Lamentations · chapter 4 · verse 13
Lamentations 4:13 in Kannada
ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು.
Avala pravaadigala paapagaligoskaravoo avala yaajakara akramagali goskaravoo heegaayitu. Yaakandare ivaru neetivantara raktavannu avala madhya chelliddaru.
Lamentations 4:13 in English
- King James Version (KJV)
- For the sins of her prophets, [and] the iniquities of her priests, that have shed the blood of the just in the midst of her,
- World English Bible (WEB)
- It is because of the sins of her prophets and the iniquities of her priests, that have shed the blood of the just in the middle of her.
- American Standard Version (ASV)
- [It is] because of the sins of her prophets, [and] the iniquities of her priests, That have shed the blood of the just in the midst of her.
- Bible in Basic English (BBE)
- It is because of the sins of her prophets and the evil-doing of her priests, by whom the blood of the upright has been drained out in her.
- Darby Translation (DBY)
- [It is] for the sins of her prophets, [and] the iniquities of her priests, who have shed the blood of the righteous in the midst of her.
- Webster's Bible (WBS)
- For the sins of her prophets, [and] the iniquities of her priests, that have shed the blood of the just in the midst of her.
- Young's Literal Translation (YLT)
- Because of the sins of her prophets, The iniquities of her priests, Who are shedding in her midst the blood of the righteous,
Read in context
- 11ಕರ್ತನು ತನ್ನ ರೋಷವನ್ನು ತೀರಿಸಿ ದ್ದಾನೆ; ಆತನು ತನ್ನ ಉಗ್ರವಾದ ಕೋಪವನ್ನು ಸುರಿದಿದ್ದಾನೆ; ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.
- 12ಭೂ ರಾಜರೂ ವಿರೋಧಿಯೂ ಶತ್ರುವೂ ಯೆರೂಸಲೇ ಮಿನಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.
- 13ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು.
- 14ಅವರು ಬೀದಿಗಳಲ್ಲಿ ಕುರುಡರಂತೆ ಅಲೆದಾಡಿದರು, ಅವರು ರಕ್ತದಿಂದ ತಮ್ಮನ್ನು ತಾವೇ ಅಪವಿತ್ರಪಡಿಸಿ ಕೊಂಡರು; ಆದದರಿಂದ ಮನುಷ್ಯರು ಅವರ ವಸ್ತ್ರಗಳನ್ನು ಮುಟ್ಟಲಾರದೆ ಹೋದರು.
- 15ಅವರು ಜನರಿಗೆ--ನೀವು ಸರಿಯಿರಿ ಇದು ಅಶುದ್ಧವಾಗಿದೆ; ಸರಿಯಿರಿ, ಸರಿಯಿರಿ; ಮುಟ್ಟಬೇಡಿರಿ ಎಂದು ಕೂಗಿ ಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರು ವಾಗ--ಅವರು ಇನ್ನು ಮೇಲೆ ಅಲ್ಲಿ ವಾಸಮಾಡು ವದಿಲ್ಲ ಎಂದು ಅನ್ಯ ಜನಾಂಗಗಳೊಳಗೆ ಹೇಳಿದರು.
Cross references
- Jeremiah 5:31 ಯೆರೆಮೀಯ 5:31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
- Jeremiah 6:13 ಯೆರೆಮೀಯ 6:13ಅವ ರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರ ವರೆಗೆ ಅವರೆಲ್ಲರೂ ತಮ್ಮನ್ನು ಲೋಭಕ್ಕೆ ಒಪ್ಪಿಸಿ ಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರ ವರೆಗೆ ಪ್ರತಿ ಯೊಬ್ಬನು ಸುಳ್ಳಾಗಿ ನಡಕೊಳ್ಳುತ್ತಾನೆ.
- Lamentations 2:14 ಪ್ರಲಾಪಗಳು 2:14ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.
- Jeremiah 26:8–9 ಯೆರೆಮೀಯ 26:8–9ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು. ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.
- Matthew 23:31 ಮತ್ತಾಯನು 23:31ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.
- Ezekiel 22:26–28 ಯೆಹೆಜ್ಕೇಲನು 22:26–28ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು. ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ. ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ.
- Matthew 23:33–37 ಮತ್ತಾಯನು 23:33–37ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ? ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು. ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು. ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
- Luke 11:47–51 ಲೂಕನು 11:47–51ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ. ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ. ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು. ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು. ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Jeremiah 2:20 ಯೆರೆಮೀಯ 2:20ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
- 1 Thessalonians 2:15–16 1 ಥೆಸಲೊನೀಕದವರಿಗೆ 2:15–16ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ. ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
- Micah 3:11–12 ಮೀಕ 3:11–12ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು. ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- Jeremiah 14:14 ಯೆರೆಮೀಯ 14:14ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.