Lamentations · chapter 3 · verse 55
Lamentations 3:55 in Kannada
ಓ ಕರ್ತನೇ, ನಾನು ಆಳವಾದ ಕಾರಾಗೃಹದಿಂದ ನಿನ್ನ ಹೆಸರನ್ನು ಎತ್ತಿ ಬೇಡಿಕೊಂಡೆನು.
O kartane, naanu aalavaada kaaraagruhadinda ninna hesarannu etti bedikondenu.
Lamentations 3:55 in English
- King James Version (KJV)
- I called upon thy name, O LORD, out of the low dungeon.
- World English Bible (WEB)
- I called on your name, LORD, out of the lowest dungeon.
- American Standard Version (ASV)
- I called upon thy name, O Jehovah, out of the lowest dungeon.
- Bible in Basic English (BBE)
- I was making prayer to your name, O Lord, out of the lowest prison.
- Darby Translation (DBY)
- I called upon thy name, Jehovah, out of the lowest pit.
- Webster's Bible (WBS)
- I called upon thy name, O LORD, out of the low dungeon.
- Young's Literal Translation (YLT)
- I called Thy name, O Jehovah, from the lower pit.
Read in context
- 53ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ.
- 54ಪ್ರವಾಹವು ನನ ತಲೆಯ ಮೇಲೆ ಹರಿಯಿತು; ಆಗ--ನಾನು ಸತ್ತೆನು ಅಂದುಕೊಂಡೆನು.
- 55ಓ ಕರ್ತನೇ, ನಾನು ಆಳವಾದ ಕಾರಾಗೃಹದಿಂದ ನಿನ್ನ ಹೆಸರನ್ನು ಎತ್ತಿ ಬೇಡಿಕೊಂಡೆನು.
- 56ನೀನು ನನ್ನ ಸ್ವರವನ್ನು ಕೇಳಿದ್ದೀ; ನನ್ನ ಶ್ವಾಸಕ್ಕೂ ನನ್ನ ಕೂಗಿಗೂ ನಿನ್ನ ಕಿವಿಯನ್ನು ಮರೆಮಾಡಲಿಲ್ಲ.
- 57ನಾನು ನಿನ್ನನ್ನು ಕರೆದ ದಿನದಲ್ಲಿ ನೀನು ಸವಿಾಪಕ್ಕೆ ಬಂದು--ಭಯಪಡ ಬೇಡ ಎಂದು ಹೇಳಿದಿ.
Cross references
- Acts 16:24–28 ಅಪೊಸ್ತಲರ ಕೃತ್ಯಗಳು 16:24–28ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು. ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು. ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು. ಸೆರೆಯ ಅಧಿಕಾರಿಯು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ತನ್ನನ್ನು ತಾನು ಕೊಂದುಕೊಳ್ಳಬೇಕೆಂದಿದ್ದನು. ಆದರೆ ಪೌಲನು ಮಹಾಧ್ವನಿಯಿಂದ ಕೂಗಿ ಅವನಿಗೆ--ನೀನೇನೂ ಕೇಡು ಮಾಡಿಕೊಳ್ಳಬೇಡ; ನಾವೆಲ್ಲರೂ ಇಲ್ಲೇ ಇದ್ದೇವೆ ಎಂದು ಹೇಳಿದನು.
- Psalm 116:3–4 ಕೀರ್ತನೆಗಳು 116:3–4ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು. ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು.
- Jeremiah 38:6 ಯೆರೆಮೀಯ 38:6ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.
- Jonah 2:2–4 ಯೋನ 2:2–4ನಾನು ನನ್ನ ವ್ಯಥೆಯ ದೆಸೆಯಿಂದ ಕರ್ತನಿಗೆ ಮೊರೆಯಿಟ್ಟೆನು; ಆತನು ನನ್ನ ಕೂಗನ್ನು ಕೇಳಿದನು; ನರಕದ ಹೊಟ್ಟೆ ಯೊಳಗಿಂದ ನಾನು ಕೂಗಿದೆನು, ಆಗ ನನ್ನ ಶಬ್ದವನ್ನು ನೀನು ಕೇಳಿದಿ. ನನ್ನನ್ನು ನೀನು ಅಗಾಧದಲ್ಲಿಯೂ ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿ; ಪ್ರವಾಹಗಳು ನನ್ನನ್ನು ಸುತ್ತಿಕೊಂಡವು; ನಿನ್ನ ಎಲ್ಲಾ ಅಲೆಗಳೂ ನಿನ್ನ ತೆರೆಗಳೂ ನನ್ನ ಮೇಲೆ ದಾಟಿಹೋದವು. ಆಗ ನಾನು ಹೇಳಿದ್ದು--ನಿನ್ನ ಕಣ್ಣುಗಳ ಎದುರಿನಿಂದ ಹೊರಗೆ ಹಾಕಲ್ಪಟ್ಟಿದ್ದೇನೆ; ಆದಾಗ್ಯೂ ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ತಿರುಗಿ ನೋಡುವೆನು.
- Psalm 18:5–6 ಕೀರ್ತನೆಗಳು 18:5–6ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ನೇಣುಗಳು ನನ್ನನ್ನು ಸುತ್ತಿದವು. ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.
- Psalm 130:1–2 ಕೀರ್ತನೆಗಳು 130:1–2ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ. ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ.
- 2 Chronicles 33:11–12 2 ಪೂರ್ವಕಾಲವೃತ್ತಾಂತ 33:11–12ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು. ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.
- Psalm 69:13–18 ಕೀರ್ತನೆಗಳು 69:13–18ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು. ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ. ಓ ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು. ನಿನ್ನ ಮುಖವನ್ನು ನಿನ್ನ ಸೇವಕನಿಗೆ ಮರೆಮಾಡಬೇಡ; ನಾನು ಇಕ್ಕಟ್ಟಿನಲ್ಲಿದ್ದೇನೆ; ಬೇಗ ನನಗೆ ಉತ್ತರಕೊಡು. ಸವಿಾಪವಾಗಿದ್ದು ನನ್ನ ಪ್ರಾಣವನ್ನು ರಕ್ಷಿಸು ನನ್ನನ್ನು ನನ್ನ ಶತ್ರುಗಳ ನಿಮಿತ್ತ ವಾಗಿ ವಿಮೋಚಿಸು.
- Psalm 40:1–2 ಕೀರ್ತನೆಗಳು 40:1–2ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು. ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು.
- Psalm 142:3–7 ಕೀರ್ತನೆಗಳು 142:3–7ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ; ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ. ನನ್ನ ಬಲಗಡೆಯಲ್ಲಿ ನೋಡಿದೆನು; ನೋಡಿದಾಗ ನನ್ನನ್ನು ತಿಳಿಯುವವನು ಯಾವನೂ ಇಲ್ಲ. ಆಶ್ರಯವು ನನ್ನ ಬಳಿಯಿಂದ ತಪ್ಪಿಹೋಯಿತು; ನನ್ನ ಪ್ರಾಣಕ್ಕಾಗಿ ಚಿಂತಿಸುವವನು ಒಬ್ಬನೂ ಇಲ್ಲ. ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ. ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ. ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.