Lamentations · chapter 4 · verse 14
Lamentations 4:14 in Kannada
ಅವರು ಬೀದಿಗಳಲ್ಲಿ ಕುರುಡರಂತೆ ಅಲೆದಾಡಿದರು, ಅವರು ರಕ್ತದಿಂದ ತಮ್ಮನ್ನು ತಾವೇ ಅಪವಿತ್ರಪಡಿಸಿ ಕೊಂಡರು; ಆದದರಿಂದ ಮನುಷ್ಯರು ಅವರ ವಸ್ತ್ರಗಳನ್ನು ಮುಟ್ಟಲಾರದೆ ಹೋದರು.
Avaru beedigalalli kurudarante aledaadidaru, avaru raktadinda tammannu taave apavitrapadisi kondaru; aadadarinda manushyaru avara vastragalannu muttalaarade hodaru.
Lamentations 4:14 in English
- King James Version (KJV)
- They have wandered [as] blind [men] in the streets, they have polluted themselves with blood, so that men could not touch their garments.
- World English Bible (WEB)
- They wander as blind men in the streets. They are polluted with blood, So that men can’t touch their garments.
- American Standard Version (ASV)
- They wander as blind men in the streets, they are polluted with blood, So that men cannot touch their garments.
- Bible in Basic English (BBE)
- They are wandering like blind men in the streets, they are made unclean with blood, so that their robes may not be touched by men.
- Darby Translation (DBY)
- They wandered about blind in the streets; they were polluted with blood, so that men could not touch their garments.
- Webster's Bible (WBS)
- They have wandered [as] blind [men] in the streets, they have polluted themselves with blood, so that men could not touch their garments.
- Young's Literal Translation (YLT)
- They have wandered naked in out-places, They have been polluted with blood, Without [any] being able to touch their clothing,
Read in context
- 12ಭೂ ರಾಜರೂ ವಿರೋಧಿಯೂ ಶತ್ರುವೂ ಯೆರೂಸಲೇ ಮಿನಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.
- 13ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು.
- 14ಅವರು ಬೀದಿಗಳಲ್ಲಿ ಕುರುಡರಂತೆ ಅಲೆದಾಡಿದರು, ಅವರು ರಕ್ತದಿಂದ ತಮ್ಮನ್ನು ತಾವೇ ಅಪವಿತ್ರಪಡಿಸಿ ಕೊಂಡರು; ಆದದರಿಂದ ಮನುಷ್ಯರು ಅವರ ವಸ್ತ್ರಗಳನ್ನು ಮುಟ್ಟಲಾರದೆ ಹೋದರು.
- 15ಅವರು ಜನರಿಗೆ--ನೀವು ಸರಿಯಿರಿ ಇದು ಅಶುದ್ಧವಾಗಿದೆ; ಸರಿಯಿರಿ, ಸರಿಯಿರಿ; ಮುಟ್ಟಬೇಡಿರಿ ಎಂದು ಕೂಗಿ ಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರು ವಾಗ--ಅವರು ಇನ್ನು ಮೇಲೆ ಅಲ್ಲಿ ವಾಸಮಾಡು ವದಿಲ್ಲ ಎಂದು ಅನ್ಯ ಜನಾಂಗಗಳೊಳಗೆ ಹೇಳಿದರು.
- 16ಕರ್ತನ ಕೋಪವು ಅವರನ್ನು ವಿಭಾಗಿಸಿತು; ಆತನು ಇನ್ನು ಅವರನ್ನು ಲಕ್ಷಿಸುವದಿಲ್ಲ; ಅವರು ಯಾಜಕರನ್ನು ಗೌರವಿಸಲಿಲ್ಲ; ಅವರು ಹಿರಿಯರಿಗೆ ದಯೆತೋರಿ ಸಲಿಲ್ಲ.
Cross references
- Jeremiah 2:34 ಯೆರೆಮೀಯ 2:34ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.
- Isaiah 1:15 ಯೆಶಾಯ 1:15ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
- Deuteronomy 28:28–29 ಧರ್ಮೋಪದೇಶಕಾಂಡ 28:28–29ಕರ್ತನು ನಿನ್ನನ್ನು ಹುಚ್ಚುತನದಿಂದಲೂ ಕುರುಡುತನದಿಂದಲೂ ಹೃದಯದ ವಿಸ್ಮಯದಿಂದಲೂ ಹೊಡೆಯುವನು. ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ.
- Isaiah 56:10 ಯೆಶಾಯ 56:10ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
- Numbers 19:16 ಅರಣ್ಯಕಾಂಡ 19:16ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು.
- Hosea 4:2 ಹೋಶೇಯ 4:2ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;
- Isaiah 29:10–12 ಯೆಶಾಯ 29:10–12ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ. ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿ ದ ವಾಕ್ಯಗಳ ಪುಸ್ತಕದ ಹಾಗಾಯಿತು; ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು ಇದನ್ನು ಓದು ಎಂದು ಬೇಡಿದರೆ ಅವನು--ಮುದ್ರೆ ಹಾಕಿದೆಯಲ್ಲಾ, ಆಗುವದಿಲ್ಲ ಅನ್ನು ವನು; ಅಕ್ಷರವಿಲ್ಲದವನಿಗೆ ಆ ಪುಸ್ತಕವನ್ನು ಒಪ್ಪಿಸಿದರೆ ಅವನು--ನನಗೆ ವಿದ್ಯೆಯಿಲ್ಲ ಅನ್ನುವನು.
- Isaiah 59:9–11 ಯೆಶಾಯ 59:9–11ಆದದರಿಂದ ನ್ಯಾಯವು ನಮಗೆ ದೂರವಾಯಿತು; ನೀತಿಯು ನಮ್ಮನ್ನು ಸೇರದು; ಬೆಳಕಿ ಗೋಸ್ಕರ ಕಾದುಕೊಳ್ಳುತ್ತೇವೆ, ಆದರೆ ಇಗೋ ಕತ್ತಲೆ, ಪ್ರಕಾಶವನ್ನು ಹಾರೈಸಿ ಅಂಧಕಾರದಲ್ಲಿ ನಡೆದುಕೊಳ್ಳು ತ್ತೇವೆ. ಕುರುಡರ ಹಾಗೆ ಗೋಡೆಯನ್ನು ತಡವರಿ ಸುತ್ತೇವೆ; ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ; ಮಧ್ಯಾಹ್ನದಲ್ಲಿ, ರಾತ್ರಿಯ ಹಾಗೆ ಎಡವುತ್ತೇವೆ, ಸತ್ತವರ ಹಾಗೆ ಹಾಳಾದ ಸ್ಥಳಗಳಲ್ಲಿ ಇದ್ದೇವೆ. ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ; ಪಾರಿವಾಳಗಳ ಹಾಗೆ ಬಹಳವಾಗಿ ಮೂಲ್ಗುತ್ತೇವೆ; ನ್ಯಾಯಕ್ಕಾಗಿ ಕಾದುಕೊಳ್ಳುತ್ತೇವೆ, ಆದರೆ ಅದು ಇಲ್ಲವೇ ಇಲ್ಲ; ರಕ್ಷಣೆಯಾದರೋ ಅದು ನಮಗೆ ದೂರವಾಗಿದೆ.
- Ephesians 4:18 ಎಫೆಸದವರಿಗೆ 4:18ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.
- Numbers 35:33 ಅರಣ್ಯಕಾಂಡ 35:33ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
- Micah 3:6–7 ಮೀಕ 3:6–7ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು. ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ವಿಸ್ಮಯಗೊಳ್ಳುವರು; ಹೌದು, ದೇವರಿಂದ ಉತ್ತರ ವಿಲ್ಲದ ಕಾರಣ ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿ ಕೊಳ್ಳುವರು.
- Matthew 15:14 ಮತ್ತಾಯನು 15:14ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.