Lamentations · chapter 4 · verse 11
Lamentations 4:11 in Kannada
ಕರ್ತನು ತನ್ನ ರೋಷವನ್ನು ತೀರಿಸಿ ದ್ದಾನೆ; ಆತನು ತನ್ನ ಉಗ್ರವಾದ ಕೋಪವನ್ನು ಸುರಿದಿದ್ದಾನೆ; ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.
Kartanu tanna roshavannu teerisi ddaane; aatanu tanna ugravaada kopavannu surididdaane; cheeyoninalli hottisida benkiyu adara astivaaragalannu tindubittitu.
Lamentations 4:11 in English
- King James Version (KJV)
- The LORD hath accomplished his fury; he hath poured out his fierce anger, and hath kindled a fire in Zion, and it hath devoured the foundations thereof.
- World English Bible (WEB)
- The LORD has accomplished his wrath. He has poured out his fierce anger. He has kindled a fire in Zion, which has devoured its foundations.
- American Standard Version (ASV)
- Jehovah hath accomplished his wrath, he hath poured out his fierce anger; And he hath kindled a fire in Zion, which hath devoured the foundations thereof.
- Bible in Basic English (BBE)
- The Lord has given full effect to his passion, he has let loose his burning wrath; he has made a fire in Zion, causing the destruction of its bases.
- Darby Translation (DBY)
- Jehovah hath accomplished his fury; he hath poured out his fierce anger, and hath kindled a fire in Zion, which hath consumed the foundations thereof.
- Webster's Bible (WBS)
- The LORD hath accomplished his fury; he hath poured out his fierce anger, and hath kindled a fire in Zion, and it hath devoured her foundations.
- Young's Literal Translation (YLT)
- Completed hath Jehovah His fury, He hath poured out the fierceness of His anger, And he kindleth a fire in Zion, And it devoureth her foundations.
Read in context
- 9ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ.
- 10ಕನಿಕರ ತುಂಬಿದ ಹೆಂಗಸರ ಕೈಗಳು ಅವರ ಸ್ವಂತ ಮಕ್ಕಳನ್ನೇ ಬೇಯಿಸಿದವು; ಇವರು ನನ್ನ ಜನರ ಮಗಳ ನಾಶದಲ್ಲಿ ಅವರಿಗೆ ಆಹಾರ ವಾದರು.
- 11ಕರ್ತನು ತನ್ನ ರೋಷವನ್ನು ತೀರಿಸಿ ದ್ದಾನೆ; ಆತನು ತನ್ನ ಉಗ್ರವಾದ ಕೋಪವನ್ನು ಸುರಿದಿದ್ದಾನೆ; ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.
- 12ಭೂ ರಾಜರೂ ವಿರೋಧಿಯೂ ಶತ್ರುವೂ ಯೆರೂಸಲೇ ಮಿನಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.
- 13ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು.
Cross references
- Jeremiah 7:20 ಯೆರೆಮೀಯ 7:20ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.
- Ezekiel 22:31 ಯೆಹೆಜ್ಕೇಲನು 22:31ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
- Lamentations 2:17 ಪ್ರಲಾಪಗಳು 2:17ಕರ್ತನು ತಾನು ಸಂಕಲ್ಪಿಸಿದ್ದನ್ನು ಮಾಡಿದ್ದಾನೆ; ಆತನು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತನ್ನ ವಾಕ್ಯವನ್ನು ಪೂರೈಸಿದ್ದಾನೆ. ಆತನು ಕೆಡವಿ ಕನಿಕರಿಸಲಿಲ್ಲ; ಆತನು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿ ಅವನ ಕೊಂಬನ್ನು ಎತ್ತಿದ್ದಾನೆ.
- Jeremiah 17:27 ಯೆರೆಮೀಯ 17:27ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.
- Luke 21:22 ಲೂಕನು 21:22ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.
- Daniel 9:12 ದಾನಿಯೇಲನು 9:12ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
- Jeremiah 13:14 ಯೆರೆಮೀಯ 13:14ಅವರ ತಂದೆಗಳನ್ನೂ ಮಕ್ಕಳನ್ನೂ ಕೂಡ ಒಬ್ಬನ ಮೇಲೊಬ್ಬನನ್ನು ಅಪ್ಪಳಿಸು ವೆನು. ನಾನು ಅವರನ್ನು ಕನಿಕರಿಸುವದಿಲ್ಲ, ಕರುಣಿಸು ವದಿಲ್ಲ ಅಂತಃಕರುಣೆಪಡುವದಿಲ್ಲ ಅವರನ್ನು ಕೆಡಿಸು ವೆನು ಎಂದು ಕರ್ತನು ಅನ್ನುತ್ತಾನೆ.
- Ezekiel 20:47–48 ಯೆಹೆಜ್ಕೇಲನು 20:47–48ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು. ಕರ್ತನಾದ ನಾನೇ ಅದನ್ನು ಹಚ್ಚಿದೆನೆಂದು ಶರೀರ ದಲ್ಲಿರುವವರೆಲ್ಲರೂ ತಿಳಿದುಕೊಳ್ಳುವರು! ಅದು ಆರಿ ಹೋಗುವ ದಿಲ್ಲ.ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
- Zechariah 1:6 ಜೆಕರ್ಯ 1:6ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
- Lamentations 4:22 ಪ್ರಲಾಪಗಳು 4:22ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
- Jeremiah 24:8–10 ಯೆರೆಮೀಯ 24:8–10ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ. ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು. ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
- Deuteronomy 32:21–25 ಧರ್ಮೋಪದೇಶಕಾಂಡ 32:21–25ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು. ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು. ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು. ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು. ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು.