Lamentations · chapter 3 · verse 52
Lamentations 3:52 in Kannada
ನನ್ನ ಶತ್ರುಗಳು ಕಾರಣವಿಲ್ಲದೆ ಪಕ್ಷಿಯಂತೆ ನನ್ನನ್ನು ಕಠೋರವಾಗಿ ಹಿಂದಟ್ಟಿ ಬೇಟೆಯಾಡಿದರು.
Nanna shatrugalu kaaranavillade pakshiyante nannannu kathoravaagi hindatti beteyaadidaru.
Lamentations 3:52 in English
- King James Version (KJV)
- Mine enemies chased me sore, like a bird, without cause.
- World English Bible (WEB)
- They have chased me relentlessly like a bird, those who are my enemies without cause.
- American Standard Version (ASV)
- They have chased me sore like a bird, they that are mine enemies without cause.
- Bible in Basic English (BBE)
- They who are against me without cause have gone hard after me as if I was a bird;
- Darby Translation (DBY)
- They that are mine enemies without cause have chased me sore like a bird.
- Webster's Bible (WBS)
- My enemies chased me fiercely, like a bird without cause.
- Young's Literal Translation (YLT)
- Hunted me sore as a bird have my enemies without cause.
Read in context
- 50ವಿಶ್ರಮಿಸಿಕೊಳ್ಳುವದೂ ಇಲ್ಲ.
- 51ನನ್ನ ನಗರದ ಕುಮಾರ್ತೆಯರೆಲ್ಲರ ನಿಮಿತ್ತವಾಗಿ ನನ್ನ ಕಣ್ಣು ನನ್ನ ಹೃದಯವನ್ನು ಪೀಡಿಸಿದೆ.
- 52ನನ್ನ ಶತ್ರುಗಳು ಕಾರಣವಿಲ್ಲದೆ ಪಕ್ಷಿಯಂತೆ ನನ್ನನ್ನು ಕಠೋರವಾಗಿ ಹಿಂದಟ್ಟಿ ಬೇಟೆಯಾಡಿದರು.
- 53ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ.
- 54ಪ್ರವಾಹವು ನನ ತಲೆಯ ಮೇಲೆ ಹರಿಯಿತು; ಆಗ--ನಾನು ಸತ್ತೆನು ಅಂದುಕೊಂಡೆನು.
Cross references
- Psalm 35:19 ಕೀರ್ತನೆಗಳು 35:19ನನ್ನ ಶತ್ರುಗಳು ನನ್ನ ವಿಷ ಯದಲ್ಲಿ ಸುಳ್ಳಾಗಿ ಸಂತೋಷಪಡದೆ ಇರಲಿ; ಇಲ್ಲವೆ ನನ್ನನ್ನು ಕಾರಣವಿಲ್ಲದೆ ಹಗೆಮಾಡುವವರು ಕಣ್ಣು ಸನ್ನೆಮಾಡದೆ ಇರಲಿ.
- Psalm 35:7 ಕೀರ್ತನೆಗಳು 35:7ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ.
- 1 Samuel 24:10–15 1 ಸಮುವೇಲನು 24:10–15ಇಗೋ, ಕರ್ತನು ಈ ಹೊತ್ತು ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನೆಂಬದನ್ನು ಈ ದಿನ ನಿನ್ನ ಕಣ್ಣುಗಳು ನೋಡಿದವು. ಕೆಲವರು ನಿನ್ನನ್ನು ಕೊಂದುಹಾಕಲು ಹೇಳಿದರು; ಆದರೆ ನನ್ನ ಕಣ್ಣು ನಿನ್ನನ್ನು ಕರುಣಿಸಿತು; ನಾನು--ಅವನು ಕರ್ತನ ಅಭಿಷಿಕ್ತನಾದದರಿಂದ ನನ್ನ ಕೈ ನನ್ನ ಒಡೆಯನಿಗೆ ವಿರೋಧವಾಗಿ ಚಾಚೆನು ಅಂದೆನು. ಇದಲ್ಲದೆ ನನ್ನ ತಂದೆಯೇ, ನೋಡು; ಹೌದು, ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ಅಂಚನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ ನಿನ್ನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ನನ್ನಲ್ಲಿ ಕೆಟ್ಟತನವು ದ್ರೋಹವು ಇಲ್ಲವೆಂದು ನಾನು ನಿನಗೆ ವಿರೋಧವಾಗಿ ಪಾಪಮಾಡ ಲಿಲ್ಲವೆಂದೂ ತಿಳಿದುಕೊಂಡು ನೋಡು. ಹೀಗಿದ್ದರೂ ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ. ಕರ್ತನು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ, ಕರ್ತನು ತಾನೇ ನನಗೋಸ್ಕರ ನಿನ್ನ ವಿಷಯ ಮುಯ್ಯಿಗೆ ಮುಯ್ಯಿ ಮಾಡಲಿ; ಆದರೆ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ. ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ ದುಷ್ಟರಿಂದ ದುಷ್ಟತ್ವವು ಹುಟ್ಟುವದು. ಆದರೂ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ. ಇಸ್ರಾಯೇಲಿನ ಅರಸನು ಯಾರನ್ನು ಬೆನ್ನಟ್ಟಿ ಹೊರಟನು? ಯಾರನ್ನು ನೀನು ಹಿಂದಟ್ಟುತ್ತೀ? ಸತ್ತನಾಯಿಯನ್ನೇ? ಒಂದು ಕೀಟವನ್ನೇ? ಕರ್ತನು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ ನನ್ನ ವ್ಯಾಜ್ಯವನ್ನು ನೋಡಿ ವ್ಯಾಜ್ಯವಾಡಿ ನನ್ನನ್ನು ನಿನ್ನ ಕೈಗೆ ತಪ್ಪಿಸಿಬಿಡಲಿ ಅಂದನು.
- 1 Samuel 25:28–29 1 ಸಮುವೇಲನು 25:28–29ನೀನು ದಯಮಾಡಿ ನಿನ್ನ ದಾಸಿಯದ್ರೋಹವನ್ನು ಮನ್ನಿಸಬೇಕು; ನನ್ನ ಒಡೆಯನು ಕರ್ತನ ಯುದ್ಧಗಳನ್ನು ನಡೆಸುತ್ತಾನೆ; ನಿನ್ನ ದಿನಗಳಲ್ಲಿ ನಿನ್ನ ಬಳಿಯಲ್ಲಿ ಕೆಟ್ಟತನವು ಕಂಡುಹಿಡಿ ಯಲ್ಪಟ್ಟದ್ದಿಲ್ಲ; ಆದದರಿಂದ ಕರ್ತನು ನನ್ನ ಒಡೆಯನಿಗೆ ಸ್ಥಿರವಾದ ಮನೆಯನ್ನು ಖಂಡಿತವಾಗಿ ಮಾಡುವನು. ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು.
- Psalm 11:1 ಕೀರ್ತನೆಗಳು 11:1ಕರ್ತನಲ್ಲಿ ನಾನು ಭರವಸವನ್ನು ಇಟ್ಟಿದ್ದೇನೆ; ಪಕ್ಷಿಯಂತೆ ನಿಮ್ಮ ಬೆಟ್ಟಕ್ಕೆ ಓಡು ಎಂದು ನನ್ನ ಪ್ರಾಣಕ್ಕೆ ನೀವು ಹೇಳುವದು ಹೇಗೆ?
- Psalm 69:4 ಕೀರ್ತನೆಗಳು 69:4ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.
- 1 Samuel 26:18–20 1 ಸಮುವೇಲನು 26:18–20ನನ್ನ ಒಡೆಯನು ತನ್ನ ಸೇವಕ ನನ್ನು ಹೀಗೆ ಹಿಂದಟ್ಟುವದೇನು? ನಾನೇನು ಮಾಡಿ ದೆನು? ನನ್ನ ಕೈಯಲ್ಲಿ ಏನು ಕೆಟ್ಟತನ ಅದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು. ಆದದರಿಂದ ಕರ್ತನ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಯಾಕಂದರೆ ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ ಇಸ್ರಾಯೇಲಿನ ಅರಸನು ಒಂದು ಕೀಟವನ್ನು ಹುಡು ಕಲು ಹೊರಟನು ಎಂಬದೇ.
- Psalm 109:3 ಕೀರ್ತನೆಗಳು 109:3ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ.
- Psalm 119:161 ಕೀರ್ತನೆಗಳು 119:161ಪ್ರಧಾನರು ಕಾರಣವಿಲ್ಲದೆ ನನ್ನನ್ನು ಹಿಂಸಿಸು ತ್ತಾರೆ. ನನ್ನ ಹೃದಯವು ನಿನ್ನ ವಾಕ್ಯಗಳಿಗೆ ಮಾತ್ರ ಭಯಪಡುತ್ತದೆ.
- Jeremiah 38:4–6 ಯೆರೆಮೀಯ 38:4–6ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು. ಆಗ ಅರಸನಾದ ಚಿದ್ಕೀಯನು ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡಬಲ್ಲವ ನಲ್ಲ ಅಂದನು. ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.
- Jeremiah 37:15–16 ಯೆರೆಮೀಯ 37:15–16ಆಗ ಪ್ರಧಾನರು ಯೆರೆವಿಾಯನ ಮೇಲೆ ಕೋಪಗೊಂಡು ಅವನನ್ನು ಹೊಡೆದು ಲೇಖಕನಾದ ಯೋನಾತಾನನ ಮನೆಯ ಬಂಧನದಲ್ಲಿ ಇಟ್ಟರು; ಯಾಕಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು. ಯೆರೆವಿಾಯನು ನೆಲಮಾಳಿಗೆಯಲ್ಲಿಯೂ ಸಣ್ಣಕೋಣೆಯಲ್ಲಿಯೂ ಪ್ರವೇಶಿಸಿ ಬಹಳ ದಿವಸ ಅಲ್ಲಿ ಇದ್ದ ಮೇಲೆ ಅರಸನಾದ ಚಿದ್ಕೀಯನು
- Jeremiah 37:18 ಯೆರೆಮೀಯ 37:18ಇದಲ್ಲದೆ ಯೆರೆವಿಾಯನು ಅರಸನಾದ ಚಿದ್ಕೀಯನಿಗೆ ಹೇಳಿದ್ದೇ ನಂದರೆ--ನೀವು ನನ್ನನ್ನು ಸೆರೆಮನೆಯಲ್ಲಿ ಹಾಕುವ ಹಾಗೆ ನಾನು ನಿನಗೂ ನಿನ್ನ ಸೇವಕರಿಗೂ ಈ ಜನರಿಗೂ ವಿರೋಧವಾಗಿ ಏನು ಅಡ್ಡಿ ಮಾಡಿದ್ದೇನೆ? ಇದಲ್ಲದೆ