Lamentations · chapter 3 · verse 40
Lamentations 3:40 in Kannada
ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.
Naavu namma maargagalannu shodhisi pareekshisi kondu matte kartana balige tirugikollona.
Lamentations 3:40 in English
- King James Version (KJV)
- Let us search and try our ways, and turn again to the LORD.
- World English Bible (WEB)
- Let us search and try our ways, and turn again to the LORD.
- American Standard Version (ASV)
- Let us search and try our ways, and turn again to Jehovah.
- Bible in Basic English (BBE)
- Let us make search and put our ways to the test, turning again to the Lord;
- Darby Translation (DBY)
- Let us search and try our ways, and turn again to Jehovah.
- Webster's Bible (WBS)
- Let us search and try our ways, and turn again to the LORD.
- Young's Literal Translation (YLT)
- We search our ways, and investigate, And turn back unto Jehovah.
Read in context
- 38ಮಹೋನ್ನತನ ಬಾಯಿಂದ ಕೆಟ್ಟದ್ದೂ ಒಳ್ಳೆಯದೂ ಹೊರಡುವದಿಲ್ಲವೇ?
- 39ಬದುಕುವ ಮನುಷ್ಯನು ತನ್ನ ಪಾಪಗಳ ಶಿಕ್ಷೆಗಾಗಿ ಗುಣು ಗುಟ್ಟುವದೇಕೆ?
- 40ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.
- 41ನಮ್ಮ ಹೃದಯವನ್ನು ಕೈಗಳೊಂದಿಗೆ ಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ.
- 42ನಾವು ದ್ರೋಹಮಾಡಿ ಎದುರು ಬಿದ್ದಿದ್ದೇವೆ; ನೀನು ಮನ್ನಿಸಲಿಲ್ಲ.
Cross references
- 2 Corinthians 13:5 2 ಕೊರಿಂಥದವರಿಗೆ 13:5ನಂಬಿಕೆಯಲ್ಲಿ ನೀವು ಇದ್ದೀರೋ ಏನೋ ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ; ನಿಮ್ಮನ್ನು ನೀವೇ ಪರಿಶೋಧಿ ಸಿಕೊಳ್ಳಿರಿ; ನೀವು ಭ್ರಷ್ಠರಲ್ಲದಿದ್ದರೆ ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂದು ನಿಮ್ಮಷ್ಟಕ್ಕೆ ನೀವೇ ತಿಳಿದುಕೊಳ್ಳು ವದಿಲ್ಲವೋ?
- Psalm 139:23–24 ಕೀರ್ತನೆಗಳು 139:23–24ದೇವರೇ, ನನ್ನನ್ನು ಶೋಧಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಪರೀಕ್ಷಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು. ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.
- Joel 2:12–13 ಯೋವೇಲ 2:12–13ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ. ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.
- Isaiah 55:7 ಯೆಶಾಯ 55:7ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Psalm 4:4 ಕೀರ್ತನೆಗಳು 4:4ಭಯಭಕ್ತಿಯಿಂದಿರ್ರಿ; ಪಾಪಮಾಡಬೇಡಿರಿ; ಹಾಸಿಗೆ ಗಳ ಮೇಲೆ ನಿಮ್ಮ ಸ್ವಂತ ಹೃದಯದಲ್ಲಿ ಮಾತನಾಡಿ ಮೌನವಾಗಿರ್ರಿ. ಸೆಲಾ.
- Psalm 119:59 ಕೀರ್ತನೆಗಳು 119:59ನನ್ನ ಮಾರ್ಗಗಳನ್ನು ಯೋಚಿಸಿಕೊಂಡು ನಿನ್ನ ಸಾಕ್ಷಿಗಳ ಕಡೆಗೆ ನನ್ನ ಪಾದ ಗಳನ್ನು ತಿರುಗಿಸಿದ್ದೇನೆ.
- Haggai 1:5–9 ಹಗ್ಗಾಯ 1:5–9ಆದದರಿಂದ ಈಗ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ. ನೀವು ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ತಂದಿದ್ದೀರಿ; ನೀವು ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿ ಯಾಗಲಿಲ್ಲ; ಧರಿಸುತ್ತೀರಿ, ಆದರೆ ಬೆಚ್ಚಗಾಗಲಿಲ್ಲ; ಸಂಬಳವನ್ನು ಸಂಪಾದಿಸುವವನು ಅದನ್ನು ತೂತು ಗಳುಳ್ಳ ಚೀಲದಲ್ಲಿ ಹಾಕುವದಕ್ಕೆ ಸಂಪಾದಿಸುತ್ತಾನೆ. ಸೈನ್ಯಗಳ ಕರ್ತನು ಹೇಳುವದೇನಂದರೆ -- ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ. ಬೆಟ್ಟಕ್ಕೆ ಹೋಗಿ ಮರವನ್ನು ತಂದು ಮನೆಯನ್ನು ಕಟ್ಟಿರಿ; ಆಗ ನಾನು ಅದಕ್ಕೆ ಮೆಚ್ಚಿ ಮಹಿಮೆಯನ್ನು ಹೊಂದುವೆನೆಂದು ಕರ್ತನು ಹೇಳುತ್ತಾನೆ. ಬಹಳ ಆಗಬೇಕೆಂದು ನಿರೀಕ್ಷಿ ಸಿದಿರಿ. ಆದರೆ ಇಗೋ, ಕೊಂಚವೇ ಆಯಿತು; ನೀವು ಅದನ್ನು ಮನೆಗೆ ತಂದಾಗ ನಾನು ಅದರ ಮೇಲೆ ಊದಿಬಿಟ್ಟೆನು. ಯಾತಕ್ಕೆ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ನನ್ನ ಆಲಯವು ಹಾಳಾಗಿ ರುವದರಿಂದ ನೀವು ನಿಮ್ಮ ನಿಮ್ಮ ಸ್ವಂತ ಮನೆಗಳಿಗೆ ಓಡಿ ಹೋಗುತ್ತೀರಲ್ಲಾ?
- Hosea 6:1 ಹೋಶೇಯ 6:1ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.
- Hosea 14:1–3 ಹೋಶೇಯ 14:1–3ಓ ಇಸ್ರಾಯೇಲೇ, ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊ, ಯಾಕಂದರೆ ನೀನು ನಿನ್ನ ದುಷ್ಕೃತ್ಯದಿಂದ ಬಿದ್ದಿದ್ದೀ; ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು. ಅಶ್ಯೂರ್ಯವು ನಮ್ಮನ್ನು ರಕ್ಷಿಸುವದಿಲ್ಲ; ನಾವು ಕುದುರೆಗಳ ಮೇಲೆ ಸವಾರಿ ಮಾಡುವದಿಲ್ಲ; ಇಲ್ಲವೆ ನಮ್ಮ ಕೈಗಳಿಂದ ಆದ ಕೆಲಸಕ್ಕೆ--ನೀವು ನಮ್ಮ ದೇವರು ಗಳೇ ಎಂದು ನಾವು ಇನ್ನು ಮುಂದೆ ಹೇಳುವದೇ ಇಲ್ಲ; ನಿನ್ನಲ್ಲಿ ತಂದೆಗಳಿಲ್ಲದವರಿಗೆ ಕರುಣೆಯುಂಟು ಎಂದು ಆತನಿಗೆ ಹೇಳಿರಿ.
- 1 Corinthians 11:28 1 ಕೊರಿಂಥದವರಿಗೆ 11:28ಆದರೆ ಒಬ್ಬನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.
- 2 Chronicles 30:9 2 ಪೂರ್ವಕಾಲವೃತ್ತಾಂತ 30:9ನೀವು ಕರ್ತನ ಕಡೆಗೆ ತಿರುಗಿದರೆ ನಿಮ್ಮ ಸಹೋದ ರರೂ ನಿಮ್ಮ ಮಕ್ಕಳೂ ತಿರಿಗಿ ಈ ದೇಶಕ್ಕೆ ಬರುವ ಹಾಗೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಕರುಣೆಯನ್ನು ಹೊಂದುವರು. ನಿಮ್ಮ ದೇವರಾದ ಕರ್ತನು ಕೃಪೆಯೂ ಕರುಣೆಯೂ ಉಳ್ಳವನಾಗಿದ್ದಾನೆ, ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮ ಕಡೆ ಯಿಂದ ತನ್ನ ಮುಖ ತೊಲಗಿಸನು ಎಂದು ಹೇಳಿದರು.
- 1 Corinthians 11:31 1 ಕೊರಿಂಥದವರಿಗೆ 11:31ನಮ್ಮನ್ನು ನಾವೇ ವಿಚಾರಿಸಿ ಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ.