Lamentations · chapter 1 · verse 12
Lamentations 1:12 in Kannada
ಹಾದು ಹೋಗುವ ವರೆಲ್ಲರೇ, ಇದು ನಿಮಗೆ ಏನೂ ಅಲ್ಲವೋ? ಇಗೋ, ಕರ್ತನ ಕೋಪ ಉರಿಯುವ ದಿನದಲ್ಲಿ ನನ್ನನ್ನು ಸಂಕಟಪಡಿಸಿದ ನನ್ನ ದುಃಖದ ಹಾಗೆ ಬೇರೆ ಯಾವ ದುಃಖವಾದರೂ ಇದ್ದರೆ ನೋಡಿರಿ.
Haadu hoguva varellare, idu nimage enoo allavo? Igo, kartana kopa uriyuva dinadalli nannannu sankatapadisida nanna duhkhada haage bere yaava duhkhavaadaroo iddare nodiri.
Lamentations 1:12 in English
- King James Version (KJV)
- [Is it] nothing to you, all ye that pass by? behold, and see if there be any sorrow like unto my sorrow, which is done unto me, wherewith the LORD hath afflicted [me] in the day of his fierce anger.
- World English Bible (WEB)
- “Is it nothing to you, all you who pass by? Look, and see if there is any sorrow like my sorrow, which is brought on me, with which the LORD has afflicted me in the day of his fierce anger.
- American Standard Version (ASV)
- Is it nothing to you, all ye that pass by? Behold, and see if there be any sorrow like unto my sorrow, which is brought upon me, Wherewith Jehovah hath afflicted [me] in the day of his fierce anger.
- Bible in Basic English (BBE)
- Come to me, all you who go by! Keep your eyes on me, and see if there is any pain like the pain of my wound, which the Lord has sent on me in the day of his burning wrath.
- Darby Translation (DBY)
- Is it nothing to you, all ye that pass by? Behold, and see if there be any sorrow like unto my sorrow, which is done unto me, whom Jehovah hath afflicted in the day of his fierce anger.
- Webster's Bible (WBS)
- [Is it] nothing to you, all ye that pass by? behold, and see if there is any sorrow like my sorrow, which hath fallen upon me, with which the LORD hath afflicted [me] in the day of his fierce anger.
- Young's Literal Translation (YLT)
- [Is it] nothing to you, all ye passing by the way? Look attentively, and see, If there is any pain like my pain, That He is rolling to me? Whom Jehovah hath afflicted In the day of the fierceness of His anger.
Read in context
- 10ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.
- 11ಅವಳ ಜನರೆಲ್ಲಾ ನಿಟ್ಟುಸಿರು ಬಿಡುತ್ತಾರೆ. ಅವರು ರೊಟ್ಟಿಯನ್ನು ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು ತಮ್ಮ ರಮ್ಯವಾದವುಗಳನ್ನು ಆಹಾರ ಕ್ಕಾಗಿ ಕೊಟ್ಟಿದ್ದಾರೆ. ಓ ಕರ್ತನೇ, ನೋಡು, ಲಕ್ಷಿಸು; ನಾನು ಭ್ರಷ್ಠಳಾದೆನು.
- 12ಹಾದು ಹೋಗುವ ವರೆಲ್ಲರೇ, ಇದು ನಿಮಗೆ ಏನೂ ಅಲ್ಲವೋ? ಇಗೋ, ಕರ್ತನ ಕೋಪ ಉರಿಯುವ ದಿನದಲ್ಲಿ ನನ್ನನ್ನು ಸಂಕಟಪಡಿಸಿದ ನನ್ನ ದುಃಖದ ಹಾಗೆ ಬೇರೆ ಯಾವ ದುಃಖವಾದರೂ ಇದ್ದರೆ ನೋಡಿರಿ.
- 13ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿ ದ್ದಾನೆ, ಅದು ಅವುಗಳನ್ನು ವಶಪಡಿಸಿಕೊಂಡಿದೆ; ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ; ನನ್ನನ್ನು ದಿನವೆಲ್ಲಾ ಹಾಳಾಗಿಯೂ ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ.
- 14ನನ್ನ ಅಕ್ರಮಗಳ ನೊಗವು ಆತನ ಕೈಯಿಂದ ಕಟ್ಟಲ್ಪಟ್ಟಿದೆ; ಅವು ಹೆಣೆಯಲ್ಪಟ್ಟಿವೆ; ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ಮೇಲೆ ಬರುತ್ತವೆ. ಆತನು ನನ್ನ ಶಕ್ತಿಯು ಕುಗ್ಗುವ ಹಾಗೆ ಮಾಡಿದನು, ಕರ್ತನು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ ಅವರಿಂದ ನಾನು ಎದ್ದೇಳಲು ಶಕ್ತನಾಗದಂತೆ ಮಾಡಿದ್ದಾನೆ.
Cross references
- Luke 23:28–31 ಲೂಕನು 23:28–31ಆದರೆ ಯೇಸು ಅವರ ಕಡೆಗೆ ತಿರುಗಿ ಕೊಂಡು--ಯೆರೂಸಲೇಮಿನ ಕುಮಾರ್ತೆಯರೇ, ನನ ಗಾಗಿ ಅಳಬೇಡಿರಿ; ಆದರೆ ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ. ಯಾಕಂದರೆ--ಇಗೋ, ಬಂಜೆಯರೂ ಎಂದಿಗೂ ಗರ್ಭಿಣಿಯಾಗದವರೂ ಎಂದಿಗೂ ಮೊಲೆ ಕುಡಿಸದವರೂ ಧನ್ಯರು ಎಂದು ಹೇಳುವ ದಿವಸಗಳು ಬರುತ್ತವೆ. ಆಗ ಅವರು ಬೆಟ್ಟಗಳಿಗೆ--ನಮ್ಮ ಮೇಲೆ ಬೀಳಿರಿ; ಗುಡ್ಡಗಳಿಗೆ-- ನಮ್ಮನ್ನು ಮುಚ್ಚಿಕೊಳ್ಳಿರಿ ಎಂದು ಹೇಳಲಾರಂಭಿಸು ವರು. ಅವರು ಹಸಿರಾಗಿರುವ ಮರಕ್ಕೆ ಇವುಗಳನ್ನು ಮಾಡಿದರೆ ಒಣಗಿದ ಮರಕ್ಕೆ ಏನು ಮಾಡಿಯಾರು ಅಂದನು.
- Daniel 9:12 ದಾನಿಯೇಲನು 9:12ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
- Jeremiah 18:16 ಯೆರೆಮೀಯ 18:16ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.
- Lamentations 4:6–11 ಪ್ರಲಾಪಗಳು 4:6–11ನನ್ನ ಜನರ ಮಗಳ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು; ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲ್ಪಟ್ಟಿತು! ಅವಳನ್ನು ಯಾವ ಕೈಗಳೂ ತಡೆಯಲಿಲ್ಲ. ಅವಳ ನಜರೀಯರು ಹಿಮಕ್ಕಿಂತಲೂ ಸ್ವಚ್ಛವಾಗಿದ್ದರು, ಹಾಲಿಗಿಂತಲೂ ಬೆಳ್ಳಗಿದ್ದರು, ಅವರು ಮೈ ಕಟ್ಟಿನಲ್ಲಿ ಹವಳಕ್ಕಿಂತಲೂ ಕೆಂಪಾಗಿದ್ದರು; ಅವರ ಹೊಳಪು ಇಂದ್ರನೀಲಮಣಿಯ ಹಾಗಿತ್ತು. ಈಗ ಅವರ ರೂಪವು ಕಲ್ಲಿದ್ದಲಿಗಿಂತ ಕಪ್ಪಾಗಿದೆ, ಬೀದಿಗಳಲ್ಲಿ ಅವರು ಯಾರೆಂಬದು ತಿಳಿಯಲಿಲ್ಲ; ಅವರ ಚರ್ಮವು ಅವರ ಎಲುಬುಗಳಿಗೆ ಹತ್ತಿಕೊಂಡಿದೆ, ಅದು ಒಣಗಿ ಕಡ್ಡಿಯ ಹಾಗೆ ಆಗಿದೆ. ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ. ಕನಿಕರ ತುಂಬಿದ ಹೆಂಗಸರ ಕೈಗಳು ಅವರ ಸ್ವಂತ ಮಕ್ಕಳನ್ನೇ ಬೇಯಿಸಿದವು; ಇವರು ನನ್ನ ಜನರ ಮಗಳ ನಾಶದಲ್ಲಿ ಅವರಿಗೆ ಆಹಾರ ವಾದರು. ಕರ್ತನು ತನ್ನ ರೋಷವನ್ನು ತೀರಿಸಿ ದ್ದಾನೆ; ಆತನು ತನ್ನ ಉಗ್ರವಾದ ಕೋಪವನ್ನು ಸುರಿದಿದ್ದಾನೆ; ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.
- Jeremiah 30:24 ಯೆರೆಮೀಯ 30:24ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ.
- Isaiah 13:13 ಯೆಶಾಯ 13:13ಆದದರಿಂದ ಸೈನ್ಯಗಳ ಕರ್ತನ ಉಗ್ರದಲ್ಲಿಯೂ ಆತನ ಕೋಪೋದ್ರೇಕದ ದಿನ ದಲ್ಲಿಯೂ ನಾನು ಆಕಾಶಗಳನ್ನು ನಡುಗಿಸುವೆನು, ಭೂಮಿಯನ್ನು ಅದರ ಸ್ಥಳದಿಂದ ತೆಗೆದುಬಿಡುವೆನು.
- Matthew 24:21 ಮತ್ತಾಯನು 24:21ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.
- Lamentations 2:13 ಪ್ರಲಾಪಗಳು 2:13ಯೆರೂಸಲೇಮಿನ ಕುಮಾರ್ತೆಯೇ, ನಾನು ಯಾವದನ್ನು ನಿನಗೆ ಸಾಕ್ಷಿಯ ನ್ನಾಗಿಡಲಿ? ಯಾವದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಮಗಳಾದ ಕನ್ಯೆಯೇ, ನಿನ್ನನ್ನು ಆದರಿಸುವ ಹಾಗೆ ನಾನು ಯಾವದನ್ನು ನಿನಗೆ ಸಮಾನಮಾಡಲಿ? ನಿನ್ನ ಮುರಿಯುವಿಕೆಯು ಸಮುದ್ರದ ಹಾಗೆ ದೊಡ್ಡ ದಾಗಿದೆ, ನಿನ್ನನ್ನು ಗುಣಪಡಿಸುವವರು ಯಾರು?
- Luke 21:22–23 ಲೂಕನು 21:22–23ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ. ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು.