Lamentations · chapter 3 · verse 31
Lamentations 3:31 in Kannada
ಕರ್ತನು ಎಂದೆಂದಿಗೂ ತಳ್ಳಿಬಿಡುವದಿಲ್ಲ;
Kartanu endendigoo tallibiduvadilla;
Lamentations 3:31 in English
- King James Version (KJV)
- For the Lord will not cast off for ever:
- World English Bible (WEB)
- For the Lord will not cast off forever.
- American Standard Version (ASV)
- For the Lord will not cast off for ever.
- Bible in Basic English (BBE)
- For the Lord does not give a man up for ever.
- Darby Translation (DBY)
- For the Lord will not cast off for ever;
- Webster's Bible (WBS)
- For the LORD will not cast off for ever:
- Young's Literal Translation (YLT)
- For the Lord doth not cast off to the age.
Read in context
- 29ಒಂದು ವೇಳೆ ಅಲ್ಲಿ ನಿರೀಕ್ಷೆ ಇರುವದಾದರೆ ಅವನು ತನ್ನ ಬಾಯಿ ಯನ್ನು ದೂಳಿನಲ್ಲಿ ಇಡುತ್ತಾನೆ.
- 30ಆತನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡುತ್ತಾನೆ ಆತನು ನಿಂದೆಯಿಂದಲೇ ತುಂಬಿದ್ದಾನೆ.
- 31ಕರ್ತನು ಎಂದೆಂದಿಗೂ ತಳ್ಳಿಬಿಡುವದಿಲ್ಲ;
- 32ಆತನು ದುಃಖಪಡಿಸಿದರೂ ತನ್ನ ಕೃಪಾತಿಶಯದಿಂದ ಕನಿಕರಿಸುವನು.
- 33ಆತನು ಇಷ್ಟಪೂರ್ವಕವಾಗಿ ಮನುಷ್ಯರ ಮಕ್ಕಳನ್ನು ಬಾಧಿಸುವದು ಇಲ್ಲ ದುಃಖಿಸು ವದೂ ಇಲ್ಲ.
Cross references
- Psalm 94:14 ಕೀರ್ತನೆಗಳು 94:14ಕರ್ತನು ತನ್ನ ಜನರನ್ನು ತೊರೆಯನು; ಇಲ್ಲವೆ ತನ್ನ ಸ್ವಾಸ್ಥ್ಯವನ್ನು ಬಿಟ್ಟುಬಿಡನು.
- Psalm 103:8–10 ಕೀರ್ತನೆಗಳು 103:8–10ಕರ್ತನು ಅಂತಃಕರಣವೂ ದಯೆಯೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳವನಾಗಿದ್ದಾನೆ. ಆತನು ಸದಾಕಾಲಕ್ಕೂ ಗದರಿಸುವದಿಲ್ಲ; ನಿತ್ಯವೂ ಕೋಪಿ ಸುವಾತನಲ್ಲ; ನಮ್ಮ ಪಾಪಗಳಿಗೆ ತಕ್ಕಂತೆ ನಮಗೆ ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳ ಪ್ರಕಾರ ನಮ್ಮನ್ನು ದಂಡಿಸಲಿಲ್ಲ.
- Psalm 77:7 ಕೀರ್ತನೆಗಳು 77:7ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ?
- Isaiah 54:7–10 ಯೆಶಾಯ 54:7–10ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು. ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ. ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ. ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
- Isaiah 57:16 ಯೆಶಾಯ 57:16ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.
- 1 Samuel 12:22 1 ಸಮುವೇಲನು 12:22ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ.
- Jeremiah 32:40 ಯೆರೆಮೀಯ 32:40ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
- Romans 11:1–6 ರೋಮಾಪುರದವರಿಗೆ 11:1–6ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ. ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ-- ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಕೊಂದು ನಿನ್ನ ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ; ಆದರೆ ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಿದ್ದಾರೆ ಎಂದು ಬರಹವು ಹೇಳಿದ್ದು ನಿಮಗೆ ಗೊತ್ತಿಲ್ಲವೋ? ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು. ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ. ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
- Jeremiah 31:37 ಯೆರೆಮೀಯ 31:37ಕರ್ತನು ಹೀಗೆ ಹೇಳುತ್ತಾನೆ--ಮೇಲಿರುವ ಆಕಾಶವನ್ನು ಅಳೆಯುವ ದಕ್ಕಾದರೆ, ಕೆಳಗಿರುವ ಭೂಮಿಯ ಅಸ್ತಿವಾರಗಳನ್ನು ಶೋಧಿಸುವದಕ್ಕಾದರೆ, ನಾನು ಸಹ ಇಸ್ರಾಯೇಲಿನ ಸಂತಾನವನ್ನೆಲ್ಲಾ ಅವರು ಮಾಡಿದ್ದೆಲ್ಲಾದರ ನಿಮಿತ್ತ ತೆಗೆದು ಬಿಡುವೆನೆಂದು ಕರ್ತನು ಅನ್ನುತ್ತಾನೆ.
- Micah 7:18 ಮೀಕ 7:18ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
- Jeremiah 33:24 ಯೆರೆಮೀಯ 33:24ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ.