Lamentations · chapter 4 · verse 18
Lamentations 4:18 in Kannada
ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಅವರು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ; ನಮ್ಮ ಅಂತ್ಯವು ಸವಿಾಪಿಸಿತು, ನಮ್ಮ ದಿನಗಳು ತುಂಬಿದವು; ನಮ್ಮ ಅಂತ್ಯವು ಬಂದಿತು.
Naavu namma beedigalalli hogada haage, avaru namma hejjegalanne beteyaaduttaare; namma antyavu saviాpisitu, namma dinagalu tumbidavu; namma antyavu banditu.
Lamentations 4:18 in English
- King James Version (KJV)
- They hunt our steps, that we cannot go in our streets: our end is near, our days are fulfilled; for our end is come.
- World English Bible (WEB)
- They hunt our steps, so that we can’t go in our streets. Our end is near. Our days are fulfilled, for our end has come.
- American Standard Version (ASV)
- They hunt our steps, so that we cannot go in our streets: Our end is near, our days are fulfilled; for our end is come.
- Bible in Basic English (BBE)
- They go after our steps so that we may not go in our streets: our end is near, our days are numbered; for our end has come.
- Darby Translation (DBY)
- They hunted our steps, that we could not go in our streets: our end is near, our days are fulfilled; for our end is come.
- Webster's Bible (WBS)
- They hunt our steps, that we cannot go in our streets: our end is near, our days are fulfilled; for our end is come.
- Young's Literal Translation (YLT)
- They have hunted our steps from going in our broad-places, Near hath been our end, fulfilled our days, For come hath our end.
Read in context
- 16ಕರ್ತನ ಕೋಪವು ಅವರನ್ನು ವಿಭಾಗಿಸಿತು; ಆತನು ಇನ್ನು ಅವರನ್ನು ಲಕ್ಷಿಸುವದಿಲ್ಲ; ಅವರು ಯಾಜಕರನ್ನು ಗೌರವಿಸಲಿಲ್ಲ; ಅವರು ಹಿರಿಯರಿಗೆ ದಯೆತೋರಿ ಸಲಿಲ್ಲ.
- 17ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು; ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.
- 18ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಅವರು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ; ನಮ್ಮ ಅಂತ್ಯವು ಸವಿಾಪಿಸಿತು, ನಮ್ಮ ದಿನಗಳು ತುಂಬಿದವು; ನಮ್ಮ ಅಂತ್ಯವು ಬಂದಿತು.
- 19ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರ ವಾಗಿದ್ದಾರೆ; ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ ಅರಣ್ಯದಲ್ಲಿ ಹೊಂಚುಹಾಕಿದರು.
- 20ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.
Cross references
- Amos 8:2 ಆಮೋಸ 8:2ಆಗ ಅವನು--ಆಮೋಸನೇ, ಏನು ನೋಡುತ್ತಿರುವೆ ಎಂದಾಗ ನಾನು--ಮಾಗಿದ ಹಣ್ಣುಗಳ ಪುಟ್ಟಿ ಅಂದೆನು. ಆಗ ಕರ್ತನು ನನಗೆ--ನನ್ನ ಜನರಾದ ಇಸ್ರಾಯೇಲ್ಯರಿಗೆ ಅಂತ್ಯವು ಬಂತು; ನಾನು ಇನ್ನು ಮೇಲೆ ಅವರನು ದಾಟಿಹೋಗುವದಿಲ್ಲ ಎಂದು ಹೇಳಿದೆನು.
- Psalm 140:11 ಕೀರ್ತನೆಗಳು 140:11ಕೆಟ್ಟದ್ದನ್ನು ಮಾತನಾಡುವವನು ಭೂಮಿ ಯಲ್ಲಿ ಸ್ಥಿರವಾಗದಿರಲಿ; ಬಲಾತ್ಕಾರಿಯನ್ನು ಕೆಡವು ವದಕ್ಕೆ ಕೇಡು ಅವನನ್ನು ಬೇಟೆಯಾಡುವದು.
- Ezekiel 7:2–12 ಯೆಹೆಜ್ಕೇಲನು 7:2–12ಮನುಷ್ಯಪುತ್ರನೇ, ದೇವರಾದ ಕರ್ತನು ಇಸ್ರಾ ಯೇಲ್ ದೇಶಕ್ಕೆ ಹೀಗೆ ಹೇಳುತ್ತಾನೆ--ಅಂತ್ಯವು ಬಂದಿದೆ; ಈ ದೇಶದ ನಾಲ್ಕು ಮೂಲೆಗಳಲ್ಲೂ ಅಂತ್ಯವು ಬಂದಿದೆ. ಈಗ ನಿನ್ನ ಮೇಲೂ ಅಂತ್ಯವು ಬಂದಿದೆ ಮತ್ತು ನನ್ನ ಕೋಪವನ್ನು ನಿನ್ನ ಮೇಲೆ ಕಳುಹಿಸುತ್ತೇನೆ; ನಿನ್ನ ಮಾರ್ಗಗಳ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿ ತೀರಿಸುವೆನು. ನನ್ನ ಕಣ್ಣುಗಳು ನಿನ್ನನ್ನು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸು ವದೂ ಇಲ್ಲ, ಆದರೆ ನಿನ್ನ ಮಾರ್ಗಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ, ನಿನ್ನ ಅಸಹ್ಯಗಳು ನಿನ್ನ ಮಧ್ಯೆ ಇರುವವು, ನಾನೇ ಕರ್ತನೆಂದು ನಿನಗೆ ತಿಳಿಯುವದು. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಕೇಡು ಒಂದೇ ಒಂದು ಕೇಡು, ಇಗೋ, ಬಂತು. ಅಂತ್ಯವು ಬಂತು. ಅಂತ್ಯವು ಬಂದು ಅದು ನಿನಗೋಸ್ಕರ ಕಾಯುತ್ತಾ ಇದೆ. ಇಗೋ, ಅದು ಬಂತು. ಓ ದೇಶದಲ್ಲಿ ವಾಸಿಸುವವನೇ, ನಿನಗಾಗಿ ಮುಂಜಾನೆ ಬಂತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು ಮತ್ತು ಪರ್ವತಗಳ ಆರ್ಭಟದ ಧ್ವನಿ ಇಲ್ಲ. ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು. ನನ್ನ ಕಣ್ಣು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸುವದೂ ಇಲ್ಲ, ನಿನ್ನ ಮಾರ್ಗಗಳಿಗೂ ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕದ್ದನ್ನು ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ಕರ್ತನಾದ ನಾನೇ ಹೊಡೆಯುತ್ತಿರುವನೆಂದು ನಿನಗೆ ತಿಳಿಯುವದು. ಇಗೋ, ಆ ದಿನವು ಬಂತು, ಮುಂಜಾನೆ ಹೊರಟುಹೋಯಿತು. ಕೋಲು ಚಿಗು ರಿತು, ಗರ್ವ ಅರಳಿತು. ಬಲಾತ್ಕಾರವು ದುಷ್ಟತ್ವದ ಕೋಲಾಗಿ ಎದ್ದಿತು; ಅವರಲ್ಲಿಯೂ ಅವರ ಜನ ಸಮೂಹದಲ್ಲಿಯೂ ಅವರ ಸಂಪತ್ತಿನಲ್ಲಿಯೂ ಏನೂ ಉಳಿಯುವದಿಲ್ಲ; ಅವರಿಗೋಸ್ಕರ ಗೋಳಾಟವೂ ಇರುವದಿಲ್ಲ. ಕಾಲವು ಬಂತು, ದಿನವು ಸವಿಾಪ ವಾಯಿತು; ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲ ದಿರಲಿ, ಮಾರುವವನು ದುಃಖಿಸದಿರಲಿ; ಯಾಕಂದರೆ ಎಲ್ಲಾ ಜನಸಮೂಹದ ಮೇಲೆ ರೌದ್ರವಿದೆ.
- Lamentations 3:52 ಪ್ರಲಾಪಗಳು 3:52ನನ್ನ ಶತ್ರುಗಳು ಕಾರಣವಿಲ್ಲದೆ ಪಕ್ಷಿಯಂತೆ ನನ್ನನ್ನು ಕಠೋರವಾಗಿ ಹಿಂದಟ್ಟಿ ಬೇಟೆಯಾಡಿದರು.
- Jeremiah 16:16 ಯೆರೆಮೀಯ 16:16ಇಗೋ, ನಾನು ಅನೇಕ ವಿಾನುಗಾರರನ್ನು ಕಳುಹಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಇವರು ಅವರನ್ನು ಹಿಡಿಯುವರು; ಆಮೇಲೆ ಅನೇಕ ಬೇಟೆ ಗಾರರನ್ನು ಕಳುಹಿಸುವೆನು; ಇವರು ಎಲ್ಲಾ ಬೆಟ್ಟಗುಡ್ಡಗಳ ಮೇಲೆಯೂ ಎಲ್ಲಾ ಗುಡ್ಡಗಳ ಮೇಲೆಯೂ ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡು ವರು.
- Jeremiah 52:7–9 ಯೆರೆಮೀಯ 52:7–9ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು. ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು. ಆಗ ಅವರು ಅರಸನನ್ನು ಹಿಡಿದು, ಬಾಬೆಲಿನ ಅರಸನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು; ಅಲ್ಲಿ ಅವನು ಅವನ ವಿಷಯ ನ್ಯಾಯತೀರ್ಪು ಮಾಡಿದನು.
- 2 Kings 25:4–5 2 ಅರಸುಗಳು 25:4–5ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು. ಕಸ್ದೀಯರು ಪಟ್ಟಣದ ಬಳಿಯಲ್ಲಿ ಇದ್ದದರಿಂದ ಅವರ ದಂಡು ಅರಸನನ್ನು ಹಿಂಬಾಲಿಸಿ ಯೆರಿಕೋವಿನ ಬಯಲು ಸ್ಥಳಗಳಲ್ಲಿ ಅವನನ್ನು ಹಿಡು ಕೊಂಡರು.
- 1 Samuel 24:14 1 ಸಮುವೇಲನು 24:14ಇಸ್ರಾಯೇಲಿನ ಅರಸನು ಯಾರನ್ನು ಬೆನ್ನಟ್ಟಿ ಹೊರಟನು? ಯಾರನ್ನು ನೀನು ಹಿಂದಟ್ಟುತ್ತೀ? ಸತ್ತನಾಯಿಯನ್ನೇ? ಒಂದು ಕೀಟವನ್ನೇ?
- Ezekiel 12:27 ಯೆಹೆಜ್ಕೇಲನು 12:27ಮನುಷ್ಯಪುತ್ರನೇ, ಇಗೋ, ಇಸ್ರಾಯೇಲಿನ ಮನೆತನದವರು--ಇವನಿಗಾದ ದರ್ಶನವು ಬಹು ದೂರ ಕಾಲಕ್ಕೆ ಸಂಬಂಧಿಸಿದ್ದು, ದೂರ ಕಾಲವನ್ನು ಕುರಿತು ಪ್ರವಾದಿಸುತ್ತಾನೆಂದು ಹೇಳುತ್ತಾರೆ.ಆದದರಿಂದ ಅವರು ಹೀಗೆ ಹೇಳುವರೆಂದು ದೇವರಾದ ಕರ್ತನು ಹೇಳುತ್ತಾನೆ; ನನ್ನ ಮಾತುಗಳಲ್ಲಿ ಒಂದಾದರೂ ಇನ್ನು ಮೇಲೆ ದೂರವಾಗುವದಿಲ್ಲ; ನಾನು ಆಡಿದ ಮಾತು ನಡಿಸಲ್ಪಡುವದೆಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 51:33 ಯೆರೆಮೀಯ 51:33ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು.
- Jeremiah 39:4–5 ಯೆರೆಮೀಯ 39:4–5ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು; ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು.
- Job 10:16 ಯೋಬನು 10:16ಅದು ಹೆಚ್ಚುತ್ತಿದೆ; ಸಿಂಹದಂತೆ ನನ್ನನ್ನು ಬೇಟೆಯಾಡುವಿ; ಇನ್ನೂ ಆಶ್ಚರ್ಯವಾದವುಗಳನ್ನು ನನಗೆ ತೋರಿಸುವಿ.