ರೀಯು ಒಂದು ಬೀಸುವ ಕಲ್ಲಿನ ತುಂಡನ್ನು ಅಬೀಮೆಲೆಕನ ತಲೆಯ ಮೇಲೆ ಹಾಕಿ; ಅದರಿಂದ ಅವನ ತಲೆಯನ್ನು ಒಡೆದುಹಾಕಿದಳು.
Aadare obba streeyu ondu beesuva kallina tundannu abeemelekana taleya mele haaki; adarinda avana taleyannu odeduhaakidalu.
Judges 9:53 in English
- King James Version (KJV)
- And a certain woman cast a piece of a millstone upon Abimelech’s head, and all to brake his skull.
- World English Bible (WEB)
- A certain woman cast an upper millstone on Abimelech’s head, and broke his skull.
- American Standard Version (ASV)
- And a certain woman cast an upper millstone upon Abimelech’s head, and brake his skull.
- Bible in Basic English (BBE)
- But a certain woman sent a great stone, such as is used for crushing grain, on to the head of Abimelech, cracking the bone.
- Darby Translation (DBY)
- and a woman cast the upper stone of a handmill on Abimelech's head, and crushed his skull.
- Webster's Bible (WBS)
- And a certain woman cast a piece of of a millstone upon Abimelech's head, and broke his skull.
- Young's Literal Translation (YLT)
- and a certain woman doth cast a piece of a rider on the head of Abimelech, and breaketh his skull,
Read in context
- 51ಆದರೆ ಪಟ್ಟಣದ ಒಳಗೆ ಬಲವಾದ ಗೋಪುರ ಇತ್ತು; ಆ ಪಟ್ಟಣದಲ್ಲಿರುವ ಸಮಸ್ತ ಸ್ತ್ರೀ ಪುರುಷರು ಅಲ್ಲಿಗೆ ಓಡಿಹೋಗಿ ಅದರಲ್ಲಿ ಹೊಕ್ಕು ತಮ್ಮ ಹಿಂದಿನಿಂದ ಬಾಗಲನ್ನು ಮುಚ್ಚಿ ಗೋಪುರದ ಮೇಲೆ ಏರಿದರು.
- 52ಆಗ ಅಬೀಮೆಲೆಕನು ಆ ಗೋಪುರಕ್ಕೆ ಬಂದು ಅದರ ವಿರುದ್ಧ ಯುದ್ಧಮಾಡಿ ಗೋಪುರದ ಬಾಗಲನ್ನು ಸುಟ್ಟು ಬಿಡುವದಕ್ಕೆ ಅದರ ಬಳಿಗೆ ಬಂದನು.
- 53ಆದರೆ ಒಬ್ಬ ಸ್ತ್ರೀಯು ಒಂದು ಬೀಸುವ ಕಲ್ಲಿನ ತುಂಡನ್ನು ಅಬೀಮೆಲೆಕನ ತಲೆಯ ಮೇಲೆ ಹಾಕಿ; ಅದರಿಂದ ಅವನ ತಲೆಯನ್ನು ಒಡೆದುಹಾಕಿದಳು.
- 54ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕ ನನ್ನು ಕರೆದು ಅವನಿಗೆ--ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಕತ್ತಿಯನ್ನು ಇರಿದು ನನ್ನನ್ನು ಕೊಲ್ಲು ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು; ಅವನು ಸತ್ತನು.
- 55ಅಬೀಮೆಲೆಕನು ಸತ್ತುಹೋದದ್ದನ್ನು ಇಸ್ರಾಯೇಲ್ ಮನುಷ್ಯರು ನೋಡಿದಾಗ ಅವರವರು ತಮ್ಮ ಸ್ಥಳಗಳಿಗೆ ಹೋದರು.
Cross references
- 2 Samuel 11:21 2 ಸಮುವೇಲನು 11:21ಅವರು ಗೋಡೆ ಯಿಂದ ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದ ವರಾರು? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ ಅವನು ಸತ್ತನಲ್ಲವೇ? ನೀವು ಗೋಡೆಗೆ ಇಷ್ಟು ಸವಿಾಪವಾಗಿ ಹೋದದ್ದೇನು ಎಂದು ನಿನ್ನನ್ನು ಕೇಳಿದರೆ ಆಗ ನೀನು--ನಿನ್ನ ಸೇವಕ ನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು ಅಂದನು.
- Job 31:3 ಯೋಬನು 31:3ದುಷ್ಟನಿಗೆ ನಾಶವಿಲ್ಲವೋ? ಅಪಕಾರ ಮಾಡುವವರಿಗೆ ಕಠಿಣ ಶಿಕ್ಷೆಯಿಲ್ಲವೋ?
- Jeremiah 49:20 ಯೆರೆಮೀಯ 49:20ಆದದರಿಂದ ಕರ್ತನು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಅವನು ಮಾಡಿದ ಯೋಚನೆಗಳನ್ನೂ ಕೇಳಿರಿ. ನಿಶ್ಚಯವಾಗಿ ಮಂದೆಯ ಮರಿಗಳು ಅವರನ್ನು ಎಳೆಯುವವು, ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡು ವನು.
- Judges 9:20 ನ್ಯಾಯಸ್ಥಾಪಕರು 9:20ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನ ಜನರನ್ನೂ ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನ ರಿಂದಲೂ ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ ಅಂದನು.
- Jeremiah 50:45 ಯೆರೆಮೀಯ 50:45ಆದದರಿಂದ ಕರ್ತನು ಬಾಬೆಲಿಗೆ ವಿರೋಧವಾಗಿ ಮಾಡಿದ ಆಲೋ ಚನೆಯನ್ನೂ ಆತನು ಕಸ್ದೀಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಚನೆಗಳನ್ನೂ ಕೇಳಿರಿ; ನಿಶ್ಚಯವಾಗಿ ಮಂದೆಯಲ್ಲಿ ಚಿಕ್ಕವುಗಳು ಅವರನ್ನು ಎಳೆಯುವವು; ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡುವನು.ಬಾಬೆಲ್ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.
- Judges 9:15 ನ್ಯಾಯಸ್ಥಾಪಕರು 9:15ಮುಳ್ಳಿನ ಗಿಡವು ಮರಗಳಿಗೆ--ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವದು ಸತ್ಯ ವಾದರೆ ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು ಲೆಬನೋನಿನ ದೇವದಾರುಗಳನ್ನು ದಹಿಸಿಬಿಡಲಿ ಅಂದಿತು.
- 2 Samuel 20:21 2 ಸಮುವೇಲನು 20:21ಕಾರ್ಯವು ಹಾಗಲ್ಲ; ಬಿಕ್ರೀಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯಾಮ್ ಬೆಟ್ಟದವನಾದ ಒಬ್ಬ ಮನುಷ್ಯನು ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ; ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು ಅಂದನು. ಆ ಸ್ತ್ರೀಯು ಯೋವಾಬನಿಗೆ--ಇಗೋ, ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಬಳಿಗೆ ಹಾಕಲ್ಪಡುವದು ಅಂದಳು.