Lamentations · chapter 3 · verse 42
Lamentations 3:42 in Kannada
ನಾವು ದ್ರೋಹಮಾಡಿ ಎದುರು ಬಿದ್ದಿದ್ದೇವೆ; ನೀನು ಮನ್ನಿಸಲಿಲ್ಲ.
Naavu drohamaadi eduru biddiddeve; neenu mannisalilla.
Lamentations 3:42 in English
- King James Version (KJV)
- We have transgressed and have rebelled: thou hast not pardoned.
- World English Bible (WEB)
- “We have transgressed and have rebelled. You have not pardoned.
- American Standard Version (ASV)
- We have transgressed and have rebelled; thou hast not pardoned.
- Bible in Basic English (BBE)
- We have done wrong and gone against your law; we have not had your forgiveness.
- Darby Translation (DBY)
- We have transgressed and have rebelled: thou hast not pardoned.
- Webster's Bible (WBS)
- We have transgressed and have rebelled: thou hast not pardoned.
- Young's Literal Translation (YLT)
- We — we have transgressed and rebelled, Thou — Thou hast not forgiven.
Read in context
- 40ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.
- 41ನಮ್ಮ ಹೃದಯವನ್ನು ಕೈಗಳೊಂದಿಗೆ ಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ.
- 42ನಾವು ದ್ರೋಹಮಾಡಿ ಎದುರು ಬಿದ್ದಿದ್ದೇವೆ; ನೀನು ಮನ್ನಿಸಲಿಲ್ಲ.
- 43ಕೋಪದಲ್ಲಿ ನಮ್ಮನ್ನು ಮುಚ್ಚಿ, ಹಿಂಸಿಸಿದ್ದೀ; ಕನಿಕರಿಸದೆ ಕೊಂದುಹಾಕಿರುವಿ.
- 44ನಮ್ಮ ಪ್ರಾರ್ಥ ನೆಯು ನಿನಗೆ ಮುಟ್ಟದಂತೆ ನಿನ್ನನ್ನು ಮೇಘದಿಂದ ಮುಚ್ಚಿ ಕೊಂಡಿದ್ದೀ.
Cross references
- Luke 15:18–19 ಲೂಕನು 15:18–19ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ; ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು
- Jeremiah 5:7–9 ಯೆರೆಮೀಯ 5:7–9ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ; ನಾನು ಅವರನ್ನು ತೃಪ್ತಿಪಡಿ ಸಿದ ಮೇಲೆ ಅವರು ವ್ಯಭಿಚಾರಮಾಡಿ ಸೂಳೆಯರ ಮನೆಗಳಲ್ಲಿ ಗುಂಪಾಗಿ ಕೂಡಿಕೊಂಡರು. ಬೆಳಗಿ ನಲ್ಲಿ ಕೊಬ್ಬಿದ ಕುದುರೆಗಳ ಹಾಗಿದ್ದಾರೆ; ತಮ್ಮ ತಮ್ಮ ನೆರೆಯವರ ಹೆಂಡತಿಯರಿಗೋಸ್ಕರ ಹೂಂಕರಿ ಸುತ್ತಾರೆ. ಇವುಗಳ ನಿಮಿತ್ತ ನಾನು ವಿಚಾರಿಸುವ ದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- Nehemiah 9:26 ನೆಹೆಮೀಯ 9:26ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
- Jeremiah 3:13 ಯೆರೆಮೀಯ 3:13ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ.
- Zechariah 1:5 ಜೆಕರ್ಯ 1:5ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?
- Lamentations 5:16 ಪ್ರಲಾಪಗಳು 5:16ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ.
- 2 Kings 24:4 2 ಅರಸುಗಳು 24:4ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
- Ezekiel 24:13 ಯೆಹೆಜ್ಕೇಲನು 24:13ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
- Lamentations 1:18 ಪ್ರಲಾಪಗಳು 1:18ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.
- Daniel 9:5–14 ದಾನಿಯೇಲನು 9:5–14ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ. ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ. ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ. ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ. ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ. ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ. ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ. ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ. ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ.
- Job 33:27–28 ಯೋಬನು 33:27–28ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ; ಆತನು ಅವನ ಪ್ರಾಣವು ಕುಣಿಗೆ ಹೋಗದಂತೆ ಕಾಪಾಡುವನು. ಅವನ ಪ್ರಾಣವು ಬೆಳಕನ್ನು ನೋಡುವದು.