Lamentations · chapter 4 · verse 16
Lamentations 4:16 in Kannada
ಕರ್ತನ ಕೋಪವು ಅವರನ್ನು ವಿಭಾಗಿಸಿತು; ಆತನು ಇನ್ನು ಅವರನ್ನು ಲಕ್ಷಿಸುವದಿಲ್ಲ; ಅವರು ಯಾಜಕರನ್ನು ಗೌರವಿಸಲಿಲ್ಲ; ಅವರು ಹಿರಿಯರಿಗೆ ದಯೆತೋರಿ ಸಲಿಲ್ಲ.
Kartana kopavu avarannu vibhaagisitu; aatanu innu avarannu lakshisuvadilla; avaru yaajakarannu gauravisalilla; avaru hiriyarige dayetori salilla.
Lamentations 4:16 in English
- King James Version (KJV)
- The anger of the LORD hath divided them; he will no more regard them: they respected not the persons of the priests, they favoured not the elders.
- World English Bible (WEB)
- The LORD’s anger has scattered them. He will not pay attention to them any more. They didn’t respect the persons of the priests. They didn’t favor the elders.
- American Standard Version (ASV)
- The anger of Jehovah hath scattered them; he will no more regard them: They respected not the persons of the priests, they favored not the elders.
- Bible in Basic English (BBE)
- The face of the Lord has sent them in all directions; he will no longer take care of them: they had no respect for the priests, they gave no honour to the old men.
- Darby Translation (DBY)
- The face of Jehovah hath divided them; he will no more regard them. They respected not the persons of the priests, they favoured not the aged.
- Webster's Bible (WBS)
- The anger of the LORD hath divided them; he will no more regard them: they respected not the persons of the priests, they favored not the elders.
- Young's Literal Translation (YLT)
- The face of Jehovah hath divided them, He doth not add to behold them, The face of priests they have not lifted up, Elders they have not favoured.
Read in context
- 14ಅವರು ಬೀದಿಗಳಲ್ಲಿ ಕುರುಡರಂತೆ ಅಲೆದಾಡಿದರು, ಅವರು ರಕ್ತದಿಂದ ತಮ್ಮನ್ನು ತಾವೇ ಅಪವಿತ್ರಪಡಿಸಿ ಕೊಂಡರು; ಆದದರಿಂದ ಮನುಷ್ಯರು ಅವರ ವಸ್ತ್ರಗಳನ್ನು ಮುಟ್ಟಲಾರದೆ ಹೋದರು.
- 15ಅವರು ಜನರಿಗೆ--ನೀವು ಸರಿಯಿರಿ ಇದು ಅಶುದ್ಧವಾಗಿದೆ; ಸರಿಯಿರಿ, ಸರಿಯಿರಿ; ಮುಟ್ಟಬೇಡಿರಿ ಎಂದು ಕೂಗಿ ಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರು ವಾಗ--ಅವರು ಇನ್ನು ಮೇಲೆ ಅಲ್ಲಿ ವಾಸಮಾಡು ವದಿಲ್ಲ ಎಂದು ಅನ್ಯ ಜನಾಂಗಗಳೊಳಗೆ ಹೇಳಿದರು.
- 16ಕರ್ತನ ಕೋಪವು ಅವರನ್ನು ವಿಭಾಗಿಸಿತು; ಆತನು ಇನ್ನು ಅವರನ್ನು ಲಕ್ಷಿಸುವದಿಲ್ಲ; ಅವರು ಯಾಜಕರನ್ನು ಗೌರವಿಸಲಿಲ್ಲ; ಅವರು ಹಿರಿಯರಿಗೆ ದಯೆತೋರಿ ಸಲಿಲ್ಲ.
- 17ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು; ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.
- 18ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಅವರು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ; ನಮ್ಮ ಅಂತ್ಯವು ಸವಿಾಪಿಸಿತು, ನಮ್ಮ ದಿನಗಳು ತುಂಬಿದವು; ನಮ್ಮ ಅಂತ್ಯವು ಬಂದಿತು.
Cross references
- Isaiah 9:14–16 ಯೆಶಾಯ 9:14–16ಆದದರಿಂದ ಕರ್ತನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ಕೊಂಬೆ ರೆಂಬೆಗಳನ್ನೂ ಒಂದು ದಿನದಲ್ಲಿ ಕತ್ತರಿಸಿ ಹಾಕುವನು. ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು. ಈ ಜನರನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ; ಅವರಿಂದ ನಡಿ ಸಲ್ಪಟ್ಟವರು ನಾಶವಾಗಿದ್ದಾರೆ.
- Lamentations 5:12 ಪ್ರಲಾಪಗಳು 5:12ಪ್ರಭುಗಳು ಅವರ ಕೈಯಿಂದ ಗಲ್ಲಿಗೇರಿಸಲ್ಪಟ್ಟರು; ಹಿರಿಯರ ಮುಖಗಳು ಗೌರವಿ ಸಲ್ಪಡಲಿಲ್ಲ.
- Deuteronomy 32:26 ಧರ್ಮೋಪದೇಶಕಾಂಡ 32:26ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.
- Deuteronomy 28:64–65 ಧರ್ಮೋಪದೇಶಕಾಂಡ 28:64–65ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ. ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು.
- Jeremiah 24:9 ಯೆರೆಮೀಯ 24:9ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
- Hebrews 8:9 ಇಬ್ರಿಯರಿಗೆ 8:9ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ.
- Deuteronomy 28:25 ಧರ್ಮೋಪದೇಶಕಾಂಡ 28:25ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
- 2 Kings 25:18–21 2 ಅರಸುಗಳು 25:18–21ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು. ಇದಲ್ಲದೆ ಪಟ್ಟಣದೊಳಗಿಂದ ಯುದ್ಧಸ್ಥರ ಮೇಲಿದ್ದ ಒಬ್ಬ ಅಧಿ ಕಾರಿಯನ್ನೂ ಪಟ್ಟಣದಲ್ಲಿ ಸಿಕ್ಕಿದ ಅರಸನ ಸಮ್ಮುಖ ದಲ್ಲಿದ್ದ ಐದು ಮಂದಿಯನ್ನೂ ದೇಶದ ಜನರನ್ನೂ ಸೈನ್ಯದ ತರಬೇತು ಮಾಡಿದ ಪ್ರಧಾನನ ಲೇಖಕನೂ ಪಟ್ಟಣದಲ್ಲಿ ಸಿಕ್ಕಿದ ದೇಶದ ಜನರಾದ ಅರವತ್ತು ಮಂದಿಯನ್ನೂ ಅವನು ಹಿಡಿದನು. ಕಾವಲಿನ ವರ ಅಧಿಪತಿಯಾದ ನೆಬೂಜರದಾನನು ಇವರನ್ನು ತಕ್ಕೊಂಡು ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ಬಂದನು. ಬಾಬೆಲಿನ ಅರಸನು ಹಮಾತ್ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.
- Jeremiah 15:4 ಯೆರೆಮೀಯ 15:4ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.
- Leviticus 26:33–39 ಯಾಜಕಕಾಂಡ 26:33–39ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು. ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು. ನೀವು ಅದರಲ್ಲಿ ವಾಸವಾಗಿದ್ದಾಗ ನಿಮ್ಮ ಸಬ್ಬತ್ತುಗಳಲ್ಲಿ ಅದಕ್ಕೆ ವಿಶ್ರಾಂತಿ ದೊರೆಯದ ಕಾರಣ ಅದು ಹಾಳುಬಿದ್ದಿರುವ ಕಾಲವೆಲ್ಲಾ ಅನುಭವಿಸುವದು. ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು. ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು. ಜನಾಂಗಗ ಳೊಳಗೆ ನಾಶವಾಗುವಿರಿ; ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವದು. ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.
- Psalm 106:44 ಕೀರ್ತನೆಗಳು 106:44ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು
- Genesis 49:7 ಆದಿಕಾಂಡ 49:7ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.