Lamentations · chapter 3 · verse 54
Lamentations 3:54 in Kannada
ಪ್ರವಾಹವು ನನ ತಲೆಯ ಮೇಲೆ ಹರಿಯಿತು; ಆಗ--ನಾನು ಸತ್ತೆನು ಅಂದುಕೊಂಡೆನು.
Pravaahavu nana taleya mele hariyitu; aaga--naanu sattenu andukondenu.
Lamentations 3:54 in English
- King James Version (KJV)
- Waters flowed over mine head; [then] I said, I am cut off.
- World English Bible (WEB)
- Waters flowed over my head. I said, “I am cut off.”
- American Standard Version (ASV)
- Waters flowed over my head; I said, I am cut off.
- Bible in Basic English (BBE)
- Waters were flowing over my head; I said, I am cut off.
- Darby Translation (DBY)
- Waters streamed over my head; I said, I am cut off.
- Webster's Bible (WBS)
- Waters flowed over my head; [then] I said, I am cut off.
- Young's Literal Translation (YLT)
- Flowed have waters over my head, I have said, I have been cut off.
Read in context
- 52ನನ್ನ ಶತ್ರುಗಳು ಕಾರಣವಿಲ್ಲದೆ ಪಕ್ಷಿಯಂತೆ ನನ್ನನ್ನು ಕಠೋರವಾಗಿ ಹಿಂದಟ್ಟಿ ಬೇಟೆಯಾಡಿದರು.
- 53ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ.
- 54ಪ್ರವಾಹವು ನನ ತಲೆಯ ಮೇಲೆ ಹರಿಯಿತು; ಆಗ--ನಾನು ಸತ್ತೆನು ಅಂದುಕೊಂಡೆನು.
- 55ಓ ಕರ್ತನೇ, ನಾನು ಆಳವಾದ ಕಾರಾಗೃಹದಿಂದ ನಿನ್ನ ಹೆಸರನ್ನು ಎತ್ತಿ ಬೇಡಿಕೊಂಡೆನು.
- 56ನೀನು ನನ್ನ ಸ್ವರವನ್ನು ಕೇಳಿದ್ದೀ; ನನ್ನ ಶ್ವಾಸಕ್ಕೂ ನನ್ನ ಕೂಗಿಗೂ ನಿನ್ನ ಕಿವಿಯನ್ನು ಮರೆಮಾಡಲಿಲ್ಲ.
Cross references
- Jonah 2:3–5 ಯೋನ 2:3–5ನನ್ನನ್ನು ನೀನು ಅಗಾಧದಲ್ಲಿಯೂ ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿ; ಪ್ರವಾಹಗಳು ನನ್ನನ್ನು ಸುತ್ತಿಕೊಂಡವು; ನಿನ್ನ ಎಲ್ಲಾ ಅಲೆಗಳೂ ನಿನ್ನ ತೆರೆಗಳೂ ನನ್ನ ಮೇಲೆ ದಾಟಿಹೋದವು. ಆಗ ನಾನು ಹೇಳಿದ್ದು--ನಿನ್ನ ಕಣ್ಣುಗಳ ಎದುರಿನಿಂದ ಹೊರಗೆ ಹಾಕಲ್ಪಟ್ಟಿದ್ದೇನೆ; ಆದಾಗ್ಯೂ ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ತಿರುಗಿ ನೋಡುವೆನು. ನೀರು ಗಳು ಪ್ರಾಣದ ಮಟ್ಟಿಗೂ ನನ್ನನ್ನು ಸುತ್ತಿಕೊಂಡವು; ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು; ಆಪುಗಳು ನನ್ನ ತಲೆಯನ್ನು ಸುತ್ತಿಕೊಂಡಿದ್ದವು.
- Ezekiel 37:11 ಯೆಹೆಜ್ಕೇಲನು 37:11ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು.
- Lamentations 3:18 ಪ್ರಲಾಪಗಳು 3:18ನನ್ನ ಬಲವೂ ನಿರೀಕ್ಷೆಯೂ ಕರ್ತನಿಂದ ನಾಶವಾದವೆಂದು ಹೇಳಿ
- Psalm 69:1–2 ಕೀರ್ತನೆಗಳು 69:1–2ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ. ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ.
- Psalm 18:4 ಕೀರ್ತನೆಗಳು 18:4ಮರಣದ ದುಃಖಗಳು ನನ್ನನ್ನು ಆವರಿಸಿಕೊಂಡವು, ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು.
- 2 Corinthians 1:8–10 2 ಕೊರಿಂಥದವರಿಗೆ 1:8–10ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು. ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು. ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
- Isaiah 38:10–13 ಯೆಶಾಯ 38:10–13ನನ್ನ ದಿವಸಗಳು ಕಡಿಮೆ ಮಾಡಲ್ಪಟ್ಟದ್ದರಿಂದ ನಾನು ಪಾತಾಳದ ದ್ವಾರ ಗಳೊಳಗೆ ಹೋಗಬೇಕು ನನ್ನ ಆಯುಷ್ಯದಲ್ಲಿ ಮಿಕ್ಕಾ ದದ್ದು ನನಗೆ ತಪ್ಪಿಹೋಯಿತು ಎಂದು ಅಂದು ಕೊಂಡನು. ಕರ್ತನನ್ನು, ಜೀವಿತರ ದೇಶದಲ್ಲಿಯೂ ಸಹ ಕರ್ತನನ್ನು ನೋಡೆನೆಂದೂ ಇನ್ನೂ ಭೂಲೋಕ ನಿವಾಸಿಗಳಲ್ಲೊಬ್ಬನಾಗಿ ಮನುಷ್ಯರನ್ನು ನೋಡಲಾರೆ ನಲ್ಲಾ ಎಂದು ಅಂದುಕೊಂಡೆನು. ನನ್ನ ಆಯುಷ್ಯ ಮುಗಿಯಿತು ಮತ್ತು ಕುರುಬನ ಗುಡಾರದಂತೆ ನನ್ನಿಂದ ತೆಗೆದುಹಾಕಲ್ಪಟ್ಟಿದೆ; ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೇಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ. ಆತನು ಸಿಂಹದಂತೆ ಎಲುಬುಗಳನ್ನೆಲ್ಲಾ ಮುರಿದಿದ್ದಾಗ್ಯೂ ಬೆಳಗಿನ ವರೆಗೂ ತಾಳಿಕೊಂಡೇ ಇದ್ದೆನು; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ.
- Psalm 124:4–5 ಕೀರ್ತನೆಗಳು 124:4–5ಆಗ ನೀರುಗಳು ನಮ್ಮನ್ನು ಮುಣುಗಿಸುತ್ತಿದ್ದವು; ತೊರೆಯು ನಮ್ಮ ಪ್ರಾಣದ ಮೇಲೆ ಹರಿಯುತ್ತಿತ್ತು. ಆಗ ನಮ್ಮ ಪ್ರಾಣದ ಮೇಲೆ ಗರ್ವದ ನೀರುಗಳು ಹರಿಯುತ್ತಿ ದ್ದವು.
- Psalm 69:15 ಕೀರ್ತನೆಗಳು 69:15ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ.
- Psalm 31:22 ಕೀರ್ತನೆಗಳು 31:22ಆದರೆ ನಾನು ನಿನ್ನ ಕಣ್ಣುಗಳ ಎದುರಿನಿಂದ ಕಡಿದು ಹಾಕಲ್ಪಟ್ಟಿದ್ದೇನೆಂದು ಆತುರ ದಲ್ಲಿ ಹೇಳಿದೆನು; ಆದರೂ ನಾನು ಮೊರೆಯಿಡು ವಾಗ ನನ್ನ ವಿಜ್ಞಾಪನೆಗಳ ಸ್ವರವನ್ನು ನೀನು ಕೇಳಿದಿ.
- Job 17:11–16 ಯೋಬನು 17:11–16ನನ್ನ ದಿವಸಗಳು ಹಾದು ಹೋದವು: ನನ್ನ ಹೃದ ಯಕ್ಕೆ ಸ್ವಂತವಾಗಿರುವ ನನ್ನ ಉದ್ದೇಶಗಳು ಭಂಗವಾ ದವು. ಅವರು ರಾತ್ರಿಯನ್ನು ಹಗಲನ್ನಾಗಿ ಮಾಡು ತ್ತಾರೆ; ಬೆಳಕು ಕತ್ತಲೆಯ ನಿಮಿತ್ತ ಚಿಕ್ಕದಾಗಿದೆ. ನಾನು ನಿರೀಕ್ಷಿಸಿದರೆ ಸಮಾಧಿಯೇ ನನ್ನ ಮನೆ; ಕತ್ತಲೆಯಲ್ಲಿ ನನ್ನ ಹಾಸಿಗೆಯನ್ನು ಹಾಸಿದ್ದೇನೆ. ಕೊಳೆಯುವಿಕೆಗೆ -- ನೀನು ನನ್ನ ತಂದೆ ಎಂದೂ ಹುಳಕ್ಕೆ--ನನ್ನ ತಾಯಿಯೇ, ನನ್ನ ಅಕ್ಕನೇ ಎಂದೂ ನಾನು ಹೇಳಿದೆನು. ಹಾಗಾದರೆ ಈಗ ನನ್ನ ನಿರೀಕ್ಷೆ ಎಲ್ಲಿ? ನನ್ನ ನಿರೀಕ್ಷೆಯನ್ನು ಯಾರು ನೋಡುವರು?ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು. ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು.