Lamentations · chapter 2 · verse 20
Lamentations 2:20 in Kannada
ಓ ಕರ್ತನೇ, ನೋಡು, ನೀನು ಇದನ್ನು ಯಾರಿಗೆ ಮಾಡಿದಿಯೋ ಯೋಚಿಸು. ಸ್ತ್ರೀಯರು ತಮ್ಮ ಫಲವಾದ ಗೇಣುದ್ದದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಪ್ರವಾದಿಯು ಕರ್ತನ ಪರಿಶುದ್ಧ ಸ್ಥಳದಲ್ಲಿ ಕೊಲ್ಲಲ್ಪಡಬೇಕೋ?
O kartane, nodu, neenu idannu yaarige maadidiyo yochisu. Streeyaru tamma phalavaada genuddada koosugalannu tinnabeke? Yaajakanu pravaadiyu kartana parishuddha sthaladalli kollalpadabeko?
Lamentations 2:20 in English
- King James Version (KJV)
- Behold, O LORD, and consider to whom thou hast done this. Shall the women eat their fruit, [and] children of a span long? shall the priest and the prophet be slain in the sanctuary of the Lord?
- World English Bible (WEB)
- “Look, LORD, and see to whom you have done thus! Should the women eat their offspring, the children that they held and bounced on their knees? Should the priest and the prophet be killed in the sanctuary of the Lord?
- American Standard Version (ASV)
- See, O Jehovah, and behold to whom thou hast done thus! Shall the women eat their fruit, the children that are dandled in the hands? Shall the priest and the prophet be slain in the sanctuary of the Lord?
- Bible in Basic English (BBE)
- Look! O Lord, see to whom you have done this! Are the women to take as their food the fruit of their bodies, the children who are folded in their arms? are the priest and the prophet to be put to death in the holy place of the Lord?
- Darby Translation (DBY)
- See, Jehovah, and consider to whom thou hast done this! Shall the women eat their fruit, the infants that they nursed? Shall priest and prophet be slain in the sanctuary of the Lord?
- Webster's Bible (WBS)
- Behold, O LORD, and consider to whom thou hast done this. Shall the women eat their fruit, children of a span long? shall the priest and the prophet be slain in the sanctuary of the LORD?
- Young's Literal Translation (YLT)
- See, O Jehovah, and look attentively, To whom Thou hast acted thus, Do women eat their fruit, infants of a handbreadth? Slain in the sanctuary of the Lord are priest and prophet?
Read in context
- 18ಅವರ ಹೃದಯವು ಕರ್ತನ ಕಡೆಗೆ ಕೂಗಿ--ಓ ಚೀಯೋನಿನ ಮಗಳ ಗೋಡೆಯೇ, ರಾತ್ರಿ ಹಗಲೂ ನಿನ್ನ ಕಣ್ಣೀರು ನದಿಯಂತೆ ಹರಿದು ಹೋಗಲಿ, ನೀನು ವಿಶ್ರಾಂತಿ ತಕ್ಕೊಳ್ಳಬೇಡ; ನಿನ್ನ ಕಣ್ಣು ರೆಪ್ಪೆಯನ್ನು ಮುಚ್ಚಬೇಡ.
- 19ಎದ್ದೇಳು, ರಾತ್ರಿಯಲ್ಲಿ ಕೂಗು; ನಿನ್ನ ಹೃದಯವನ್ನು ಕರ್ತನ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ (ನೀರಿನಂತೆ) ಹೊಯ್ಯಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಯಾಕಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.
- 20ಓ ಕರ್ತನೇ, ನೋಡು, ನೀನು ಇದನ್ನು ಯಾರಿಗೆ ಮಾಡಿದಿಯೋ ಯೋಚಿಸು. ಸ್ತ್ರೀಯರು ತಮ್ಮ ಫಲವಾದ ಗೇಣುದ್ದದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಪ್ರವಾದಿಯು ಕರ್ತನ ಪರಿಶುದ್ಧ ಸ್ಥಳದಲ್ಲಿ ಕೊಲ್ಲಲ್ಪಡಬೇಕೋ?
- 21ಎಳೇ ಪ್ರಾಯದವರೂ ಮುದುಕರೂ ಬೀದಿಗಳಲ್ಲಿ ಬಿದ್ದಿದ್ದಾರೆ; ನನ್ನ ಕನ್ಯೆಯರೂ ಯೌವನಸ್ಥರೂ ಕತ್ತಿಯಿಂದ ಹತರಾಗಿದ್ದಾರೆ; ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿ; ಕನಿಕರಿಸದೆ ಕೊಂದುಹಾಕಿ ಬಿಟ್ಟಿದ್ದೀ.ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ.
- 22ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ.
Cross references
- Jeremiah 19:9 ಯೆರೆಮೀಯ 19:9ಅವರು ತಮ್ಮ ಕುಮಾರರ ಕುಮಾರ್ತೆಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು; ಮುತ್ತಿಗೆಯಲ್ಲಿ ಸಹ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.
- Lamentations 4:10 ಪ್ರಲಾಪಗಳು 4:10ಕನಿಕರ ತುಂಬಿದ ಹೆಂಗಸರ ಕೈಗಳು ಅವರ ಸ್ವಂತ ಮಕ್ಕಳನ್ನೇ ಬೇಯಿಸಿದವು; ಇವರು ನನ್ನ ಜನರ ಮಗಳ ನಾಶದಲ್ಲಿ ಅವರಿಗೆ ಆಹಾರ ವಾದರು.
- Psalm 78:64 ಕೀರ್ತನೆಗಳು 78:64ಅವರ ಯಾಜಕರು ಕತ್ತಿಯಿಂದ ಸಂಹಾರವಾದರು; ಅವರ ವಿಧವೆಯರು ಗೋಳಾಡಲಿಲ್ಲ.
- Lamentations 4:13 ಪ್ರಲಾಪಗಳು 4:13ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು.
- Exodus 32:11 ವಿಮೋಚನಕಾಂಡ 32:11ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?
- Deuteronomy 9:26 ಧರ್ಮೋಪದೇಶಕಾಂಡ 9:26ನಾನು ಕರ್ತನಿಗೆ ಪ್ರಾರ್ಥನೆ ಮಾಡಿ--ಓ ಕರ್ತನಾದ ದೇವರೇ, ನೀನು ನಿನ್ನ ಮಹತ್ವದಿಂದ ವಿಮೋಚಿಸಿ, ಬಲವಾದ ಕೈಯಿಂದ ಐಗುಪ್ತದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನ ವನ್ನೂ ನಿನ್ನ ಸ್ವಾಸ್ತ್ಯವನ್ನೂ ನಾಶಮಾಡಬೇಡ.
- Lamentations 1:19 ಪ್ರಲಾಪಗಳು 1:19ನಾನು ನನ್ನ ಪ್ರಿಯರನ್ನು ಕರೆದೆನು, ಆದರೆ ಅವರು ನನ್ನನ್ನು ಮೋಸಗೊಳಿಸಿದರು; ನನ್ನ ಯಾಜಕರೂ ಹಿರಿ ಯರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ರೊಟ್ಟಿ ಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.
- Ezekiel 9:5–6 ಯೆಹೆಜ್ಕೇಲನು 9:5–6ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ --ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ; ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ, ಕಟಾಕ್ಷಿಸದೆಯೂ ಇರಲಿ. ವೃದ್ಧ ಯುವಕ ಯುವತಿ ಯರನ್ನು ಎಳೆಕೂಸುಗಳನ್ನು ಮತ್ತು ಹೆಂಗಸರನ್ನು ಸಂಪೂರ್ಣವಾಗಿ ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ ಅವನ ಹತ್ತಿರ ಹೋಗ ಬೇಡಿರಿ; ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ ಅಂದಾಗ, ಅವರು ಆಲಯದ ಮುಂದಿದ್ದ ಹಿರಿಯರಿಂದ ಪ್ರಾರಂಭಿಸಿದರು.
- Lamentations 4:16 ಪ್ರಲಾಪಗಳು 4:16ಕರ್ತನ ಕೋಪವು ಅವರನ್ನು ವಿಭಾಗಿಸಿತು; ಆತನು ಇನ್ನು ಅವರನ್ನು ಲಕ್ಷಿಸುವದಿಲ್ಲ; ಅವರು ಯಾಜಕರನ್ನು ಗೌರವಿಸಲಿಲ್ಲ; ಅವರು ಹಿರಿಯರಿಗೆ ದಯೆತೋರಿ ಸಲಿಲ್ಲ.
- Jeremiah 14:15–18 ಯೆರೆಮೀಯ 14:15–18ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ. ಅವರ ಪ್ರವಾದನೆಯನು ಕೇಳುವ ಜನರು ಕ್ಷಾಮದ ಮತ್ತು ಕತ್ತಿಯ ನಿಮಿತ್ತ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಹೆಂಡತಿಯರನ್ನೂ ಕುಮಾರರನ್ನೂ ಕುಮಾರ್ತೆಯರನ್ನೂ ಹೂಣಿಡುವದಕ್ಕೆ ಯಾರೂ ಇರು ವದಿಲ್ಲ; ನಾನು ಅವರ ಕೆಟ್ಟತನವನ್ನು ಅವರ ಮೇಲೆ ಹೊಯಿದು ಬಿಡುವೆನು. ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು. ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.
- Jeremiah 23:11–15 ಯೆರೆಮೀಯ 23:11–15ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ; ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆಂದು ಕರ್ತನು ಅನ್ನುತ್ತಾನೆ. ಆದದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗೆ ಅವರಿಗಿರುವದು; ಅವರು ತಳ್ಳಲ್ಪಟ್ಟು ಬೀಳುವರು; ಕೇಡನ್ನು, ಅವರ ವಿಚಾರಣೆಯ ವರುಷವನ್ನು ಅವರ ಮೇಲೆ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ. ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ. ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ. ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
- Deuteronomy 28:53–57 ಧರ್ಮೋಪದೇಶಕಾಂಡ 28:53–57ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ. ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು. ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ. ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು.
Original words (Hebrew)
- Behold · H7200רָאָה râʼâh
- consider · H5027נָבַט nâbaṭ
- done · H5953עָלַל ʻâlal
- this · H3541כֹּה kôh
- women · H802אִשָּׁה ʼishshâh
- eat · H398אָכַל ʼâkal
- fruit · H6529פְּרִי pᵉrîy
- children · H5768עוֹלֵל ʻôwlêl
- long · H2949טִפֻּח ṭippuch
- priest · H3548כֹּהֵן kôhên
- prophet · H5030נָבִיא nâbîyʼ
- slain · H2026הָרַג hârag
- sanctuary · H4720מִקְדָּשׁ miqdâsh
- Lord · H136אֲדֹנָי ʼĂdônây