Lamentations · chapter 4 · verse 7
Lamentations 4:7 in Kannada
ಅವಳ ನಜರೀಯರು ಹಿಮಕ್ಕಿಂತಲೂ ಸ್ವಚ್ಛವಾಗಿದ್ದರು, ಹಾಲಿಗಿಂತಲೂ ಬೆಳ್ಳಗಿದ್ದರು, ಅವರು ಮೈ ಕಟ್ಟಿನಲ್ಲಿ ಹವಳಕ್ಕಿಂತಲೂ ಕೆಂಪಾಗಿದ್ದರು; ಅವರ ಹೊಳಪು ಇಂದ್ರನೀಲಮಣಿಯ ಹಾಗಿತ್ತು.
Avala najareeyaru himakkintaloo svachchhavaagiddaru, haaligintaloo bellagiddaru, avaru mai kattinalli havalakkintaloo kempaagiddaru; avara holapu indraneelamaniya haagittu.
Lamentations 4:7 in English
- King James Version (KJV)
- Her Nazarites were purer than snow, they were whiter than milk, they were more ruddy in body than rubies, their polishing [was] of sapphire:
- World English Bible (WEB)
- Her nobles were purer than snow. They were whiter than milk. They were more ruddy in body than rubies. Their polishing was like sapphire.
- American Standard Version (ASV)
- Her nobles were purer than snow, they were whiter than milk; They were more ruddy in body than rubies, their polishing was as of sapphire.
- Bible in Basic English (BBE)
- Her holy ones were cleaner than snow, they were whiter than milk, their bodies were redder than corals, their form was as the sapphire:
- Darby Translation (DBY)
- Her Nazarites were purer than snow, whiter than milk; they were more ruddy in body than rubies, their figure was as sapphire.
- Webster's Bible (WBS)
- Her Nazarites were purer than snow, they were whiter than milk, they were more ruddy in body than rubies, their polishing [was] of sapphire:
- Young's Literal Translation (YLT)
- Purer were her Nazarites than snow, Whiter than milk, ruddier of body than rubies, Of sapphire their form.
Read in context
- 5ರುಚಿ ಯಾದವುಗಳನ್ನು ತಿಂದವರು ಬೀದಿಗಳಲ್ಲಿ ಹಾಳಾಗಿ ದ್ದಾರೆ; ಸಕಲಾತಿಗಳಲ್ಲಿ ಬೆಳೆಸಲ್ಪಟ್ಟವರು ತಿಪ್ಪೆಗಳನ್ನು ಅಪ್ಪಿಕೊಳ್ಳುತ್ತಾರೆ.
- 6ನನ್ನ ಜನರ ಮಗಳ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು; ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲ್ಪಟ್ಟಿತು! ಅವಳನ್ನು ಯಾವ ಕೈಗಳೂ ತಡೆಯಲಿಲ್ಲ.
- 7ಅವಳ ನಜರೀಯರು ಹಿಮಕ್ಕಿಂತಲೂ ಸ್ವಚ್ಛವಾಗಿದ್ದರು, ಹಾಲಿಗಿಂತಲೂ ಬೆಳ್ಳಗಿದ್ದರು, ಅವರು ಮೈ ಕಟ್ಟಿನಲ್ಲಿ ಹವಳಕ್ಕಿಂತಲೂ ಕೆಂಪಾಗಿದ್ದರು; ಅವರ ಹೊಳಪು ಇಂದ್ರನೀಲಮಣಿಯ ಹಾಗಿತ್ತು.
- 8ಈಗ ಅವರ ರೂಪವು ಕಲ್ಲಿದ್ದಲಿಗಿಂತ ಕಪ್ಪಾಗಿದೆ, ಬೀದಿಗಳಲ್ಲಿ ಅವರು ಯಾರೆಂಬದು ತಿಳಿಯಲಿಲ್ಲ; ಅವರ ಚರ್ಮವು ಅವರ ಎಲುಬುಗಳಿಗೆ ಹತ್ತಿಕೊಂಡಿದೆ, ಅದು ಒಣಗಿ ಕಡ್ಡಿಯ ಹಾಗೆ ಆಗಿದೆ.
- 9ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ.
Cross references
- Psalm 51:7 ಕೀರ್ತನೆಗಳು 51:7ಹಿಸ್ಸೋಪ್ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.
- Song of Solomon 5:10 ಪರಮಗೀತೆ 5:10ನನ್ನ ಪ್ರಿಯನು ಬಿಳುಪೂ ಕೆಂಪೂ ಉಳ್ಳವನು; ಹತ್ತು ಸಾವಿರ ಜನರಲ್ಲಿ ಮೇಲಾದವನು.
- Psalm 144:12 ಕೀರ್ತನೆಗಳು 144:12ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ತಮ್ಮ ಯೌವನದಲ್ಲಿ ಬೆಳೆದವರಾಗಿರಲಿ; ನಮ್ಮ ಹೆಣ್ಣು ಮಕ್ಕಳು ಅರಮನೆಯ ಕಟ್ಟುವಿಕೆಯ ಪ್ರಕಾರ ಕೆತ್ತಲ್ಪಟ್ಟ ಮೂಲೆಯ ಕಲ್ಲುಗಳ ಹಾಗಿರಲಿ.
- 1 Samuel 16:12 1 ಸಮುವೇಲನು 16:12ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು.
- Numbers 6:2–21 ಅರಣ್ಯಕಾಂಡ 6:2–21ನೀನು ಇಸ್ರಾ ಯೇಲ್ ಮಕ್ಕಳ ಸಂಗಡ ಮಾತನಾಡಿ ಹೇಳಬೇಕಾದ ದ್ದೇನಂದರೆ--ಪುರುಷನಾದರೂ ಸ್ತ್ರೀಯಾದರೂ ಕರ್ತ ನಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರನ ವಿಶೇಷ ವಾದ ಪ್ರಮಾಣವನ್ನು ಮಾಡಿ ದ್ರಾಕ್ಷಾರಸಕ್ಕೂ ಮದ್ಯ ಪಾನಕ್ಕೂ ದೂರವಾಗಿದ್ದು ದ್ರಾಕ್ಷಾರಸದ ಹುಳಿಯನ್ನೂ ಮದ್ಯಪಾನದ ಹುಳಿಯನ್ನೂ ಕುಡಿಯದೆ ದ್ರಾಕ್ಷೆಯಿಂದ ಮಾಡಿದ ಯಾವ ಪಾನವನ್ನಾದರೂ ಕುಡಿಯದೆ, ಹಸೀದಾಗಲಿ ಒಣಗಿದ್ದಾಗಲಿ ದ್ರಾಕ್ಷೇ ಹಣ್ಣನ್ನು ತಿನ್ನದೆ ಇರಬೇಕು. ತನ್ನ ನಾಜೀರತನ ದಿವಸಗಳಲ್ಲೆಲ್ಲಾ ದ್ರಾಕ್ಷೇ ಬೀಜ ಮೊದಲುಗೊಂಡು ಸಿಪ್ಪೆಯ ವರೆಗೂ ದ್ರಾಕ್ಷೇ ಬಳ್ಳಿಯಲ್ಲಿ ಬೆಳೆದದ್ದು ಯಾವದನ್ನಾದರೂ ತಿನ್ನಬಾರದು. ಅವನ ನಾಜೀರತನ ಪ್ರಮಾಣದ ದಿವಸಗಳೆಲ್ಲಾ ಕ್ಷೌರ ಕತ್ತಿ ಅವನ ತಲೆಯ ಮೇಲೆ ಬರಬಾರದು; ಅವನು ಕರ್ತನಿಗೆ ತನ್ನನ್ನು ಪ್ರತ್ಯೇಕಿಸಿಕೊಂಡ ದಿವಸ ಗಳು ಪೂರ್ತಿಯಾಗುವ ವರೆಗೆ ಅವನು ಪರಿಶುದ್ಧನಾಗಿ ರುವನು; ಅವನು ತನ್ನ ತಲೆಯ ಕೂದಲನ್ನು ಬೆಳೆಸ ಬೇಕು. ಅವನು ಕರ್ತನಿಗೆ ತನ್ನನ್ನು ಪ್ರತ್ಯೇಕಿಸಿ ಕೊಂಡ ದಿವಸಗಳೆಲ್ಲಾ ಸತ್ತವನ ಬಳಿಗೆ ಬರಬಾರದು. ಅವನ ತಂದೆ ತಾಯಿ ಸಹೋದರ ಸಹೋದರಿ ಸತ್ತರೂ ಅವನು ಅವರಿಗೋಸ್ಕರ ಅಪವಿತ್ರನಾಗ ಬಾರದು; ಅವನ ದೇವರ ನಾಜೀರತನವು ಅವನ ತಲೆಯ ಮೇಲೆ ಇದೆ. ಅವನ ನಾಜೀರತನದ ದಿವಸ ಗಳಲ್ಲೆಲ್ಲಾ ಅವನು ಕರ್ತನಿಗೆ ಪರಿಶುದ್ಧನಾಗಿದ್ದಾನೆ. ಅವನ ಬಳಿಯಲ್ಲಿ ಒಬ್ಬನು ಅಕಸ್ಮಾತ್ತಾಗಿ ಸತ್ತರೆ ಅವನ ನಾಜೀರತನದ ತಲೆಯು ಅಶುದ್ಧವಾದದ್ದರಿಂದ ಅವನು ಶುದ್ಧನಾಗುವ ದಿವಸದಲ್ಲಿ ತನ್ನ ತಲೆಯನ್ನು ಬೋಳಿಸಿ ಕೊಳ್ಳಬೇಕು, ಏಳನೇ ದಿವಸದಲ್ಲಿ ಬೋಳಿಸಿಕೊಳ್ಳ ಬೇಕು. ಎಂಟನೆಯ ದಿವಸದಲ್ಲಿ ಅವನು ಯಾಜಕನ ಬಳಿಗೆ ಸಭೆಯ ಗುಡಾರದ ಬಾಗಲಿಗೆ ಎರಡು ಬೆಳವಕ್ಕಿ ಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು. ಯಾಜಕನು ಒಂದನ್ನು ಪಾಪದ ಬಲಿ ಯಾಗಿಯೂ ಇನ್ನೊಂದನ್ನು ಹೋಮವಾಗಿಯೂ ಅರ್ಪಿಸಿ ಅವನು ಸತ್ತವನಲ್ಲಿ ಪಾಪಮಾಡಿದ್ದರಿಂದ ಅವನಿಗೋಸ್ಕರ ಪಾಪವನ್ನು ಮುಚ್ಚಿ ಆ ದಿವಸದಲ್ಲಿ ಅವನ ತಲೆಯನ್ನು ಪರಿಶುದ್ಧಮಾಡಬೇಕು. ಅವನು ಪ್ರತ್ಯೇಕಿಸಲ್ಪಟ್ಟ ತನ್ನ ದಿವಸಗಳನ್ನು ಕರ್ತನಿಗೆ ಪ್ರತ್ಯೇಕಿಸಿ ಅಪರಾಧ ಬಲಿಯಾಗಿ ಒಂದು ವರುಷದ ಕುರಿಮರಿ ಯನ್ನು ತರಬೇಕು; ಆದರೆ ಮೊದಲಿನ ದಿವಸಗಳು ವ್ಯರ್ಥವಾಗುವವು; ಅವನು ಪ್ರತ್ಯೇಕಿಸಲ್ಪಟ್ಟದ್ದು ಅಶುದ್ಧವಾಯಿತು. ಇದು ನಾಜೀರನ ನಿಯಮವು: ಪ್ರತ್ಯೇಕಿಸಲ್ಪಟ್ಟ ಅವನ ದಿವಸಗಳು ಪೂರ್ಣವಾದ ಮೇಲೆ ಅವನನ್ನು ಸಭೆಯ ಗುಡಾರದ ಬಾಗಲಿನ ಬಳಿಗೆ ತರಬೇಕು. ಅವನು ಕರ್ತನಿಗೆ ತನ್ನ ಅರ್ಪಣೆಯನ್ನು ಅರ್ಪಿಸ ಬೇಕು; ಅದೇನಂದರೆ, ದಹನ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಟಗರಿನ ಮರಿಯನ್ನೂ ಪಾಪದ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಒಂದು ಕುರಿಮರಿಯನ್ನೂ ಸಮಾಧಾನದ ಬಲಿಗಾಗಿ ದೋಷವಿಲ್ಲದ ಒಂದು ಟಗರನ್ನೂ ತರಬೇಕು. ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿ ಯಿಲ್ಲದ ರೊಟ್ಟಿಗಳ ಒಂದು ಪುಟ್ಟಿಯನ್ನೂ ಎಣ್ಣೇ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ ಅವುಗಳ ಆಹಾರದ ಅರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ತರಬೇಕು. ಇವುಗಳನ್ನು ಯಾಜಕನು ಕರ್ತನ ಎದುರಿನಲ್ಲಿ ತಂದು ಅವನ ಪಾಪದ ಬಲಿಯನ್ನೂ ದಹನಬಲಿಯನ್ನೂ ಅರ್ಪಿಸ ಬೇಕು. ಆ ಟಗರನ್ನು ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯ ಸಂಗಡ ಕರ್ತನಿಗೆ ಸಮಾಧಾನದ ಅರ್ಪಣೆ ಗಳ ಬಲಿಗಾಗಿ ಅರ್ಪಿಸಬೇಕು; ಇದಲ್ಲದೆ ಯಾಜಕನು ಅವನ ಆಹಾರದ ಅರ್ಪಣೆಯನ್ನೂ ಪಾನಾರ್ಪಣೆ ಯನ್ನೂ ಅರ್ಪಿಸಬೇಕು. ಇದಲ್ಲದೆ ನಾಜೀರನು ಪ್ರತ್ಯೇಕಿಸಿಕೊಂಡ ತನ್ನ ತಲೆಯನ್ನು ಸಭೆಯ ಗುಡಾರದ ಬಾಗಲಿನ ಬಳಿಯಲ್ಲಿ ಬೋಳಿಸಿ ಪ್ರತ್ಯೇಕಿಸಿದ ತನ್ನ ತಲೆಯ ಕೂದಲನ್ನು ತಕ್ಕೊಂಡು ಸಮಾಧಾನದ ಅರ್ಪಣೆಗಳ ಬಲಿಯ ಕೆಳಗಿರುವ ಬೆಂಕಿಯಲ್ಲಿ ಹಾಕ ಬೇಕು. ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ ಆ ಪುಟ್ಟಿಯೊಳಗಿಂದ ಹುಳಿ ಯಿಲ್ಲದ ಒಂದು ರೊಟ್ಟಿಯನ್ನೂ ಹುಳಿಯಿಲ್ಲದ ಒಂದು ದೋಸೆಯನ್ನೂ ತಕ್ಕೊಂಡು ನಾಜೀರನ ಪ್ರತ್ಯೇಕಿಸಿದ ಆ ಕೂದಲನ್ನು ಬೋಳಿಸಿದ ತರುವಾಯ ಅವನ ಕೈಗಳಲ್ಲಿ ಅವುಗಳನ್ನು ಕೊಡಬೇಕು. ಯಾಜಕನು ಅವುಗಳನ್ನು ಆಡಿಸುವ ಅರ್ಪಣೆಗಾಗಿ ಕರ್ತನ ಎದುರಿ ನಲ್ಲಿ ಆಡಿಸಬೇಕು. ಆಡಿಸುವ ಎದೆಯ ಸಂಗಡಲೂ ಎತ್ತುವ ಮುಂದೊಡೆಯ ಸಂಗಡಲೂ ಅದು ಯಾಜಕ ನಿಗೆ ಪರಿಶುದ್ಧವಾಗಿದೆ. ಆ ಮೇಲೆ ನಾಜೀರನು ದ್ರಾಕ್ಷಾ ರಸವನ್ನು ಕುಡಿಯಬಹುದು. ಪ್ರಮಾಣಮಾಡಿಕೊಂಡ ನಾಜೀರನ ನಿಯ ಮವು ಇದೇ. ಅವನ ಕೈಗೆ ದೊರಕಿದ್ದಲ್ಲದೆ ಅವನು ತನ್ನ ಪ್ರತ್ಯೇಕಿಸುವಿಕೆಗಾಗಿ ಕರ್ತನಿಗೆ ಅರ್ಪಿಸತಕ್ಕದ್ದು. ಅವನು ಪ್ರಮಾಣಮಾಡಿಕೊಂಡ ಪ್ರಕಾರ ತಾನು ಪ್ರತ್ಯೇಕಿಸಿಕೊಂಡಂತೆ ಅವನು ಮಾಡಬೇಕು.
- Judges 16:17 ನ್ಯಾಯಸ್ಥಾಪಕರು 16:17ಅವನು ತನ್ನ ಹೃದಯವನ್ನೆಲ್ಲಾ ಅವಳಿಗೆ ತಿಳಿಸಿ ಅವಳಿಗೆ--ಕ್ಷೌರದ ಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ನನ್ನ ತಾಯಿಯ ಗರ್ಭ ದಲ್ಲಿಂದ ದೇವರಿಗೆ ನಾಜೀರನಾಗಿದ್ದೇನೆ. ನನ್ನ ತಲೆ ಯನ್ನು ಬೋಳಿಸಿದರೆ ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗುವದು; ನಾನು ಬಲಹೀನನಾಗಿ ಎಲ್ಲಾ ಮನುಷ್ಯರ ಹಾಗೆ ಇರುವೆನು ಅಂದನು.
- Judges 13:7 ನ್ಯಾಯಸ್ಥಾಪಕರು 13:7ಅವನು ನನಗೆಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ, ಈಗ ನೀನು ದ್ರಾಕ್ಷಾರಸವನ್ನೂ ಮದ್ಯಪಾನ ವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಇರು. ಯಾಕಂದರೆ ಆ ಹುಡುಗನು ಗರ್ಭದಿಂದ ತನ್ನ ಮರಣದ ಪರಿಯಂತರವೂ ದೇವರ ನಾಜೀರ ನಾಗಿರುವನು ಎಂದು ಹೇಳಿದನು ಅಂದಳು.
- Amos 2:11–12 ಆಮೋಸ 2:11–12ನಾನು ನಿಮ್ಮ ಕುಮಾರ ರಲ್ಲಿ ಪ್ರವಾದಿಗಳನ್ನು ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನು ಎಬ್ಬಿಸಿದೆನು. ಓ ಇಸ್ರಾಯೇಲಿನ ಮಕ್ಕಳೇ, ಇದು ಹೀಗಲ್ಲವೋ ಎಂದು ಕರ್ತನು ಹೇಳುತ್ತಾನೆ. ಆದರೆ ನೀವು ನಾಜೀರರಿಗೆ ಕುಡಿ ಯಲು ದ್ರಾಕ್ಷಾರಸವನ್ನು ಕೊಟ್ಟಿರಿ; ಪ್ರವಾದಿಗಳಿಗೆಪ್ರವಾದಿಸಬೇಡಿರೆಂದು ಆಜ್ಞಾಪಿಸಿದಿರಿ.
- Judges 13:5 ನ್ಯಾಯಸ್ಥಾಪಕರು 13:5ಇಗೋ, ನೀನು ಗರ್ಭವನ್ನು ಧರಿಸಿ, ಒಬ್ಬ ಮಗನನ್ನು ಹೆರುವಿ; ಅವನ ತಲೆಯ ಮೇಲೆ ಕ್ಷೌರದ ಕತ್ತಿ ಬರುವದಿಲ್ಲ. ಗರ್ಭದಿಂದಲೇ ಆ ಹುಡುಗನು ದೇವರ ನಾಜೀರನಾಗಿ ರುವನು. ಅವನು ಇಸ್ರಾಯೇಲ್ಯರನ್ನು ಫಿಲಿಷ್ಟಿ ಯರ ಕೈಯಿಂದ ಬಿಡಿಸಿ ರಕ್ಷಿಸಲು ಪ್ರಾರಂಭಿಸುವನು ಅಂದನು.
- Daniel 1:15 ದಾನಿಯೇಲನು 1:15ಹತ್ತು ದಿವಸಗಳ ಕೊನೆಯ ವರೆಗೂ ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರೆ ಲ್ಲರಿಗಿಂತ ಇವರ ಮುಖಗಳು ನೋಡುವದಕ್ಕೆ ಸುಂದರ ವಾಗಿಯೂ ಶರೀರದಲ್ಲಿ ಪುಷ್ಟರಾಗಿಯೂ ಕಾಣಿಸಿದವು.
- Luke 1:15 ಲೂಕನು 1:15ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.