Lamentations · chapter 4 · verse 17
Lamentations 4:17 in Kannada
ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು; ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.
Namagaadaro namma kannugalu namma vyarthavaada sahaayakkaagi nodi sotu hodavu; namma kannugalu nammannu rakshisalaaradantha janaangakkaagi kaavalaagiddavu.
Lamentations 4:17 in English
- King James Version (KJV)
- As for us, our eyes as yet failed for our vain help: in our watching we have watched for a nation [that] could not save [us].
- World English Bible (WEB)
- Our eyes still fail, looking in vain for our help. In our watching we have watched for a nation that could not save.
- American Standard Version (ASV)
- Our eyes do yet fail [in looking] for our vain help: In our watching we have watched for a nation that could not save.
- Bible in Basic English (BBE)
- Our eyes are still wasting away in looking for our false help: we have been watching for a nation unable to give salvation.
- Darby Translation (DBY)
- Our eyes still failed for our vain help; in our watching, we have watched for a nation that did not save.
- Webster's Bible (WBS)
- As for us, our eyes as yet failed for our vain help: in our watching we have watched for a nation [that] could not save [us] .
- Young's Literal Translation (YLT)
- While we exist — consumed are our eyes for our vain help, In our watch-tower we have watched for a nation [that] saveth not.
Read in context
- 15ಅವರು ಜನರಿಗೆ--ನೀವು ಸರಿಯಿರಿ ಇದು ಅಶುದ್ಧವಾಗಿದೆ; ಸರಿಯಿರಿ, ಸರಿಯಿರಿ; ಮುಟ್ಟಬೇಡಿರಿ ಎಂದು ಕೂಗಿ ಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರು ವಾಗ--ಅವರು ಇನ್ನು ಮೇಲೆ ಅಲ್ಲಿ ವಾಸಮಾಡು ವದಿಲ್ಲ ಎಂದು ಅನ್ಯ ಜನಾಂಗಗಳೊಳಗೆ ಹೇಳಿದರು.
- 16ಕರ್ತನ ಕೋಪವು ಅವರನ್ನು ವಿಭಾಗಿಸಿತು; ಆತನು ಇನ್ನು ಅವರನ್ನು ಲಕ್ಷಿಸುವದಿಲ್ಲ; ಅವರು ಯಾಜಕರನ್ನು ಗೌರವಿಸಲಿಲ್ಲ; ಅವರು ಹಿರಿಯರಿಗೆ ದಯೆತೋರಿ ಸಲಿಲ್ಲ.
- 17ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು; ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.
- 18ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಅವರು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ; ನಮ್ಮ ಅಂತ್ಯವು ಸವಿಾಪಿಸಿತು, ನಮ್ಮ ದಿನಗಳು ತುಂಬಿದವು; ನಮ್ಮ ಅಂತ್ಯವು ಬಂದಿತು.
- 19ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರ ವಾಗಿದ್ದಾರೆ; ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ ಅರಣ್ಯದಲ್ಲಿ ಹೊಂಚುಹಾಕಿದರು.
Cross references
- Ezekiel 29:16 ಯೆಹೆಜ್ಕೇಲನು 29:16ಇನ್ನು ಅದು ಇಸ್ರಾಯೇಲ್ ವಂಶದವರ ಭರವಸವಾಗದೆ, ಇವರು ಅವರ ಕಡೆಗೆ ನೋಡಿದಾಗ ಅಕ್ರಮವನ್ನು ಜ್ಞಾಪಕಕ್ಕೆ ತರಬೇಕಾಗಿರುವದಿಲ್ಲ; ಆಗ ನಾನೇ ದೇವ ರಾದ ಕರ್ತನೆಂದು ಅವರಿಗೆ ತಿಳಿಯುವದು.
- 2 Kings 24:7 2 ಅರಸುಗಳು 24:7ಆದರೆ ಐಗುಪ್ತದ ಅರಸನು ತನ್ನ ದೇಶದಿಂದ ತಿರಿಗಿ ಬರಲಿಲ್ಲ. ಯಾಕಂದರೆ ಐಗುಪ್ತದ ನದಿ ಮೊದಲು ಗೊಂಡು ಯೂಫ್ರೇಟೀಸ್ ನದಿಯ ವರೆಗೂ ಐಗು ಪ್ತದ ಅರಸನಿಗೆ ಇದ್ದದ್ದೆಲ್ಲಾ ಬಾಬೆಲಿನ ಅರಸನು ಹಿಡಿದಿದ್ದನು.
- Isaiah 20:5 ಯೆಶಾಯ 20:5ಆಗ (ನನ್ನ ಜನರು) ಅವನು ನಿರೀಕ್ಷಿಸಿಕೊಂಡಿದ್ದ ಐಥಿಯೋ ಪಿಯರ ನಿಮಿತ್ತವಾಗಿಯೂ ತಮ್ಮ ವೈಭವದ ಐಗುಪ್ತದ ವಿಷಯವಾಗಿಯೂ ಬೆಚ್ಚಿ ಬೆರಗಾಗಿ ನಾಚಿಕೆಪಡು ವರು.ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
- Jeremiah 37:7–10 ಯೆರೆಮೀಯ 37:7–10ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು. ಕಸ್ದೀಯರು ತಿರುಗಿಕೊಂಡು ಈ ಪಟ್ಟಣಕ್ಕೆ ವಿರೋಧ ವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡುವರು. ಕರ್ತನು ಹೀಗೆ ಹೇಳುತ್ತಾನೆ--ಕಸ್ದೀ ಯರು ನಿಜವಾಗಿ ನಮ್ಮನ್ನು ಬಿಟ್ಟುಹೋಗುವರೆಂದು ನಿಮಗೆ ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವದೇ ಇಲ್ಲ. ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.
- Ezekiel 29:6–7 ಯೆಹೆಜ್ಕೇಲನು 29:6–7ಆಗ ಎಲ್ಲಾ ಐಗುಪ್ತದ ನಿವಾಸಿಗಳು ನಾನೇ ಕರ್ತನೆಂದು ತಿಳಿಯುವರು; ಅವರು ಇಸ್ರಾಯೇಲ್ಯರ ಮನೆತನದವರಿಗೆ ದಂಟಿನ ಊರು ಗೋಲಾಗಿದ್ದರು. ಇಸ್ರಾಯೇಲ್ಯರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದಿ; ಅವರು ನಿನ್ನನ್ನು ಊರಿಕೊಂಡಾಗ ನೀನು ಒಡೆದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ.
- Jeremiah 2:18 ಯೆರೆಮೀಯ 2:18ಈಗ ಸಿಹೋರಿನ ನೀರು ಕುಡಿಯುವದಕ್ಕಾಗಿ ಐಗುಪ್ತದ ದಾರಿಯಲ್ಲಿ ನಿನಗೇನು ಕೆಲಸ? ಇಲ್ಲವೆ ನದಿಯ ನೀರು ಕುಡಿ ಯುವದಕ್ಕಾಗಿ ಅಶ್ಶೂರಿನ ದಾರಿಯಲ್ಲಿ ನಿನಗೇನು ಕೆಲಸ?
- Lamentations 1:7 ಪ್ರಲಾಪಗಳು 1:7ಯೆರೂಸಲೇಮು ಕಷ್ಟ ಮತ್ತು ಸಂಕಟದಲ್ಲಿದ್ದಾಗ ಪೂರ್ವದಿನಗಳಲ್ಲಿ ತನಗಿದ್ದ ರಮ್ಯವಾದವುಗಳೆಲ್ಲವನ್ನು ಜ್ಞಾಪಕಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ ಯಾವನೂ ಸಹಾಯಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ಸಬ್ಬತ್ತುಗಳ ವಿಷಯದಲ್ಲಿ ಅಪಹಾಸ್ಯಮಾಡಿದರು.
- Jeremiah 2:36 ಯೆರೆಮೀಯ 2:36ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
- Lamentations 1:19 ಪ್ರಲಾಪಗಳು 1:19ನಾನು ನನ್ನ ಪ್ರಿಯರನ್ನು ಕರೆದೆನು, ಆದರೆ ಅವರು ನನ್ನನ್ನು ಮೋಸಗೊಳಿಸಿದರು; ನನ್ನ ಯಾಜಕರೂ ಹಿರಿ ಯರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ರೊಟ್ಟಿ ಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.
- Isaiah 30:1–7 ಯೆಶಾಯ 30:1–7ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ. ಫರೋಹನ ಬಲದಲ್ಲಿ ತಾವು ಬಲಗೊಳ್ಳುವ ಹಾಗೆ ಯೂ ಐಗುಪ್ತದ ನೆರಳಿನಲ್ಲಿ ಭರವಸವಿಟ್ಟು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿ ದ್ದಾರೆ. ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು. ಅವನ ಪ್ರಧಾ ನರು ಚೋವನಿನಲ್ಲಿ ಇದ್ದರು. ಅವನ ರಾಯಭಾರಿ ಗಳು ಹಾನೇಸಿಗೆ ಬಂದಿದ್ದಾರೆ. ತಮಗೆ ಪ್ರಯೋ ಜನವಾಗದೆ ಸಹಾಯಕ್ಕೂ ಪ್ರಯೋಜನಕ್ಕೂ ಅಲ್ಲ, ನಿಂದೆಗೂ ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ. ದಕ್ಷಿಣ ಸೀಮೆಯ ಮೃಗಗಳ ವಿಷಯವಾದ ದೈವೋಕ್ತಿ. ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿ ಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿ ಗಳ ಬೆನ್ನುಗಳ ಮೇಲೆ ತಮ್ಮ ಬದುಕನ್ನೂ ಒಂಟೆಗಳ ಡಬ್ಬಗಳ ಮೇಲೆ ತಮ್ಮ ದ್ರವ್ಯಗಳನ್ನೂ ಪ್ರಯೋಜನ ವಲ್ಲದ ಜನಕ್ಕೆ ತಕ್ಕೊಂಡು ಹೋಗುತ್ತಾರೆ. ಐಗುಪ್ತ್ಯರ ಸಹಾಯವು ವ್ಯರ್ಥವೇ ವ್ಯರ್ಥ. ಆದದರಿಂದ ಇದನ್ನು ಕುರಿತು ಅವರ ಬಲವು ನಿಂತುಹೋಗಿದೆ ಎಂದು ನಾನು ಕೂಗಿದ್ದೇನೆ.
- Isaiah 31:1–3 ಯೆಶಾಯ 31:1–3ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ. ಆದಾಗ್ಯೂ ಆತನು ಜ್ಞಾನಿಯಾಗಿದ್ದಾನೆ ತನ್ನ ಮಾತನ್ನು ಹಿಂತೆಗೆಯದೆ ಕೇಡನ್ನು ಬರಮಾಡು ವನು; ಆದರೆ ಕೆಡುಕರ ಮನೆತನಕ್ಕೂ ಅನ್ಯಾಯಗಾ ರರ ಸಹಾಯಕರಿಗೂ ವಿರುದ್ಧವಾಗಿ ಏಳುವನು. ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
- Jeremiah 8:20 ಯೆರೆಮೀಯ 8:20ಸುಗ್ಗಿ ಹೋಯಿತು, ಬೇಸಿಗೆಕಾಲ ತೀರಿತು; ಆದರೆ ನಾವು ರಕ್ಷಿಸಲ್ಪಡಲಿಲ್ಲ.