Lamentations · chapter 4 · verse 10
Lamentations 4:10 in Kannada
ಕನಿಕರ ತುಂಬಿದ ಹೆಂಗಸರ ಕೈಗಳು ಅವರ ಸ್ವಂತ ಮಕ್ಕಳನ್ನೇ ಬೇಯಿಸಿದವು; ಇವರು ನನ್ನ ಜನರ ಮಗಳ ನಾಶದಲ್ಲಿ ಅವರಿಗೆ ಆಹಾರ ವಾದರು.
Kanikara tumbida hengasara kaigalu avara svanta makkalanne beyisidavu; ivaru nanna janara magala naashadalli avarige aahaara vaadaru.
Lamentations 4:10 in English
- King James Version (KJV)
- The hands of the pitiful women have sodden their own children: they were their meat in the destruction of the daughter of my people.
- World English Bible (WEB)
- The hands of the pitiful women have boiled their own children. They were their food in the destruction of the daughter of my people.
- American Standard Version (ASV)
- The hands of the pitiful women have boiled their own children; They were their food in the destruction of the daughter of my people.
- Bible in Basic English (BBE)
- The hands of kind-hearted women have been boiling their children; they were their food in the destruction of the daughter of my people.
- Darby Translation (DBY)
- The hands of pitiful women have boiled their own children: they were their meat in the ruin of the daughter of my people.
- Webster's Bible (WBS)
- The hands of the pitiful women have boiled their own children: they were their food in the destruction of the daughter of my people.
- Young's Literal Translation (YLT)
- The hands of merciful women have boiled their own children, They have been for food to them, In the destruction of the daughter of my people.
Read in context
- 8ಈಗ ಅವರ ರೂಪವು ಕಲ್ಲಿದ್ದಲಿಗಿಂತ ಕಪ್ಪಾಗಿದೆ, ಬೀದಿಗಳಲ್ಲಿ ಅವರು ಯಾರೆಂಬದು ತಿಳಿಯಲಿಲ್ಲ; ಅವರ ಚರ್ಮವು ಅವರ ಎಲುಬುಗಳಿಗೆ ಹತ್ತಿಕೊಂಡಿದೆ, ಅದು ಒಣಗಿ ಕಡ್ಡಿಯ ಹಾಗೆ ಆಗಿದೆ.
- 9ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ.
- 10ಕನಿಕರ ತುಂಬಿದ ಹೆಂಗಸರ ಕೈಗಳು ಅವರ ಸ್ವಂತ ಮಕ್ಕಳನ್ನೇ ಬೇಯಿಸಿದವು; ಇವರು ನನ್ನ ಜನರ ಮಗಳ ನಾಶದಲ್ಲಿ ಅವರಿಗೆ ಆಹಾರ ವಾದರು.
- 11ಕರ್ತನು ತನ್ನ ರೋಷವನ್ನು ತೀರಿಸಿ ದ್ದಾನೆ; ಆತನು ತನ್ನ ಉಗ್ರವಾದ ಕೋಪವನ್ನು ಸುರಿದಿದ್ದಾನೆ; ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.
- 12ಭೂ ರಾಜರೂ ವಿರೋಧಿಯೂ ಶತ್ರುವೂ ಯೆರೂಸಲೇ ಮಿನಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.
Cross references
- Isaiah 49:15 ಯೆಶಾಯ 49:15ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ.
- 2 Kings 6:26–29 2 ಅರಸುಗಳು 6:26–29ಇಸ್ರಾ ಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ ಒಬ್ಬ ಸ್ತ್ರೀಯು ಅವನನ್ನು ಬೇಡುವ ವಳಾಗಿ--ನನ್ನ ಯಜಮಾನನೇ, ಅರಸನೇ, ಸಹಾಯ ಮಾಡು ಅಂದಳು. ಅದಕ್ಕವನು--ಕರ್ತನು ನಿನ್ನನ್ನು ಸಂರಕ್ಷಿಸದೆ ಹೋದರೆ ನಾನು ಎಲ್ಲಿಂದ ನಿನ್ನನ್ನು ರಕ್ಷಿ ಸಲಿ? ಕಣದಿಂದಲೋ ಇಲ್ಲವೆ ದ್ರಾಕ್ಷೇ ಅಲೆಯಿಂದ ಲೋ ಅಂದನು. ಅರಸನು ಅವಳಿಗೆ--ನಿನ್ನ ದುಃಖ ವೇನು ಅಂದನು. ಅದಕ್ಕವಳು--ಈ ಸ್ತ್ರೀಯು ನನಗೆ ಹೇಳಿದ್ದೇನಂದರೆ--ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು; ನಾಳೆ ನನ್ನ ಮಗನನ್ನು ತಿನ್ನೋಣ ಅಂದಳು. ಹಾಗೆಯೇ ನಾನು ನನ್ನ ಮಗನನ್ನು ಬೇಯಿಸಿ ತಿಂದೆವು. ಮಾರನೇ ದಿವಸದಲ್ಲಿ ನಾನು ಅವಳಿಗೆ--ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು ಅಂದೆನು. ಆದರೆ ಅವಳು ತನ್ನ ಮಗನನ್ನು ಬಚ್ಚಿಟ್ಟಿದ್ದಾಳೆ ಅಂದಳು.
- Lamentations 2:20 ಪ್ರಲಾಪಗಳು 2:20ಓ ಕರ್ತನೇ, ನೋಡು, ನೀನು ಇದನ್ನು ಯಾರಿಗೆ ಮಾಡಿದಿಯೋ ಯೋಚಿಸು. ಸ್ತ್ರೀಯರು ತಮ್ಮ ಫಲವಾದ ಗೇಣುದ್ದದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಪ್ರವಾದಿಯು ಕರ್ತನ ಪರಿಶುದ್ಧ ಸ್ಥಳದಲ್ಲಿ ಕೊಲ್ಲಲ್ಪಡಬೇಕೋ?
- Jeremiah 19:9 ಯೆರೆಮೀಯ 19:9ಅವರು ತಮ್ಮ ಕುಮಾರರ ಕುಮಾರ್ತೆಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು; ಮುತ್ತಿಗೆಯಲ್ಲಿ ಸಹ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.
- Leviticus 26:29 ಯಾಜಕಕಾಂಡ 26:29ನೀವು ನಿಮ್ಮ ಕುಮಾರ ಕುಮಾರ್ತೆಯರ ಮಾಂಸವನ್ನು ತಿನ್ನುವಿರಿ.
- Ezekiel 5:10 ಯೆಹೆಜ್ಕೇಲನು 5:10ಆದದರಿಂದ ನಿನ್ನ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು; ಮಕ್ಕಳು ಅವರ ತಂದೆಗಳನ್ನು ತಿನ್ನುವರು; ಹೀಗೆ ನಿನ್ನಲ್ಲಿ ನ್ಯಾಯ ತೀರ್ಪನ್ನು ನಡಿಸುವೆನು. ನಿನ್ನಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.
- Lamentations 3:48 ಪ್ರಲಾಪಗಳು 3:48ನನ್ನ ಜನರ ಕುಮಾರಿಯ ನಾಶನದ ನಿಮಿತ್ತವಾಗಿ ನನ್ನ ಕಣ್ಣಿನಿಂದ ನೀರು ನದಿಯಾಗಿ ಹರಿದುಹೋಗುತ್ತದೆ.
- Lamentations 4:3 ಪ್ರಲಾಪಗಳು 4:3ಸಮುದ್ರದ ವಿಕಾರವಾದ ಪ್ರಾಣಿಗಳಾ ದರೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಮೊಲೆ ಕೊಡುತ್ತವೆ; ಆದರೆ ನನ್ನ ಜನರ ಮಗಳು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿ ದ್ದಾಳೆ.
- Deuteronomy 28:53–57 ಧರ್ಮೋಪದೇಶಕಾಂಡ 28:53–57ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ. ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು. ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ. ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು.