Lamentations · chapter 4 · verse 2
Lamentations 4:2 in Kannada
ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಕುಮಾರರು ಹೇಗೆ ಮಣ್ಣಿನ ಪಾತ್ರೆಗಳಂತೆಯೂ ಕುಂಬಾರನ ಕೈಕೆಲಸದ ಹಾಗೆಯೂ ಎಣಿಸಲ್ಪಟ್ಟಿ ದ್ದಾರಲ್ಲಾ!
Aparanjige samaanaraada cheeyonina amoolya kumaararu hege mannina paatregalanteyoo kumbaarana kaikelasada haageyoo enisalpatti ddaarallaa!
Lamentations 4:2 in English
- King James Version (KJV)
- The precious sons of Zion, comparable to fine gold, how are they esteemed as earthen pitchers, the work of the hands of the potter!
- World English Bible (WEB)
- The precious sons of Zion, comparable to fine gold, how they are esteemed as earthen pitchers, the work of the hands of the potter!
- American Standard Version (ASV)
- The precious sons of Zion, comparable to fine gold, How are they esteemed as earthen pitchers, the work of the hands of the potter!
- Bible in Basic English (BBE)
- The valued sons of Zion, whose price was the best gold, are looked on as vessels of earth, the work of the hands of the potter!
- Darby Translation (DBY)
- The sons of Zion, so precious, comparable to fine gold, how are they esteemed as earthen pitchers, the work of the hands of the potter!
- Webster's Bible (WBS)
- The precious sons of Zion, comparable to fine gold, how are they esteemed as earthen pitchers, the work of the hands of the potter!
- Young's Literal Translation (YLT)
- The precious sons of Zion, Who are comparable with fine gold, How have they been reckoned earthen bottles, Work of the hands of a potter.
Read in context
- 1ಬಂಗಾರವು ಹೇಗೆ ಮುಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧ ಸ್ಥಳದ ಕಲ್ಲುಗಳು ಪ್ರತಿಯೊಂದು ಬೀದಿಯ ಬದಿಯಲ್ಲಿ ಸುರಿಯಲ್ಪಟ್ಟಿವೆ.
- 2ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಕುಮಾರರು ಹೇಗೆ ಮಣ್ಣಿನ ಪಾತ್ರೆಗಳಂತೆಯೂ ಕುಂಬಾರನ ಕೈಕೆಲಸದ ಹಾಗೆಯೂ ಎಣಿಸಲ್ಪಟ್ಟಿ ದ್ದಾರಲ್ಲಾ!
- 3ಸಮುದ್ರದ ವಿಕಾರವಾದ ಪ್ರಾಣಿಗಳಾ ದರೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಮೊಲೆ ಕೊಡುತ್ತವೆ; ಆದರೆ ನನ್ನ ಜನರ ಮಗಳು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿ ದ್ದಾಳೆ.
- 4ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.
Cross references
- Isaiah 30:14 ಯೆಶಾಯ 30:14ಉರಿಯಿಂದ ಕೆಂಡವನ್ನು ತೆಗೆಯುವದಕ್ಕಾಗಲಿ ಬಾವಿಯಿಂದ ನೀರನ್ನು ತೆಗೆಯುವದಕ್ಕಾಗಲಿ ಬೋಕಿ ಯ ತುಂಡುಗಳಲ್ಲಿ ಒಂದೂ ಉಳಿಯದಂತೆ ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ಒಡೆದುಬಿಡುವನು.
- Jeremiah 19:11 ಯೆರೆಮೀಯ 19:11ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಯಾವ ಪ್ರಕಾರ ಒಬ್ಬನು ಕುಂಬಾರನ ಪಾತ್ರೆಯನ್ನು ಅದು ತಿರಿಗಿ ಒಂದುಗೂಡದ ಹಾಗೆ ಒಡೆಯುತ್ತಾನೋ ಅದೇ ಪ್ರಕಾರ ನಾನು ಈ ಜನವನ್ನೂ ಈ ಪಟ್ಟಣ ವನ್ನೂ ಒಡೆದು ಬಿಡುವೆನು; ಆಗ ಹೂಣಿಡುವದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಣಿಡುವರು.
- Romans 9:21–23 ರೋಮಾಪುರದವರಿಗೆ 9:21–23ಒಂದು ಪಾತ್ರೆಯನ್ನು ಗೌರ ವಕ್ಕೂ ಇನ್ನೊಂದನ್ನು ಅಗೌರವಕ್ಕೂ ಒಂದೇ ಮುದ್ದೆ ಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ? ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
- 2 Timothy 2:20 2 ತಿಮೊಥೆಯನಿಗೆ 2:20ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಕೆಲವು ಗೌರವಕ್ಕೂ ಕೆಲವು ಅಗೌರವಕ್ಕೂ ಇರುತ್ತವೆ.
- 2 Corinthians 4:7 2 ಕೊರಿಂಥದವರಿಗೆ 4:7ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.
- Isaiah 51:18 ಯೆಶಾಯ 51:18ಅವಳು ಹೆತ್ತ ಎಲ್ಲಾ ಕುಮಾರರಲ್ಲಿ ಅವಳನ್ನು ನಡಿಸುವದಕ್ಕೆ ಒಬ್ಬನೂ ಇಲ್ಲ; ಇಲ್ಲವೆ ಅವಳು ಬೆಳೆ ಸಿದ ಎಲ್ಲಾ ಕುಮಾರರಲ್ಲಿ ಅವಳ ಕೈಯನ್ನು ಹಿಡಿ ಯುವವನು ಒಬ್ಬನೂ ಇಲ್ಲ.
- Lamentations 5:12 ಪ್ರಲಾಪಗಳು 5:12ಪ್ರಭುಗಳು ಅವರ ಕೈಯಿಂದ ಗಲ್ಲಿಗೇರಿಸಲ್ಪಟ್ಟರು; ಹಿರಿಯರ ಮುಖಗಳು ಗೌರವಿ ಸಲ್ಪಡಲಿಲ್ಲ.
- Zechariah 9:13 ಜೆಕರ್ಯ 9:13ಯೆಹೂದವನ್ನು ನನಗಾಗಿ ಬೊಗ್ಗಿಸಿದಾಗ ಎಫ್ರಾಯಾಮನ್ನು ಬಿಲ್ಲುಗಳಿಂದ ತುಂಬಿಸಿದ್ದೇನೆ; ಚೀಯೋನೇ, ನಿನ್ನ ಕುಮಾರರನ್ನು ಗ್ರೀಕ್ ಕುಮಾರರಿಗೆ ವಿರೋಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯಂತೆ ಮಾಡಿದ್ದೇನೆ.
- Lamentations 2:21 ಪ್ರಲಾಪಗಳು 2:21ಎಳೇ ಪ್ರಾಯದವರೂ ಮುದುಕರೂ ಬೀದಿಗಳಲ್ಲಿ ಬಿದ್ದಿದ್ದಾರೆ; ನನ್ನ ಕನ್ಯೆಯರೂ ಯೌವನಸ್ಥರೂ ಕತ್ತಿಯಿಂದ ಹತರಾಗಿದ್ದಾರೆ; ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿ; ಕನಿಕರಿಸದೆ ಕೊಂದುಹಾಕಿ ಬಿಟ್ಟಿದ್ದೀ.ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ.
- Jeremiah 22:28 ಯೆರೆಮೀಯ 22:28ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?