Lamentations · chapter 1 · verse 7
Lamentations 1:7 in Kannada
ಯೆರೂಸಲೇಮು ಕಷ್ಟ ಮತ್ತು ಸಂಕಟದಲ್ಲಿದ್ದಾಗ ಪೂರ್ವದಿನಗಳಲ್ಲಿ ತನಗಿದ್ದ ರಮ್ಯವಾದವುಗಳೆಲ್ಲವನ್ನು ಜ್ಞಾಪಕಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ ಯಾವನೂ ಸಹಾಯಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ಸಬ್ಬತ್ತುಗಳ ವಿಷಯದಲ್ಲಿ ಅಪಹಾಸ್ಯಮಾಡಿದರು.
Yeroosalemu kashta mattu sankatadalliddaaga poorvadinagalalli tanagidda ramyavaadavugalellavannu jnyaapakamaadikondiddaale. Aakeya janaru shatruvina kaiyalli biddaaga yaavanoo sahaayamaadalilla. Vairigalu avalannu nodi avala sabbattugala vishayadalli apahaasyamaadidaru.
Lamentations 1:7 in English
- King James Version (KJV)
- Jerusalem remembered in the days of her affliction and of her miseries all her pleasant things that she had in the days of old, when her people fell into the hand of the enemy, and none did help her: the adversaries saw her, [and] did mock at her sabbaths.
- World English Bible (WEB)
- Jerusalem remembers in the days of her affliction and of her miseries all her pleasant things that were from the days of old; when her people fell into the hand of the adversary, and no one helped her. The adversaries saw her. They mocked at her desolations.
- American Standard Version (ASV)
- Jerusalem remembereth in the days of her affliction and of her miseries all her pleasant things that were from the days of old: When her people fell into the hand of the adversary, and none did help her, The adversaries saw her, they did mock at her desolations.
- Bible in Basic English (BBE)
- Jerusalem keeps in mind, in the days of her sorrow and of her wanderings, all the desired things which were hers in days gone by; when her people came into the power of her hater and she had no helper, her attackers saw their desire effected on her and made sport of her destruction.
- Darby Translation (DBY)
- In the days of her affliction and of her wanderings, since her people fell into the hand of an adversary, and none did help her, Jerusalem remembereth all her precious things which she had in the days of old: the adversaries have seen her, they mock at her ruin.
- Webster's Bible (WBS)
- Jerusalem remembered in the days of her affliction and of her miseries all her pleasant things that she had in the days of old, when her people fell into the hand of the enemy, and none helped her: the adversaries saw her, [and] mocked at her sabbaths.
- Young's Literal Translation (YLT)
- Remembered hath Jerusalem [In] the days of her affliction and her mournings, all her desirable things that were from the days of old, In the falling of her people into the hand of an adversary, And she hath no helper; Seen her have adversaries, They have laughed at her cessation.
Read in context
- 5ಆಕೆಯ ವೈರಿಗಳು ಪ್ರಮುಖರಾದರು, ಶತ್ರುಗಳು ಅಭಿವೃದ್ಧಿಯಾಗಿ ದ್ದಾರೆ; ಅನೇಕ ಅಪರಾಧಗಳ ನಿಮಿತ್ತ ಕರ್ತನು ಆಕೆಯನ್ನು ಸಂಕಟಪಡಿಸಿದ್ದಾನೆ. ಆಕೆಯ ಮಕ್ಕಳು ಶತ್ರು ವಿನ ಮುಂದೆ ಸೆರೆಗೆ ಹೋಗಿದ್ದಾರೆ.
- 6ಚೀಯೋನಿನ ಮಗಳ ಎಲ್ಲಾ ಸೌಂದರ್ಯವು ಅವಳನ್ನು ಬಿಟ್ಟು ಹೋಯಿತು. ಅವಳ ಪ್ರಧಾನರು ಮೇವು ಕಾಣದ ಜಿಂಕೆಗಳ ಹಾಗಾದರು. ಅವರು ಹಿಂದಟ್ಟುವವನ ಮುಂದೆ ತ್ರಾಣವಿಲ್ಲದವರ ಹಾಗೆ ಹೋದರು.
- 7ಯೆರೂಸಲೇಮು ಕಷ್ಟ ಮತ್ತು ಸಂಕಟದಲ್ಲಿದ್ದಾಗ ಪೂರ್ವದಿನಗಳಲ್ಲಿ ತನಗಿದ್ದ ರಮ್ಯವಾದವುಗಳೆಲ್ಲವನ್ನು ಜ್ಞಾಪಕಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ ಯಾವನೂ ಸಹಾಯಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ಸಬ್ಬತ್ತುಗಳ ವಿಷಯದಲ್ಲಿ ಅಪಹಾಸ್ಯಮಾಡಿದರು.
- 8ಯೆರೂಸ ಲೇಮು ಘೋರವಾಗಿ ಪಾಪಮಾಡಿದೆ; ಆದದರಿಂದ ಅವಳು ತೆಗೆದುಹಾಕಲ್ಪಟ್ಟಿದ್ದಾಳೆ; ಅವಳನ್ನು ಸನ್ಮಾನಿಸಿ ದವರೆಲ್ಲರೂ ಅವಳನ್ನು ಹೀನೈಸುತ್ತಾರೆ; ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ; ಹೌದು, ಅವಳು ನಿಟ್ಟುಸಿರಿಟ್ಟು ಹಿಂದಕ್ಕೆ ತಿರುಗುತ್ತಾಳೆ.
- 9ಅವಳ ನೆರಿಗೆಯು ಅಶುದ್ಧವಾಗಿದೆ; ಅವಳು ತನ್ನ ಅಂತ್ಯವನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ; ಆದುದರಿಂದ ಅವಳು ಆಶ್ಚರ್ಯ ಕರವಾಗಿ ಇಳಿದು ಬಂದಳು; ಅವಳನ್ನು ಆದರಿಸುವವರು ಯಾರೂ ಇಲ್ಲ. ಓ ಕರ್ತನೇ, ನನ್ನ ಸಂಕಟವನ್ನು ನೋಡು, ಶತ್ರುವು ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
Cross references
- Psalm 79:4 ಕೀರ್ತನೆಗಳು 79:4ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.
- Deuteronomy 4:34–37 ಧರ್ಮೋಪದೇಶಕಾಂಡ 4:34–37ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ? ಕರ್ತನೇ ದೇವರೆಂದು ನೀನು ತಿಳುಕೊಳ್ಳುವ ಹಾಗೆ ಅವು ನಿನಗೆ ತೋರಿಸಲ್ಪಟ್ಟವು; ಆತನಲ್ಲದೆ ಮತ್ತೊಬ್ಬನಿಲ್ಲ. ಆತನು ನಿನ್ನ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತನ್ನ ಶಬ್ದವನ್ನು ನಿನಗೆ ಕೇಳ ಮಾಡಿದನು; ಭೂಮಿಯ ಮೇಲೆ ತನ್ನ ಮಹಾಅಗ್ನಿ ಯನ್ನು ನಿನಗೆ ತೋರಿಸಿದನು; ಬೆಂಕಿಯೊಳಗಿಂದ ಆತನ ಮಾತುಗಳನ್ನು ಕೇಳಿದಿ. ಆತನು ನಿನ್ನ ಪಿತೃಗಳನ್ನು ಪ್ರೀತಿಮಾಡಿದ್ದರಿಂದ ಅವರ ತರುವಾಯ ಅವರ ಸಂತತಿಯನ್ನು ಆದು ಕೊಂಡು ನಿನ್ನನ್ನು ತನ್ನ ದೃಷ್ಟಿಯಲ್ಲಿ ತನ್ನ ಮಹಾ ಬಲ ದೊಂದಿಗೆ ಐಗುಪ್ತದೊಳಗಿಂದ ಹೊರಗೆ ಬರಮಾಡಿ ದನು.
- Psalm 77:5–9 ಕೀರ್ತನೆಗಳು 77:5–9ಪುರಾ ತನ ದಿವಸಗಳನ್ನೂ ಆದಿಕಾಲದ ವರುಷಗಳನ್ನೂ ಯೋಚಿಸಿದೆನು. ನನ್ನ ಹಾಡನ್ನು ರಾತ್ರಿಯಲ್ಲಿ ಜ್ಞಾಪಕ ಮಾಡಿಕೊಳ್ಳುತ್ತೇನೆ; ನನ್ನ ಹೃದಯದ ಸಂಗಡ ಮಾತಾ ಡುತ್ತೇನೆ; ನನ್ನ ಆತ್ಮವು ಪರಿಶೋಧನೆ ಮಾಡಿತು. ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ? ಆತನ ಕೃಪೆಯು ಸದಾಕಾಲಕ್ಕೆ ನಿಂತು ಹೋಗುತ್ತದೋ? ನಿರಂತರಕ್ಕೂ ವಾಗ್ದಾನ ತಪ್ಪಿಹೋಗುತ್ತದೋ? ದೇವರು ಕರು ಣಿಸುವದನ್ನು ಮರೆತು ಬಿಟ್ಟಿದ್ದಾನೋ? ತನ್ನ ಅಂತಃ ಕರಣಗಳನ್ನು ಕೋಪದಿಂದ ಮುಚ್ಚಿಕೊಂಡಿದ್ದಾನೋ? ಸೆಲಾ.
- Psalm 42:4 ಕೀರ್ತನೆಗಳು 42:4ಇವುಗಳನ್ನು ಜ್ಞಾಪಕಮಾಡಿಕೊಂಡಾಗ ನನ್ನ ಪ್ರಾಣವು ನನ್ನಲ್ಲಿ ಕ್ಷೀಣಿಸುತ್ತದೆ; ಸಮೂಹ ದೊಂದಿಗೆ ನಾನು ಹೋಗಿ ಉತ್ಸಾಹಧ್ವನಿಯಿಂದಲೂ ಸ್ತೋತ್ರದಿಂದಲೂ ಪರಿಶುದ್ಧ ದಿನವನ್ನು ಆಚರಿಸುವ ಸಮೂಹದ ಸಂಗಡ ದೇವರ ಆಲಯಕ್ಕೆ ಅವರೊಂ ದಿಗೆ ನಾನು ಹೋದೆನಲ್ಲಾ.
- Deuteronomy 8:7–9 ಧರ್ಮೋಪದೇಶಕಾಂಡ 8:7–9ನಿನ್ನ ದೇವರಾದ ಕರ್ತನು ನಿನ್ನನ್ನು ಉತ್ತಮ ದೇಶಕ್ಕೆ ಬರಮಾಡುತ್ತಾನೆ; ಅದು ನೀರಿನ ಹಳ್ಳಗಳೂ ತಗ್ಗಿನಲ್ಲಿಯೂ ಬೆಟ್ಟದಲ್ಲಿಯೂ ಉಕ್ಕುವ ಬುಗ್ಗೆಗಳುಳ್ಳ ದೇಶವೇ. ಗೋಧಿಯೂ ಜವೆಗೋಧಿಯೂ ದ್ರಾಕ್ಷೆಯೂ ಅಂಜೂರ ಮರಗಳೂ ದಾಳಿಂಬರಗಳೂ ಇರುವ ದೇಶವೇ; ಅದು ಹಿಪ್ಪೇ ಎಣ್ಣೆಯೂ ಜೇನೂ ಉಳ್ಳದೇಶವೇ. ನೀನು ಕೊರತೆಯಿಲ್ಲದೆ ರೊಟ್ಟಿ ತಿನ್ನುವ ಆ ದೇಶದಲ್ಲಿ ಯಾವದರ ಕೊರತೆ ನಿನಗೆ ಆಗದು; ಅದರ ಕಲ್ಲುಗಳು ಕಬ್ಬಿಣವಾಗಿಯೂ ಅದರ ಬೆಟ್ಟ ಗಳೊಳಗಿಂದ ತಾಮ್ರವನ್ನು ಅಗಿಯಬಹುದಾದದ್ದೂ ಆಗಿರುವ ದೇಶ.
- Micah 4:11 ಮೀಕ 4:11ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ; ಅವರು--ಅವಳು ಕೆಡಿಸಲ್ಪಡಲಿ, ಚೀಯೋನಿನ ಮೇಲೆ ನಮ್ಮ ಕಣ್ಣುಗಳು ದೃಷ್ಟಿಸಲಿ ಎಂದು ಹೇಳುತ್ತಾರೆ.
- Psalm 137:3–4 ಕೀರ್ತನೆಗಳು 137:3–4ಅಲ್ಲಿ ನಮ್ಮನ್ನು ಸೆರೆಹಿಡಿದು ಹಾಳುಮಾಡಿದವರು--ನಮ್ಮ ಸಂತೋಷ ಕ್ಕಾಗಿ ಒಂದು ಹಾಡನ್ನು ಹಾಡಿರಿ ಅಂದರು. ಅನ್ಯದೇಶದಲ್ಲಿ ನಾವು ಕರ್ತನ ಹಾಡನ್ನು ಹಾಡು ವದು ಹೇಗೆ?
- Psalm 77:3 ಕೀರ್ತನೆಗಳು 77:3ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ.
- Isaiah 5:1–4 ಯೆಶಾಯ 5:1–4ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ. ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು. ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ. ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?
- Hosea 2:7 ಹೋಶೇಯ 2:7ಅವಳು ತನ್ನ ಮಿಂಡರನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವದಿಲ್ಲ, ಹುಡುಕಿದರೂ ಅವರು ಸಿಕ್ಕುವದಿಲ್ಲ; ಆಗ ಅವಳು--ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು; ಈಗಿರುವದಕ್ಕಿಂತ ಆಗ ನನಗೆ ಎಷ್ಟೋ ಚೆನ್ನಾಗಿತ್ತು ಎಂದು ಅಂದುಕೊಳ್ಳುವಳು.
- Psalm 147:19–20 ಕೀರ್ತನೆಗಳು 147:19–20ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ. ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
Original words (Hebrew)
- Jerusalem · H3389יְרוּשָׁלַ͏ִם Yᵉrûwshâlaim
- remembered · H2142זָכַר zâkar
- days · H3117יוֹם yôwm
- affliction · H6040עֳנִי ʻŏnîy
- miseries · H4788מָרוּד mârûwd
- things · H4262מַחְמֻד machmud
- days · H3117יוֹם yôwm
- old · H6924קֶדֶם qedem
- people · H5971עַם ʻam
- fell · H5307נָפַל nâphal
- hand · H3027יָד yâd
- enemy · H6862צַר tsar
- help · H5826עָזַר ʻâzar
- adversaries · H6862צַר tsar
- saw · H7200רָאָה râʼâh
- mock · H7832שָׂחַק sâchaq
- sabbaths · H4868מִשְׁבָּת mishbâth