Lamentations · chapter 4 · verse 3
Lamentations 4:3 in Kannada
ಸಮುದ್ರದ ವಿಕಾರವಾದ ಪ್ರಾಣಿಗಳಾ ದರೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಮೊಲೆ ಕೊಡುತ್ತವೆ; ಆದರೆ ನನ್ನ ಜನರ ಮಗಳು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿ ದ್ದಾಳೆ.
Samudrada vikaaravaada praanigalaa daroo tamma kechchalannu hora eledu tamma marigalige mole koduttave; aadare nanna janara magalu aranyadalliruva ushtrapakshigala haage krooravaagi ddaale.
Lamentations 4:3 in English
- King James Version (KJV)
- Even the sea monsters draw out the breast, they give suck to their young ones: the daughter of my people [is become] cruel, like the ostriches in the wilderness.
- World English Bible (WEB)
- Even the jackals offer their breast. They nurse their young ones. But the daughter of my people has become cruel, like the ostriches in the wilderness.
- American Standard Version (ASV)
- Even the jackals draw out the breast, they give suck to their young ones: The daughter of my people is become cruel, like the ostriches in the wilderness.
- Bible in Basic English (BBE)
- Even the beasts of the waste land have full breasts, they give milk to their young ones: the daughter of my people has become cruel like the ostriches in the waste land.
- Darby Translation (DBY)
- Even the jackals offer the breast, they give suck to their young; the daughter of my people is become cruel, like the ostriches in the wilderness.
- Webster's Bible (WBS)
- Even the sea-monsters draw out the breast, they nurse their young ones: the daughter of my people [is become] cruel, like the ostriches in the wilderness.
- Young's Literal Translation (YLT)
- Even dragons have drawn out the breast, They have suckled their young ones, The daughter of my people is become cruel, Like the ostriches in a wilderness.
Read in context
- 1ಬಂಗಾರವು ಹೇಗೆ ಮುಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧ ಸ್ಥಳದ ಕಲ್ಲುಗಳು ಪ್ರತಿಯೊಂದು ಬೀದಿಯ ಬದಿಯಲ್ಲಿ ಸುರಿಯಲ್ಪಟ್ಟಿವೆ.
- 2ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಕುಮಾರರು ಹೇಗೆ ಮಣ್ಣಿನ ಪಾತ್ರೆಗಳಂತೆಯೂ ಕುಂಬಾರನ ಕೈಕೆಲಸದ ಹಾಗೆಯೂ ಎಣಿಸಲ್ಪಟ್ಟಿ ದ್ದಾರಲ್ಲಾ!
- 3ಸಮುದ್ರದ ವಿಕಾರವಾದ ಪ್ರಾಣಿಗಳಾ ದರೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಮೊಲೆ ಕೊಡುತ್ತವೆ; ಆದರೆ ನನ್ನ ಜನರ ಮಗಳು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿ ದ್ದಾಳೆ.
- 4ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.
- 5ರುಚಿ ಯಾದವುಗಳನ್ನು ತಿಂದವರು ಬೀದಿಗಳಲ್ಲಿ ಹಾಳಾಗಿ ದ್ದಾರೆ; ಸಕಲಾತಿಗಳಲ್ಲಿ ಬೆಳೆಸಲ್ಪಟ್ಟವರು ತಿಪ್ಪೆಗಳನ್ನು ಅಪ್ಪಿಕೊಳ್ಳುತ್ತಾರೆ.
Cross references
- Luke 23:28–29 ಲೂಕನು 23:28–29ಆದರೆ ಯೇಸು ಅವರ ಕಡೆಗೆ ತಿರುಗಿ ಕೊಂಡು--ಯೆರೂಸಲೇಮಿನ ಕುಮಾರ್ತೆಯರೇ, ನನ ಗಾಗಿ ಅಳಬೇಡಿರಿ; ಆದರೆ ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ. ಯಾಕಂದರೆ--ಇಗೋ, ಬಂಜೆಯರೂ ಎಂದಿಗೂ ಗರ್ಭಿಣಿಯಾಗದವರೂ ಎಂದಿಗೂ ಮೊಲೆ ಕುಡಿಸದವರೂ ಧನ್ಯರು ಎಂದು ಹೇಳುವ ದಿವಸಗಳು ಬರುತ್ತವೆ.
- Ezekiel 5:10 ಯೆಹೆಜ್ಕೇಲನು 5:10ಆದದರಿಂದ ನಿನ್ನ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು; ಮಕ್ಕಳು ಅವರ ತಂದೆಗಳನ್ನು ತಿನ್ನುವರು; ಹೀಗೆ ನಿನ್ನಲ್ಲಿ ನ್ಯಾಯ ತೀರ್ಪನ್ನು ನಡಿಸುವೆನು. ನಿನ್ನಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.
- Lamentations 4:10 ಪ್ರಲಾಪಗಳು 4:10ಕನಿಕರ ತುಂಬಿದ ಹೆಂಗಸರ ಕೈಗಳು ಅವರ ಸ್ವಂತ ಮಕ್ಕಳನ್ನೇ ಬೇಯಿಸಿದವು; ಇವರು ನನ್ನ ಜನರ ಮಗಳ ನಾಶದಲ್ಲಿ ಅವರಿಗೆ ಆಹಾರ ವಾದರು.
- Lamentations 2:20 ಪ್ರಲಾಪಗಳು 2:20ಓ ಕರ್ತನೇ, ನೋಡು, ನೀನು ಇದನ್ನು ಯಾರಿಗೆ ಮಾಡಿದಿಯೋ ಯೋಚಿಸು. ಸ್ತ್ರೀಯರು ತಮ್ಮ ಫಲವಾದ ಗೇಣುದ್ದದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಪ್ರವಾದಿಯು ಕರ್ತನ ಪರಿಶುದ್ಧ ಸ್ಥಳದಲ್ಲಿ ಕೊಲ್ಲಲ್ಪಡಬೇಕೋ?
- Job 39:13–16 ಯೋಬನು 39:13–16ನೀನು ನವಿಲುಗಳಿಗೆ ಅಂದವಾದ ರೆಕ್ಕೆಗಳನ್ನು ಉಷ್ಟ್ರಪಕ್ಷಿಗೆ ಗರಿಗಳನ್ನೂ ರೆಕ್ಕೆಗಳನ್ನೂ ಕೊಟ್ಟಿರು ತ್ತೀಯೋ? ಅದು ತನ್ನ ಮೊಟ್ಟೆಗಳನ್ನು ಭೂಮಿ ಯಲ್ಲಿ ಬಿಟ್ಟು ದೂಳಿನಲ್ಲಿ ಅವುಗಳನ್ನು ಬಿಸಿಮಾಡು ತ್ತದೆ. ಕಾಲು ಅದನ್ನು ತುಳಿದೀತು, ಇಲ್ಲವೆ ಅಡವಿಯ ಮೃಗ ಅದನ್ನು ಜಜ್ಜೀತು ಎಂದು ಮರೆತು ಬಿಡುತ್ತದೆ. ತನ್ನ ಮರಿಗಳನ್ನು ತನ್ನವುಗಳಲ್ಲವೆಂದು ಕಠಿಣವಾಗಿ ನಡಿಸುತ್ತದೆ. ತನ್ನ ಕಷ್ಟವು ವ್ಯರ್ಥವೆಂಬ ಹೆದರಿಕೆಯೂ ಇಲ್ಲ.
- Deuteronomy 28:52–57 ಧರ್ಮೋಪದೇಶಕಾಂಡ 28:52–57ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು. ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ. ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು. ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ. ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು.
- Jeremiah 19:9 ಯೆರೆಮೀಯ 19:9ಅವರು ತಮ್ಮ ಕುಮಾರರ ಕುಮಾರ್ತೆಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು; ಮುತ್ತಿಗೆಯಲ್ಲಿ ಸಹ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.
- Leviticus 26:29 ಯಾಜಕಕಾಂಡ 26:29ನೀವು ನಿಮ್ಮ ಕುಮಾರ ಕುಮಾರ್ತೆಯರ ಮಾಂಸವನ್ನು ತಿನ್ನುವಿರಿ.
- 2 Kings 6:26–29 2 ಅರಸುಗಳು 6:26–29ಇಸ್ರಾ ಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ ಒಬ್ಬ ಸ್ತ್ರೀಯು ಅವನನ್ನು ಬೇಡುವ ವಳಾಗಿ--ನನ್ನ ಯಜಮಾನನೇ, ಅರಸನೇ, ಸಹಾಯ ಮಾಡು ಅಂದಳು. ಅದಕ್ಕವನು--ಕರ್ತನು ನಿನ್ನನ್ನು ಸಂರಕ್ಷಿಸದೆ ಹೋದರೆ ನಾನು ಎಲ್ಲಿಂದ ನಿನ್ನನ್ನು ರಕ್ಷಿ ಸಲಿ? ಕಣದಿಂದಲೋ ಇಲ್ಲವೆ ದ್ರಾಕ್ಷೇ ಅಲೆಯಿಂದ ಲೋ ಅಂದನು. ಅರಸನು ಅವಳಿಗೆ--ನಿನ್ನ ದುಃಖ ವೇನು ಅಂದನು. ಅದಕ್ಕವಳು--ಈ ಸ್ತ್ರೀಯು ನನಗೆ ಹೇಳಿದ್ದೇನಂದರೆ--ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು; ನಾಳೆ ನನ್ನ ಮಗನನ್ನು ತಿನ್ನೋಣ ಅಂದಳು. ಹಾಗೆಯೇ ನಾನು ನನ್ನ ಮಗನನ್ನು ಬೇಯಿಸಿ ತಿಂದೆವು. ಮಾರನೇ ದಿವಸದಲ್ಲಿ ನಾನು ಅವಳಿಗೆ--ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು ಅಂದೆನು. ಆದರೆ ಅವಳು ತನ್ನ ಮಗನನ್ನು ಬಚ್ಚಿಟ್ಟಿದ್ದಾಳೆ ಅಂದಳು.
- Romans 1:31 ರೋಮಾಪುರದವರಿಗೆ 1:31ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
- Isaiah 49:15 ಯೆಶಾಯ 49:15ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ.