Lamentations · chapter 5 · verse 14
Lamentations 5:14 in Kannada
ಹಿರಿಯರು ಬಾಗಿಲನ್ನು ಪ್ರವೇಶಿಸುವದೂ ಯೌವನಸ್ಥರು ಸಂಗೀತವನ್ನು ಹಾಡುವದೂ ನಿಂತು ಹೋಯಿತು.
Hiriyaru baagilannu praveshisuvadoo yauvanastharu sangeetavannu haaduvadoo nintu hoyitu.
Lamentations 5:14 in English
- King James Version (KJV)
- The elders have ceased from the gate, the young men from their musick.
- World English Bible (WEB)
- The elders have ceased from the gate, and the young men from their music.
- American Standard Version (ASV)
- The elders have ceased from the gate, The young men from their music.
- Bible in Basic English (BBE)
- The old men are no longer seated in the doorway, and the music of the young men has come to an end.
- Darby Translation (DBY)
- The elders have ceased from the gate, the young men from their music.
- Webster's Bible (WBS)
- The elders have ceased from the gate, the young men from their music.
- Young's Literal Translation (YLT)
- The aged from the gate have ceased, Young men from their song.
Read in context
- 12ಪ್ರಭುಗಳು ಅವರ ಕೈಯಿಂದ ಗಲ್ಲಿಗೇರಿಸಲ್ಪಟ್ಟರು; ಹಿರಿಯರ ಮುಖಗಳು ಗೌರವಿ ಸಲ್ಪಡಲಿಲ್ಲ.
- 13ಅವರು ಯೌವನಸ್ಥರನ್ನು ಅರೆಯು ವದಕ್ಕೆ ತೆಗೆದುಕೊಂಡರು; ಮಕ್ಕಳು ಕಟ್ಟಿಗೆಯ ಕೆಳಗೆ ಬಿದ್ದರು.
- 14ಹಿರಿಯರು ಬಾಗಿಲನ್ನು ಪ್ರವೇಶಿಸುವದೂ ಯೌವನಸ್ಥರು ಸಂಗೀತವನ್ನು ಹಾಡುವದೂ ನಿಂತು ಹೋಯಿತು.
- 15ನಮ್ಮ ಹೃದಯದ ಸಂತೋಷವು ನಿಂತುಹೋಯಿತು; ನಮ್ಮ ನಾಟ್ಯವು ದುಃಖದ ಕಡೆಗೆ ತಿರುಗಿತು.
- 16ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ.
Cross references
- Jeremiah 7:34 ಯೆರೆಮೀಯ 7:34ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.
- Isaiah 24:7–11 ಯೆಶಾಯ 24:7–11ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ. ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು. ಇನ್ನು ಗಾನದೊಡನೆ ದ್ರಾಕ್ಷಾರಸ ವನ್ನು ಕುಡಿಯರು; ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವದು. ಗಲಿಬಿಲಿಗುಂಟಾದ ಪಟ್ಟಣವು ಹಾಳಾಗಿದೆ. ಯಾರು ಒಳಗೆ ಬಾರದಂತೆ ಪ್ರತಿಯೊಂದು ಮನೆಯು ಮುಚ್ಚಿದೆ. ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ.
- Ezekiel 26:13 ಯೆಹೆಜ್ಕೇಲನು 26:13ಆಗ ನಿನ್ನ ಹಾಡು ಗಳ ಶಬ್ದವನ್ನು ನಿಲ್ಲಿಸುವೆನು, ಇನ್ನು ನಿನ್ನ ಕಿನ್ನರಿಗಳ ಧ್ವನಿ ಕೇಳಲ್ಪಡುವದಿಲ್ಲ.
- Revelation 18:22 ಪ್ರಕಟನೆ 18:22ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.
- Lamentations 1:4 ಪ್ರಲಾಪಗಳು 1:4ಚೀಯೋನಿನ ಮಾರ್ಗಗಳು ದುಃಖಿಸುತ್ತವೆ, ಯಾಕಂದರೆ ಪವಿತ್ರ ಹಬ್ಬಗಳಿಗೆ ಯಾರೂ ಬರಲಿಲ್ಲ; ಆಕೆಯ ಎಲ್ಲಾ ಬಾಗಿಲುಗಳು ಹಾಳುಬಿದ್ದಿವೆ. ಯಾಜಕರು ನಿಟ್ಟುಸಿರಿಡುತ್ತಾರೆ, ಕನ್ಯೆಯರು ಸಂಕಟಪಡುತ್ತಾರೆ. ಆಕೆಯು ವ್ಯಥೆಯಲ್ಲಿದ್ದಾಳೆ.
- Job 30:1 ಯೋಬನು 30:1ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು ನನ್ನನ್ನು ನೋಡಿ ಪರಿಹಾಸ್ಯಮಾಡುತ್ತಾರೆ; ಅವರ ತಂದೆಗಳನ್ನು ನನ್ನ ಕುರಿಮಂದೆಯ ನಾಯಿಗಳ ಸಂಗಡ ಸೇರಿಸುವದಕ್ಕೂ ಅಯೋಗ್ಯರೆಂದೆನು
- Deuteronomy 16:18 ಧರ್ಮೋಪದೇಶಕಾಂಡ 16:18ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.
- Lamentations 1:19 ಪ್ರಲಾಪಗಳು 1:19ನಾನು ನನ್ನ ಪ್ರಿಯರನ್ನು ಕರೆದೆನು, ಆದರೆ ಅವರು ನನ್ನನ್ನು ಮೋಸಗೊಳಿಸಿದರು; ನನ್ನ ಯಾಜಕರೂ ಹಿರಿ ಯರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ರೊಟ್ಟಿ ಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.
- Isaiah 3:2–3 ಯೆಶಾಯ 3:2–3ಇದಲ್ಲದೆ ಶೂರ, ಯುದ್ಧಭಟ, ನ್ಯಾಯಾಧಿಪತಿ, ಪ್ರವಾದಿ, ಪರಿಜ್ಞಾನಿ, ಪ್ರಾಚೀನ ಮನುಷ್ಯನು, ಪಂಚಶತಾಧಿಪತಿ, ಘನ ವುಳ್ಳವನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರನ್ನೆಲ್ಲಾ ತೆಗೆ ದುಬಿಡುವೆನು.
- Jeremiah 16:9 ಯೆರೆಮೀಯ 16:9ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿ ಬಿಡುತ್ತೇನೆ.
- Jeremiah 25:10 ಯೆರೆಮೀಯ 25:10ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ.
- Job 29:7–17 ಯೋಬನು 29:7–17ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು. ಯುವಕರು ನನ್ನನ್ನು ನೋಡಿ ಅಡಗಿಕೊಳ್ಳುತ್ತಿದ್ದರು; ವೃದ್ಧರು ಎದ್ದು ನಿಲ್ಲುತ್ತಿದ್ದರು. ಪ್ರಧಾನರು ನುಡಿಗಳನ್ನು ಬಿಗಿಹಿಡಿದು ತಮ್ಮ ಬಾಯಿಯ ಮೇಲೆ ಕೈ ಇಟ್ಟು ಕೊಂಡರು. ಘನವುಳ್ಳವರು ಮೌನವಾದರು; ಅವರ ನಾಲಿಗೆ ಅವರ ಅಂಗಳಕ್ಕೆ ಅಂಟಿತು. ಕೇಳುವ ಕಿವಿ ನನ್ನನ್ನು ಧನ್ಯನೆಂದು ಹರಸಿತು; ನೋಡುವ ಕಣ್ಣು ನನಗೆ ಸಾಕ್ಷಿ ಕೊಡುತ್ತಿತ್ತು. ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು. ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು. ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು. ನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು. ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು. ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು.