Lamentations · chapter 3 · verse 46
Lamentations 3:46 in Kannada
ನಮ್ಮ ಎಲ್ಲಾ ಶತ್ರುಗಳು ನಮಗೆ ವಿರುದ್ಧವಾಗಿ ಅವರ ಬಾಯಿಗಳನ್ನು ತೆರೆದಿದ್ದಾರೆ.
Namma ellaa shatrugalu namage viruddhavaagi avara baayigalannu terediddaare.
Lamentations 3:46 in English
- King James Version (KJV)
- All our enemies have opened their mouths against us.
- World English Bible (WEB)
- “All our enemies have opened their mouth wide against us.
- American Standard Version (ASV)
- All our enemies have opened their mouth wide against us.
- Bible in Basic English (BBE)
- The mouths of all our haters are open wide against us.
- Darby Translation (DBY)
- All our enemies have opened their mouth against us.
- Webster's Bible (WBS)
- All our enemies have opened their mouths against us.
- Young's Literal Translation (YLT)
- Opened against us their mouth have all our enemies.
Read in context
- 44ನಮ್ಮ ಪ್ರಾರ್ಥ ನೆಯು ನಿನಗೆ ಮುಟ್ಟದಂತೆ ನಿನ್ನನ್ನು ಮೇಘದಿಂದ ಮುಚ್ಚಿ ಕೊಂಡಿದ್ದೀ.
- 45ನೀನು ನಮ್ಮನ್ನು ಜನರ ಮಧ್ಯದಲ್ಲಿ ಕಲ್ಮಷವನ್ನಾಗಿಯೂ ಕಸವನ್ನಾಗಿಯೂ ಮಾಡಿದ್ದೀ.
- 46ನಮ್ಮ ಎಲ್ಲಾ ಶತ್ರುಗಳು ನಮಗೆ ವಿರುದ್ಧವಾಗಿ ಅವರ ಬಾಯಿಗಳನ್ನು ತೆರೆದಿದ್ದಾರೆ.
- 47ಭಯವೂ ಬೋನೂ ನಾಶನವೂ ಸಂಹಾರವೂ ನಮ್ಮ ಮೇಲೆ ಬಂದಿವೆ.
- 48ನನ್ನ ಜನರ ಕುಮಾರಿಯ ನಾಶನದ ನಿಮಿತ್ತವಾಗಿ ನನ್ನ ಕಣ್ಣಿನಿಂದ ನೀರು ನದಿಯಾಗಿ ಹರಿದುಹೋಗುತ್ತದೆ.
Cross references
- Psalm 22:6–8 ಕೀರ್ತನೆಗಳು 22:6–8ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ. ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ-- ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ.
- Lamentations 2:16 ಪ್ರಲಾಪಗಳು 2:16ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ.
- Psalm 44:13–14 ಕೀರ್ತನೆಗಳು 44:13–14ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ. ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ.
- Psalm 79:10 ಕೀರ್ತನೆಗಳು 79:10ಅವರ ದೇವರು ಎಲ್ಲಿ ಎಂದು ಅನ್ಯಜನಾಂಗಗಳು ಯಾಕೆ ಹೇಳಬೇಕು? ಚೆಲ್ಲಿರುವ ನಿನ್ನ ಸೇವಕರ ರಕ್ತದ ಪ್ರತಿ ದಂಡನೆಯನ್ನು ನಮ್ಮ ಕಣ್ಣುಗಳ ಮುಂದೆ ಅನ್ಯ ಜನಾಂಗಗಳಲ್ಲಿ ತಿಳಿಯಲ್ಪಡಲಿ.
- Psalm 79:4 ಕೀರ್ತನೆಗಳು 79:4ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.
- Matthew 27:38–45 ಮತ್ತಾಯನು 27:38–45ಅಲ್ಲಿ ಒಬ್ಬನನ್ನು ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯ ಲ್ಲಿಯೂ ಇಬ್ಬರು ಕಳ್ಳರನ್ನು ಆತನೊಂದಿಗೆ ಶಿಲುಬೆಗೆ ಹಾಕಿದರು. ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ-- ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು. ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ-- ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು; ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು. ಆತನ ಜೊತೆಗೆ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಅದೇ ರೀತಿಯಾಗಿ ಆತನನ್ನು ನಿಂದಿಸಿದರು. ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
- Exodus 11:7 ವಿಮೋಚನಕಾಂಡ 11:7ಆದರೆ ಕರ್ತನು ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳಿದುಕೊಳ್ಳುವಂತೆ ಇಸ್ರಾಯೇಲ್ ಮಕ್ಕಳೆಲ್ಲರ ಮೇಲೆ ಮನುಷ್ಯರು ಮೊದಲುಗೊಂಡು ಪಶುಗಳ ವರೆಗೆ ಒಂದು ನಾಯಿಯಾದರೂ ತನ್ನ ನಾಲಿಗೆಯನ್ನು ಅಲ್ಲಾಡಿಸುವದಿಲ್ಲ.
- Job 30:9–11 ಯೋಬನು 30:9–11ಆದರೆ ಈಗ ನಾನು ಅವರ ಹಾಸ್ಯದ ರಾಗವೂ ಹೌದು, ಅವರಿಗೆ ಗಾದೆಯೂ ಆದೆನು. ನನ್ನನ್ನು ಅಸಹ್ಯಿಸುತ್ತಾರೆ; ನನಗೆ ದೂರ ವಾಗಿ ಓಡಿಹೋಗುತ್ತಾರೆ; ನನ್ನ ಮುಖದ ಮುಂದೆ ಉಗುಳಲು ಹಿಂದೆಗೆಯುವದಿಲ್ಲ. ಆತನು ತನ್ನ ಹಗ್ಗವನ್ನು ಸಡಲಿಸಿ ನನ್ನನ್ನು ಶ್ರಮೆ ಪಡಿಸುತ್ತಾನೆ; ನನ್ನ ಮುಖದ ಮುಂದೆ ಕಡಿವಾಣಕಿತ್ತು ಬಿಡುತ್ತಾರೆ;